ಜಾಗತಿಕ ಧರ್ಮಗಳ ಸಾಲಿನಲ್ಲಿ ಲಿಂಗಾಯತ ಧರ್ಮ ನಿಲ್ಲುವಂತಾಗಲಿ
Team Udayavani, Nov 26, 2017, 11:51 AM IST
ಬಸವಕಲ್ಯಾಣ: ಜೈನ್, ಸಿಖ್ ಧರ್ಮಗಳ ಹಾಗೆ ಲಿಂಗಾಯತ ಧರ್ಮವು ಪ್ರತ್ಯೇಕ ಧರ್ಮವಾಗಿ ಸ್ಥಾಪನೆಯಾಗಿ ಜಾಗತಿಕ ಧರ್ಮಗಳ ಸಾಲಿನಲ್ಲಿ ನಿಲ್ಲುವಂತಾಗಬೇಕು ಎಂದು ಗದಗ ತೋಂಟದಾರ್ಯ ಸಂಸ್ಥಾನ ಮಠದ ಜಗದ್ಗುರು ಡಾ|ಸಿದ್ದಲಿಂಗ ಮಹಾಸ್ವಾಮೀಜಿ ಹೇಳಿದರು.
ನಗರದ ಹೊರ ವಲಯದಲಿರುವ ಅನುಭವ ಮಂಟಪ ಪರಿಸರದಲ್ಲಿ ಆಯೋಜಿಸಲಾಗಿರುವ 38ನೇ ಶರಣ ಕಮ್ಮಟ,
ಅನುಭವ ಮಂಟಪ ಉತ್ಸವ ಉದ್ಘಾಟನಾ ಸಮಾರಂಭದಲ್ಲಿ ಸಾನ್ನಿಧ್ಯ ವಹಿಸಿ ಸ್ವಾಮೀಜಿ ಆಶೀರ್ವಚನ ನೀಡಿದರು. ಲಿಂಗಾಯತ ಧರ್ಮಿಯರ ಸರ್ವೋತೊಮುಖ ಪ್ರಗತಿಗಾಗಿ ಪ್ರತ್ಯೇಕ ಧರ್ಮ ಮಾನ್ಯತೆ ಅತ್ಯವಶ್ಯವಾಗಿದೆ.
ರಾಜ್ಯ ಹಾಗೂ ಕೇಂದ್ರ ಸರ್ಕಾರ ಲಿಂಗಾಯತ ಧರ್ಮಕ್ಕೆ ತಕ್ಷಣ ಮಾನ್ಯತೆ ನೀಡಬೇಕು ಎಂದು ಹೇಳಿದರು.
ಲಿಂಗಾಯತ ವೀರಶೈವ ಎರಡು ಒಂದೇ ಎನ್ನುವ ವಾದ ಸರಿಯಲ್ಲ. ಲಿಂಗಾಯತಕ್ಕೆ ತನ್ನದೆಯಾದ ಹಿನ್ನೆಲೆ ಇದೆ.
ಗುರು ಬಸವಣ್ಣರು ಧರ್ಮ ಗುರುವಾದರೆ, ವಚನ ಸಾಹಿತ್ಯ ಲಿಂಗಾಯತ ಧರ್ಮ ಗ್ರಂಥವಾಗಿದೆ. ಈ ಬಗ್ಗ ಜನರಲ್ಲಿ
ಜಾಗೃತಿ ಮೂಡಿಸುವ ಕೆಲಸ ನಿರಂತರವಾಗಿ ನಡೆಯಬೇಕು. ಮಠಾ ಧೀಶರು ಹಾಗೂ ರಾಜಕಾರಣಿಗಳು ಜನರಿಗೆ ದಾರಿ ತಪ್ಪಿಸುವ ಕೆಲಸ ನಿಲ್ಲಿಸಬೇಕು ಎಂದು ಹೇಳಿದರು.
ಪ್ರತ್ಯೇಕ ಧರ್ಮಕ್ಕೆ ವಿರೋಧಿಸುವ ಪಂಚಾಚಾರ್ಯರು ಹಿಂದೆ ತಮಗೆ ಬೇಡ ಜಂಗಮ ಪಟ್ಟಿಗೆ ಸೇರಿಸಿ ಮೀಸಲಾತಿ
ಸೌಲಭ್ಯ ಕಲ್ಪಿಸಿಕೊಡಬೇಕು ಎಂದು ಅಟಲ್ ಬಿಹಾರಿ ವಾಜಪೇಯಿ ಅವರ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಮನವಿ
ಸಲ್ಲಿಸಿದ್ದನ್ನು ಮರೆತಂತೆ ಕಾಣುತ್ತಿದೆ. ಪ್ರತ್ಯೇಕ ಧರ್ಮ ಮಾನ್ಯತೆಗೊಂಡು ಲಿಂಗಾಯತರಿಗೆ ಸೌಲಭ್ಯ ಸಿಕ್ಕಲ್ಲಿ ಇವರಿಗೇನು ತೊಂದರೆಯಾಗು¤ದೆ. ಎನ್ನುವುದು ಅರ್ಥವಾಗುತ್ತಿಲ್ಲ. ಭಕ್ತರಿಂದ ದೇಣಿಗೆ ಪಡೆದು ಮೆರೆಯುವ ಸ್ವಾಮಿಗಳ ಬಗ್ಗೆ ಜನರು ಜಾಗೃತರಾಗಬೇಕು ಎಂದು ಹೇಳಿದರು.
ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಮುಂದಾಗಬೇಕು. ಈ ಭಾಗದಲ್ಲಿ ಪ್ರತ್ಯೇಕ ರಾಜ್ಯಧಾನಿ
ಕೇಂದ್ರ ಸ್ಥಾಪಿಸಬೇಕು. ಬೆಳಗಾವಿಯಲ್ಲಿನ ಸುವರ್ಣಸೌಧದಲ್ಲಿ ನಡೆಯುವ ಅಧಿವೇಶನ ವ್ಯರ್ಥವಾಗದಂತೆ ನೋಡಿಕೊಳ್ಳಬೇಕು ಎಂದು ಸರ್ಕಾರಕ್ಕೆ ಸಲಹೆ ನೀಡಿದರು.
ಮುಂಡರಗಿ ತೋಂಟದಾರ್ಯ ಶಾಖಾ ಮಠದ ಶ್ರೀ ನಿಜಗುಣಪ್ರಭು ತೋಂಟದಾರ್ಯ ಮಹಾಸ್ವಾಮೀಜಿ, ಕೂಡಲ
ಸಂಗಮದ ಶ್ರೀ ಜಗದ್ಗುರು ಬಸವಜಯ ಮೃತ್ಯುಂಜಯ ಮಹಾಸ್ವಾಮೀಜಿ, ಅನುಭವ ಮಂಟಪದ ಅಧ್ಯಕ್ಷ
ಡಾ| ಬಸವಲಿಂಗ ಪಟ್ಟದ್ದೇವರು, ಶ್ರೀಶೈಲದ ಜಗದ್ಗುರು ಡಾ| ಸಾರಂಗಧರ ದೇಶಿಕೇಂದ್ರ ಮಹಾಸ್ವಾಮೀಜಿ, ಭಾಲ್ಕಿಯ ಶ್ರೀ ಗುರುಬಸವ ಪಟ್ಟದ್ದೇವರು, ಬಸವ ಬೆಳವಿಯ ಶ್ರೀ ಶರಣಬಸವ ಸ್ವಾಮೀಜಿ, ಕವಲಗಾದ ಶ್ರೀ ಶಣ್ಮುಖ ಶಿವಯೋಗಿಗಳು, ಗದಗನ ಶ್ರೀ ಚಂದ್ರಶೇಖರ ದೇವರು ಸಾನ್ನಿಧ್ಯ ವಹಿಸಿದ್ದರು. ಸ್ವಾಗತ ಸಮಿತಿ ಅಧ್ಯಕ್ಷ ಬಾಬು ವಾಲಿ, ಪ್ರಮುಖರಾದ ಶರಣಪ್ಪ ಮೀಠಾರೆ, ಡಾ| ಅಮರನಾಥ ಸೋಲಪುರೆ, ಗುರುನಾಥ ಗಡ್ಡೆ ಸೇರಿದಂತೆ ಪ್ರಮುಖರು ಇದ್ದರು. ಇದೇ ವೇಳೆ ಐಎಎಸ್ ಪಾಸಾದ ಭಾಲ್ಕಿಯ ಅಮರೇಶ್ವರ ಎನ್. ಪಾಟೀಲ ಅವರನ್ನು ಸನ್ಮಾನಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Polls Result: ಪ್ರತಿಪಕ್ಷಗಳ ಸುಳ್ಳು ಆರೋಪಕ್ಕೆ ಜನಾದೇಶದ ಉತ್ತರ: ಖಂಡ್ರೆ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.