ರಾಹುಲ್ ನಮಾಜಿಗೆ ಕುಳಿತವರಂತೆ ದೇವಳದಲ್ಲಿ ಕೂರುತ್ತಾರೆ: ಯೋಗಿ
Team Udayavani, Nov 22, 2017, 11:24 AM IST
ಲಕ್ನೋ : ‘ಚುನಾವಣೆಗೆ ಪೂರ್ವಭಾವಿ ಸಿದ್ಧತೆ ಎಂಬಂತೆ ದೇವಸ್ಥಾನದಿಂದ ದೇವಸ್ಥಾನಕ್ಕೆ ಹೋಗುತ್ತಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ “ದೇವಸ್ಥಾನದಲ್ಲಿ ಹೇಗೆ ಕುಳಿತುಕೊಳ್ಳಬೇಕು ಎಂಬುದೇ ಗೊತ್ತಿಲ್ಲ; ಆತ ಮಸೀದಿಯಲ್ಲಿ ನಮಾಜ ಮಾಡುವ ರೀತಿಯಲ್ಲಿ ದೇವಸ್ಥಾನದಲ್ಲಿ ಕುಳಿತುಕೊಳ್ಳುತ್ತಾರೆ’ ಎಂದು ಉ.ಪ್ರ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಟೀಕಿಸಿದ್ದಾರೆ.
“ರಾಹುಲ್ ಗಾಂಧಿ ಅವರು ಈಚೆಗೆ ವಾರಾಣಸಿಯ ಕಾಶೀ ವಿಶ್ವನಾಥ ದೇವಸ್ಥಾನಕ್ಕೆ ಹೋಗಿದ್ದಾಗ ಅಲ್ಲಿ ಅವರು ಕುಳಿತ ಭಂಗಿ ಮಸೀದಿಯಲ್ಲಿ ನಮಾಜು ಮಾಡುವ ರೀತಿಯಲ್ಲಿತ್ತು; ಇದನ್ನು ಕಂಡ ಅಲ್ಲಿನ ಅರ್ಚಕರು, “ದೇವಸ್ಥಾನದಲ್ಲಿ ನೀವು ಹೀಗೆ ಕೂರುವಂತಿಲ್ಲ; ಪಾಲ್ಟಿ ಹಾಕಿ (ಚಕ್ಕಳಮಕ್ಕಳ) ಕೂರಬೇಕು’ ಎಂದು ರಾಹುಲ್ ಗಾಂಧಿಗೆ ಹೇಳಿದರು’ಎಂಬುದಾಗಿ ಸಿಎಂ ಆದಿತ್ಯನಾಥ್ ಹೇಳಿದರು.
ಅದೇನಿದ್ದರೂ ಚುನಾವಣೆಗಾಗಿ ದೇವಸ್ಥಾನದಿಂದ ದೇವಸ್ಥಾನಕ್ಕೆ ಓಡುತ್ತಿರುವ ರಾಹುಲ್ ಗಾಂಧಿ ಅವರ ಮನಸ್ಸು ಈ ಕಾರಣದಿಂದಾದರೂ ಪರಿಶುದ್ಧವಾಗಲೆಂದು ಹಾರೈಸುತ್ತೇನೆ ಎಂದು ಯೋಗಿ ತಿಳಿಸಿದರು.
ರಾಹುಲ್ ಗಾಂಧಿ ಕೇವಲ ಮತಗಳಿಗಾಗಿ ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ ಎಂದು ಬಿಜೆಪಿ ಟೀಕಿಸಿದೆಯಾದರೆ, ಕಾಂಗ್ರೆಸ್ ರಾಹುಲ್ ಗಾಂಧಿಯನ್ನು ಸಮರ್ಥಿಸಿಕೊಂಡು “ದೇವರನ್ನು ಧ್ಯಾನಿಸುವ ವಿಧಾನಕ್ಕೆ ಯಾರಲ್ಲಾರದರೂ ಪೇಟೆಂಟ್ ಇದೆಯೇ?’ ಎಂದು ಪ್ರಶ್ನಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು
Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು
Maharashtra: ದಿಢೀರನೆ ಊರಿಗೆ ತೆರಳಿದ ಶಿಂಧೆ; ಮತ್ತೆ ಮುಂದುವರಿದ ʼಮಹಾ ಸಿಎಂʼ ಕಗ್ಗಂಟು
Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.