ಎಸ್ಸೆಸ್ಸೆಲ್ಸಿ: ಜಿಲ್ಲೆಯ ಉತ್ತಮ ಫಲಿತಾಂಶಕ್ಕೆ ಸಿದ್ಧತೆ ಕೈಗೊಳ್ಳಿ
Team Udayavani, Nov 21, 2017, 1:08 PM IST
ಧಾರವಾಡ: ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶದಲ್ಲಿ ಜಿಲ್ಲೆ ಕನಿಷ್ಠ 5ನೇ ಸ್ಥಾನ ಪಡೆಯುವ ನಿಟ್ಟಿನಲ್ಲಿ ಶಿಕ್ಷಕರು ಪೂರಕ ತಯಾರಿ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಲಕರ್ಣಿ ಹೇಳಿದರು.
ನಗರದ ಶಿಕ್ಷಕಿಯರ ತರಬೇತಿ ಕೇಂದ್ರದಲಿ ಹಮ್ಮಿಕೊಂಡಿದ್ದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಸಿದ್ಧಪಡಿಸಿದ ಉರ್ದು ಮಾಧ್ಯಮದ ಸ್ಕೋರಿಂಗ್ ಪ್ಯಾಕೇಜ್ ಪುಸ್ತಕಗಳ ಬಿಡುಗಡೆ ಹಾಗೂ ಉರ್ದು ಪ್ರೌಢಶಾಲಾ ಸಹ ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಶಿಕ್ಷಕರು ವಿದ್ಯಾರ್ಥಿಗಳಿಗೆ ವಿವಿಧ ಪರೀಕ್ಷೆ ನಡೆಸಿ ಉತ್ತಮ ಅಂಕ ಗಳಿಸುವ, ಉತ್ತೀರ್ಣ ಹಾಗೂ ಅನುತ್ತೀರ್ಣರಾಗುವವರ ಗುಂಪು ಮಾಡಬೇಕು. ಅನುತ್ತೀರ್ಣ ಹೊಂದಿದ ವಿದ್ಯಾರ್ಥಿಗಳ ಸಮಸ್ಯೆ ತಿಳಿದು ಅವರು ಉತ್ತೀರ್ಣರಾಗುವಂತೆ ತಯಾರಿ ಮಾಡಬೇಕು ಎಂದರು.
ಹಿಂದಿನ ವರ್ಷ ಉರ್ದು ಮಾಧ್ಯಮದ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಕನ್ನಡ ಭಾಷೆ ಪರೀಕ್ಷೆಯಲ್ಲೇ ಅನುತ್ತೀರ್ಣರಾದ ಕಾರಣ ರ್‍ಯಾಂಕಿಂಗ್‌ನಲ್ಲಿ ಕುಸಿತಗೊಂಡಿದೆ. ಇದಕ್ಕೆ ಈ ವಿಷಯದ ಶಿಕ್ಷಕರೇ ನೇರ ಹೊಣೆಗಾರರು. ಶಿಕ್ಷಕರು ಕನ್ನಡ ಹಾಗೂ ಇಂಗ್ಲಿಷ್ ಭಾಷೆಯನ್ನು ಉರ್ದು ವಿದ್ಯಾರ್ಥಿಗಳಿಗೆ ಮನದಟ್ಟಾಗುವಂತೆ ಕಲಿಸಬೇಕು.
ಉರ್ದು ವಿದ್ಯಾರ್ಥಿಗಳು ಖುರಾನ್ ಓದಿದರೆ ಸಾಲದು. ಎಸ್ಸೆಸ್ಸೆಲ್ಸಿನಂತರ ಉನ್ನತ ಶಿಕ್ಷಣದತ್ತ ಗಮನ ಹರಿಸಬೇಕು ಎಂದರು. ವೈಶುದೀಪ ಪ್ರತಿಷ್ಠಾನದ ಕಾರ್ಯದರ್ಶಿ ಶಿವಲೀಲಾ ಕುಲಕರ್ಣಿ ಮಾತನಾಡಿ, ಉರ್ದು ಮಾಧ್ಯಮದ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ವಿವಿಧ ಶಿಕ್ಷಕರಿಂದ ಪುಸ್ತಕ ತಯಾರಿಸಿ ಸಂಸ್ಥೆಯಿಂದ ನೀಡಲಾಗುತ್ತಿದೆ.
ವಿದ್ಯಾರ್ಥಿಗಳ ಫಲಿತಾಂಶದಲ್ಲಿ ಶೇ.10ರ ವರೆಗೆ ಉನ್ನತಿಯಾಗಬೇಕು. ಈ ನಿಟ್ಟಿನಲ್ಲಿ ಮಕ್ಕಳ ಮತ್ತು ಪಾಲಕರ ಸಭೆ ನಡೆಸಿ, ಅವರ ಸಲಹೆ-ಸೂಚನೆ ಕಂಡುಕೊಳ್ಳುವುದು ಅವಶ್ಯವಾಗಿದೆ ಎಂದು ಹೇಳಿದರು. ಶ್ರೀಶೈಲ್ ಕರೀಕಟ್ಟಿ ಮಾತನಾಡಿ, ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಫೋನ್ ಇನ್ ಕಾರ್ಯಕ್ರಮ ಪೂರಕವಾಗಿದೆ.
ನ. 22ರಂದು ಮಧ್ಯಾಹ್ನ 3 ರಿಂದ 5 ಗಂಟೆವರೆಗೆ ಫೋನ್ ಇನ್ ನಡೆಯಲಿದ್ದು, ಟೋಲ್ ಫ್ರೀ ನಂ.1800-4255540 ಕರೆ ಮಾಡಿ ಸಮಸ್ಯೆ ಪರಿಹರಿಸಿಕೊಳ್ಳಬಹುದು ಎಂದರು. ಶಹರ ಬಿಇಒ ಎಸ್.ಎಂ. ಹುಡೇದಮನಿ, ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಭಾರಿ
ಉಪನಿರ್ದೇಶಕ ಎಂ.ಎಲ್ ಹಂಚಾಟೆ, ಪ್ರೇರಣಾ ಸಮಿತಿ ಸದಸ್ಯ ವಿನಾಯಕ ಜೋಶಿ, ಶಶಿಕಲಾ ಬಸವರೆಡ್ಡಿ, ಎ.ಕೆ. ಮುಜಾವರ, ಜಿಲ್ಲೆಯ ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪ್ರೇರಣಾ ಸಮಿತಿ ಸದಸ್ಯರು, ಉರ್ದು ಶಿಕ್ಷಕರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?
Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು
Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ
VIDEO: ಡಿವೋರ್ಸ್ ಸುದ್ದಿ ನಡುವೆ ʼಬಚ್ಚನ್ʼ ಸರ್ನೇಮ್ ಇಲ್ಲದೆ ಕಾಣಿಸಿಕೊಂಡ ಐಶ್ವರ್ಯಾ
Subrahmanya: ಕುಕ್ಕೆ ಜಾತ್ರೆ ನೋಡಲು ಬರುತ್ತವೆ ದೇವರ ಮೀನುಗಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.