ಅನುಭವ ಮಂಟಪ ಉತ್ಸವಕ್ಕೆ ಸಿದ್ಧತೆ ಪೂರ್ಣ


Team Udayavani, Nov 25, 2017, 10:53 AM IST

gul-2.jpg

ಬಸವಕಲ್ಯಾಣ: ಸಾಮಾಜಿಕ ಕ್ರಾಂತಿ ಮಾಡಿದ ವಿಶ್ವ ಗುರು ಬಸವಣ್ಣನ ಕಾಯಕ ಭೂಮಿಯಲ್ಲಿ ವಿಶ್ವ ಬಸವ ಧರ್ಮ ಅನುಭವ ಮಂಟಪ ಟ್ರಸ್ಟ್‌ ನಿಂದ ಅನುಭವ ಮಂಟಪದ ಪರಿಸರದಲ್ಲಿ ನ.25 ಮತ್ತು 26ರಂದು ನಡೆಯಲಿರುವ 38ನೇ ಶರಣ ಕಮ್ಮಟ, ಅನುಭವ ಮಂಟಪ ಉತ್ಸವಕ್ಕೆ ಸಕಲ ಸಿದ್ಧತೆ ಪೂರ್ಣಗೊಂಡಿವೆ.

ಟ್ರಸ್ಟ್‌ ಅಧ್ಯಕ್ಷ ಡಾ| ಬಸವಲಿಂಗ ಪಟ್ಟದೇವರು ನೇತೃತ್ವದಲ್ಲಿ ಅನುಭವ ಮಂಟಪದ ಪರಿಸರದಲ್ಲಿ ಎರಡು ದಿನಗಳ ಕಾಲ ನಡೆಯುವ ಉತ್ಸವಕ್ಕಾಗಿ ವಿಶಾಲ ಮೈದಾನದಲ್ಲಿ ಡಾ| ಎಂ.ಎಂ. ಕಲಬುರ್ಗಿ ಹೆಸರಿನಲ್ಲಿ 150×250 ಅಡಿ ಬೃಹತ್‌ ಮಂಟಪ ನಿರ್ಮಾಣ ಮಾಡಲಾಗಿದೆ. ಕಾರ್ಯಕ್ರಮಕ್ಕಾಗಿ ಸಮಾಜ ವಿಜ್ಞಾನಿ ಡಾ| ಹಿರೇಮಲ್ಲೂರ ಈಶ್ವರನ್‌ ಅವರ ಹೆಸರಿನಲ್ಲಿ 35×60 ಭವ್ಯವಾದ ವೇದಿಕೆ ನಿರ್ಮಿಸಲಾಗಿದೆ. ಕಮ್ಮಟಕ್ಕಾಗಿ ಬರುವ ಬಸವ ಭಕ್ತರಿಗೆ ಕುಳಿತುಕೊಳ್ಳಲು ಮೂರು ಸಾವಿರ ಆಸನದ ವ್ಯವಸ್ಥೆ ಮಾಡಲಾಗುತ್ತಿದೆ. ವೇದಿಕೆ ಮುಂಭಾಗದಲ್ಲಿ ಗಣ್ಯರಿಗಾಗಿ ಪ್ರತ್ಯೇಕ ಆಸನದ ವ್ಯವಸ್ಥೆ
ಮಾಡಲಾಗಿದೆ. ಜಿಲ್ಲೆ ಸೇರಿದಂತೆ ರಾಜ್ಯ, ನೆರೆಯ ಮಹಾರಾಷ್ಟ್ರ, ತೆಲಂಗಾಣದ ನಾನಾ ಕಡೆಗಳಿಂದ ಸಾವಿರಾರು ಬಸವ ಭಕ್ತರು ಕಾರ್ಯಕ್ರಮಕ್ಕೆ ಆಗಮಿಸುವ ನಿರೀಕ್ಷೆ ಹೊಂದಲಾಗಿದೆ. 

ಕಾರ್ಯಕ್ರಮ ಯಶಸ್ಸಿಗಾಗಿ ಪ್ರಮುಖರನ್ನೊಳಗೊಂಡ ಸ್ವಾಗತ ಸಮಿತಿ ರಚಿಸಲಾಗಿದ್ದು, ಕಳೆದೊಂದು ತಿಂಗಳಿಂದ ನಾಡಿನ ವಿವಿಧ ಭಾಗದಲ್ಲಿ ಸಂಚರಿಸಿ ರಥ ಯಾತ್ರೆಗಳ ಮೂಲಕ ಎಲ್ಲೆಡೆ ಪ್ರಚಾರ ನಡೆಸಿ ಬಸವ ಭಕ್ತರನ್ನು ಆಹ್ವಾನಿಸಲಾಗಿದೆ. ಉತ್ಸವಕ್ಕೆ ಆಹ್ವಾನಿಸುವ ಭಿತ್ತಿಪತ್ರಗಳು, ಕಟೌಟ್‌ಗಳು ಗಮನ ಸೆಳೆಯುತ್ತಿವೆ. ಅನುಭವ ಮಂಟಪಕ್ಕೆ ಬರುವ ಮುಖ್ಯ ರಸ್ತೆಯಲ್ಲಿ ಮಹಾದ್ವಾರಗಳು ಸಿದ್ಧವಾಗುತ್ತಿವೆ.

ಉತ್ಸವದಲ್ಲಿ ಭಾಗವಹಿಸುವ ಭಕ್ತರಿಗಾಗಿ ದಾಸೋಹದ ವ್ಯವಸ್ಥೆಯನ್ನು ಬಸವೇಶ್ವರ ದೇವಸ್ಥಾನ ಪಂಚ ಕಮಿಟಿ ಹಾಗೂ ವಿಶ್ವಸ್ಥ ಮಂಡಳಿಯಿಂದ ಮಾಡಲಾಗುತ್ತಿದೆ. ದೂರದಿಂದ ಬರುವ ಜನರಿಗಾಗಿ ಉಳಿದುಕೊಳ್ಳಲು ವಸತಿ
ವ್ಯವಸ್ಥೆ ಮಾಡಲಾಗುತ್ತಿದೆ. 

ಇಂದು ಉದ್ಘಾಟನೆ: ಅನುಭವ ಮಂಟಪ ಉತ್ಸವವನ್ನು ನ.25ರಂದು ಬೆಳಗ್ಗೆ 10ಕ್ಕೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಉದ್ಘಾಟಿಸಲಿದ್ದಾರೆ. ಗದಗ ತೋಂಟದಾರ್ಯ ಸಂಸ್ಥಾನ ಮಠದ ಶ್ರೀ ಜಗದ್ಗುರು ಡಾ| ಸಿದ್ಧಲಿಂಗ ಮಹಾಸ್ವಾಮೀಜಿ ಸಾನ್ನಿಧ್ಯ, ಹಾರಕೂಡನ ಶ್ರೀ ಡಾ| ಚನ್ನವೀರ ಶಿವಾಚಾರ್ಯರು ನೇತೃತ್ವ ವಹಿಸಲಿದ್ದಾರೆ. 

ಮುಂಡರಗಿಯ ತೋಂಟದಾರ್ಯ ಶಾಖಾ ಮಠದ ಶ್ರೀ ನಿಜಗುಣಪ್ರಭು ತೋಟದಾರ್ಯ ಮಹಾಸ್ವಾಮೀಜಿ ಅನುಭಾವ ನೀಡಲಿದ್ದು, ಕೆಪಿಸಿಸಿ ಕಾರ್ಯಾಧ್ಯಕ್ಷ ಎಸ್‌.ಆರ್‌.ಪಾಟೀಲ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಪ್ರವಾಸೋದ್ಯಮ
ಸಚಿವ ಪ್ರಿಯಾಂಕ್‌ ಖರ್ಗೆ ಮುಖ್ಯ ಅತಿಥಿಗಳಗಿ ಭಾಗವಹಿಸಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅಧ್ಯಕ್ಷತೆ ವಹಿಸುವರು.

ಜಿಲ್ಲಾಧಿಕಾರಿ ಡಾ| ಎಚ್‌.ಆರ್‌.ಮಹಾದೇವ ಷಟ್‌ಸ್ಥಲ ಧ್ವಜಾರೋಹಣ ನೆರವೇರಿಸಲಿದ್ದು, ಶಾಸಕ ಮಲ್ಲಿಕಾರ್ಜುನ ಖೂಬಾ ಗ್ರಂಥ ಲೋಕಾರ್ಪಣೆ ಮಾಡಲಿದ್ದಾರೆ. ಎಂಎಲ್ಸಿ ವಿಜಯಸಿಂಗ್‌, ಶಾಸಕ ರಹೀಮಖಾನ್‌, ಬಿಡಿವಿಸಿ ಅಧ್ಯಕ್ಷ ಮಲ್ಲಯ್ಯ ಹಿರೇಮಠ, ಬಿಡಿಪಿಸಿ ಅಧ್ಯಕ್ಷ ವೀರಣ್ಣ ಹಲಶೆಟ್ಟಿ ಸೇರಿದಂತೆ ಪ್ರಮುಖರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಮಧ್ಯಾಹ್ನ 3ಕ್ಕೆ ಲಿಂಗಾಯತಕ್ಕೆ ಬಸವಣ್ಣನೇ ಕತೃ ಎನ್ನುವ ವಿಷಯ ಕುರಿತು ಗೋಷ್ಠಿ ನಡೆಯಲಿದ್ದು, ತಾಂಬೋಳನ ಶ್ರೀ ವಿಜಯಕುಮಾರ ಮಹಾಸ್ವಾಮೀಜಿ ಸಾನ್ನಿಧ್ಯ, ಬಸವಬೆಳವಿಯ ಶ್ರೀ ಶರಣಬಸವ ಮಹಾಸ್ವಾಮೀಜಿ ನೇತೃತ್ವ, ಬೇಲೂರನ ಶ್ರೀ ಪಂಚಾಕ್ಷರಿ ಸ್ವಾಮೀಜಿ ಸಮ್ಮುಖ ವಹಿಸುವರು. 

ತೋಟಗಾರಿಕೆ ವಿವಿಯ ಅಶೋಕ ಆಲೂರ ಗೋಷ್ಠಿ ಉದ್ಘಾಟಿಸಲಿದ್ದು, ಡಾ| ಅಮರನಾಥ ಸೋಲಪುರೆ ಅಧ್ಯಕ್ಷತೆ ವಹಿಸುವರು. ಧಾರವಾಡದ ಎನ್‌.ಜಿ. ಮಹಾದೇವಪ್ಪ, ಶಹಾಪುರದ ವಿಶ್ವರಾಧ್ಯ ಸತ್ಯಂಪೇಟೆ, ಕೊಲ್ಲಾಪುರದ ರಾಜಾಭಾವು ಸಿರಗುಪ್ಪೆ ಅನುಭಾವ ನೀಡುವರು.

ಸಂಜೆ 6ಕ್ಕೆ ವಚನ ಭಜನೆ ಸ್ಪರ್ಧೆ ನಡೆಯಲಿದ್ದು, ಶ್ರೀ ಅಭಿನವ ಷಣ್ಮಖ ಮಹಾಸ್ವಾಮೀಜಿ ಸಾನ್ನಿಧ್ಯ, ಶ್ರೀ ಶಂಕರಲಿಂಗ ಮಹಾಸ್ವಾಮೀಜಿ, ಶ್ರೀ ಸಂಗಮೇಶ್ವರ ಸ್ವಾಮೀಜಿ ನೇತೃತ್ವ ವಹಿಸಲಿದ್ದಾರೆ. ಜಾನಪದ ಅಕಾಡೆಮಿ ಸದಸ್ಯ ವಿಜಯಕುಮಾರ ಸೋನಾರೆ ಸ್ಪರ್ಧೆಗೆ ಚಾಲನೆ ನೀಡಲಿದ್ದು, ಕನ್ನಡ ಸಂಸ್ಕೃತಿ ಇಲಾಖೆ ಸಹ ನಿರ್ದೇಶಕ ರಾಜಶೇಖರ
ಪಾಟೀಲ್‌ ಅಧ್ಯಕ್ಷತೆ ವಹಿಸುವರು.

ಪ್ರಶಸ್ತಿಗೆ ಶರಣ ಸಾಹಿತ್ಯ ಕೃತಿಗಳ ಆಯ್ಕೆ

ಬಸವಕಲ್ಯಾಣ: ವಿಶ್ವ ಬಸವಧರ್ಮ ಟ್ರಸ್ಟ್‌ ಅನುಭವ ಮಂಟಪ ಆಶ್ರಯದಲ್ಲಿ ಆಯೋಜಿಸಿರುವ 38ನೇ ಶರಣ ಕಮ್ಮಟ ಮತ್ತು ಅನುಭವ ಮಂಟಪ ಉತ್ಸವ ನಿಮಿತ್ತ ಪುಸ್ತಕ ಪ್ರಶಸ್ತಿಗಳಿಗೆ ಕೃತಿಗಳನ್ನು ಆಯ್ಕೆ ಮಾಡಲಾಗಿದೆ.  ಶರಣ ಸಾಹಿತ್ಯಕ್ಕೆ ಸಂಬಂಧಿ ಸಿದ ವಿವಿಧ ವಿಷಯಗಳಲ್ಲಿ ಪುಸ್ತಕ ರಚಿಸಿದ 11ಜನ ಸಾಹಿತಿಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದ್ದು, ಡಾ| ಮಲ್ಲಿಕಾರ್ಜುನ ಜೆ.ಆವೆ್ಣು ಅವರ ಅಧುನಿಕ ಸಾಹಿತ್ಯದಲ್ಲಿ ಬಸವಣ್ಣ ಸಂಶೋಧನಾ ಕೃತಿಗೆ ವ್ಯೋಮಕಾಯ ಸಿದ್ಧ ಅಲ್ಲಮ ಪ್ರಭುದೇವರ ಪ್ರಶಸ್ತಿ, ಡಾ| ಬಸವರಾಜ ಸಬರದ ಅವರ ಅಂಬಿಗ ನಿನ್ನ ನಂಬಿದೆ ನಾಟಕ ಕೃತಿಗೆ ಶಿವಯೋಗಿ ಸಿದ್ಧರಾಮೇಶ್ವರ ಪ್ರಶಸ್ತಿ, ಡಾ|  ಕುಂತಲಾ
ದುರಗಿ ಅವರ ಅಕ್ಕಮಹಾದೇವಿ ಮತ್ತು ಅಕ್ಕಮ್ಮನವರ ಆಯ್ದ ವಚನಗಳ ವ್ಯಾಖ್ಯಾನ ವಚನ ಚಿಂತನ ಕೃತಿಗೆ ವೀರ ವೈರಾಗ್ಯನಿಧಿ ಅಕ್ಕಮಹಾದೇವಿ ಪುಸ್ತಕ ಪ್ರಶಸ್ತಿ, ಡಾ| ಚಿತ್ಕಳಾ ಜೆ.ಮಠಪತಿ ಅವರ ಆಯ್ದಕ್ಕಿ ಮಾರಯ್ಯ ಮತ್ತು
ಲಕ್ಕಮ್ಮನವರು ಸಂಶೋಧನಾ ಕೃತಿಗೆ ಆಚಾರ ಪತ್ನಿ ಶರಣೆ ಗಂಗಾಂಬಿಕೆ ಪುಸ್ತಕ ಪ್ರಶಸ್ತಿ, ಡಾ| ಎಚ್‌.ಟಿ. ಪೋತೆ ಅವರ ಜಾಗತಿಕ ಚಿಂತಕರು ಮತ್ತು ಬಸವಣ್ಣನವರು ಸಂಪಾದನಾ ಕೃತಿಗೆ ಷಟ್‌ಸ್ಥಲ ಚಕ್ರವರ್ತಿ ಚನ್ನಬಸವಣ್ಣ ಪುಸ್ತಕ ಪ್ರಶಸ್ತಿ, ಡಾ| ಅಮರನಾಥ ಸೊಲಪುರೆ ಅವರ ಬಸವ ಪುರಾಣ ಮರಾಠಿ ಕೃತಿಗೆ ಶರಣ ಉರಿಲಿಂಗಪೆದ್ದಿ ಪುಸ್ತಕ ಪ್ರಶಸ್ತಿ, ಎಚ್‌. ಶಿನಾಥರೆಡ್ಡಿ ಅವರ ತ್ರಿಪದಿಗಳಲ್ಲಿ ಶಿವಶರಣರು ಜಾನಪದ ಕೃತಿಗೆ ಕ್ರಾಂತಿಗಂಗೋತ್ರಿ ನಾಗಲಾಂಬಿಕೆ ಪುಸ್ತಕ ಪ್ರಶಸ್ತಿ, ಸಂತೋಷಕುಮಾರ ಹೂಗಾರ ಅವರ ಶರಣೆಯರ ಅನುಭಾವ ಸಂಪದ ಕೃತಿ ಲದ್ದೆಯ ಸೋಮಣ್ಣ ಪ್ರಶಸ್ತಿ, ಮಾಣಿಕ ಭೂರೆ ಅವರ ದಲಿತ ಪೀಠಾಧಿಪತಿ ಕೃತಿಗೆ ಮಡಿವಾಳ ಮಾಚಿದೇವ ಪ್ರಶಸ್ತಿ, ರಮೇಶ ಸ್ವಾಮಿ ಕನಕಟ್ಟಾ ಅವರ ಬಸವದರ್ಶನ ಚರಿತ್ರೆ ಕೃತಿಗೆ ಧರ್ಮಗುರು ಬಸವಣ್ಣನವರ ಪ್ರಶಸ್ತಿ, ಶಂಕರಗೌಡ ಬಿರಾದಾರ ಗುಂಡಕನಾಳ (ಗುಂಬಿಶಂ) ಅವರ ವಚನ ವಿಶ್ಲೇಷಣೆ ಮೆರಮಿಂಡದೇವನ ವಚನಗಳ ಭಾವ-ಪರಭಾವ ಕೃತಿಗೆ ಶರಣೆ ನೀಲಾಂಬಿಕೆ ಪ್ರಶಸ್ತಿ ಲಭಿಸಿದೆ.

ಟಾಪ್ ನ್ಯೂಸ್

Ranchi

Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!

ICC Champions Trophy to be completely moved from Pakistan?: Decision will be taken at ICC meeting

ICC ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

2-bus

ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Jasprit-Bumra

ICC World Rankings: ಟೆಸ್ಟ್‌ ಬೌಲಿಂಗ್‌ ರ್‍ಯಾಂಕಿಂಗ್‌ ಬುಮ್ರಾ ಮರಳಿ ನಂ.1


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kims

Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

The day will come when our team member will become CM: Yatnal

Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

Kalaburagi: Shigavi result unexpected; We do not agree: C.T. Ravi

Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Ranchi

Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!

3-hunsur

Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

ICC Champions Trophy to be completely moved from Pakistan?: Decision will be taken at ICC meeting

ICC ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

2-bus

ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.