ಪೂಜಾರಿ ಕೊಲೆ ಪ್ರಕರಣ ಖಂಡಿಸಿ ಧರಣಿ


Team Udayavani, Nov 25, 2017, 4:51 PM IST

yad-2.jpg

ಶಹಾಪುರ: ತಾಲೂಕಿನ ಮಹಲ್‌ ರೋಜಾ ಗ್ರಾಮದ ಶ್ರೀ ಯಮನೂರಪ್ಪ ದೇವಸ್ಥಾನದ ಪೀಠಾಧಿಧೀಶ ಹಣಮಂತ್ರಾಯ ಪೂಜಾರಿ (ಮುತ್ಯಾ) ಅವರನ್ನು ಬರ್ಬರ ಹತ್ಯೆಗೈಯಲು ಕುಮ್ಮಕ್ಕು ನೀಡಿದವರನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿ ಶುಕ್ರವಾರ ಕೋಲಿ ಸಮಾಜದಿಂದ ನಗರದಲ್ಲಿ ಬೃಹತ್‌ ಪ್ರತಿಭಟನೆ ನಡೆಸಿ ತಹಶೀಲ್ದಾರ ಮೂಲಕ ಸಿಎಂಗೆ ಮನವಿ ಸಲ್ಲಿಸಿತು.

ಈ ಸಂದರ್ಭದಲ್ಲಿ ಮಾತನಾಡಿದ ಸಮಾಜದ ತಾಲೂಕು ಅಧ್ಯಕ್ಷ ಅಯ್ಯಣ್ಣ ಕನ್ಯಾಕೋಳೂರ, ಕಲಬುರಗಿ, ಯಾದಗಿರಿ ಜಿಲ್ಲೆ ಸೇರಿದಂತೆ ಹಲವಡೆ ಕೋಲಿ ಸಮಾಜದವರ ಮೇಲೆ ನಿರಂತರ ದೌರ್ಜನ್ಯ, ಕೊಲೆಗಳು ನಡೆಯುತ್ತಿವೆ. ಶರಣ ಹಣಮಂತ್ರಾಯ ಪೂಜಾರಿ ಅವರನ್ನು ಕಳೆದ 15 ದಿನಗಳ ಹಿಂದೆಯೇ ಬರ್ಬರವಾಗಿ ಹತ್ಯೆ ಮಾಡಲಾಗಿದೆ. 

ಹತ್ಯೆಗೆ ಸಂಬಂಧಿಸಿದವರನ್ನು ಹಿಡಿಯುವಲ್ಲಿ ಪೊಲೀಸ್‌ ಇಲಾಖೆ ವಿಳಂಬ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿದರು. ಕಾರಣ ಪೊಲೀಸರು ಕೂಡಲೇ ಸಮುದಾಯದ ಜನರಿಗೆ ಸೂಕ್ತ ರಕ್ಷಣೆ ಒದಗಿಸಬೇಕು. ಅಲ್ಲದೆ ಹಣಮಂತ್ರಾಯ ಪೂಜಾರಿ ಅವರ ಕೊಲೆಯಲ್ಲಿ ಭಾಗಿಯಾದ ಇನ್ನುಳಿದವರನ್ನು ಕೂಡಲೇ ಬಂಧಿಸಬೇಕು. ಇಲ್ಲವಾದಲ್ಲಿ ರಾಜ್ಯದಾದ್ಯಂತ ಕೋಲಿ ಸಮುದಾಯ ಬೀದಿಗಿಳಿದು ಹೋರಾಟ ನಡೆಸಲಿದೆ ಎಂದು ಎಚ್ಚರಿಸಿದರು.

ಮುಖಂಡ ಸಣ್ಣ ನಿಂಗಪ್ಪ ನಾಯ್ಕೋಡಿ ಮಾತನಾಡಿ, ಹಣಮಂತ್ರಾಯ ಪೂಜಾರಿ (ಮುತ್ಯಾ) ಅವರನ್ನು ಬರ್ಬರ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದ ಸಮರ್ಪಕ ಮಾಹಿತಿ ಆಧರಿಸಿ ದೂರು ಸಲ್ಲಿಸಿದ್ದರೂ ಪೊಲೀಸರು ಆರೋಪಿಗಳನ್ನು ಬಂಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮಾನಯ್ಯ ಹಾದಿಮನಿ, ಮಲ್ಲರಡ್ಡಿ ವಿಭೂತಿಹಳ್ಳಿ, ಭೀಮರಾಯ ಮಮದಾಪುರ, ರವೀಂದ್ರನಾಥ ನರಸನಾಯಕ, ನಾಗಪ್ಪ ತಹಶೀಲ್ದಾರ್‌, ಗೋಪಾಲ ಸುರಪುರ, ಪಿಡ್ಡಪ್ಪ ಯಡಗಿಮದ್ರಿ, ಮರೆಪ್ಪ ಚಂಡು, ಬಸವರಾಜ ಕಂದಳ್ಳಿ ರಾಮಾಂಜನೇಯ ಬೋನೇರ, ಸಾಯಬಣ್ಣ ಚಂಡು, ನಾಗಪ್ಪ ಯಡಗಿಮದ್ರಿ, ಮಲ್ಲಪ್ಪ ಮಣಿಗಿರಿ ಸೇರಿದಂತೆ ಅಪಾರ ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದರು. 

ಸಿಬಿ ಕಮಾನದಿಂದ ಹೊರಟ ಬೃಹತ್‌ ಪ್ರತಿಭಟನಾ ಮೆರವಣಿಗೆ ನಗರದ ಬಸವೇಶ್ವರ ವೃತ್ತದಲ್ಲಿ ಅನಾವರಣಗೊಂಡಿತು. ನಂತರ ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ್‌ ಸೋಮಶೇಖರ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಯಡಾ ಮಾರ್ಟಿನ್‌, ನಗರ ಸಿಪಿಐ ನಾಗರಾಜ ಜೆ, ಸೇರಿದಂತೆ ಇತರೆ ಪೊಲೀಸ್‌ ಅಧಿಕಾರಿಗಳು ಇದ್ದರು.

ಸಂಚಾರ ಅಸ್ತವ್ಯಸ್ತ ನಗರದ ಪ್ರಮುಖ ರಸ್ತೆ ಮೂಲಕ ಪ್ರತಿಭಟನಾ ಮೆರವಣಿಗೆ ನಡೆದ ಪರಿಣಾಮ, ಬಸ್‌ ಮತ್ತು
ಖಾಸಗಿ ವಾಹನಗಳ ಸಂಚಾರಕ್ಕೆ ಅಡೆತಡೆ ಉಂಟಾಯಿತು. ಹೀಗಾಗಿ ಪ್ರಯಾಣಿಕರು ಪರದಾಡುವಂತಾಗಿದೆ. ಬೈಕ್‌
ಸವಾರರು, ಶಾಲಾ ಮಕ್ಕಳು ಸೇರಿದಂತೆ ಬಸ್‌, ಕಬ್ಬು ಸಾಗಣೆ ಲಾರಿಗಳು ರಸ್ತೆಯುದ್ದಕ್ಕೂ ನಿಂತಿರುವುದು ಕಂಡು ಬಂದಿತು.

ತನಿಖೆ ನಂತರ ಕ್ರಮ ಕೊಲೆ ಮಾಡಿದ ಆರೋಪಿ ಅಂದೇ ಶರಣಾಗಿದ್ದಾನೆ. ಆದರೆ ದೂರಿನ್ವಯ ಇನ್ನೂ ಮೂರು ಆರೋಪಿಗಳಿದ್ದಾರೆ ಎಂದು ತಿಳಿಸಲಾಗಿದೆ. ಆ ಆರೋಪಿಗಳ ಹೆಸರು ತಿಳಿಸಲು ಬರುವುದಿಲ್ಲ. ಪ್ರಕರಣ ತೀವ್ರ ತನಿಖೆ ಹಂತದಲ್ಲಿದೆ. ಕಾರಣ ಆರೋಪಿಗಳ ಹೆಸರು ಬಹಿರಂಗ ಪಡಿಸಲ್ಲ. ತನಿಖೆ ನಂತರ ಆರೋಪಿಗಳು ಈ ಪ್ರಕರಣದಲ್ಲಿ
ಭಾಗಿಯಾಗಿದ್ದಾರೆ ಎಂಬ ಸುಳಿವು ದೊರೆತ ನಂತರವೇ ಅವರನ್ನು ಬಂಧಿಸಲಾಗುವುದು.
ಯಡಾ ಮಾರ್ಟಿನ್‌ ಮಾರ್ಬನ್ಯಾಂಗ್‌, ಎಸ್ಪಿ ಯಾದಗಿರಿ.

ಟಾಪ್ ನ್ಯೂಸ್

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ

ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ

Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ

Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ

Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ

Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Suside-Boy

Putturu: ನೇಣು ಬಿಗಿದು ಆತ್ಮಹತ್ಯೆ

Suside-Boy

Brahamavara: ಹಾರಾಡಿ: ಬಾವಿಗೆ ಹಾರಿ ಆತ್ಮಹ*ತ್ಯೆ

Arrest

Madikeri: ಕುಶಾಲನಗರ ಕಳವು ಪ್ರಕರಣ: ಇಬ್ಬರ ಬಂಧನ

Accident-logo

Bantwala: ಶಾಲಾ ವಾಹನ ಢಿಕ್ಕಿ; ಸ್ಕೂಟರ್‌ ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.