ರಾಜಕೀಯಕ್ಕೆ ಮಹದಾಯಿ ಬಳಸಿಕೊಳ್ಬೇಡಿ​​​​​​​

Team Udayavani, Nov 28, 2017, 6:25 AM IST

Ban2811170728.jpg

ನರಗುಂದ: “ಮೂರು ವರ್ಷಗಳಿಂದ ತೆಪ್ಪಗಿದ್ದ ಬಿ.ಎಸ್‌.ಯಡಿಯೂರಪ್ಪ ಇದೀಗ ಒಂದೇ ತಿಂಗಳಿನಲ್ಲಿ ಕಳಸಾ-ಬಂಡೂರಿ ನೀರು ಹರಿಸಲು ಮುಂದಾಗಿರುವುದನ್ನು ಸ್ವಾಗತಿಸುತ್ತೇವೆ. ನೀರು ತರುವ ಪ್ರಯತ್ನ ಮಾಡಿ, ಆದರೆ ಅದನ್ನು ರಾಜಕೀಯಕ್ಕೆ ಬಳಸಿಕೊಳ್ಳಬೇಡಿ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಸೋಮವಾರ ತಾಲೂಕು ಕ್ರೀಡಾಂಗಣದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಸರ್ವಪಕ್ಷ ನಿಯೋಗದಲ್ಲಿ ತೆರಳಿದಾಗ ಕುಡಿಯಲು ನೀರು ಕೊಡಿ ಎಂದು ಪ್ರಧಾನಿಗೆ ಕೈಮುಗಿದು ಪ್ರಾರ್ಥಿಸಿದೆ. ಆಗ ನಾಡಿನ ಬಿಜೆಪಿ ನಾಯಕರು ತುಟಿ ಪಿಟಕ್‌ ಎನ್ನಲಿಲ್ಲ. ಕುಡಿವ ನೀರು ಕೇಳಿದರೆ ಅಲ್ಲಿನ ಪ್ರತಿಪಕ್ಷದವರನ್ನು ಒಪ್ಪಿಸಿಕೊಂಡು ಬನ್ನಿ ಎಂದು ಒಕ್ಕೂಟ ವ್ಯವಸ್ಥೆ ಮುಖ್ಯಸ್ಥರಾದ ಪ್ರಧಾನಿಯೊಬ್ಬರು ಹೇಳುವುದು ದೇಶದ ಇತಿಹಾಸದಲ್ಲೇ ಮೊದಲು.ಈಗಾಗಲೇ ನ್ಯಾಯಾಧಿಕರಣದ ಅವ ಧಿ ವಿಸ್ತರಿಸಿ 2018ರ ಆಗಸ್ಟ್‌ನಲ್ಲಿ ಅಂತಿಮ
ತೀರ್ಪು ಕೊಡಬೇಕು ಎಂಬ ತೀರ್ಮಾನ ವಾಗಿದೆ. ಅಲ್ಲಿ ನಮಗೆ ನ್ಯಾಯ ಸಿಗುವ ವಿಶ್ವಾಸವಿದೆ ಎಂದರು.

ಯಡಿಯೂರಪ್ಪನವರ ಕಾಂಗ್ರೆಸ್‌ ಮುಕ್ತ ಕರ್ನಾಟಕ ಉದ್ದೇಶ ದೇವರಾಣೆಗೂ ಸಾಧ್ಯವಿಲ್ಲ. ಮೆಕ್ಕೆಜೋಳ ಖರೀದಿಗೆ ನಾವು ಸಿದಟಛಿರಿದ್ದೇವೆ. ಆದರೆ ನಾವು ಖರೀದಿ ಮಾಡಿ ಪಡಿತರ ಮೂಲಕ ಮಾರಾಟ ಮಾಡಬೇಕೆಂಬ ಕೇಂದ್ರ ಸರ್ಕಾರದ ನಿಯಮಾವಳಿ ಇದೆ. ಈ ನಿಯಮ ತೆಗೆದು ಹಾಕುವಂತೆ ಒತ್ತಾಯ ಮಾಡಿದ್ದೇವೆ. ಆದರೆ ಇದಕ್ಕೆ ಕೇಂದ್ರದ ಒಪ್ಪಿಗೆಯಿಲ್ಲ. ಆದರೂ ನಾವು ಮೆಕ್ಕೆಜೋಳ ಖರೀದಿ ಮಾಡುವುದು ನಿಶ್ಚಿತ. ಈ ಬಗ್ಗೆ ಯಡಿಯೂರಪ್ಪನವರು ಕೇಂದ್ರದ ಮೇಲೆ ಒತ್ತಡ ಹೇರಲು ಸಾಧ್ಯವೇ ಎಂದು ಪ್ರಶ್ನಿಸಿದರು. ಇಂಧನ ಸಚಿವ ಡಿ.ಕೆ.ಶಿವಕುಮಾರ ಮಾತನಾಡಿ, ಬಿಜೆಪಿ ನಾಯಕರು ಪರಿವರ್ತನಾ ಯಾತ್ರೆ ಯುದ್ದಕ್ಕೂ ಸುಳ್ಳಿನ ಕಂತೆ ಕಟ್ಟುತ್ತ ಪ್ರವಾಸ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ಪ್ರಧಾನಿ ಮಧ್ಯಸ್ಥಿಕೆಯೇ ಪರಿಹಾರ
ನರಗುಂದ
: ಕೇಂದ್ರ ಸರ್ಕಾರ ಮತ್ತು ಗೋವಾ, ಮಹಾರಾಷ್ಟ್ರ ಸರ್ಕಾರಗಳಿಗೆ ಹಲವಾರು ಬಾರಿ ಪತ್ರ ಬರೆದರೂ ಯಾವುದೇ ಸ್ಪಂದನೆ ದೊರಕುತ್ತಿಲ್ಲ. ಪ್ರಧಾನಿ ಮಧ್ಯಸ್ಥಿಕೆಯಿಂದ ಮಾತ್ರ ಮಹದಾಯಿ ವಿವಾದ ಬಗೆಹರಿಸಲು ಸಾಧ್ಯ ಎಂದು ಸಿಎಂ ಸಿದ್ದರಾಮಯ್ಯ ಮಹದಾಯಿ ಹೋರಾಟಗಾರರಿಗೆ ಸ್ಪಷ್ಟಪಡಿಸಿದ್ದಾರೆ. ಮನವಿ ಅರ್ಪಣೆ ವೇಳೆ ರೈತರೊಂದಿಗೆ ಮಾತನಾಡಿದ ಅವರು, ಈಗ ಯಡಿಯೂರಪ್ಪನವರು ಒಂದು ತಿಂಗಳೊಳಗೆ ವಿವಾದ ಬಗೆಹರಿಸುವ ಭರವಸೆ ನೀಡಿದ್ದಾರೆ. ಕಾದು ನೋಡೋಣ. ಅವರು ಎಲ್ಲಿ ಕರೆದರೂ ಹೋಗಲು ನಾನು ಸಿದಟಛಿನಿದ್ದೇನೆ. ಪ್ರಧಾನಿ ಮೇಲೆ ಒತ್ತಡ ಹಾಕುವ ಕೆಲಸವನ್ನು ಬಿಜೆಪಿ ನಾಯಕರು ಮಾಡಲಿ ಎಂದರು. ಸಚಿವ ವಿನಯ ಕುಲಕರ್ಣಿ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಲಿಂಗಾಯತ ಧರ್ಮ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ವಿನಯ ಕುಲಕರ್ಣಿ ಅವರ ಹೆಸರು ಕೆಡಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ ಎಂದು ದೂರಿದರು.

ಹಿಂದೆ ಪ್ರಧಾನಿಯಿದ್ದಾಗ ಇಂದಿರಾ ಗಾಂಧಿ  ಅವರು ಜಲ ವಿವಾದಗಳನ್ನು ಮಧ್ಯಸ್ಥಿಕೆ ವಹಿಸಿ ಪರಿಹರಿಸಿದ ಉದಾಹರಣೆಗಳಿವೆ. ಆದರೆ ಅವರ ವಿಚಾರಧಾರೆ ಪ್ರಧಾನಿ ಮೋದಿ ಅವರಿಗೇಕಿಲ್ಲ? ಗಂಗಾ, ನರ್ಮದಾ ವಿಷಯದಲ್ಲಿ ಸ್ವತಂತ್ರ ನಿರ್ಧಾರ ತೆಗೆದುಕೊಂಡ ಮಾದರಿಯಲ್ಲಿ ಮಹದಾಯಿ ವಿವಾದವನ್ನೂ ಬಗೆಹರಿಸಲು ಸಾಧ್ಯವಿದೆ. ಇದೀಗ ಯಡಿಯೂರಪ್ಪನವರು ವಿವಾದ ಬಗೆಹರಿಸುವ ಭರವಸೆ ನೀಡಿದ್ದಾರೆ. ಇದನ್ನು ಸ್ವಾಗತಿಸುತ್ತೇವೆ. ಡಿ.15ರ ಬಳಿಕ ಎಲ್ಲರೂ ಸೇರಿ ನಿರ್ಧಾರ ತೆಗೆದುಕೊಂಡು ಮುಂದಿನ ಹೆಜ್ಜೆ ಇಡುತ್ತೇವೆ 
– ಎಂ.ಬಿ. ಪಾಟೀಲ, ಜಲ ಸಂಪನ್ಮೂಲ ಸಚಿವ

ಟಾಪ್ ನ್ಯೂಸ್

maharstra

Election Results: ಮಹಾರಾಷ್ಟ್ರ, ಝಾರ್ಖಂಡ್‌ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

BYV-yathnal

BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?

Vikram-Naxal-Mud

Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!

peethabailu-1

Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ

Egg-Students

Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!

Naxal-encounter-Vikram-1

Naxal Activity: ಮಲೆನಾಡಿನವರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದ ವಿಕ್ರಂ ಗೌಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

BYV-yathnal

BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?

Vikram-Naxal-Mud

Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!

peethabailu-1

Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ

Egg-Students

Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

maharstra

Election Results: ಮಹಾರಾಷ್ಟ್ರ, ಝಾರ್ಖಂಡ್‌ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

BYV-yathnal

BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?

Vikram-Naxal-Mud

Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!

peethabailu-1

Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.