ಹುತಾತ್ಮ ಯೋಧರ ಮಕ್ಕಳಿಗೆ ಶೈಕ್ಷಣಿಕ ಸೌಲಭ್ಯ


Team Udayavani, Nov 21, 2017, 1:09 PM IST

m2-hutatma.jpg

ಮೈಸೂರು: ಹುತಾತ್ಮ ಯೋಧರ ಗೌರವಾರ್ಥ ಅವರ ಮಕ್ಕಳಿಗೆ ಪದವಿ ಯಿಂದ ಪಿಎಚ್‌ಡಿ ಹಂತದವರೆಗೆ ಊಟ ಮತ್ತು ವಸತಿ ಸಹಿತ ಉಚಿತ ಶಿಕ್ಷಣ ನೀಡಲು ಮೈಸೂರು ವಿಶ್ವವಿದ್ಯಾನಿಲಯ ತೀರ್ಮಾನಿಸಿದೆ.

ಮೈಸೂರು ವಿವಿ ಪ್ರಭಾರ ಕುಲಪತಿ ಪೊ›.ದಯಾನಂದ ಮಾನೆ ಅಧ್ಯಕ್ಷತೆಯಲ್ಲಿ ವಿವಿಯ ಕಾರ್ಯಸೌಧ ಕ್ರಾಫ‌ರ್ಡ್‌ ಭವನದಲ್ಲಿ ಸೋಮವಾರ ನಡೆದ ಶೈಕ್ಷಣಿಕ ಪರಿಷತ್ತಿನ ಎರಡನೇ ಸಾಮಾನ್ಯ ಸಭೆಯಲ್ಲಿ, ಮೈಸೂರು ವಿವಿ ಈಗಾಗಲೇ ಆತ್ಮಹತ್ಯೆಗೆ ಶರಣಾದ ರೈತರ ಮಕ್ಕಳಿಗೆ ಉಚಿತ ಶಿಕ್ಷಣ ನೀಡುತ್ತಿರುವುದರಿಂದ ಹುತಾತ್ಮ ಯೋಧರ ಮಕ್ಕಳಿಗೂ ಉಚಿತ ಶಿಕ್ಷಣ ನೀಡಲು ಒಪ್ಪಿಗೆ ದೊರೆಯಿತು.

ಕಾಶ್ಮೀರದಲ್ಲಿ ಇತ್ತೀಚೆಗೆ ಸೇನಾ ಶಿಬಿರದ ಮೇಲೆ ನಡೆದ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಯೋಧರ ಗೌರವಾರ್ಥ ಅವರ ಕುಟುಂಬದ ಹೆಣ್ಣುಮಕ್ಕಳಿಗೆ ಎಲ್ಲ ವಿಶ್ವವಿದ್ಯಾನಿಲಯಗಳಲ್ಲಿ ಪದವಿಯಿಂದ ಪಿಎಚ್‌.ಡಿ ಹಂತದವರೆಗೆ ಊಟ, ವಸತಿ ಸಹಿತ ಉಚಿತ ಶಿಕ್ಷಣ ನೀಡುವಂತೆ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದ್ದು, ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳು ಎಲ್ಲ ವಿವಿಗಳಿಗೆ ಸೂಚನೆ ನೀಡಿರುವ ಬಗ್ಗೆ ಸಭೆಯಲ್ಲಿ ಸುದೀರ್ಘ‌ ಚರ್ಚೆ ನಡೆಯಿತು.

ಕಾಶ್ಮೀರದಲ್ಲಿ ಮಾತ್ರವಲ್ಲ, ಯೋಧರು ಎಲ್ಲೇ ಹುತಾತ್ಮರಾಗಲಿ  ಅವರ ಮಕ್ಕಳನ್ನು ಗಂಡು-ಹೆಣ್ಣು ಎಂದು ಬೇಧ ಮಾಡದೆ ಇಬ್ಬರಿಗೂ ವಿವಿಯಲ್ಲಿ ಉಚಿತ ಶಿಕ್ಷಣ ನೀಡಲು ಸಭೆ ಒಪ್ಪಿಗೆ ನೀಡಿತು. ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಕಾಯ್ದೆಯ ಜಾರಿಯಿಂದಾಗಿ ತೆರಿಗೆ ನಿರ್ವಹಣೆ ಡಿಪ್ಲೊಮಾ ಕೋರ್ಸ್‌ನ ಪರಿಷ್ಕೃತ ಪಠ್ಯಕ್ರಮವನ್ನು 2017-18ನೇ ಶೈಕ್ಷಣಿಕ ಸಾಲಿನಿಂದಲೇ ಅಳವಡಿಸಲು ಸಭೆ ಒಪ್ಪಿಗೆ ನೀಡಿತು.ಮೈಸೂರು ವಿವಿಯ ನೇರ ನೇಮಕಾತಿ ಕರಡು ಅಧಿನಿಯಮಕ್ಕೆ ಒಪ್ಪಿಗೆ ಸೂಚಿಸಲಾಯಿತು.

ಕಾಲೇಜು ಸ್ಥಳಾಂತರಕ್ಕೆ ಅನುಮತಿ: ಹಾಸನದ ಸಾಲಗಾಮೆ ರಸ್ತೆಯಲ್ಲಿರುವ ಸಂತ ಜೋಸೆಫ‌ರ ಪ್ರಥಮ ದರ್ಜೆ ಕಾಲೇಜನ್ನು ಬಿ.ಕಾಟೇಹಳ್ಳಿ ಡೈರಿ ಸರ್ಕಲ್‌ ಸಮೀಪ ಹೊಸದಾಗಿ ನಿರ್ಮಿಸಿರುವ ಕಟ್ಟಡಕ್ಕೆ 2017-18ನೇ ಶೈಕ್ಷಣಿಕ ಸಾಲಿನಿಂದ  ಸ್ಥಳಾಂತರಿಸಲು ಅನುಮತಿ ನೀಡಲಾಯಿತು.

ಮಾನ್ಯತೆ ರದ್ದು: ಮೈಸೂರಿನ ಜೆಎಸ್‌ಎಸ್‌ ರಿಸರ್ಚ್‌ ಫೌಂಡೇಷನ್‌ ಮತ್ತು ಬೆಂಗಳೂರಿನ ಬಯೋ ಕಂಟ್ರೋಲ್‌ ರೀಸರ್ಚ್‌ ಲ್ಯಾಬೊರೇಟರೀಸ್‌ಗಳು 2017-18ನೇ ಸಾಲಿನಿಂದ ಯಾವುದೇ ವಿದ್ಯಾರ್ಥಿಗೆ ಸಂಶೋಧನೆಗೆ ನೋಂದಣಿ ಮಾಡಿಕೊಳ್ಳಲು ಆಗುತ್ತಿಲ್ಲ, ಹೀಗಾಗಿ ಕೇಂದ್ರಗಳ ಮಾನ್ಯತೆ ರದ್ದುಪಡಿಸುವಂತೆ ಪತ್ರ ಬರೆದಿರುವ ಹಿನ್ನೆಲೆಯಲ್ಲಿ ಎರಡೂ ಕೇಂದ್ರಗಳ ಮಾನ್ಯತೆ ರದ್ದುಪಡಿಸಲು ಸಭೆ ಒಪ್ಪಿಗೆ ನೀಡಿತು.

ಚಿನ್ನದ ಪದಕ ದತ್ತಿ ಸ್ಥಾಪನೆ: ಉರ್ದು ವಿಭಾಗದ “ದೆಖನಿ ಅಬದ್‌’ ವಿಷಯದಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗೆ ಚಿನ್ನದ ಪದಕ ನೀಡಲು ಕಲಬುರ್ಗಿಯ ಸಿರಾಜ್‌ ಹಶಿಮ್‌ ಅಲಿ ನೀಡಿರುವ ಒಂದು ಲಕ್ಷ ರೂ. ದೇಣಿಗೆಯಲ್ಲಿ ವರ ಕೋರಿಕೆಯಂತೆ ಪ್ರೊ.ಹಶಿಮ್‌ ಅಲಿ ಸ್ಮರಣಾರ್ಥ ಚಿನ್ನದ ಪದಕ ದತ್ತಿ ಸ್ಥಾಪಿಸಲು ನಿರ್ಧರಿಸಲಾಯಿತು.

ವಿವಿ ಕುಲಸಚಿವೆ ಡಿ.ಭಾರತಿ, ಪರೀಕ್ಷಾಂಗ ಕುಲಸಚಿವ ಪ್ರೊ.ಜೆ. ಸೋಮಶೇಖರ್‌, ಶೈಕ್ಷಣಿಕ ಪರಿಷತ್ತಿನ ಸದಸ್ಯರು ಹಾಗೂ ವಿವಿಧ ನಿಕಾಯದ ಅಧ್ಯಕ್ಷರುಗಳು ಸಭೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

IND VS PAK

Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

1-aaa

PM Modi ಭೇಟಿಯಾಗಿ ವಿಶೇಷ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

18-bng

Bengaluru: ಕಂಕಣ ಕಾಲ-2 ಅರಮನೆ ಮೈದಾನದಲ್ಲೂ ಬಜೆಟ್‌ ವಿವಾಹ ಸಾಧ್ಯ!

Maharstra: ಬೈಕ್‌ಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ: 10ಮಂದಿ ಮೃತ್ಯು

Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ಖಾಸಗಿ ಪೈನಾನ್ಸ್ ನ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆಗೆ ಶರಣು

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

3-hunsur

Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

mysore

Mysore: ಪತ್ನಿ, ತಾಯಿ, ಇಬ್ಬರು ಮಕ್ಕಳ ಹತ್ಯೆ… ಅಪರಾಧಿಗೆ ಮರಣದಂಡನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!

ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!

1(4

Udupi: ಎಂಜಿಎಂ ವಿದ್ಯೆ ಎಂಬ ಅಮೃತ ನೀಡುತ್ತಿದೆ: ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿ

IND VS PAK

Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA

Guarantee Scheme: ಸರಕಾರದ ಖಜಾನೆ ತುಂಬಲು ಅನಧಿಕೃತ ಲೇಔಟ್ ಸಕ್ರಮಗೊಳಿಸಲಿ:ಜನಾರ್ದನ ರೆಡ್ಡಿ

Guarantee Scheme: ಸರಕಾರದ ಖಜಾನೆ ತುಂಬಲು ಅನಧಿಕೃತ ಲೇಔಟ್ ಸಕ್ರಮಗೊಳಿಸಲಿ:ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.