ಸರ್ಕಾರದ ಆಡಳಿತ ಕಾರ್ಯವೈಖರಿಗೆ ಹೈ ಗರಂ


Team Udayavani, Nov 23, 2017, 11:06 AM IST

high-court.jpg

ಬೆಂಗಳೂರು: ಸರ್ಕಾರಿ ಅಧಿಕಾರಿಗಳು ಸೇರಿದಂತೆ ಕಾನೂನು ಬಾಹಿರವಾಗಿ ನಡೆದುಕೊಳ್ಳು ವವರ ವಿರುದ್ಧ ಸೂಕ್ತ ಕ್ರಮ ಜರುಗಿಸದೇ ವಿಳಂಬ ಮಾಡುವ ಆಡಳಿತ ವ್ಯವಸ್ಥೆ ನೋಡಿ ನ್ಯಾಯಾಲಯ ಕಣ್ಮುಚ್ಚಿಕೊಂಡಿರಲು ಆಗುವುದಿಲ್ಲ ಎಂದು ಹೈಕೋರ್ಟ್‌ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ನಿಯಮ ಬಾಹಿರವಾಗಿ ಕಟ್ಟಡ ನಿರ್ಮಾಣ ಮಂಜೂ ರಾತಿ ರದ್ದುಪಡಿಸಿದ್ದ ಬೆಳ್ಮಾ ಗ್ರಾಪಂ ಅಧಿಕಾರಿ ಕ್ರಮ ಪ್ರಶ್ನಿಸಿ ಹೇಮಂತ್‌ ಶೆಟ್ಟಿ ಎಂಬುವವರು ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ಬುಧವಾರ ನ್ಯಾಯಮೂರ್ತಿ ವಿನೀತ್‌ ಕೊಠಾರಿ ಅವರಿದ್ದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

ಈ ವೇಳೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಡಿಒ ಸಲ್ಲಿಸಿದ್ದ ದಾಖಲೆಗಳು ಸಮರ್ಪಕವಾಗಿಲ್ಲ ಎಂದು ಅಭಿಪ್ರಾಯಪಟ್ಟ ನ್ಯಾಯಪೀಠ, ಈ ಪ್ರಕರಣದಲ್ಲಿ ಹಿರಿಯ ಅಧಿಕಾರಿ ಹೊರಡಿಸಿದ್ದ ಆದೇಶವನ್ನೂ ಮೀರಿ ಗ್ರಾಪಂ ಸಭೆ ನಿರ್ಣಯದ ಅನ್ವಯ ಪಿಡಿಒ ನಡೆದುಕೊಂಡಿರುವುದು ಸರಿಯಲ್ಲ ಎಂದು ತರಾಟೆ ತೆಗೆದುಕೊಂಡಿತು. 

ಜೊತೆಗೆ ಸೂಕ್ತ ಕಾರಣವಿಲ್ಲದೆ ಅಧಿಕಾರ ದುರ್ಬಳಕೆ ಮಾಡಿಕೊಂಡಿರುವ ಸಂಬಂಧ ಗ್ರಾಪಂ ಅಧ್ಯಕ್ಷರು ಹಾಗೂ ಸದಸ್ಯರ ಸದಸ್ಯತ್ವ ರದ್ದು ಗೊಳಿಸುವ ಸಲುವಾಗಿ ರಾಜ್ಯ ಸರ್ಕಾರ ಶೋಕಾಸ್‌ ನೀಡಿ 10 ತಿಂಗಳು ಕಳೆದರೂ ಯಾಕೆ
ಕ್ರಮ ಕೈಗೊಂಡಿಲ್ಲ. ಆಡಳಿತ ವ್ಯವಸ್ಥೆಯಲ್ಲಿ ಈ ವಿಳಂಬ ಧೋರಣೆ ಪುನರಾವರ್ತನೆಯಾಗುತ್ತಲೇ ಇರುತ್ತದೆ. ಈ ಕಾರ್ಯವೈಖರಿ ನೋಡಿಕೊಂಡು ಸುಮ್ಮನಿರಲು ಸಾಧ್ಯವಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿತು.

ಜೊತೆಗೆ ಗ್ರಾಪಂ ಸದಸ್ಯರ ವಿರುದ್ಧ ಯಾವ ಕ್ರಮ ಕೈಗೊಳ್ಳಲಾಗಿದೆ ಎಂದು ಸರ್ಕಾರದ ಪರ ವಕೀಲರನ್ನು ಪ್ರಶ್ನಿಸಿದ ನ್ಯಾಯಪೀಠ, ಸರ್ಕಾರ ನೀಡಿರುವ ಶೋಕಾಸ್‌ ನೋಟಿಸ್‌ ಸಂಬಂಧ ಮುಂದಿನ ಕ್ರಮ ಕೈಗೊಳ್ಳುತ್ತಿರೋ ಇಲ್ಲವೋ ಅಥವಾ ನ್ಯಾಯಾಲಯವೇ ಆದೇಶ ಹೊರಡಿಸಬೇಕೆ ಎಂದು ಪ್ರಶ್ನಿಸಿತು. ಜೊತೆಗೆ ಗ್ರಾಪಂ ಸದಸ್ಯರಿಗೆ ನೀಡಲಾಗಿರುವ ನೋಟಿಸ್‌ ಸಂಬಂಧ ಇದುವರೆಗೂ ಯಾವ ಕ್ರಮಗಳನ್ನು ಕೈಗೊಳ್ಳಲಾಗಿದೆ. ಎಂಬುದರ ಬಗ್ಗೆ ಮುಂದಿನ ವಿಚಾರಣೆ ವೇಳೆ ವರದಿ ಸಲ್ಲಿಸುವಂತೆ ಗ್ರಾಮೀಣಾಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ನಿರ್ದೇಶಿಸಿ ನ. 29ಕ್ಕೆ
ವಿಚಾರಣೆ ಮುಂದೂಡಿತು. ಅರ್ಜಿದಾರ ಹೇಮಂತ್‌ ಶೆಟ್ಟಿ ಪರ ವಕೀಲ ಕೇತನ್‌ಕುಮಾರ್‌ ಬೊಳನಾಥೂರ್‌ ವಾದ
ಮಂಡಿಸಿದ್ದರು.

ಪ್ರಕರಣ ಏನು?: ಬೆಳ್ಮಾ ಗ್ರಾಮದಲ್ಲಿ ಗಂಗಾಧರ್‌ ಶೆಟ್ಟಿ ಎಂಬುವವರಿಗೆ ಗ್ರಾಪಂ ವತಿಯಿಂದ 1983ರಲ್ಲಿ ಸರ್ವೇ ನಂಬರ್‌ 83/ಎನಲ್ಲಿ ನಿವೇಶನ ಕಟ್ಟಿಕೊಳ್ಳಲು ಸೈಟ್‌ ಮುಂಜೂರಾಗಿತ್ತು. ಗಂಗಾಧರ್‌ ಶೆಟ್ಟಿ ನಿಧನದ ನಂತರ ಸೈಟಿಗೆ ಸಂಬಂಧಿಸಿದ ದಾಖಲೆಗಳು, ಆರ್‌ಟಿಸಿ ಪುತ್ರ ಹೇಮಂತ್‌ ಶೆಟ್ಟಿಗೆ ವರ್ಗಾವಣೆಗೊಂಡಿದ್ದವು. 

2015ರಲ್ಲಿ ಹೇಮಂತ್‌ ತಮಗೆ ಹಕ್ಕಿರುವ ಸೈಟಿನಲ್ಲಿ ಕಟ್ಟಡ ಕಟ್ಟಲು ಮಂಜೂರಾತಿಗೆ ಗ್ರಾಪಂಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಗ್ರಾಪಂ ಸದಸ್ಯರು ಸಾಮಾನ್ಯ ಸಭೆಯಲ್ಲಿ ಕಟ್ಟಡ ಮಂಜೂರಾತಿ ನೀಡಬಾರದು ಎಂದು ನಿರ್ಣಯ ಅಂಗೀಕರಿಸಿದ್ದಾರೆ ಎಂಬ ಕಾರಣ ನೀಡಿ ಪಿಡಿಒ ಮಂಜೂರಾತಿ ಪತ್ರ ನೀಡಲು ನಿರಾಕರಿಸಿದ್ದರು. ಇದನ್ನು ಪ್ರಶ್ನಿಸಿ ಹೇಮಂತ್‌ ಶೆಟ್ಟಿ ತಾಪಂ ಕಾರ್ಯನಿರ್ವಹಣಾಧಿಕಾರಿಗೆ ದೂರು ನೀಡಿದ್ದರು. ಈ ದೂರು ವಿಚಾರಣೆ ನಡೆಸಿದ್ದ ಇಒ, ಕಾನೂನು ಪ್ರಕಾರ ಹೇಮಂತ್‌ ಶೆಟ್ಟಿಗೆ ಕಟ್ಟಡ ಮಂಜೂರಾತಿ ನೀಡುವಂತೆ ಆದೇಶಿಸಿದ್ದರು. ಆದರೆ, ಪುನಃ
ಗ್ರಾಪಂ ಸಾಮಾನ್ಯ ಸಭೆಯಲ್ಲಿ ನಿರ್ಣಯಯನ್ನು ಪಿಡಿಒ ಮುಂದಿ ಟ್ಟಿದ್ದರು. ಈ ಕ್ರಮ ಪ್ರಶ್ನಿಸಿ ಹೇಮಂತ್‌ ಹೈಕೋರ್ಟ್‌ ಮೆಟ್ಟಿಲೇರಿದ್ದರು. 

ಸರ್ಕಾರದ ಶೋಕಾಸ್‌ ನೋಟಿಸ್‌: ಈ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಪಂ, ನಿಯಮಬಾಹಿರವಾಗಿ ನಡೆದುಕೊಂಡ ಬೆಳ್ಮಾ ಗ್ರಾಪಂ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು, ಸದಸ್ಯರ ವಿರುದ್ಧ ಪಂಚಾಯತ್‌ ರಾಜ್‌ ಅಧಿನಿಯಮ (43)ಎ ಅನ್ವಯ
ಸದಸ್ಯತ್ವದಿಂದ ತೆಗೆದುಹಾಕಲು ಪ್ರಸ್ತಾವನೆ ಸಲ್ಲಿಸಲು ಇರುವ ಅವಕಾಶದ ಬಗ್ಗೆ ಡಿ.15, 2016ರಂದು ಗ್ರಾಮೀಣಾಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆಯಲಾಗಿತ್ತು. 

ಈ ಹಿನ್ನೆಲೆ ಗ್ರಾಪಂ ಸದಸ್ಯರೆಲ್ಲರಿಗೂ, ಸಕಾರಣ ವಿಲ್ಲದೆ ದುರ್ವರ್ತನೆ ಹಾಗೂ ಅಧಿಕಾರ ದುರುಪಯೋಗ ಎಂದು ಪರಿಗಣಿಸಿ ನಿಮ್ಮನ್ನು ಸದಸ್ಯತ್ವ ಸ್ಥಾನದಿಂದ ತೆಗೆದು ಹಾಕಲು ಏಕೆ ಕ್ರಮ ಕೈಗೊಳ್ಳಬಾರದು ಎಂದು ಜ. 4 ರಂದು
ಶೋಕಾಸ್‌ ನೋಟಿಸ್‌ ಜಾರಿಗೊಳಿಸಿತ್ತು. 

ಟಾಪ್ ನ್ಯೂಸ್

IPL: Players from these countries are fully available for the next three seasons of IPL

IPL: ಇನ್ನು ಮೂರು ಸೀಸನ್‌ ಐಪಿಎಲ್‌ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ

1-a-raga-pg

Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್

Sagara: ತರಗತಿ ಕೊಠಡಿ ಅವ್ಯವಸ್ಥೆ; ಎಲ್‌ಬಿ ಕಾಲೇಜಿನ ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ

Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ

Talk war between Minister Sharanabasappa Darshanapura and MLA Sharanagouda Kandakur in KDP meeting

Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-bng

Bengaluru: ಅನಧಿಕೃತ ಮಳಿಗೆಗಳ ತೆರವು ಕೋರಿ ಅರ್ಜಿ:ಪಾಲಿಕೆಗೆ ಹೈಕೋರ್ಟ್ ನೋಟಿಸ್‌

17-bng

Bengaluru: ವಿಶ್ವನಾಥ್‌ಗೆ ಕೊಲೆ ಬೆದರಿಕೆ: ಆರೋಪಿ ಅರ್ಜಿ ವಜಾ

16-bng

Bengaluru: ಮರಕ್ಕೆ ಬೈಕ್‌ ಡಿಕ್ಕಿ ಹೊಡೆದು ಯುವಕ ಸಾವು

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

14-bng

Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್‌!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-motte

School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ

Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ

Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ

ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ

ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ

IPL: Players from these countries are fully available for the next three seasons of IPL

IPL: ಇನ್ನು ಮೂರು ಸೀಸನ್‌ ಐಪಿಎಲ್‌ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ

1-a-raga-pg

Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.