ಚುನಾವಣಾ ರಾಜಕೀಯಕ್ಕೆ ಶಾಸಕರವೀಂದ್ರ ನಿವೃತ್ತಿ ಘೋಷಣೆ

Team Udayavani, Nov 27, 2017, 11:25 AM IST

27-16.jpg

ಹ‌ರಪನಹಳ್ಳಿ: ಮಾಜಿ ಉಪಮುಖ್ಯಮಂತ್ರಿ ದಿ. ಎಂ.ಪಿ. ಪ್ರಕಾಶ್‌ ಪುತ್ರ, ಕೆಎಂಎಫ್‌ ನಿರ್ದೇಶಕ ಹಾಗೂ ಹರಪನಹಳ್ಳಿ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಎಂ.ಪಿ. ರವೀಂದ್ರ ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದು, 2018ರ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದಿದ್ದಾರೆ.

ವಿಧಾನ ಸಭಾಚುನಾವಣೆ ಸಮೀಪಿಸುತ್ತಿ ರುವ ವೇಳೆ ಆಡಳಿತ ಪಕ್ಷದ ಶಾಸಕ ರವೀಂದ್ರರ ಈ ನಿರ್ಧಾರ ರಾಜಕೀಯ ವಲಯ ದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಅಲ್ಲದೆ ಈ ದಿಢೀರ್‌ ನಿರ್ಧಾರ ಅವರ ಕುಟುಂಬ, ಅಭಿಮಾನಿಗಳಲ್ಲಿ ಆಘಾತ ಮೂಡಿಸಿದೆ. ಸ್ವತಃ ರವೀಂದ್ರ ಅವರ ತಾಯಿ ನಿರ್ಧಾರ ಬದಲಿಸುವಂತೆ ಸಲಹೆ ನೀಡಿದ್ದಾರೆ. ತಿರ್ಮಾನ ಬದಲಿಸಲು ಕಾರ್ಯಕರ್ತರು ಆತ್ಮಹತ್ಯೆಗೂ ಯತ್ನಿಸಿದ್ದಾರೆ.

ಮನನೊಂದು ಈ ನಿರ್ಧಾರ: ಭಾನುವಾರ ಸುದ್ದಿಗೋಷ್ಠಿಯಲ್ಲಿ ಶಾಸಕ ಎಂ.ಪಿ. ರವೀಂದ್ರ ಮಾತನಾಡಿ, ಕಲುಷಿತ ರಾಜಕೀಯ, ದುಬಾರಿ ಚುನಾವಣೆ ಹಾಗೂ ನನ್ನ ವೈಯಕ್ತಿಕ ಸಮಸ್ಯೆಯ ಕಾರಣದಿಂದ ಮನನೊಂದು ಚುನಾವಣಾ ರಾಜಕೀಯದಿಂದ ದೂರ ಸರಿಯುವ ನಿರ್ಧಾರ ಮಾಡಿದ್ದೇನೆ ಎಂದರು. ನಾನು ಫಲಾಯನವಾದಿಯಲ್ಲ. ಮುಂದಿನ ಚುನಾವಣೆಯಲ್ಲಿ ನನಗೆ ಟಿಕೆಟ್‌ ಸಿಗುವುದಿಲ್ಲ ಎಂಬ ಭಯವೂ ಇಲ್ಲ. ಇದು ನನ್ನ ದಿಢೀರ್‌ ನಿರ್ಧಾರವೂ ಅಲ್ಲ. ಬಹಳ ದಿನದಿಂದ ಆಲೋಚಿಸಿ ನಿರ್ಧರಿಸಿರುವುದಾಗಿ ತಿಳಿಸಿದರು.

ಚುನಾವಣೆಯಿಂದ ದೂರವಿದ್ದರೂ ಕಾಂಗ್ರೆಸ್‌ ಪಕ್ಷದಲ್ಲೇ ಇರುತ್ತೇನೆ. ಪಕ್ಷ ನನಗೆ ಎಲ್ಲವನ್ನೂ ನೀಡಿದೆ. ಹೀಗಾಗಿ ಪಕ್ಷ ಸೂಚಿಸುವ ಅಭ್ಯರ್ಥಿಯನ್ನು ಬೆಂಬಲಿಸಿ, ಅವರ ಗೆಲುವಿಗೆ ಶ್ರಮಿಸುತ್ತೇನೆ. ನಾನು ಕಿಂಗ್‌ ಮೇಕರ್‌ ಆಗಬೇಕೆಂದು ಬಯಸಿದ್ದೇನೆ. ಇದಲ್ಲದೆ ನಾನು ಬೇರೆ ಯಾವ ಪಕ್ಷವನ್ನೂ ಸೇರಲ್ಲ. ಕಾರ್ಯಕರ್ತರ ಅಭಿಪ್ರಾಯ ಪಡೆಯದೇ ಈ ನಿರ್ಧಾರ ಕೈಗೊಂಡಿರುವುದರಿಂದ ಅವರಲ್ಲಿ ಕ್ಷಮೆ
ಕೋರುವುದಾಗಿ ಹೇಳಿದರು.

ನನ್ನನ್ನು ಸೇರಿ ಇಡೀ ರಾಜಕೀಯ ವ್ಯವಸ್ಥೆ ಸರಿಯಿಲ್ಲ, ಎಲ್ಲವನ್ನು ಹೇಳಲೂ ಸಾಧ್ಯವಿಲ್ಲ. ಒಟ್ಟಿನಲ್ಲಿ ರಾಜಕೀಯ ಕ್ಷೇತ್ರ ಹೊಲಸಾಗಿದೆ. ಇದರಿಂದ ಬೇಸತ್ತು ಈ ನಿರ್ಧಾರ ಕೈಗೊಂಡಿದ್ದೇನೆ. ಮುಖಂಡರು ಮತ್ತು ಕಾರ್ಯಕರ್ತರನ್ನು ಮಾನಸಿಕವಾಗಿ ಸಿದ್ಧಗೊಳಿಸಿ ಸಹಕಾರಿ ರಂಗದಲ್ಲಿ ಮುಂದುವರಿಯುತ್ತೇನೆ. ಯಾರೇ ಹೇಳಿದರೂ ತಮ್ಮ ನಿರ್ಧಾರ ಬದಲಿಸಲ್ಲ ಎಂದರು.

ಆತ್ಮಹತ್ಯೆ ಯತ್ನ: ಎಂ.ಪಿ. ರವೀಂದ್ರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ಘೋಷಿ ಸುತ್ತಿದ್ದಂತೆ ಅವರೊಂದಿಗಿದ್ದ ಕಾರ್ಯಕರ್ತರೂ ಸೇರಿ ಎಲ್ಲರೂ ಆಶ್ಚರ್ಯಗೊಂಡರು. ಈ ಸುದ್ದಿ ಹರಡುತ್ತಿದ್ದಂತೆ ಪ್ರವಾಸಿ ಮಂದಿರದ ಬಳಿ ಸೇರಿದ ನೂರಾರು ಕಾರ್ಯಕರ್ತರು ನಿರ್ಧಾರ ಬದಲಿಸುವಂತೆ ಶಾಸಕರಲ್ಲಿ ಪಟ್ಟು ಹಿಡಿದರು. ಸುದ್ದಿಗೋಷ್ಠಿ ಮುಗಿಸಿ ರವೀಂದ್ರ ಕಾರನ್ನೇರಿ ಹೊರಡಲು ಮುಂದಾದಾಗ ಕೆಲವರು ಕಾರಿಗೆ ಅಡ್ಡ ಮಲಗಿದರು. ಮತ್ತೆ ಕೆಲವರು ಮೈಮೇಲೆ ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದರು. ಸ್ಥಳದಲ್ಲಿದ್ದ ಪೊಲೀಸರು ಇದನ್ನು ತಡೆದರು. ಎಲ್ಲರ ಕ್ಷಮೆ ಯಾಚಿಸಿದ ರವೀಂದ್ರ ನಿರ್ಧಾರ ಬದಲಿಸಲ್ಲ ಎಂದು ಅಲ್ಲಿಂದ ಹೊರಟರು.

ಸಹಕಾರಿ ಕ್ಷೇತ್ರದಿಂದ ರಾಜಕೀಯಕ್ಕೆ…:
ಸಹಕಾರಿ ರಂಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ರವೀಂದ್ರ ತಮ್ಮ ತಂದೆ ಎಂ.ಪಿ. ಪ್ರಕಾಶ್‌ ನಿಧನದ ಬಳಿಕ ಚುನಾವಣಾ ರಾಜಕೀಯಕ್ಕೆ ಕಾಲಿಟ್ಟರು. 2013ರ ಚುನಾವಣೆಯಲ್ಲಿ ಹರಪನಹಳ್ಳಿ ಕ್ಷೇತ್ರದಿಂದ ಕಣಕ್ಕಿಳಿದ ರವೀಂದ್ರ 56,954 ಮತಗಳನ್ನು ಪಡೆದು ಬಿಜೆಪಿಯ ಗಣಿಧಣಿ ಜಿ.ಕರುಣಾಕರರೆಡ್ಡಿ ಅವರನ್ನು ಸೋಲಿಸುವ ಮೂಲಕ ಪ್ರಥಮ ಬಾರಿಗೆ ವಿಧಾನಸೌಧ ಪ್ರವೇಶಿಸಿದರು.

ಮನವೊಲಿಸಲು ಸಿಎಂ ಯತ್ನ
ಎಂ.ಪಿ. ರವೀಂದ್ರ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ವಿಷಯ ತಿಳಿದು ಮುಖ್ಯಮಂತ್ರಿ ಸಿದ್ದರಾಮಯ್ಯ ದೂರವಾಣಿ ಮೂಲಕ ರವೀಂದ್ರ ಅವರೊಂದಿಗೆ ಮಾತನಾಡಿ ಮನವೊಲಿಸುವ ಪ್ರಯತ್ನ ಮಾಡಿದ್ದಾರೆ. “ಈ ನಿರ್ಧಾರ ಸರಿಯಲ್ಲ. ದುಡುಕಿನ ಯಾವುದೇ ತೀರ್ಮಾನಕ್ಕೆ ಬರಬೇಡ, ನನ್ನನ್ನು ಭೇಟಿಯಾಗು’ ಎಂದು ಸಿಎಂ ಹೇಳಿದ್ದಾರೆ. ತಮ್ಮನ್ನು ಭೇಟಿಯಾಗಿ ಚರ್ಚಿಸುವುದಾಗಿ ರವೀಂದ್ರ ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.

ಚುನಾವಣೆಯಿಂದ ಹಿಂದೆ ಸರಿಯುವುದು ಒಳ್ಳೆಯದಲ್ಲ. ನಮ್ಮ ಕುಟುಂಬದ್ದು ಈಗ ಮೂರನೇ ತಲೆಮಾರಿನ ರಾಜಕಾರಣವಾಗಿದೆ. ಮಗನ ನಿರ್ಧಾರ ನಮಗೂ ಆಘಾತ ತಂದಿದ್ದು, ಚುನಾವಣೆಯಿಂದ ಹಿಂದೆ ಸರಿಯಲು ನಾವು ಬಿಡಲ್ಲ. ನಿರ್ಧಾರ ಬದಲಿಸುವಂತೆ ಈಗಾಗಲೇ ಹೇಳಿದ್ದೇನೆ.
 ●ಎಂ.ಪಿ.ರುದ್ರಾಂಭ ಪ್ರಕಾಶ್‌, ಎಂ.ಪಿ.ರವೀಂದ್ರರ ತಾಯಿ

ಟಾಪ್ ನ್ಯೂಸ್

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Yadiyurappa (2)

B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadiyurappa (2)

B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ

1-siddu

BJP ಸರಕಾರ ಕಾಲದ ಕೋವಿಡ್‌, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ

doctor 2

Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್‌ ಕೇರ್‌ ವಿಭಾಗ ಆರಂಭ

Beer

Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್‌

bjp-congress

BJP ಆಮಿಷ ನಿಜ: ಸಿಎಂ, ಡಿಸಿಎಂ ಹೇಳಿಕೆಗೆ ದನಿಗೂಡಿಸಿದ ಸಚಿವರು, ಶಾಸಕರು

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.