ಮಕ್ಕಳ ರಾಷ್ಟ್ರೀಯ ವಿಜ್ಞಾನ ಸಮಾವೇಶಕ್ಕೆ ಚಾಲನೆ
Team Udayavani, Nov 23, 2017, 10:04 AM IST
ಮೂಡಬಿದಿರೆ: ದೇಶದ ಅಭಿವೃದ್ಧಿಯಲ್ಲಿ ವಿಜ್ಞಾನಿಗಳ ಪಾತ್ರ ಪ್ರಮುಖವಾಗಿದೆ. ಹಿಂದೆಲ್ಲ ಜನರಿಗೆ ವಿಜ್ಞಾನಿಗಳಾಗುವ ಕನಸುಗಳಿದ್ದವು. ಇಂದಿನ ವಿದ್ಯಾರ್ಥಿಗಳಲ್ಲಿ ಅಂಥ ಚಿಂತನೆ ಕಡಿಮೆಯಾಗುತ್ತಿದೆ. ವಿಜ್ಞಾನ ಸಮಾವೇಶದಂಥ ಕಾರ್ಯಕ್ರಮಗಳಿಂದ ನಾಳಿನ ವಿಜ್ಞಾನಿಗಳಿಗೆ ಪ್ರೇರಣೆ ಲಭಿಸುವಂತಾಗಲಿ ಎಂದು ಮಾಜಿ ಸಚಿವ ಕೆ. ಅಮರನಾಥ ಶೆಟ್ಟಿ ಹೇಳಿದರು.
ಅವರು, ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಮಂಗಳೂರು, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ಜಿಲ್ಲಾ ಸಮಿತಿ, ಮೂಡಬಿದಿರೆ ರೋಟರಿ ಆಂಗ್ಲ ಮಾಧ್ಯಮ ಶಾಲೆ ಮತ್ತು ರೋಟರಿ ಕ್ಲಬ್ ಮೂಡುಬಿದಿರೆ ಇವುಗಳ ಸಹಯೋಗದಲ್ಲಿ ’25ನೇ ದ.ಕ. ಜಿಲ್ಲಾ ಮಟ್ಟದ ಮಕ್ಕಳ ರಾಷ್ಟ್ರೀಯ ವಿಜ್ಞಾನ ಸಮಾವೇಶ 2017-18′ ಅನ್ನು ರೋಟರಿ ಸಮ್ಮಿಲನ್ ಹಾಲ್‌ನಲ್ಲಿ ಬುಧವಾರ ಉದ್ಘಾಟಿಸಿ ಮಾತನಾಡಿದರು.
ರೋಟರಿ ಕ್ಲಬ್ ಅಧ್ಯಕ್ಷ ಶ್ರೀಕಾಂತ್ ಕಾಮತ್ ಅಧ್ಯಕ್ಷತೆಯನ್ನು ವಹಿಸಿದ್ದರು. ರೋಟರಿ ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ನಾರಾಯಣ ಪಿ.ಎಂ., ಪ್ರೊ| ಜಿ.ಎನ್. ಭಟ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ಜಿಲ್ಲಾ ಸಮಿತಿಯ ಅಧ್ಯಕ್ಷ ಎಸ್. ಅಬೂಬಕ್ಕರ್ ಅರ್ಲಪದವು, ರೋಟರಿ ವಿದ್ಯಾ ಸಂಸ್ಥೆಯ ಪ್ರಾಂಶುಪಾಲ ವಿನ್ಸೆಂಟ್ ಡಿ’ಕೋಸ್ಟಾ ಉಪಸ್ಥಿತರಿದ್ದರು.
ಕೋಶಾಧಿಕಾರಿ ಅನಂತರಾಮ ಹೇರಳ ಸ್ವಾಗತಿಸಿದರು. ಸಮಾವೇಶದ ಕಾರ್ಯದರ್ಶಿ ಕರುಣಾಕರ ಎಚ್. ಎಸ್. ಪ್ರಾಸ್ತಾವಿಕ ಮಾತುಗಳನ್ನಾಡಿದರು. ರೇಣುಕಾಚಾರ್ಯ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Maharashtra: ಫಲಿತಾಂಶಕ್ಕೂ ಮೊದಲೇ ರಾರಾಜಿಸುತ್ತಿದೆ ಅಜಿತ್ ಪವಾರ್ ಗೆಲುವಿನ ಬ್ಯಾನರ್
Aaram Aravinda Swamy Movie Review: ಪಕ್ಕದ್ಮನೆ ಹುಡುಗನ ಫನ್‌ರೈಡ್
Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ
By Election: ನಿಖಿಲ್ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್; ಕುತೂಹಲದತ್ತ ಚನ್ನಪಟ್ಟಣ
Karkala: ಶಾಲಾ ವಾಹನಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.