ಪ್ರಿಯಾಂಕಾ ವಾದ್ರಾಗೆ ಪಕ್ಷದಲ್ಲಿ ಹೆಚ್ಚಿನ ಜವಾಬ್ದಾರಿ ಸಾಧ್ಯತೆ
Team Udayavani, Nov 23, 2017, 6:00 AM IST
ಹೊಸದಿಲ್ಲಿ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯನ್ನು ಅಧ್ಯಕ್ಷ ಹುದ್ದೆಗೇರಿಸುವುದು ಒಂದೆಡೆ ಬಹುತೇಖ ಖಚಿತವಾಗಿರುವಂತೆಯೇ, ಸೋದರಿ ಪ್ರಿಯಾಂಕಾ ಗಾಂಧಿಗೆ ಪಕ್ಷದಲ್ಲಿ ಯಾವ ಜವಾಬ್ದಾರಿ ನೀಡಲಾಗುತ್ತದೆ ಎಂಬುದು ಇದೀಗ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಕಳೆದ ಲೋಕಸಭೆ ಚುನಾವಣೆಯ ಸಮಯದಿಂದಲೇ ಪ್ರಿಯಾಂಕಾರನ್ನು ಅಧ್ಯಕ್ಷ ಹುದ್ದೆಗೇರಿಸಬೇಕು ಹಾಗೂ ಪ್ರಧಾನಿ ಅಭ್ಯರ್ಥಿಯನ್ನಾಗಿ ಘೋಷಿಸಬೇಕು ಎಂಬ ಕೂಗು ಪಕ್ಷದೊಳಗಿಂದ ಕೇಳಿಬರುತ್ತಿತ್ತು. ಆದರೆ ಆ ಕೂಗಿನ ಸದ್ದು ಈಗ ಅಡಗಿದೆ. ಉತ್ತರ ಪ್ರದೇಶ ಚುನಾವಣೆಯ ವೇಳೆ ಸೀಟು ಹಂಚಿಕೆಯಲ್ಲಿ ಪ್ರಿಯಾಂಕಾ ಮಹತ್ವದ ಪಾತ್ರ ವಹಿಸಿದ್ದರೂ ಮುಖ್ಯವಾಹಿನಿಯಿಂದ ಅವರು ದೂರವೇ ಇದ್ದರು.
ಮೂಲಗಳ ಪ್ರಕಾರ, 2019ರಲ್ಲಿ ರಾಜಸ್ಥಾನ ಹಾಗೂ ಮಧ್ಯಪ್ರದೇಶ ಚುನಾವಣೆಗೂ ಮುನ್ನ ಅವರನ್ನು ಪಕ್ಷದ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಿಸುವ ಸಾಧ್ಯತೆಯಿದೆ. ಇನ್ನೊಂದೆಡೆ ಅವರು ಈಗಿನಂತೆಯೇ ಹಿನ್ನೆಲೆಯಲ್ಲಿದ್ದುಕೊಂಡೇ ಪಕ್ಷಗಳ ಮಧ್ಯೆ ಸಹಭಾಗಿತ್ವ, ಸಂಧಾನ ಪ್ರಕ್ರಿಯೆಯಲ್ಲಿ ತೊಡಗಿಸಿಕೊಳ್ಳುವ ಸಾಧ್ಯತೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andhra Pradesh: ಅದಾನಿ ಗ್ರೂಪ್ ಜತೆಗಿನ ಒಪ್ಪಂದ ರದ್ದತಿಗೆ ಆಂಧ್ರಪ್ರದೇಶ ಚಿಂತನೆ?
EVM ರದ್ದು ಆಗ್ರಹಿಸಿ ಜೋಡೋ ಮಾದರಿ ಯಾತ್ರೆ: ಎಐಸಿಸಿ ಅಧ್ಯಕ್ಷ ಖರ್ಗೆ
Hyderabad: ಗಂಟಲಿಗೆ ಪೂರಿ ಸಿಲುಕಿ ವಿದ್ಯಾರ್ಥಿ ಸಾವು
Narendra Modi: ನಾನು ಯಾರದ್ದೇ ಅಧಿಕಾರ ವ್ಯಾಪ್ತಿ ಅತಿಕ್ರಮಿಸಿಕೊಂಡಿಲ್ಲ: ಮೋದಿ
Maharashtra: ಏಕ್ನಾಥ್ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Congress Politics: ಡಿಸಿಎಂ ಡಿ.ಕೆ.ಶಿವಕುಮಾರ್ ದಿಲ್ಲಿಗೆ ಭೇಟಿ: ಹೈಕಮಾಂಡ್ ಜತೆ ಚರ್ಚೆ
Andhra Pradesh: ಅದಾನಿ ಗ್ರೂಪ್ ಜತೆಗಿನ ಒಪ್ಪಂದ ರದ್ದತಿಗೆ ಆಂಧ್ರಪ್ರದೇಶ ಚಿಂತನೆ?
By Election Result: ಮತ್ತೆ ಬಿಜೆಪಿ ಅಧಿಕಾರಕ್ಕೆ ತರೋಣ: ಬಿ.ವೈ.ವಿಜಯೇಂದ್ರ
Yakshagana: ಇಂದು ನೀಲಾವರ ಮೇಳ ತಿರುಗಾಟಕ್ಕೆ ಚಾಲನೆ
EVM ರದ್ದು ಆಗ್ರಹಿಸಿ ಜೋಡೋ ಮಾದರಿ ಯಾತ್ರೆ: ಎಐಸಿಸಿ ಅಧ್ಯಕ್ಷ ಖರ್ಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.