ಸಚಿವ ವಿನಯ ಪರ-ವಿರುದ್ಧ ಪ್ರತಿಭಟನೆ


Team Udayavani, Nov 25, 2017, 12:17 PM IST

h1-mla-vinay.jpg

ಧಾರವಾಡ: ಡಿಸಿ ಕಚೇರಿಯ ಎದುರು ಶುಕ್ರವಾರ ನಡೆದ ಸಚಿವರ ಪರ-ವಿರುದ್ಧದ ಪ್ರತಿಭಟನೆಗಳು ಸ್ವಪ್ರತಿಷ್ಠೆಗೆ ಬಿದ್ದು ವಿಕೋಪಕ್ಕೆ ಹೋಗಿ ಕೊನೆಗೆ  ಪ್ರತಿಭಟನಾನಿರತರ ಬಂಧನದ ಮೂಲಕ ತೆರೆ ಕಂಡವು. 

ಬಿಜೆಪಿ ಪ್ರತಿಭಟನೆ: ಹೆಬ್ಬಳ್ಳಿ ಜಿಪಂಸದಸ್ಯ ಯೋಗೀಶಗೌಡ ಗೌಡರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ವಿನಯ ಕುಲಕರ್ಣಿ ತಮ್ಮ ಸ್ಥಾನಕ್ಕೆ ಕೂಡಲೇ ರಾಜೀನಾಮೆ ನೀಡುವಂತೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ನಗರದ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಸಚಿವ ವಿನಯ ವಿರುದ್ಧ ಘೋಷಣೆ ಕೂಗುವುದರ ಮೂಲಕ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. 

ಗೌಡರ ಕೊಲೆ ಪ್ರಕರಣದಲ್ಲಿ ಸಚಿವ ವಿನಯ ಕೊಲೆ ಸಾಕ್ಷಿಗಳನ್ನು ಮುಚ್ಚಿ ಹಾಕುವ ಕೆಲಸ ಮಾಡಿದ್ದಾರೆ. ರಾಜ್ಯ ಸರ್ಕಾರ ಇಂಥ ಸಚಿವರನ್ನು ರಕ್ಷಿಸುವ ಕೆಲಸ ಮಾಡುತ್ತಿದೆ. ಕೂಡಲೇ ಸಚಿವ ವಿನಯ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು. ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು. 

ಶಾಸಕ ಅರವಿಂದ ಬೆಲ್ಲದ, ಜಿಪಂ ಅಧ್ಯಕ್ಷೆ ಚೈತ್ರಾ ಶಿರೂರ, ಮಾಜಿ ಶಾಸಕರಾದ ಸೀಮಾ ಮಸೂತಿ, ಎಸ್‌.ಐ.ಚಿಕ್ಕನಗೌಡರ, ಮುಖಂಡರಾದ ಈರೇಶ ಅಂಚಟಗೇರಿ, ಶಿವು ಹಿರೇಮಠ, ಶಂಕರ ಹಪಳಿ, ಪ್ರೇಮಾಕೋಮಾರ ದೇಸಾಯಿ, ಅರವಿಂದ ಏಗನಗೌಡರ, ಶಿವಾನಂದ ಮುತ್ತಣ್ಣವರ, ಸಿ.ಎಂ ನಿಂಬಣ್ಣವರ, ತವನಪ್ಪ ಅಷ್ಟಗಿ, ಸಂಜಯ ಕಪಟಕರ, ಶಿವಾಜಿ ಡೊಳ್ಳಿನ, ಶ್ರೀನಿವಾಸ ಕೋಟ್ಯಾನ, ಶರಣು ಅಂಗಡಿ, ಚೈತ್ರಾ ಶಿರೂರ ಸೇರಿದಂತೆ ಹಲವದ್ದರು. 

ಬಿಜೆಪಿ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ: ಸಚಿವ ವಿನಯ ಕುಲಕರ್ಣಿ ಅವರ ಏಳ್ಗೆ ಸಹಿಸದೇ ಬಿಜೆಪಿ ಪಕ್ಷದವರು ವಿನಾಕಾರಣ ಅವರ ಮೇಲೆ ಕೊಲೆ ಆರೋಪ ಮಾಡುತ್ತಿದ್ದಾರೆಂದು ಕಾಂಗ್ರೆಸ್‌ ಕಾರ್ಯಕರ್ತರು ನಗರದ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಇಲ್ಲಿನ ಕಡಪಾ ಮೈದಾನದಿಂದ ಬೃಹತ್‌ ಸಂಖ್ಯೆಯಲ್ಲಿ ಜಮಾಯಿಸಿದ ಕಾಂಗ್ರೆಸ್‌ ಕಾರ್ಯಕರ್ತರು ಜ್ಯುಬಲಿ ಮತ್ತು ಕೋರ್ಟ್‌ ಸರ್ಕಲ್‌ನಲ್ಲಿ ಟಾಯರ್‌ಗೆ ಬೆಂಕಿ ಹಚ್ಚಿ ಪ್ರತಿಭಟಿಸಿದರು.

ಇದಾದ ಬಳಿಕ ಅಲ್ಲಿಂದ ಡಿಸಿ ಕಚೇರಿಗೆ ಆಗಮಿಸಿ ಅಲ್ಲೂ ಟಾಯರ್‌ಗೆ ಬೆಂಕಿ ಹಚ್ಚಿ ಆಕ್ರೋಶ ಹೊರ ಹಾಕಿದರು.  ಕಾಂಗ್ರೆಸ್‌ ಪಕ್ಷದ ವರ್ಚಸ್ಸು ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದನ್ನು ಸಹಿಸಲಾರದೇ ಬಿಜೆಪಿ ಮುಖಂಡರು ಇಲ್ಲಿಯವರೆಗೆ ಸಚಿವ ಜಾರ್ಜ್‌ ಮೇಲೆ ಆರೋಪ ಮಾಡಿದರು.

ಆದರೆ, ಅದು ಫ‌ಲಕಾರಿಯಾಗದೇ ಇದ್ದುದರಿಂದ ಈಗ ಸಚಿವ ವಿನಯ ಮೇಲೆ ಯೋಗೀಶಗೌಡ ಗೌಡರ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಸುತ್ತಿದ್ದಾರೆ ಎಂದು ದೂರಿದರು. ಸಚಿವ ವಿನಯ ಈ ಕೊಲೆ ಪ್ರಕರಣದಲ್ಲಿ ಭಾಗಿಯಾಗಿಲ್ಲ. ವಿನಾಕಾರಣ ಅವರ ಮೇಲೆ ಬಿಜೆಪಿ ಮುಖಂಡರು ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. 

ಸಚಿವರ ಪಿಎ ಪ್ರಶಾಂತ, ಪಾಲಿಕೆ ಸದಸ್ಯರಾದ ದೀಪಕ್‌ ಚಿಂಚೋರೆ, ಸುಭಾಷ ಶಿಂಧೆ, ಇಸ್ಮಾಯಿಲ್‌ ತಮಟಗಾರ, ರಾಬರ್ಟ್‌ ದದ್ದಾಪುರಿ, ಹೇಮಂತ ಗುರ್ಲಹೊಸೂರ, ಬುರಾನ್‌ ಗವಳಿ, ಮುಕ್ತಿಯಾರ್‌ ಪಠಾಣ, ಆನಂದ ಜಾಧವ, ಆನಂದ ಸಿಂಗನಾಥ್‌ , ದೀಪಕ ಚಿಂಚೋರೆ, ಆನಂದ ಕಲಾಲ ಸೇರಿದಂತೆ ಅನೇಕ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. 

ಪೊಲೀಸರೊಂದಿಗೆ ವಾಗ್ವಾದ: ಡಿಸಿ ಕಚೇರಿ ಎದುರು ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿದ್ದ ವೇಳೆಯೇ ಕಾಂಗ್ರೆಸ್‌ ಕಾರ್ಯಕರ್ತರೂ ಬಿಜೆಪಿ ವಿರುದ್ಧ ಪ್ರತಿಭಟನೆ ನಡೆಸಲು ಮುಂದಾದರು. ಈ ವೇಳೆ ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ಪೊಲೀಸರು ಇದೇ ವೇಳೆ ಕಾಂಗ್ರೆಸ್‌ ಕಾರ್ಯಕರ್ತರಿಗೂ ಪ್ರತಿಭಟನೆ ನಡೆಸಲು ಅವಕಾಶ ನೀಡಿದ್ದಾರೆ ಎಂಬುದಾಗಿ ಆರೋಪಿಸಿ ಬಿಜೆಪಿ ಶಾಸಕ ಅರವಿಂದ ಬೆಲ್ಲದ,

ಮಾಜಿ ಶಾಸಕರಾದ ಸೀಮಾ ಮಸೂತಿ, ಎಸ್‌.ಐ. ಚಿಕ್ಕನಗೌಡರ, ಶಂಕರಪಾಟೀಲ ಮುನೇನಕೊಪ್ಪ, ಮುಖಂಡರಾದ ಶಿವು ಹಿರೇಮಠ, ಅಮೃತ ದೇಸಾಯಿ ಸೇರಿದಂತೆ ಅನೇಕರು ಪೊಲೀಸರೊಂದಿಗೆ ವಾಗ್ವಾದ ನಡೆಸಿದ ಘಟನೆ ನಡೆಯಿತು. ಬಿಜೆಪಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದರು. 

ಇದೇ ವೇಳೆ ಕಾಂಗ್ರೆಸ್‌ ಕಾರ್ಯಕರ್ತರು ಬಿಜೆಪಿ ವಿರುದ್ಧ ಘೋಷಣೆ ಕೂಗುತ್ತ ಅಲ್ಲಿ ಬಂದಿದ್ದರಿಂದ ಪರಿಸ್ಥಿತಿ ಹದಗೆಡುವ ಸೂಚನೆ ಕಂಡು ಬಂತು. ಈ ಮಧ್ಯೆ ಎರಡೂ ಪಕ್ಷಗಳ ಕಾರ್ಯಕರ್ತರ ಮಧ್ಯೆ ಘೋಷಣೆ, ಪ್ರತಿ ಘೋಷಣೆಗಳು ಮೊಳಗಿದವು. ಒಂದು ಹಂತಕ್ಕೆ ಪೊಲೀಸರಿಂದ ಲಾಠಿ ಚಾರ್ಜ್‌ ಮಾಡುವ ಹಂತ ತಲುಪಿತ್ತು.

ಈ ಪರಿಸ್ಥಿತಿಯನ್ನು ನಿಯಂತ್ರಿಸಿದ ಪೊಲೀಸರು, ಬಿಜೆಪಿ ಕಾರ್ಯಕರ್ತರನ್ನು ಡಿಸಿ ಕಚೇರಿ ಗೇಟ್‌ ಒಳಗೆ ಕಳುಹಿಸಿದರೆ, ಕಾಂಗ್ರೆಸ್‌ ಕಾರ್ಯಕರ್ತರನ್ನು ಗೇಟ್‌ ಹೊರಗಡೆ ತಡೆದರು.  ಈ ವೇಳೆ ಎರಡೂ ಪಕ್ಷಗಳ ಮುಖಂಡರು ಪೊಲೀಸರೊಂದಿಗೆ ವಾಗ್ವಾದ ನಡೆಸಿದರು. ಆಗ ತಳ್ಳಾಟ, ನೂಕಾಟಗಳೂ ನಡೆದವು. 

ಟಾಪ್ ನ್ಯೂಸ್

Cap-Brijesh-Chowta

Mangaluru: ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ

1-kkk

PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್

Jaladurga-Puuturu

Putturu: ಭಾರೀ ಮಳೆಗೆ ಪೆರುವಾಜೆ ದೇವಾಲಯ ಜಲಾವೃತ

Shettar (3)

R. Ashoka ಪ್ರಕರಣವನ್ನು ಮುಡಾಕ್ಕೆ ಹೋಲಿಸಿದ್ದು ಸರಿಯಲ್ಲ:ಜಗದೀಶ ಶೆಟ್ಟರ್

1-rain-hebri

Heavy Rain: ಹೆಬ್ರಿಯಲ್ಲಿ ಮೇಘಸ್ಫೋಟ: ನೀರಲ್ಲಿ ಕೊಚ್ಚಿ ಹೋದ ಕಾರು!

1-deee

Bidar; ತೊಗರಿ ಹೊಲದಲ್ಲಿ 700ಕ್ಕೂ ಹೆಚ್ಚು ಗಾಂಜಾ ಗಿಡಗಳು!; ಪೊಲೀಸ್ ದಾಳಿ

1-ind-a

ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

4

Dr G Parameshwar: ಸೆನ್‌ ಠಾಣೆಗಳಿಗೂ ಎಸ್ಪಿ ಕೇಡರ್‌: ಗೃಹ ಸಚಿವ

ಸ್ಥಾನಮಾನ ಸಿಗದಿದ್ದವರಿಂದ ಪಕ್ಷ ವಿರೋಧಿ ಹೇಳಿಕೆ: ಜಿಟಿಡಿ ವಿರುದ್ದ ಜೋಶಿ ಕಿಡಿ

Hubli: ಸ್ಥಾನಮಾನ ಸಿಗದಿದ್ದವರಿಂದ ಪಕ್ಷ ವಿರೋಧಿ ಹೇಳಿಕೆ: ಜಿಟಿಡಿ ವಿರುದ್ದ ಜೋಶಿ ಕಿಡಿ

ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ… ನಾವು ಆ ರೀತಿ ರಾಜಕಾರಣ ಮಾಡಲ್ಲ: ಜಿ. ಪರಮೇಶ್ವರ್

ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ… ನಾವು ಆ ರೀತಿ ರಾಜಕಾರಣ ಮಾಡಲ್ಲ: ಜಿ. ಪರಮೇಶ್ವರ್

8

Alnavar: ಸ್ನಾನಕ್ಕೆಂದು ಹೋದ ಯುವಕ ನೀರಿನಲ್ಲಿ ಮುಳುಗಿ ಸಾವು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

dw

Padubidri: ರಸ್ತೆ ಅಪಘಾತ; ಗಾಯಾಳು ಸಾವು

Cap-Brijesh-Chowta

Mangaluru: ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ

1-kkk

PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್

crimebb

Kasaragod ಅಪರಾಧ ಸುದ್ದಿಗಳು

13

Malpe: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.