ನಕ್ಸಲ್ ದಾಳಿ: ರಾಜ್ಯದ ಯೋಧ ಹುತಾತ್ಮ
Team Udayavani, Nov 28, 2017, 6:00 AM IST
ಧಾರವಾಡ: ಛತ್ತೀಸ್‌ಗಢದಲ್ಲಿ ನಕ್ಸಲರು ನಡೆಸಿದ ಗುಂಡಿನ ದಾಳಿಯಲ್ಲಿ ತಾಲೂಕಿನ ಮನಗುಂಡಿ ಗ್ರಾಮದ ಸಿಆರ್‌ಪಿಎಫ್ ಯೋಧ ಮಂಜುನಾಥ ಶಿವಲಿಂಗಪ್ಪ ಜಕ್ಕನವರ (31) ಹುತಾತ್ಮರಾಗಿದ್ದಾರೆ.
ಛತ್ತೀಸ್‌ಗಢದಲ್ಲಿ ಸಿಆರ್‌ಪಿಎಫ್‌ನ 133 ಕೋಬ್ರಾ ಬಟಾಲಿಯನ್‌ದಲ್ಲಿ ಸೇವೆ ಸಲ್ಲಿಸುತ್ತಿದ್ದ ಇವರು ತಲ್ವಾರ್‌ಘಡ್‌ನಲ್ಲಿ ನಡೆಯುತ್ತಿದ್ದ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು. ಭಾನುವಾರ ಸಿಆರ್‌ಪಿಎಫ್ ಶಿಬಿರದ ಮೇಲೆ ನಕ್ಸಲರು ಹಠಾತ್ ದಾಳಿ ನಡೆಸಿದ್ದರಿಂದ ಕೆಲ ಯೋಧರು ಹುತಾತ್ಮರಾಗಿದ್ದರು. ಅವರಲ್ಲಿ ಮಂಜುನಾಥ ಕೂಡ ಒಬ್ಬರಾಗಿದ್ದಾರೆ.
ಹುತಾತ್ಮ ಯೋಧ ಮಂಜುನಾಥ ಅವರು, ತಂದೆ ಶಿವಲಿಂಗಪ್ಪ, ತಾಯಿ ರತ್ನವ್ವ, ಪತ್ನಿ ಕವಿತಾ (ಲಲಿತಾ) ಮತ್ತು ಎರಡು ಮಕ್ಕಳನ್ನು ಅಗಲಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ತಹಶೀಲ್ದಾರ ಪ್ರಕಾಶ ಕುದರಿ, ಕಂದಾಯ ನಿರೀಕ್ಷಕ ಕೆ.ಶ್ರೀಧರ, ಗ್ರಾಮ ಲೆಕ್ಕಾಧಿ ಕಾರಿ ಅಶೋಕ ಮಾಡಳ್ಳಿ ಮಂಜುನಾಥನ ಕುಟುಂಬದವರನ್ನು ಭೇಟಿ ನೀಡಿ, ಸಾಂತ್ವನ ಹೇಳಿದ್ದಾರೆ.
ಗ್ರಾಮದಲ್ಲೇ ಒಂದು ಕಡೆ ಜಾಗ ಒದಗಿಸಿ, ಅಲ್ಲೇ ಮಂಜುನಾಥನ ಅಂತಿಮ ಸಂಸ್ಕಾರ ಮಾಡಿ ಸ್ಮಾರಕ ಕಟ್ಟುತ್ತೇವೆ ಎಂಬುದಾಗಿ ಗ್ರಾಮದ ಹಿರಿಯರು ತಹಶೀಲ್ದಾರ್‌ಗೆ ಮನವಿ ಮಾಡಿದರು. ಆದರೆ ಇದಕ್ಕೊಪ್ಪದ ತಹಶೀಲ್ದಾರರು, ಗ್ರಾಮದಲ್ಲಿ ಅಂತಿಮ ಸಂಸ್ಕಾರ ಮಾಡಲು ಬರುವುದಿಲ್ಲ. ಹೀಗಾಗಿ ರುದ್ರಭೂಮಿಯಲ್ಲೇ ಅಂತಿಮ ಸಂಸ್ಕಾರ ಮಾಡಿ, ಸ್ಮಾರಕ ಕಟ್ಟಲು ಗ್ರಾಮದಲ್ಲಿ ಜಾಗ ನೀಡುತ್ತೇವೆ ಎಂಬುದಾಗಿ ತಿಳಿಸಿದ್ದಾರೆ. ಮೃತ ಯೋಧನ ಪಾರ್ಥಿವ ಶರೀರ ಮಂಗಳವಾರ ಬೆಳಿಗ್ಗೆ ಮನಗುಂಡಿ ಗ್ರಾಮಕ್ಕೆ ಆಗಮಿಸುವ ನಿರೀಕ್ಷೆ ಇದೆ.
ಕುಟುಂಬದ ಹಿನ್ನೆಲೆ: ಮನಗುಂಡಿ ಗ್ರಾಮದ ಶಿವಲಿಂಗಪ್ಪ ಹಾಗೂ ರತ್ನವ್ವ ದಂಪತಿಯ 2ನೇ ಪುತ್ರನೇ ಮಜುನಾಥ. 3ನೇ ಮಗ ಉಳವಪ್ಪ ಸಹ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಈ ದಂಪತಿಗೆ ಒಟ್ಟು ನಾಲ್ವರು ಪುತ್ರರು, ಇಬ್ಬರು ಪುತ್ರಿಯರು ಇದ್ದು, ಈ ಪೈಕಿ ಇಬ್ಬರು ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು.
ಧಾರವಾಡದ ಅಂಜುಮನ್ ಕಾಲೇಜಿನಲ್ಲಿ ಬಿಎ ಪದವಿ ಮುಗಿಸಿದ್ದ ಮಂಜುನಾಥನಿಗೆ ಸೇನೆ ಸೇರುವ ಇಚ್ಚೆ ಇತ್ತು. ಅದರಂತೆ 2005ರಲ್ಲಿ ಸಿಆರ್‌ಪಿಎಫ್ ಸೇನೆಗೆ ಆಯ್ಕೆಯಾಗಿದ್ದರು. ಶಿವಮೊಗ್ಗ ಮೂಲದ ಕವಿತಾ ಎಂಬುವರನ್ನು ಮದುವೆ ಆಗಿದ್ದು, ಗಣೇಶ ಮತ್ತು ಲಕೀÒ$¾ಎಂಬ ಇಬ್ಬರು ಮಕ್ಕಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ
Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ
Kundapura: “ಅವರು ಪ್ರತೀ ದಿನ ಫೋನ್ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.