‘ಕಲಾಭಿಮಾನಿಗಳ ಪ್ರೋತ್ಸಾಹದಿಂದ ಕಲೆಯ ಅಭಿವೃದ್ಧಿ’
Team Udayavani, Nov 26, 2017, 11:45 AM IST
ಮಹಾನಗರ: ಕಲೆಗಳ ಉಳಿವು ಹಾಗೂ ಅಭಿವೃದ್ಧಿಯಲ್ಲಿ ಕಲಾಭಿಮಾನಿಗಳ ಪಾತ್ರ ಮಹತ್ತರ. ಹಾಗಾಗಿ ಕಲೆ ಹಾಗೂ ಕಲಾವಿದರನ್ನು ಗೌರವಿಸುವ ಕೆಲಸವಾಗಬೇಕು ಎಂದು ಮಾಜಿ ಸಚಿವ ಕೃಷ್ಣ ಜಿ. ಪಾಲೆಮಾರ್ ಹೇಳಿದರು.
‘ಯಕ್ಷಾಂಗಣ ಮಂಗಳೂರು’ ಹಾಗೂ ಕರ್ನಾಟಕ ಯಕ್ಷಭಾರತಿ ಪುತ್ತೂರು ಸಹಯೋಗದಲ್ಲಿ ಕರ್ನಾಟಕ ರಾಜ್ಯೋತ್ಸವ ಕಲಾ ಸಂಭ್ರಮವಾಗಿ ಪುರಭವನದಲ್ಲಿ ಏರ್ಪಡಿಸಿದ ಪಂಚಮ ವರ್ಷದ ನುಡಿಹಬ್ಬ ‘ಯಕ್ಷಗಾನ ತಾಳಮದ್ದಳೆ ಸಪ್ತಾಹ’ ಸಮಾರೋಪದಲ್ಲಿ ಅವರು ಮಾತನಾಡಿದರು. ತಾಳಮದ್ದಳೆ ಸಪ್ತಾಹಗಳ ಮೂಲಕ ಗ್ರಾಮೀಣ ಪ್ರದೇಶ ಸೇರಿದಂತೆ ನಗರ ಪ್ರದೇಶಗಳಲ್ಲೂ ಯಕ್ಷಗಾನಗಳ ಬಗ್ಗೆ ಜನರಿಗೆ ತಿಳಿಸುವ ಕಾರ್ಯವಾಗುತ್ತಿದೆ. ಯುವ ಸಮೂಹ ಇಂತಹ ಕಾರ್ಯ ಕ್ರಮಗಳಲ್ಲಿ ಭಾಗವಹಿಸುವ ಉತ್ಸಾಹ ತೋರಬೇಕಿದೆ ಎಂದರು.
ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎ.ಸಿ.ಭಂಡಾರಿ ಅಧ್ಯಕ್ಷತೆ ವಹಿಸಿದ್ದರು. ಪಾರ್ತಿ ಸುಬ್ಬ ಪ್ರಶಸ್ತಿ ಪುರಸ್ಕೃತ ಹಿರಿಯ ಅರ್ಥದಾರಿ, ವಿಮರ್ಶಕ ಡಾ| ಎಂ. ಪ್ರಭಾಕರ್ ಜೋಶಿ ಅವರನ್ನು ಯಕ್ಷಾಂಗಣ ಗೌರವ ಪ್ರಶಸ್ತಿ ನೀಡಿ ಸಮ್ಮಾನಿಸಲಾಯಿತು. ಉದ್ಯಮಿ ಶ್ರೀಪತಿ ಭಟ್, ನಮೀತಾ ಶ್ಯಾಂ, ದಯಾನಂದ ವರ್ಕಾಡಿ, ವಿಶಾಲ ಕೀರ್ತಿ ರೈ, ರವೀಂದ್ರ ರೈ ಉಪಸ್ಥಿತರಿದ್ದರು. ಯಕ್ಷಾಂಗಣದ ಕಾರ್ಯಾಧ್ಯಕ್ಷ ಭಾಸ್ಕರ ರೈ ಕುಕ್ಕುವಳ್ಳಿ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಡಾ| ದಿನಕರ ಎಸ್. ಪಚ್ಚನಾಡಿ ನಿರೂಪಿಸಿದರು. ಬಳಿಕ ಪೊಲ್ಯ ಲಕ್ಷ್ಮೀನಾರಾಯಣ ಶೆಟ್ಟಿ ಹಾಗೂ ಪ್ರಪುಲ್ಲಚಂದ್ರ ನೆಲ್ಯಾಡಿ ಭಾಗವತಿಕೆಯಲ್ಲಿ ಆಂಜನೇಯ 2 ಸೌಗಂಧಿಕಾಹರಣ ತಾಳಮದ್ದಳೆ ಜರಗಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
M. Chinnaswamy ಸ್ಟಾಂಡ್‌ಗೆ ಶಾಂತಾ ರಂಗಸ್ವಾಮಿ ಹೆಸರಿಡಲು ಯಾಕೆ ಹಿಂದೇಟು? ಏನಿದು ವಿವಾದ?
Mandya :ಗಂಡ ಗದ್ಯ, ಹೆಂಡತಿ ಪದ್ಯ, ಮಕ್ಕಳು ರಗಳೆ!: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್
Mangaluru: ಸಹಬಾಳ್ವೆ ಬೆಸೆಯುತ್ತಿದೆ ‘ಕುಸ್ವಾರ್’
iPhone: ಕೈತಪ್ಪಿ ಕಾಣಿಕೆ ಹುಂಡಿಗೆ ಬಿದ್ದ ಐಫೋನ್… ಇದು ದೇವರ ಸೊತ್ತು ಎಂದ ಸಿಬ್ಬಂದಿ
Kumbra ಜಂಕ್ಷನ್‌ನಲ್ಲಿ ಈಗ ಸೆಲ್ಫಿ ಪಾಯಿಂಟ್ ಆಕರ್ಷಣೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.