ಕಿಕ್ಕಿರಿದ ಜನ, ಮೇರೆ ಮೀರಿದ ಸಂಭ್ರಮ
Team Udayavani, Nov 25, 2017, 12:19 PM IST
ಅರಮನೆ ನಗರಿ ಮೈಸೂರಿನಲ್ಲಿ ಆರಂಭವಾಗಿರುವ 83ನೇ ಅಖೀಲ ಭಾರತ ಕನ್ನಡ ಸಾಹಿತ್ಯ ಸಮೇಳನ ಅದ್ಧೂರಿಯಾಗಿ ಚಾಲನೆಗೊಂಡಿದೆ. ವಿವಿಧ ದೇಶ-ವಿದೇಶಗಳಿಂದ ಆಗಮಿಸಿರುವ ಕನ್ನಡಾಸಕ್ತರು ಸಮ್ಮೇಳನಕ್ಕೆ ಮೆರುಗು ತಂದಿದ್ದಾರೆ. ಸಮ್ಮೇಳನದಲ್ಲಿ ಅದ್ಧೂರಿ ಮೆರವಣಿಗೆ, ಕನ್ನಡಾಸಕ್ತರ ಬರವಣಿಗೆಗಳು, ಮಳಿಗೆಗಳು, ವಿವಿಧ ಗೋಷ್ಠಿಗಳು ಕನ್ನಡ ಮೆರುಗನ್ನು ಇಮ್ಮಡಿಗೊಳಿಸಿವೆ..
“ರಾಷ್ಟ್ರೀಯತೆ ಹೆಸರಲ್ಲಿ ಅಭಿವ್ಯಕ್ತಿ ದಮನಕ್ಕೆ ಹುನ್ನಾರ’
ಮೈಸೂರು: ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ದೇಶಭಕ್ತಿ, ಧರ್ಮ ಭಕ್ತಿ, ರಾಷ್ಟ್ರೀಯತೆ ಮೊದಲಾದವುಗಳ ಹೆಸರಲ್ಲಿ ದಮನ ಮಾಡುವ ಪ್ರಯತ್ನ ನಡೆಯುತ್ತಿರುವುದು ಖಂಡನೀಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮಹಾರಾಜ ಕಾಲೇಜು ಮೈದಾನದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಮಹಾ ಮಂಟಪದಲ್ಲಿ ನಡೆಯುತ್ತಿರುವ 83ನೇ ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು.
ನಾನು ಅಭಿವ್ಯಕ್ತಿ ಸ್ವಾತಂತ್ರ್ಯದಲ್ಲಿ ಬಲವಾದ ನಂಬಿಕೆ ಹೊಂದಿದವನು. ಸಾಹಿತ್ಯ, ಸಂಗೀತ, ಚಿತ್ರಕಲೆ, ಮಾಧ್ಯಮ ಎಲ್ಲವೂ ಈ ಅಭಿವ್ಯಕ್ತಿ ಸ್ವಾತಂತ್ರ್ಯದ ವಿಭಿನ್ನ ಮುಖಗಳು. ಅಭಿಪ್ರಾಯಗಳು ರೂಪುಗೊಳ್ಳುವುದೇ ಮುಕ್ತ ಅಭಿವ್ಯಕ್ತಿ ಮೂಲಕ. ಇತ್ತೀಚೆಗೆ ಈ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ದೇಶಭಕ್ತಿ, ಧರ್ಮ ಭಕ್ತಿ, ರಾಷ್ಟ್ರೀಯತೆ ಮೊದಲಾದವುಗಳ ಹೆಸರಲ್ಲಿ ದಮನ ಮಾಡುವ ಪ್ರಯತ್ನ ನಡೆಯುತ್ತಿರುವುದು ಖಂಡನೀಯವಾಗಿದ್ದು ಪ್ರಜಾಪ್ರಭುತ್ವ ಗಟ್ಟಿಗೊಳ್ಳುವುದೇ ಮುಕ್ತ ಅಭಿವ್ಯಕ್ತಿ ಮೂಲಕ ಎಂಬುದು ನನ್ನ ನಂಬಿಕೆ ಎಂದರು.
ಸಿಎಂ ಭಾಷಣದಲ್ಲಿ “ಸರ್ಕಾರ- ಕನ್ನಡ’ ಪಾಠ ಇಂತಿದೆ…
* ಸಾಹಿತ್ಯ ಸಮ್ಮೇಳನಗಳು ಕೇವಲ ಸಾಹಿತ್ಯದ ವಿಷಯಗಳಿಗಷ್ಟೇ ಸೀಮಿತಗೊಳ್ಳದೆ ಕನ್ನಡಿಗರ ಬದುಕಿಗೆ ಸಂಬಂಧಿಸಿದ ಎಲ್ಲಾ ವಿಷಯಗಳನ್ನು ಚರ್ಚೆಗೆ ಎತ್ತಿಕೊಂಡಿರುವುದು ಸ್ವಾಗತಾರ್ಹ. ಈ ಚರ್ಚೆ- ಸಂವಾದದಲ್ಲಿ ವ್ಯಕ್ತವಾಗುವ ಅಭಿಪ್ರಾಯಗಳನ್ನು ಸರ್ಕಾರ ಗಂಭೀರವಾಗಿ ಸ್ವೀಕರಿಸುತ್ತದೆ. ಭಾಷೆ ಬಳಕೆ ಬಗ್ಗೆ ಕೀಳರಿಮೆ ಬೇಡ. ಕನ್ನಡ ಮಾತನಾಡುವುದು ಎಂದರೆ ಅದು ನಮ್ಮ ನಾಡಿನ ಸಂಸ್ಕೃತಿಯನ್ನು ಇನ್ನೊಂದು ಪೀಳಿಗೆಗೆ ದಾಟಿಸುವುದು ಎಂದರ್ಥ.
* ಕನ್ನಡ ಎಂದರೆ ಕೇವಲ ವರ್ಣಮಾಲೆಯಲ್ಲ! ಅದು ಕನ್ನಡದ ಜನ, ನೆಲ,ಜಲ, ಬದುಕು, ಸಾಹಿತ್ಯ, ಸಂಸ್ಕೃತಿ, ಕಲೆ, ಸಂಗೀತ ಎಲ್ಲವನ್ನೂ ಒಳಗೊಂಡ ಕರ್ನಾಟಕ, ಅದುವೇ ಕನ್ನಡತನ. ಕರ್ನಾಟಕದ ನೆಲದಲ್ಲಿ ವಾಸಿಸುತ್ತಿರುವವರೆಲ್ಲರೂ ಕನ್ನಡಿಗರು ಎಂದು ನಾವು ತಿಳಿದುಕೊಂಡಿದ್ದೇವೆ.
* ಭಾಷೆ ಎನ್ನುವುದು ಕೇವಲ ಭಾವನಾತ್ಮಕ ವಿಷಯ ಅಲ್ಲ. ಭಾಷೆಯ ವಿಷಯ ಬಂದಾಗ ನಾವು ಭಾವುಕರಾಗುತ್ತೇವೆ, ಇದು ತಪ್ಪಲ್ಲ. ಆದರೆ, ಅದು ಅಷ್ಟಕ್ಕೆ ನಿಲ್ಲಬಾರದು. ನಮ್ಮದು ಕೇವಲ ಮಾತನಾಡುವ ಸರ್ಕಾರ ಅಲ್ಲ, ಕೆಲಸ ಮಾಡುವ ಸರ್ಕಾರ. ಗುರಿ-ದಾರಿ ಎರಡರಲ್ಲಿಯೂ ನಮಗೆ ಸ್ಪಷ್ಟತೆ ಇದೆ.
* ನಾವು ನುಡಿದಂತೆ ನಡೆಯುವವರು. ಕನ್ನಡ ಮತ್ತು ಸಂಸ್ಕೃತಿ ಪರ ಚಟುವಟಿಕೆಗಳಿಗಾಗಿ ನೀಡುತ್ತಿರುವ ಅನುದಾನವನ್ನು 160 ಕೋಟಿ ರೂ.ಗಳಿಂದ 424 ಕೋಟಿ ರೂ.ಗಳಿಗೆ ಹೆಚ್ಚಿಸಿದ್ದೇವೆ. ಕನ್ನಡ ಸಾಹಿತ್ಯ ಪರಿಷತ್ ನಿರ್ಮಿಸಲಿರುವ ಶತಮಾನೋತ್ಸವ ಭವನ ನಿರ್ಮಾಣಕ್ಕಾಗಿ 5 ಕೋಟಿ ರೂ. ವಿಶೇಷ ಅನುದಾನ ನೀಡಿದ್ದೇವೆ. ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವೂ ಸೇರಿದಂತೆ ಸಾಹಿತ್ಯ ಪರಿಷತ್ತಿನ ಚಟುವಟಿಕೆಗಳಿಗೆ 12 ಕೋಟಿ ರೂ. ಅನುದಾನ ನೀಡುತ್ತಿದ್ದೇವೆ.
* ನಾವು ಕನ್ನಡದಲ್ಲಿಯೇ ವ್ಯವಹರಿಸುತ್ತೇವೆ, ಕನ್ನಡ ಪತ್ರಿಕೆ ಹಾಗೂ ಪುಸ್ತಕಗಳನ್ನು ಕೊಂಡು ಓದುತ್ತೇವೆ ಮತ್ತು ಇಂತಹ ಕನ್ನಡತನದ ಸಂಸ್ಕೃತಿಯನ್ನು ನಮ್ಮ ಮಕ್ಕಳಲ್ಲಿಯೂ ಬೆಳೆಸುತ್ತೇವೆ ಎಂದು ಪ್ರತಿಯೊಬ್ಬ ಕನ್ನಡಿಗನೂ ಸಂಕಲ್ಪ ಮಾಡಬೇಕು.
* ಕಳೆದ ನಾಲ್ಕೂವರೆ ವರ್ಷಗಳ ಅವಧಿಯಲ್ಲಿ ಕನ್ನಡ ಮತ್ತು ಕನ್ನಡಿಗರಿಗಾಗಿ ನಮ್ಮ ಸರ್ಕಾರ ಮಾಡಿದ ಕೆಲಸದ ಬಗ್ಗೆ ನಿಜಕ್ಕೂ ನನಗೆ ಹೆಮ್ಮೆ ಇದೆ. ಇದನ್ನು ರಾಜ್ಯದ ಸಾಹಿತಿಗಳು, ಚಿಂತಕರು, ಕನ್ನಡಪರ ಹೋರಾಟಗಾರರು ಮೆಚ್ಚಿಕೊಂಡಾಡಿದ್ದಾರೆ.
* ಕೆಪಿಎಸ್‌ಸಿ ಪರೀಕ್ಷೆಗಳಲ್ಲಿ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ಶೇ.5ರಷ್ಟು ಮೀಸಲಾತಿ, ಖಾಸಗಿ ಕ್ಷೇತ್ರದ ಉದ್ಯಮಗಳಲ್ಲಿಯೂ ಸಿ, ಡಿ ವರ್ಗದ ನೌಕರರ ನೇಮಕಾತಿಯಲ್ಲಿ ಕನ್ನಡಿಗರಿಗೆ ನೂರಕ್ಕೆ ನೂರರಷ್ಟು ಉದ್ಯೋಗ ಮೀಸಲಾತಿ, ಸಿಬಿಎಸ್‌ಇ, ಐಸಿಎಸ್‌ಐ ಶಾಲೆಗಳೂ ಸೇರಿದಂತೆ ಎಲ್ಲಾ ಇಂಗ್ಲಿಷ್ ಮಾಧ್ಯಮದ ಶಾಲೆಗಳಲ್ಲಿ ಒಂದನೇ ತರಗತಿಯಿಂದಲೇ ಕನ್ನಡ ಭಾಷೆ ಕಲಿಕೆ ಕಡ್ಡಾಯಗೊಳಿಸುವ ಭಾಷಾ ನೀತಿ ಜಾರಿ, ಗ್ರಾಮೀಣ ಬ್ಯಾಂಕುಗಳ ನೇಮಕಾತಿ ಪರೀಕ್ಷೆಗಳನ್ನು ಕನ್ನಡದಲ್ಲಿಯೇ ನಡೆಸಲು ಕ್ರಮ,
ರಾಷ್ಟ್ರೀಕೃತ, ಗ್ರಾಮೀಣ ಮತ್ತು ಷೆಡ್ನೂಲ್ಡ್ ಬ್ಯಾಂಕುಗಳ ಸಿಬ್ಬಂದಿ ಕಡ್ಡಾಯವಾಗಿ ಕನ್ನಡ ಕಲಿಯುವಂತೆ ಸುತ್ತೋಲೆ, ಚಲನಚಿತ್ರ ಮಂದಿರಗಳಲ್ಲಿ ಕನ್ನಡ ಸಿನಿಮಾ ಪ್ರದರ್ಶನ ಕಡ್ಡಾಯಗೊಳಿಸಿ ಆದೇಶ, ಗುಣಮಟ್ಟದ 125 ಕನ್ನಡ ಸಿನಿಮಾಗಳಿಗೆ ಸಹಾಯಧನ, ಕನ್ನಡೇತರರಿಗೆ ಕನ್ನಡ ಕಲಿಸಲು ಬೆಂಗಳೂರು ನಗರದಲ್ಲಿ ಕನ್ನಡ ಕಲಿಕಾ ಕೇಂದ್ರಗಳ ಪ್ರಾರಂಭ. ಇವು ನಮ್ಮ ಸರ್ಕಾರ ಕೈಗೊಂಡಿರುವ ಪ್ರಮುಖ ಕನ್ನಡ ಪರ ನಿರ್ಧಾರಗಳು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA; 50:50 ಹಂಚಿಕೆ ರದ್ದು ತೀರ್ಮಾನ; ನ್ಯಾ| ದೇಸಾಯಿ ಆಯೋಗದ ವರದಿ ಬಳಿಕ ನಿವೇಶನ ವಾಪಸ್
MUDA Case: ಉತ್ತರ ತಾಳೆಯಾಗದೆ ಇದ್ದರೆ ಮತ್ತೆ ಸಿಎಂ ವಿಚಾರಣೆ: ಲೋಕಾಯುಕ್ತ ಎಸ್ಪಿ ಉದೇಶ್
MUDA Case: ಲೋಕಾಯುಕ್ತ ಪೊಲೀಸರು ಮತ್ತೆ ವಿಚಾರಣೆಗೆ ಬರಲು ಹೇಳಿಲ್ಲ: ಸಿಎಂ ಸಿದ್ದರಾಮಯ್ಯ
Hunsur: ಗೃಹಿಣಿ ನಾಪತ್ತೆ :ದೂರು ದಾಖಲು; ಪತ್ತೆಗಾಗಿ ಮನವಿ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
MUST WATCH
ಹೊಸ ಸೇರ್ಪಡೆ
Our beautiful blessing..; ಚೊಚ್ಚಲ ಮಗುವಿನ ಖುಷಿ ಹಂಚಿಕೊಂಡ ರಾಹುಲ್ – ಅಥಿಯಾ ಶೆಟ್ಟಿ
ಬೆಳಗಾವಿಯ ಶ್ರೀನಿವಾಸ ಠಾಣೇದಾರ ಅಮೆರಿಕ ಸಂಸತ್‌ಗೆ ಆಯ್ಕೆ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Waqf Property: ಸಚಿವ ಜಮೀರ್ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.