ಗೌರಿ ಲಂಕೇಶ್‌ ಪ್ರಕರಣ: ಎಸ್‌ಐಟಿಗೆ ಸಿಗುತ್ತಿಲ್ಲ ಕೊಲೆಗಾರರ ಸುಳಿವು


Team Udayavani, Nov 21, 2017, 12:17 PM IST

gauri-lankesh.jpg

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆಯಾಗಿ ಎರಡೂವರೆ ತಿಂಗಳು ಕಳೆದರೂ ಹಂತಕರ ಪತ್ತೆ ಇರಲಿ ಒಂದು ಸಣ್ಣ ಸುಳಿವು ಕೂಡ ಸಿಕ್ಕಿಲ್ಲ. ತನ್ಮೂಲಕ ಈ ಪ್ರಕರಣ ಮತ್ತೂಬ್ಬ ವಿಮರ್ಶಕ ಡಾ.ಎಂ.ಎಂ.ಕಲುºರ್ಗಿ ಪ್ರಕರಣ ತನಿಖೆ ತರಹ ಆಗಲಿದೆಯಾ ಎಂಬ ಪ್ರಶ್ನೆ ಈಗ ಮೂಡಿದೆ.

ಈ ಮಧ್ಯೆ ಹಂತಕರ ಪತ್ತೆಗಾಗಿ ಪೊಲೀಸ್‌ ಇಲಾಖೆ ಇತಿಹಾಸದಲ್ಲೇ ಅತೀ ಹೆಚ್ಚು ಸಿಬ್ಬಂದಿಯ ವಿಶೇಷ ತನಿಖಾ ತಂಡ ರಚಿಸಲಾಯಿತು. ಸತತ ಎರಡೂವರೆ ತಿಂಗಳ ಕಾಲ ಹಗಲು-ರಾತ್ರಿ ಎನ್ನದೆ ಕಾರ್ಯಾಚರಣೆ ನಡೆಸಿದ ಒಬ್ಬರು ಐಜಿಪಿ, ಇಬ್ಬರು ಡಿಸಿಪಿ ನೇತೃತ್ವದ ಸುಮಾರು 150ಕ್ಕೂ ಅಧಿಕ ಸಿಬ್ಬಂದಿ ರಾಜ್ಯ ಸೇರಿದಂತೆ ನೆರೆರಾಜ್ಯಗಳಲ್ಲಿಯೂ ಹುಡುಕಾಟ ನಡೆಸಿದರೂ ಹಂತಕರ ಒಂದು ಸಣ್ಣ ಸುಳಿವು ಸಹ ಪತ್ತೆಯಾಗಲಿಲ್ಲ.

ಮತ್ತೂಂದೆಡೆ ಎಸ್‌ಐಟಿಗೆ ನಿಯೋಜನೆಗೊಂಡಿದ್ದ ಇನ್‌ಸ್ಪೆಕ್ಟರ್‌, ಎಸಿಪಿಗಳು ಕೆಲ ದಿನಗಳಿಂದ ತಮ್ಮ ಠಾಣಾ ಕಾರ್ಯದಲ್ಲಿ ನಿರತರಾಗಿದ್ದಾರೆ. ಜತೆಗೆ ಈ ಪ್ರಕರಣದಲ್ಲಿ ಸುಳಿವು ಪತ್ತೆಯಾದರೆ ಇಲ್ಲಿಯೂ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಮೂಲಕ ಎರಡು ಕಡೆಗಳಲ್ಲಿ ಹೆಚ್ಚುವರಿ ಕಾರ್ಯನಿರ್ವಹಿಸುತ್ತಿದ್ದಾರೆ. ಇನ್ನಳಿದ್ದಂತೆ ಇಬ್ಬರು ಡಿಸಿಪಿಗಳು, ಸಬ್‌ಇನ್‌ಸ್ಪೆಕ್ಟರ್‌ಗಳು, ಕೆಲ ಪೇದೆಗಳು ಪ್ರಕರಣದ ಬೆನ್ನು ಬಿದ್ದಿದ್ದು, ಪ್ರಕರಣದ ತನಿಖೆ ಮಂದಗತಿಯಲ್ಲಿ ಸಾಗುತ್ತಿದೆ. ಒಟ್ಟಾರೆ ನೆಪ ಮಾತ್ರಕ್ಕೆ ಎಸ್‌ಐಟಿ ಜೀವಂತವಾಗಿದೆ ಎನ್ನಲಾಗಿದೆ. 

ಸೆ.5ರಂದು ರಾತ್ರಿ 8.45ರ ಸುಮಾರಿಗೆ ರಾಜಾರಾಜೇಶ್ವರಿನಗರದ ಮನೆಯ ಆವರಣದಲ್ಲಿ ಗೌರಿ ಲಂಕೇಶ್‌ ಅವರನ್ನು ಬೈಕ್‌ನಲ್ಲಿ ಬಂದ ಹಂತಕರು ಕಂಟ್ರಿಮೇಡ್‌ ಪಿಸ್ತೂಲ್‌ ಮೂಲಕ ಗುಂಡು ಹಾರಿಸಿ ಹತ್ಯೆಗೈದಿದ್ದರು. ಇದಾದ ಮರು ದಿನವೇ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ಮೇರೆಗೆ ಅಂದಿನ ಡಿಜಿ ಆರ್‌.ಕೆ.ದತ್ತಾ, ಹಿರಿಯ ಐಪಿಎಸ್‌ ಅಧಿಕಾರಿ ಬಿ.ಕೆ.ಸಿಂಗ್‌, ಡಿಸಿಪಿಗಳಾದ ಅನುಚೇತ್‌, ಜಿನೇಂದ್ರ ಖಣಗಾವಿ ನೇತೃತ್ವದಲ್ಲಿ ಬೃಹತ್‌ ತನಿಖಾ ತಂಡವನ್ನು ರಚಿಸಿತು.

ಬಳಿಕ ಸೆ.7ರಂದೇ ಎಸ್‌ಐಟಿಯಲ್ಲಿ ಕೆಲಸ ಆರಂಭಿಸಿದರು. ಅನಂತರ ಇಡೀ ತಂಡ ಹತ್ತಾರು ದಿನಗಳ ಕಾಲ ಗೌರಿ ಲಂಕೇಶ್‌ ಮನೆ ಬಳಿ ಬೀಡು ಬಿಟ್ಟು ಸುಳಿವಿಗಾಗಿ ಪ್ರಯತ್ನ ನಡೆದವು. ಈ ಭಾಗದ ಸಾವಿರಾರು ಎಲ್ಲ ಸಿಸಿಟಿವಿಗಳಿಂದ 75 ಟಿವಿ ದೃಶ್ಯಾವಳಿಗಳು, ಆರು ಟೆರಾಬೈಟ್‌ಗಳಷ್ಟು ಮೊಬೈಲ್‌ ಕರೆಗಳ ವಿವರ ಪರಿಶೀಲಿಸಲಾಯಿತು.

ಎಫ್ಎಸ್‌ಎಲ್‌ ವರದಿಯನ್ವಯ ಕಂಟ್ರಿಮೆಡ್‌ ಪಿಸ್ತೂಲ್‌ ಮಾರಾಟ ಮಾಡುವ ಉತ್ತರ ಪ್ರದೇಶ, ಬಿಹಾರ, ಆಂಧ್ರಪ್ರದೇಶ, ಕರ್ನಾಟಕದ ವಿಜಯಪುರ, ಕಲಬುರಗಿಯಲ್ಲಿಯೂ ಕಾರ್ಯಾಚರಣೆ ನಡೆಸಿದರೂ ಹೇಳಿಕೊಳ್ಳುವಂತಹ ಸುಳಿವು ಪತ್ತೆಯಾಗಲಿಲ್ಲ. ಗೌರಿ ಲಂಕೇಶ್‌ ಆಪ್ತರು ಸೇರಿದಂತೆ 250ಕ್ಕೂ ಅಧಿಕ ಮಂದಿಯನ್ನು ವಿಚಾರಣೆ ನಡೆಸಿದರು.

ಎಸ್‌ಐಟಿ ಮೂಲಗಳ ಪ್ರಕಾರ, ರೇಖಾ ಚಿತ್ರಗಳನ್ನು ಬಿಡುಗಡೆ ಮಾಡಿದ್ದು, ಇನ್ನು ಪ್ರಕಟಿಸಿದ ಮೊಬೈಲ್‌ಗೆ ಬರುವ ಕರೆಗಳಿಂದ ಹೆಚ್ಚಿನ ಪ್ರಯೋಜನವೇನು ಆಗಿಲ್ಲ. ಆದರೂ ಅವರು ಹೇಳುವ ರೀತಿಯಲ್ಲಿಯೂ ತನಿಖೆ ನಡೆಸಿದರೂ ಉಪಯೋಗವಾಗಲಿಲ್ಲ. ಕಾನೂನು ಸುವ್ಯವಸ್ಥೆಯಲ್ಲಿ ಸಿಬ್ಬಂದಿ ಕೊರತೆಯಿದೆ. ಎಸ್‌ಐಟಿ ಜತೆಗೆ ದೈನಂದಿನ ಕೆಲಸಗಳನ್ನು ಸಹ ಮಾಡುತ್ತಿದ್ದೇವೆ. ಹತ್ಯೆ ಪ್ರಕರಣದಲ್ಲಿ ಯಾವುದೇ ಪ್ರಗತಿ ಕಾಣುತ್ತಿಲ್ಲ ಎಂದು ಎಸ್‌ಐಟಿ ಅಧಿಕಾರಿಯೊಬ್ಬರು ಬೇಸರ ವ್ಯಕ್ತಪಡಿಸಿದರು.

ನಿರೀಕ್ಷಿತ ಮಟ್ಟದ ಮಾಹಿತಿ ಇಲ್ಲ: ಅನಂತರ ಅ.14ರಂದು ಎಸ್‌ಐಟಿ ಸ್ಥಳೀಯರು, ಸಿಸಿಟಿವಿ ದೃಶ್ಯಾವಳಿಗಳನ್ನಾಧರಿಸಿ ಇಬ್ಬರು ಶಂಕಿತರ ಮೂರು ರೇಖಾಚಿತ್ರಗಳನ್ನು ಬಿಡುಗಡೆ ಮಾಡಿ ಸಾರ್ವಜನಿಕರ ಮೋರೆ ಹೋದರು. 12 ಮತ್ತು 4 ಸೆಕೆಂಡ್‌ಗಳ 2 ಸಿಸಿಟಿವಿ ದೃಶ್ಯಾವಳಿಗನ್ನು ಸಹ ಬಿಡುಗಡೆ ಮಾಡಿತು. ಇದಕ್ಕಾಗಿ ಪ್ರತ್ಯೇಕ ಈ-ಮೇಲ್‌, ವಾಟ್ಸ್‌ಆ್ಯಪ್‌, ಸ್ಥಿರ ದೂರವಾಣಿಯನ್ನು ಸಿದ್ಧಪಡಿಸಲಾಯಿತು.

ಆದರೆ, ತನಿಖಾ ತಂಡ ನಿರೀಕ್ಷಿಸಿದ ಮಟ್ಟಕ್ಕೆ ಸಾರ್ವಜನಿಕರಿಂದ ಸ್ಪಂದನೆ ಸಿಗಲಿಲ್ಲ. ಆದರೆ, ಕೆಲವರು ಕರೆ ಮಾಡಿ ಗೌರಿಲಂಕೇಶ್‌ ವಿರುದ್ಧ ಹರಿಹಾಯುತ್ತಿದ್ದ, ಹೇಳಿಕೆ ನೀಡುತ್ತಿದ್ದ ವ್ಯಕ್ತಿಗಳು, ನಕ್ಸಲ್‌ ಬಗ್ಗೆಯೇ ಹೇಳುತ್ತಾರೆಯೇ ಹೊರತು ಹೆಚ್ಚಿನ ಲಾಭವೇನು ಸಿಗಲಿಲ್ಲ. ಆದರೆ, ಸರ್ಕಾರ ಮತ್ತು ಗೃಹ ಸಚಿವರು ತನಿಖಾ ತಂಡಕ್ಕೆ ಸುಳಿವಿದೆ. ಸದ್ಯದಲ್ಲೇ ಆರೋಪಿಗಳನ್ನು ಬಂಧಿಸುತ್ತೇವೆ. ತನಿಖೆ ನಡೆಯುತ್ತಿದೆ ಎಂದು ಹೇಳುತ್ತಿದ್ದಾರೆ.

* ಮೋಹನ್‌ ಭದ್ರಾವತಿ

ಟಾಪ್ ನ್ಯೂಸ್

Vijayapura: Unnatural assault on 6-year-old boy: Convict sentenced to 20 years in prison

Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ಜೈಲು ಶಿಕ್ಷೆ

The day will come when our team member will become CM: Yatnal

Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

58758

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

6-uv-fusion

Opportunities: ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಚತುರತೆ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಸಿಬಿಗೆ ವರ್ಗಾವಣೆ

CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಸಿಬಿಗೆ ವರ್ಗಾವಣೆ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Vijayapura: Unnatural assault on 6-year-old boy: Convict sentenced to 20 years in prison

Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ಜೈಲು ಶಿಕ್ಷೆ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

The day will come when our team member will become CM: Yatnal

Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

8-uv-fusion

Kannada: ಕನ್ನಡ ನಾಡಲ್ಲಿ ಪ್ರತಿದಿನವೂ ನಿತ್ಯೋತ್ಸವವಿರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.