ಪುತ್ತೂರು: ಜಿಲ್ಲಾ ಮಟ್ಟದ 14ನೇ ಹಿರಿಯರ ಕ್ರೀಡಾಕೂಟ


Team Udayavani, Nov 27, 2017, 1:53 PM IST

27-Nov-10.jpg

ಪುತ್ತೂರು: ವಯಸ್ಸಿನಲ್ಲಿ ಹಿರಿಯರಾಗಬಹುದು. ಆದರೆ ಆತ್ಮ ವಿಶ್ವಾಸ ಇದ್ದಲ್ಲಿ ಇಳಿ ವಯಸ್ಸಿನಲ್ಲೂ ಕ್ರೀಡೆ ಸೇರಿದಂತೆ ನಾನಾ ಕ್ಷೇತ್ರಗಳಲ್ಲಿ ಸಾಧನೆ ತೋರಬಹುದು ಅನ್ನುವುದಕ್ಕೆ ಅನೇಕ ಸಾಧಕರ ಸಾಲೇ ಸಾಕ್ಷಿ ಎಂದು ಶಾಸಕಿ ಶಕುಂತಳಾ ಟಿ. ಶೆಟ್ಟಿಅವರು ಹೇಳಿದರು.

ಕೊಂಬೆಟ್ಟು ತಾ| ಕ್ರೀಡಾಂಗಣದಲ್ಲಿ ಜಿಲ್ಲಾ ಹಿರಿಯರ ಕ್ರೀಡಾಕೂಟ ಸಂಘಟನ ಸಮಿತಿ, ತಾಲೂಕು ಹಿರಿಯರ ಕ್ರೀಡಾ ಸಂಘ ಕಾಣಿಯೂರು ಹಾಗೂ ದ.ಕ. ಜಿಲ್ಲಾ ಹಿರಿಯರ ಕ್ರೀಡಾ ಸಂಘದ ಆಶ್ರಯದಲ್ಲಿ ವಿವಿಧ ಸಂಘಟನೆಗಳ ಸಹಭಾಗಿತ್ವದಲ್ಲಿ ನಡೆದ ಜಿಲ್ಲಾ ಮಟ್ಟದ 14ನೇ ಹಿರಿಯರ ಕ್ರೀಡಾಕೂಟ-2017ರ ಅಧ್ಯಕ್ಷತೆ ವಹಿಸಿ ಮಾತನಾಡಿದರು. ದೈಹಿಕ ಸಾಮರ್ಥ್ಯ ಕಾಪಾಡಿಕೊಂಡು, ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವ ಮೂಲಕ ರಾಜ್ಯ, ರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ತೋರಿ ದೇಶಕ್ಕೆ ಗೌರವ ತರಬೇಕು ಎಂದು ಅವರು ಹೇಳಿದರು.

ಕ್ರೀಡಾಕೂಟಕ್ಕೆ ಚಾಲನೆ
ಸಭಾ ಕಾರ್ಯಕ್ರಮದ ಮೊದಲು ಸಹಾಯಕ ಯುವಸಬಲೀಕರಣ ಮತ್ತು ಕ್ರೀಡಾಧಿಕಾರಿ ಮಾಮಚ್ಚನ್‌ ಎಂ. ಧ್ವಜಾರೋಹಣದ ಮೂಲಕ ಕ್ರೀಡಾಕೂಟಕ್ಕೆ
ಚಾಲನೆ ನೀಡಿದರು.

ಶ್ಲಾಘನೀಯ
ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಎನ್‌. ಸುಧಾಕರ ಶೆಟ್ಟಿ ಉದ್ಘಾಟಿಸಿ ಮಾತನಾಡಿ, ಇಳಿ ವಯಸ್ಸಿನಲ್ಲಿ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲು ಹಿರಿಯರ ಮನಸ್ಸು ತುಡಿದರೂ ದೈಹಿಕ ಸಾಮರ್ಥ್ಯದಿಂದ ಅದು ಅಸಾಧ್ಯ ಎಂಬ ಭಾವನೆ ಮೂಡುವುದು ಇದೆ. ಈ ಸಂದರ್ಭದಲ್ಲಿ ಅಂತಹ ಆಸಕ್ತರಲ್ಲಿ ಪ್ರೋತ್ಸಾಹ, ಹುರುಪು ತುಂಬುವ ನಿಟ್ಟಿನಲ್ಲಿ ಹಿರಿಯರ ಕ್ರೀಡಾಕೂಟ ಆಯೋಜಿಸುತ್ತಿರುವುದು ಶ್ಲಾಘನೀಯ
ಎಂದು ಹೇಳಿದರು.

ಆರೋಗ್ಯಕ್ಕೆ ಪೂರಕ
ಸಾರ್ವಜನಿಕ ಶಿಕ್ಷಣ ಇಲಾಖೆಯ ಜಿಲ್ಲಾ ಉಪನಿರ್ದೇಶಕ ವೈ. ಶಿವರಾಮಯ್ಯ ಮಾತನಾಡಿ, ಮಾನಸಿಕ, ದೈಹಿಕ ಆರೋಗ್ಯ ಕಾಪಾಡಿಕೊಳ್ಳುವುದು ಎಲ್ಲರ ಇಚ್ಛೆ. ಇಂತಹ ಕ್ರೀಡಾಕೂಟ ಅದಕ್ಕೂಂದು ಉತ್ತಮ ವೇದಿಕೆ ಎಂದರು. ರಾ.ಹಿರಿಯರ ಕ್ರೀಡಾ ಸಂಘದ ಪ್ರಧಾನ ಕಾರ್ಯದರ್ಶಿ ಜೆರಾಲ್ಡ್‌ ಡಿ’ಸೋಜಾ ಮಾತನಾಡಿ, ಹಿರಿಯರ ಕ್ರೀಡಾಕೂಟಕ್ಕೆ ಪ್ರೋತ್ಸಾಹದ ಅಗತ್ಯವಿದೆ. ಸಂಘಟಕರು ಮನೆ ಮನೆ ಭೇಟಿ ನೀಡಿ ಹಿರಿಯರನ್ನು ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವಂತೆ ಮಾಡುವ ಪ್ರಯತ್ನ ನಿರಂತರವಾಗಿ ಸಾಗಬೇಕು ಎಂದರು.

ಸವಣೂರು ವಿದ್ಯಾರಶ್ಮಿ ಸಮೂಹ ಸಂಸ್ಥೆಯ ಸಂಚಾಲಕ ಕೆ. ಸೀತಾರಾಮ ರೈ ಸವಣೂರು, ರೋಟರಿ ಕ್ಲಬ್‌ ಅಧ್ಯಕ್ಷ ಎ.ಜೆ. ರೈ, ಜಿಲ್ಲಾ ಹಿರಿಯರ ಕ್ರೀಡಾ ಸಂಘದ ಅಧ್ಯಕ್ಷ ಕೋದಂಡರಾಮೇಗೌಡ, ಕಾರ್ಯದರ್ಶಿ ಜೆ. ಆನಂದ ಸೋನ್ಸ್‌, ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆ ಸಂಚಾಲಕ ಜಯಸೂರ್ಯ ರೈ ಮಾದೋಡಿ, ಕೊಂಬೆಟ್ಟು ಸರಕಾರಿ ಶಾಲಾ ಎಸ್‌ಡಿಎಂಸಿ ಕಾರ್ಯಾಧ್ಯಕ್ಷ ಜೋಕಿಂ ಡಿ’ಸೋಜಾ, ಜಿಲ್ಲಾ ಯುವಜನ ಒಕ್ಕೂಟದ ಅಧ್ಯಕ್ಷ ಸುರೇಶ್‌ ಸೂಡಿಮುಳ್ಳು, ಪಡೀಲು ಚೈತನ್ಯ ಮಿತ್ರವೃಂದ ಅಧ್ಯಕ್ಷ ರಮೇಶ್‌, ಗುತ್ತಿಗೆದಾರ ಆನಂದ ಕುಲಾಲ್‌ ಕೇಪುಳು, ಜಿಲ್ಲಾ ಹಿರಿಯರ ಕ್ರೀಡಾಕೂಟ ಸಂಘಟನ ಸಮಿತಿ ಅಧ್ಯಕ್ಷ ಮಾಧವ ಬಿ.ಕೆ. ಉಪಸ್ಥಿತರಿದ್ದರು.

ತಾ| ಹಿರಿಯರ ಕ್ರೀಡಾ ಸಂಘದ ಕಾರ್ಯದರ್ಶಿ ಗಿರಿಶಂಕರ ಸುಲಾಯ ಸ್ವಾಗತಿ ಸಿದರು. ಜಿಲ್ಲಾ ಹಿರಿಯರ ಕ್ರೀಡಾ ಕೂಟ ಸಂಘಟನ ಸಮಿತಿ ಉಪಾಧ್ಯಕ್ಷ ಮಾಮಚ್ಚನ್‌ ಎಂ. ವಂದಿಸಿದರು. ಮುಂಜಾನೆ ನಡೆದ 5 ಕಿ.ಮೀ. ನಡಿಗೆ, 5 ಸಾವಿರ ಮೀ. ಓಟದಲ್ಲಿ ಹಿರಿಯ ಕ್ರೀಡಾಪಟು ನಾರಾಯಣ ಭಟ್‌ ಸುಳ್ಯ ಅವರು ಪ್ರಥಮ ಸ್ಥಾನ ಪಡೆದುಕೊಂಡರು. ಕ್ರೀಡಾಕೂಟಕ್ಕೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ತಾಲೂಕು ಯುವಜನ ಒಕ್ಕೂಟ, ಪಡೀಲು ಚೈತನ್ಯ ಮಿತ್ರವೃಂದ, ಕೊಂಬೆಟ್ಟು ಸ.ಪ.ಪೂ ಕಾಲೇಜು, ಸವಣೂರು ಯುವಕ ಮಂಡಲ ಹಾಗೂ ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ಸಹಕಾರ ನೀಡಿತ್ತು.

14 ಕೋ. ರೂ. ಅಂದಾಜು ಪಟ್ಟಿ 
ಕೊಂಬೆಟ್ಟು ತಾ| ಕ್ರೀಡಾಂಗಣವನ್ನು ಸಿಂಥೆಟಿಕ್‌ ಟ್ರಾಫಿಕ್‌ ಸಹಿತ ಸುಸಜ್ಜಿತ ಕ್ರೀಡಾಂಗಣವಾಗಿ ಅಭಿವೃದ್ಧಿ ಪಡಿಸಲು 14 ಕೋ.ರೂ. ಅಂದಾಜು ಪಟ್ಟಿ ಯನ್ನು ಸರಕಾರಕ್ಕೆ ಕಳುಹಿಸಲಾಗಿದೆ. ಸಿಂಥೆಟಿಕ್‌ ಟ್ರ್ಯಾಕ್‌ಗೆ 3 ಕೋ. ರೂ. ಅನುದಾನ ಮೀಸಲಿರಿಸಲಾಗಿದೆ. ಈಗಾಗಲೇ ಪ್ರಥಮ ಹಂತದ 60 ಲಕ್ಷ ರೂ. ಬಿಡುಗಡೆಯಾ ಗಿದೆ. ಟೆಂಡರ್‌ ಪ್ರಕ್ರಿಯೆ ಹಂತದ ಲ್ಲಿದೆ. ಮುಂದಿನ ಜನವರಿ ಒಳಗೆ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ಶಾಸಕಿ ಶಕುಂತಳಾ ಟಿ. ಶೆಟ್ಟಿ ಹೇಳಿದರು.

ಟಾಪ್ ನ್ಯೂಸ್

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Kambala

Kambala; ಬೆಂಗಳೂರು ಕಂಬಳ ಈ ಬಾರಿ ಅನುಮಾನ

yahia-Sinwar

Terrorist Organization: ಹಮಾಸ್‌ ಉಗ್ರ ನಾಯಕ ಯಾಹ್ಯಾ ಸಿನ್ವರ್‌ ಹತ್ಯೆ

1-horoscope

Daily Horoscope: ಉದ್ಯೋಗ ಕ್ಷೇತ್ರದಲ್ಲಿ ಗೌರವ ಹಾಗೂ ಆದಾಯ ವೃದ್ಧಿ

Pro Kabaddi League: ಇಂದಿನಿಂದ ಕಬಡ್ಡಿ ಮಹಾಜಾತ್ರೆ

Pro Kabaddi League: ಇಂದಿನಿಂದ ಕಬಡ್ಡಿ ಮಹಾಜಾತ್ರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3

Puttur: ಅಪರಿಚಿತರಿಂದ ಬಾಲಕನಿಗೆ ಹಲ್ಲೆ

16

Belthangady: ಸಾರಿಗೆ ಬಸ್‌ ಢಿಕ್ಕಿ: ಪಾದಚಾರಿ ಗಂಭೀರ

17

Belthangady: ಕಾಶಿಬೆಟ್ಟು: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು

5

Maninalkur: ಶಿಥಿಲಾವಸ್ಥೆಯಲ್ಲಿ ಹಳೆ ಶಾಲಾ ಕಟ್ಟಡ; ಕ್ರಮಕ್ಕೆ ಆಗ್ರಹ

4

Puttur: ಬೀದಿ ಬದಿ ವ್ಯಾಪಾರಿಗಳಿಗೆ ನೆರವಾದ ಪಿಎಂ ಸ್ವನಿಧಿ ಯೋಜನೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Kambala

Kambala; ಬೆಂಗಳೂರು ಕಂಬಳ ಈ ಬಾರಿ ಅನುಮಾನ

yahia-Sinwar

Terrorist Organization: ಹಮಾಸ್‌ ಉಗ್ರ ನಾಯಕ ಯಾಹ್ಯಾ ಸಿನ್ವರ್‌ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.