ಸಹಿಸಂಗ್ರಹ ಅಭಿಯಾನಕ್ಕೆ ಚಾಲನೆ

Team Udayavani, Nov 22, 2017, 5:05 PM IST

22-Nov-15.jpg

ಬಂಟ್ವಾಳ: ತುಳು ಭಾಷೆಯನ್ನು ಭಾರತ ಸಂವಿಧಾನನದ 8ನೇ ಪರಿಚ್ಛೇದಕ್ಕೆ ಸೇರ್ಪಡಿಸಬೇಕೆಂದು ಸರಕಾರದ ಗಮನಸೆಳೆಯಲು ನಡೆಸುತ್ತಿರುವ ಈ ಸಹಿ ಸಂಗ್ರಹ ಅಭಿಯಾನ ಅಭಿನಂದನಾರ್ಹ. ತುಳುವರೆಲ್ಲರೂ ಈ ಅಭಿಯಾನಕ್ಕೆ ಬೆಂಬಲ ನೀಡಬೇಕು ಎಂದು ಪರ್ಯಾಯ ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಶ್ರೀಪಾದರು ತಿಳಿಸಿದರು.

ಅವರು ವಿಶ್ವ ತುಳುವೆರೆ ಆಯನೊ ಕೂಟ, ನಮ ತುಳುವೆರ್‌ ಕಲಾ ಸಂಘಟನೆ ಮುದ್ರಾಡಿ ಇವರ ನೇತೃತ್ವದಲ್ಲಿ ತುಳುನಾಡ ರಕ್ಷಣಾ ವೇದಿಕೆ ಹಾಗೂ ಸುಮನಸಾ ಕೊಡವೂರು ಉಡುಪಿ ಇವರ ಸಹಕಾರದೊಂದಿಗೆ ನಡೆಯುತ್ತಿರುವ ಸಹಿ ಸಂಗ್ರಹ ಅಭಿಯಾನವನ್ನು ತುಳುವಿನಲ್ಲೇ ಸಹಿ ಹಾಕುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು.

ಪ್ರದೀಪ್‌ ಕುಮಾರ್‌ ಕಲ್ಕೂರ ಮುಖ್ಯ ಅತಿಥಿಯಾಗಿ ಮಾತನಾಡಿ, ತುಳುನಾಡಿನಲ್ಲಿ ಜಾತಿ, ಮತ, ಭಾಷಾ ಸಾಮರಸ್ಯ ಮೆರೆಸುವಲ್ಲಿ ತುಳು ಪ್ರಮುಖ ಪಾತ್ರ ವಹಿಸುತ್ತಿದೆ. ಮನೆ ಭಾಷೆ ಯಾವುದೇ ಆಗಿದ್ದರೂ ಅವರ ವ್ಯವಹಾರ ಭಾಷೆ ತುಳುವೇ ಆಗಿದೆ. ಇಂತಹ ಪ್ರಬುದ್ಧ ಭಾಷೆ 8ನೇ ಪರಿಚ್ಛೇದಕ್ಕೆ ಸೇರಲು ಎಲ್ಲ ಅರ್ಹತೆ ಹೊಂದಿದೆ. ಈ ಅಭಿಯಾನದ ಮೂಲಕ ಸಂಬಂಧಪಟ್ಟವರು ಎಚ್ಚೆತ್ತುಕೊಳ್ಳಲಿ ಎಂದರು.

ಉಡುಪಿ ತುಳು ಕೂಟದ ಅಧ್ಯಕ್ಷ ಇಂದ್ರಾಳಿ ಜಯಕರ ಶೆಟ್ಟಿ, ಡಿ.23,24 ರಂದು ಪಿಲಿಕುಳದಲ್ಲಿ ನಡೆಯಲಿರುವ ತುಳುನಾಡೋಚ್ಚಯ-2017 ಕಾರ್ಯಕ್ರಮದ ಪೂರ್ವಭಾವಿಯಾಗಿ ಈ ಸಹಿ ಸಂಗ್ರಹ ಅಭಿಯಾನವು ನಡೆಯುತ್ತಿದ್ದು ತುಳು ಭಾಷೆಯನ್ನು 8ನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸಬೇಕು. ತುಳು ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆ,ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ, ಕಾಸರಗೋಡನ್ನು ಕರ್ನಾಟಕಕ್ಕೆ ಸೇರಿಸಬೇಕು ಮೊದಲಾದ ಬೇಡಿಕೆಗಳನ್ನು ಕೇಂದ್ರ, ರಾಜ್ಯ ಸರಕಾರದ ಮುಂದಿಡಲು ಒಂದು ಲಕ್ಷಕ್ಕಿಂತಲೂ ಹೆಚ್ಚು ಸಹಿ ಸಂಗ್ರಹಿಸಲು ತೀರ್ಮಾನಿಸಲಾಗಿದೆ ಎಂದರು. ತುಳುನಾಡೋಚ್ಚಯ ಉಡುಪಿ ಸಮಿತಿ ಅಧ್ಯಕ್ಷೆ ಡಾ| ನಿಕೇತನ ಅಧ್ಯಕ್ಷತೆ ವಹಿಸಿದ್ದರು. ಡಾ| ರಾಜೇಶ್‌ ಆಳ್ವ ಮಾತನಾಡಿದರು.

ತುಳುನಾಡ ರಕ್ಷಣಾ ವೇದಿಕೆಯ ಸ್ಥಾಪಕಾಧ್ಯಕ್ಷ ಯೋಗೀಶ್‌ ಶೆಟ್ಟಿ ಜಪ್ಪು, ಶ್ರೀ ಕ್ಷೇತ್ರ ಮುದ್ರಾಡಿಯ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ, ಉಡುಪಿ ಮಠದ ವಾಸು ದೇವ ಭಟ್‌, ಪ್ರಕಾಶ್‌ ಜಿ. ಕೊಡವೂರು, ಸುರೇಶ್‌ ರಾವ್‌, ಸಿರಾಜ್‌ ಅಡ್ಕರೆ, ಯಶೋದಾ ಕೇಶವ್‌, ತು.ರ.ವೇ ಉಡುಪಿ ಘಟಕದ ಅಜರುದ್ದೀನ್‌, ತುಳುನಾಡೋಚ್ಚಯ ಉಡುಪಿ ಸಮಿತಿ ಕಾರ್ಯದರ್ಶಿ ದಯಾನಂದ ಕರ್ಕೇರ, ತಾರಾ ಆಚಾರ್ಯ, ಜ್ಯೋತಿ ಎಸ್‌. ದೇವಾಡಿಗ, ಯಾದವ್‌ ಕರ್ಕೇರ, ಸರೋಜಾ ಯಶವಂತ್‌, ವಾಣಿ ಸುಕುಮಾರ್‌ ಮುದ್ರಾಡಿ, ಸುಗಂಧಿ ಉಮೇಶ್‌ ಕಲ್ಮಾಡಿ, ಚಂದನ್‌ ಮೊದಲಾದವರಿದ್ದರು. ಸಹಿಸಂಗ್ರಹ ಅಭಿಯಾನದ ಸಂಚಾ ಲಕ ಸುಕುಮಾರ್‌ ಮೋಹನ್‌ ಮುದ್ರಾಡಿ ಸ್ವಾಗತಿಸಿ, ಭಾಸ್ಕರ ಭಟ್‌ ವಂದಿಸಿದರು.

ಧ್ಯೇಯೋದ್ದೇಶ ಈಡೇರಲಿ
ತುಳು ಭಾಷೆಯನ್ನು 8ನೇ ಪರಿಚ್ಛೇದಕ್ಕೆ ಸೇರಿಸಬೇಕೆಂದು ಹಕ್ಕೊತ್ತಾಯ ಮಂಡಿಸುತ್ತೇನೆ. ಮಧ್ವಾಚಾರ್ಯರ ಪುಣ್ಯದ ಮಣ್ಣಿನಿಂದ ಈ ಅಭಿಯಾನವು ಆರಂಭಗೊಂಡಿದ್ದು ಯಶಸ್ವಿಯಾಗಿ ಸಾಗಿ ಯಾತ್ರೆಯ ಧ್ಯೇಯೋದ್ದೇಶಗಳು ಈಡೇರಲಿ.
ಶ್ರೀ ವಿಶ್ವೇಶ ತೀರ್ಥ ಶ್ರೀಪಾದರು,
   ಪರ್ಯಾಯ ಶ್ರೀ ಪೇಜಾವರ ಮಠ 

ಟಾಪ್ ನ್ಯೂಸ್

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

ಗೀತಾರ್ಥ ಚಿಂತನೆ 106: ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

accident

Vitla: ರಿಕ್ಷಾ- ಬೈಕ್‌ ಢಿಕ್ಕಿ; ಮೂವರಿಗೆ ಗಾಯ

Sullia: ಕನಕಮಜಲು; ಅಂಗಡಿ, ಹೊಟೇಲ್‌ನಿಂದ ಕಳವು

Sullia: ಕನಕಮಜಲು; ಅಂಗಡಿ, ಹೊಟೇಲ್‌ನಿಂದ ಕಳವು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ

Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.