ಪೋಸ್ಕೋ ಕಾಯ್ದೆ ಅಡಿಯಲ್ಲಿ ಆರೋಪಿ ಬಂಧನ
Team Udayavani, Nov 22, 2017, 11:55 AM IST
ಬೆಂಗಳೂರು: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ವೃದ್ಧನೊಬ್ಬನನ್ನು ಪೋಸ್ಕೋ ಕಾಯ್ದೆ ಅಡಿಯಲ್ಲಿ ರಾಜಗೋಪಾಲನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಲವಕುಶನಗರದ ನಿವಾಸಿ ಪ್ರೇಮ್ ಕುಮಾರ್ (58) ಬಂಧಿತ.
ಲಗ್ಗೆರೆಯಲ್ಲಿ ವಾಸವಾಗಿರುವ ಆರೋಪಿ ಫೈನಾನ್ಸ್ ಹಣ ಸಂಗ್ರಹಿಸಲು ವಾರದ ಹಿಂದೆ ಚೊಕ್ಕಸಂದ್ರಕ್ಕೆ ಬಂದಿದ್ದ. ಆಗ ಪೋಷಕರ ಬಳಿ ಹಣ ಕಟ್ಟಿಸಿಕೊಳ್ಳುವ ಸಲುವಾಗಿ ಬಾಲಕಿ ಇರುವ ಮನೆಗೆ ಹೋಗಿದ್ದಾನೆ.
ಈ ವೇಳೆ ಬಾಲಕಿ ಮನೆಯಲ್ಲಿ ಏಕಾಂಗಿಯಾಗಿರುವುದನ್ನು ಗಮನಿಸಿ, ಆಕೆಯೊಂದಿಗೆ ಸಲುಗೆಯಿಂದ ಮಾತನಾಡಿಸಿ ಬಳಿಕ ತನ್ನ ದ್ವಿಚಕ್ರ ವಾಹನದಲ್ಲಿ ಕೂರಿಸಿಕೊಂಡು ಲಗ್ಗೆರೆಯ ಮನೆಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆ ನಡೆದ ಕೆಲ ದಿನಗಳ ಬಳಿಕ ಬಾಲಕಿ ತನ್ನ ಪೋಷಕರ ಬಳಿ ಹೇಳಿಕೊಂಡಾಗ ಪ್ರಕರಣ ಬೆಳಕಿಗೆ ಬಂದಿದ್ದು, ಪೋಷಕರು ರಾಜಗೋಪಾಲನಗರ ಠಾಣೆಯಲ್ಲಿ ದೂರು ನೀಡಿದ್ದರು. ಈ ಸಂಬಂಧ ಆರೋಪಿಯನ್ನು ಪೋಸ್ಕೋ ಕಾಯ್ದೆ ಅಡಿಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.