ಪುಣಚ: ಬಿಜೆಪಿ ಬೂತ್ ಸಮಿತಿ ಕಾರ್ಯಕರ್ತರ ಸಮಾವೇಶ
Team Udayavani, Nov 24, 2017, 5:02 PM IST
ಪುಣಚ: ರಾಜ್ಯ ಸರಕಾರದ ಬಹುತೇಕ ಯೋಜನೆಗಳು ಹಿಂದೂ, ರೈತ ವಿರೋಧಿ, ಅಭಿವೃದ್ಧಿಯ ವಿರೋಧಿಯಾಗಿದ್ದು, ಅವೆಲ್ಲವೂ ವಿಫಲವಾಗಿವೆ. ನಾವು ನಿರೀಕ್ಷಿಸಿದ ಯೋಜನೆಗಳನ್ನು ಕಾರ್ಯಗತಗೊಳಿಸಲು ರಾಜ್ಯದಲ್ಲಿ ಮತ್ತೆ ಬಿಜೆಪಿ ಸರಕಾರ ಆಡಳಿತಕ್ಕೇರಲು ಪ್ರತಿಯೊಬ್ಬ ಕಾರ್ಯಕರ್ತರು ಕ್ರಿಯಾಶೀಲನಾಗಬೇಕು ಎಂದು ರಾಜ್ಯ ಹಿಂದುಳಿದ ಮೋರ್ಚಾ ಕಾರ್ಯದರ್ಶಿ ಸತ್ಯಜಿತ್ ಸುರತ್ಕಲ್ ಎಚ್ಚರಿಸಿದರು.
ಪುಣಚ ಬಿಜೆಪಿ ಗ್ರಾಮ ಸಮಿತಿಯ 101ನೇ ಬೂತ್ ಸಮಿತಿ ಕಾರ್ಯಕರ್ತರ ಸಮಾವೇಶದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. ಸಮಾರಂಭದಲ್ಲಿ ಭಾಗವಹಿಸಿದ ಪುತ್ತೂರು ಮಂಡಲ ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಹಾಗೂ ಬೂತ್ ಉಸ್ತುವಾರಿ ಯಶಸ್ವಿನಿ ಶಾಸ್ತ್ರಿ ನೆಕ್ಕರೆ ಸಂಘಟನಾತ್ಮಕ ವಿಚಾರದ ಬಗ್ಗೆ ಮಾತನಾಡಿದರು.
ವಿಟ್ಲ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಸುರೇಶ್ ಭಟ್ ಇಡ್ಕಿದು, ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಸದಸ್ಯೆ ಜಯಶ್ರೀ
ಕೋಡಂದೂರು, ತಾ.ಪಂ. ಸದಸ್ಯೆ ಕವಿತಾ ಸುಬ್ಬ ನಾಯ್ಕ, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ರಾಜೀವ ಭಂಡಾರಿ ಭಾಗ
ವಹಿಸಿದ್ದರು. ಕಾಂಗ್ರೆಸ್ ಕಾರ್ಯಕರ್ತ ಸೀತಾರಾಮ ಪೂಜಾರಿ ಗರಡಿ ನೀರುಮಜಲು ಅವರನ್ನು ಬಿಜೆಪಿಗೆ ಸೇರಿಸಿಕೊಳ್ಳಲಾಯಿತು. ಜಗದೀಶ್ ಮಾರಮಜಲು ಸ್ವಾಗತಿಸಿ, ಪುಣಚ ಗ್ರಾಮ ಬಿಜೆಪಿ ಸಮಿತಿ ಅಧ್ಯಕ್ಷ ಹರೀಶ್ ದಲ್ಕಜೆ ವಂದಿಸಿ, ರಾಜೇಂದ್ರ ರೈ ನಿರೂಪಿಸಿದರು.
ಬೂತ್ ಸಶಕ್ತೀಕರಣಗೊಳಿಸಿ
ಪ್ರತಿಯೊಂದು ಬೂತ್ ಸಶಕ್ತೀಕರಣಗೊಳಿಸಿದಾಗ ಮಾತ್ರ ಮುಂದಿನ ಮುಖ್ಯಮಂತ್ರಿಯಾಗಿ ಯಡಿಯೂರಪ್ಪನವರನ್ನು ಕಾಣಬಹುದು. ಈ ನಿಟ್ಟಿನಲ್ಲಿ ಕಾರ್ಯಕರ್ತರು ಕಾರ್ಯೋನ್ಮುಖರಾಗಬೇಕು.
– ಚನಿಲ ತಿಮ್ಮಪ್ಪ ಶೆಟ್ಟಿ
ಪುತ್ತೂರು ಮಂಡಲ ಬಿಜೆಪಿ ಅಧ್ಯಕ್ಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್
Fraud Case: ಹೂಡಿಕೆ ನೆಪ: ಮಹಿಳೆಯಿಂದ 56.64 ಲಕ್ಷ ರೂ. ವಂಚನೆ
Puttur: ಕೊಕ್ಕೊ ಧಾರಣೆ ತುಸು ಚೇತರಿಕೆ; ಸಿಂಗಲ್ ಚೋಲ್‌ಗೆ ಬೇಡಿಕೆ
Kulai ಜೆಟ್ಟಿ ಕಾಮಗಾರಿ: ಚೆನ್ನೈ ಐಐಟಿಯಿಂದ ವರದಿ ಪಡೆಯಲು ಮೀನುಗಾರಿಕೆ ಸಚಿವರ ನಿರ್ಧಾರ
Punjalkatte ಸರಪಾಡಿ: ತೆಂಗಿನಮರದಿಂದ ಬಿದ್ದ ವ್ಯಕ್ತಿ ಸಾವು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಇಸ್ಪೀಟ್ ಅಡ್ಡೆಯ ಮೇಲೆ ಡಿವೈಎಸ್ಪಿ ದಾಳಿ; ಮಾಜಿ ಅಧ್ಯಕ್ಷ-ಹಾಲಿ ಉಪಾಧ್ಯಕ್ಷ ಸೇರಿ 8 ಜನರ ಬಂಧನ
Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ
Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Kiccha Sudeepa: ಕ್ರಿಸ್ಮಸ್ ಗೆ ಬರುತ್ತಿದೆ ʼಮ್ಯಾಕ್ಸ್ʼ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.