ಕಸಾಪ ಕನಸು ನನಸು ಮಾಡಿ


Team Udayavani, Nov 21, 2017, 12:16 PM IST

kasapa.jpg

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು ನಾಲ್ಕು ಗೋಡೆಯ ಕಟ್ಟಡ ಅಲ್ಲ. ದೊಡ್ಡ ಕನಸು ಹೊತ್ತಿರುವ ಮಹಾನ್‌ ವ್ಯಕ್ತಿಗಳನ್ನು ತುಂಬಿಸಿಕೊಂಡಿರುವ ಸಾಂಸ್ಕೃತಿಕ ವೇದಿಕೆ ಎಂದು ಪರಿಷತ್ತಿನ ಮಾಜಿ ಅಧ್ಯಕ್ಷ ಪ್ರೊ.ಜಿ.ಎಸ್‌.ಸಿದ್ದಲಿಂಗಯ್ಯ ಹೇಳಿದರು. ಕನ್ನಡ ಸಾಹಿತ್ಯ ಪರಿಷತ್ತು ಸೋಮವಾರ ನಗರದ ಚಾಮರಾಜಪೇಟೆಯ ಶ್ರೀಕೃಷ್ಣರಾಜ ಪರಿಷನ್ಮಂದಿರದಲ್ಲಿ ಹಮ್ಮಿಕೊಂಡಿದ್ದ ಕನ್ನಡ ಸಾಹಿತ್ಯ ಪರಿಷತ್ತು ಶತಮಾನೋತ್ಸವ ದತ್ತಿ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು.

ಸಾಹಿತ್ಯ ಲೋಕದ ದಿಗ್ಗಜರು ತನ್ನದೇ ಆದ ಪ್ರಭಾವ ಹೊಂದಿರುತ್ತಾರೆ. ಈವರೆಗೆ 25 ಜನ ಪರಿಷತ್ತಿನ ಯಜಮಾನಿಕೆ ವಹಿಸಿಕೊಂಡಿದ್ದರು. ಕೆಲವರು ಒಂದು ವರ್ಷ, ಇನ್ನು ಕೆಲವರು ಮೂರು ವರ್ಷ, ಐದು ಹಾಗೂ 8 ವರ್ಷದವರೆಗೂ ಅಧಿಕಾರ ನಡೆಸಿದ ನಿದರ್ಶನ ಇದೆ. ಅರಮನೆಗೆ ಇಲಿ, ಹೆಗ್ಗಣಗಳು ಬಂದು ಸೇರುವಂತೆ 1977-78ರ ಕಾಲಘಟ್ಟದಲ್ಲಿ ಕಸಾಪ ಕೂಡ ಅದೇ ಅಪಖ್ಯಾತಿಗೆ ಪಾತ್ರವಾಗಿತ್ತು. ನಂತರ ಸರ್ಕಾರವೇ ಆಡಳಿತಾಧಿಕಾರಿಯನ್ನು ನೇಮಿಸುವ ಸ್ಥಿತಿಯೂ ಬಂದಿತ್ತು ಎಂದು ಇತಿಹಾಸವನ್ನು ಮೆಲುಕು ಹಾಕಿದರು.

ಪರಿಷತ್ತಿಗೆ ಮಹಾನ್‌ ಕಸನುಗಳಿವೆ, ಅದನ್ನು ನನಸು ಮಾಡುವ ಜವಾಬ್ದಾರಿ ಈಗ  ಅಧಿಕಾರದಲ್ಲಿರುವ ಮತ್ತು ಹಿಂದೆ ಅಧಿಕಾರ ವಹಿಸಿಕೊಂಡಿದ್ದವರ ಹೆಗಲ ಮೇಲಿದೆ. ಸುಮಾರು 3 ಲಕ್ಷ ಮತದಾರರನ್ನು ಹೊಂದಿರುವ ಪರಿಷತ್ತಿನಲ್ಲಿ ಹಣ ಉಳ್ಳವರು ಗೆಲ್ಲುವ ಸಂಸ್ಕೃತಿ ನಿಲ್ಲಬೇಕು ಎಂದು ಹೇಳಿದರು.

ಶತಮಾನ ಕಂಡಿರುವ ಕನ್ನಡ ಸಾಹಿತ್ಯ ಪರಿಷತ್ತನ್ನು ಆರಂಭದಲ್ಲಿ ಕರ್ನಾಟಕ ಪರಿಷತ್ತು ಎಂದು ನಾಮಕರಣ ಮಾಡಲಾಗಿತ್ತು ಈ ನಾಮಫ‌ಲಕ ಅಳವಡಿಕೆ ಸಂದರ್ಭದಲ್ಲಿ “ಕರ್ನಾಟಕ’  “ಕರ್ಣಾಟಕ’ ಪದದ ಬಗ್ಗೆಯೇ ಎರಡು ಗುಂಪುಗಳ ನಡುವೆ ಜಗಳವಾಗಿತ್ತು. ಅಂತಿಮವಾಗಿ ಕನ್ನಡ ಸಾಹಿತ್ಯ ಪರಿಷತ್ತು ಎಂದು ನಾಮಕರಣ ಮಾಡಲಾಯಿತು ಎಂಬುದನ್ನು ನೆನಪಿಸಿದರು.

ಕವಿ, ಸಾಹಿತಿಗೆ ದಲಿತ, ಬಂಡಾಯ, ನವ್ಯ ಮೊದಲಾದ ಗುಣವಾಚಕದ ಅಗತ್ಯವಿಲ್ಲ. ಹೆಣ್ಣು ಸಾಹಿತಿ, ಗಂಡು ಸಾಹಿತಿ ಎನ್ನುವ ಗುಣವಾಚಕವೂ ನಿಲ್ಲಬೇಕು ಎಂದ ಅವರು ಶತಮಾನ ಕಂಡ ಸಾಹಿತ್ಯ ಪರಿಷತ್ತು ನಡೆದು ಬಂದ ಹಾದಿಯನ್ನು ಸ್ಮರಿಸಿದರು.

ಪರಿಷತ್ತು ಅಧ್ಯಕ್ಷ ಡಾ. ಮನು ಬಳಿಗಾರ್‌ ಮಾತನಾಡಿ, ಭಾಷೆ ಮತ್ತು ಸಂಸ್ಕೃತಿಯನ್ನು ಕಟ್ಟಿ ಬೆಳೆಸುವ ಜತೆಗೆ ನಾಡಿನ ಹಲವು ಸಮಸ್ಯೆಗೆ ಪರಿಹಾರ ನೀಡಲು ಪರಿಷತ್ತು ಸಿಂಹಪಾಲುವಹಿಸಿದೆ. ಪರಿಷತ್ತಿನಿಂದ ನೀಡುವ ಪ್ರಶಸ್ತಿ ತನ್ನದೇ ಮಹತ್ವ ಹೊಂದಿದೆ. ಇಲ್ಲಿ ಪ್ರಶಸ್ತಿಗಾಗಿ ಯಾವುದೇ ಲಾಬಿ ನಡೆಯುವುದಿಲ್ಲ ಎಂದರು. ಕಸಾಪ ಗೌರವ ಕಾರ್ಯದರ್ಶಿ ವ.ಚ.ಚನ್ನೇಗೌಡ, ಗೌರವ ಕೋಶಾಧ್ಯಕ್ಷ ಪಿ.ಮಲ್ಲಿಕಾರ್ಜುನಪ್ಪ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Railway-Minister-MP-DK

Udupi: ಕೊಂಕಣ ರೈಲು ವಿಲೀನಕ್ಕೆ ರೈಲ್ವೆ ಸಚಿವರಿಂದ ಸಹಮತ: ಕೋಟ ಶ್ರೀನಿವಾಸ ಪೂಜಾರಿ

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

Maharashtra; Ekmath hey to safe hey says Shivsena

Maharashtra: ಏಕ್‌ನಾಥ್‌ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

Draupadi Murmu addresses the joint House at the Old Parliament House

Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಸಿಬಿಗೆ ವರ್ಗಾವಣೆ

CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಸಿಬಿಗೆ ವರ್ಗಾವಣೆ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Railway-Minister-MP-DK

Udupi: ಕೊಂಕಣ ರೈಲು ವಿಲೀನಕ್ಕೆ ರೈಲ್ವೆ ಸಚಿವರಿಂದ ಸಹಮತ: ಕೋಟ ಶ್ರೀನಿವಾಸ ಪೂಜಾರಿ

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

Maharashtra; Ekmath hey to safe hey says Shivsena

Maharashtra: ಏಕ್‌ನಾಥ್‌ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ

2

Malpe: ಬೋಟಿನಲ್ಲಿದ್ದ ಮೀನುಗಾರ ನಾಪತ್ತೆ; ಪ್ರಕರಣ ದಾಖಲು

crime

Padubidri: ಸ್ಕೂಟಿಯಿಂದ ಬಿದ್ದು ಮಹಿಳೆಗೆ ತೀವ್ರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.