ಯಾವ ದುರುದ್ದೇಶವೂ ಇಲ್ಲ: ಗೋಪಾಲ್ ಜಿ.
Team Udayavani, Nov 28, 2017, 10:58 AM IST
ಉಡುಪಿ: ಗೋರಕ್ಷಣೆಗಾಗಿ ನಾವು ಶಿವಾಜಿಯ ಆಶಯದಂತೆ ನಡೆದುಕೊಳ್ಳುತ್ತೇವೆ ಎನ್ನುವ ಚಿಂತನೆ ನಡೆಸಿದ್ದೇವೆ. ಗೋಹತ್ಯೆ ಸಂಪೂರ್ಣ ನಿಲ್ಲಬೇಕು. ಗೋ ರಕ್ಷಕರ ಮೇಲೆಯೇ ಅನೇಕ ಬಾರಿ ಹಲ್ಲೆಯಾಗಿದೆ. ರಕ್ಷಣೆ ಮಾಡುವವರ ಮೇಲೆಯೇ ದಾಳಿಯಾದಾಗ ನಾವೇನು ಮಾಡಬೇಕು? ಹೀಗಾಗಿ ನಾವು ಶಿವಾಜಿ ಮಹಾರಾಜರ ಆಶಯ ಪಾಲನೆ ಮಾಡಬೇಕಾಗುತ್ತದೆ. ಆದರೆ ಅದರಲ್ಲಿ ಬೇರೆ ಯಾವ ದುರುದ್ದೇಶವೂ ಇಲ್ಲ ಎಂದು ವಿಶ್ವ ಹಿಂದೂ ಪರಿಷದ್ ಕ್ಷೇತ್ರೀಯ ಸಂಘಟನ ಕಾರ್ಯದರ್ಶಿ ಗೋಪಾಲ್ ಜಿ. ತಿಳಿಸಿದ್ದಾರೆ.
ರವಿವಾರ ಹಿಂದೂ ಸಮಾಜೋತ್ಸವದಲ್ಲಿ ಗೋಪಾಲ್ ಅವರ ಭಾಷಣಕ್ಕೆ ಸಂಬಂಧಿಸಿದಂತೆ ಸೋಮವಾರ ನಗರದಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರತಿಯೊಂದು ಧರ್ಮದವರಿಗೂ ತಮ್ಮ ಧಾರ್ಮಿಕ ವಿಚಾರಗಳನ್ನು ಪ್ರತಿಪಾದಿಸುವ ಸ್ವಾತಂತ್ರ್ಯವಿದೆ. ಅದು ಕ್ರಿಯೆಗೆ ತಕ್ಕ ಪ್ರತಿಕ್ರಿಯೆ ಹೊರತು ಬೇರೆ ಉದ್ದೇಶವಲ್ಲ. ಜನಾಕರ್ಷಣೆಗಾಗಿ ನಾವು ಹೇಳಿಕೆ ನೀಡುವುದಿಲ್ಲ ಎಂದರು.
ರಾಜ್ಯದ ಜನತೆಗೆ ಗೋಹತ್ಯೆ ನಿಷೇಧ ಆಗಬೇಕು ಎಂಬ ಆಸೆಯಿದೆ. ಗೋವುಗಳನ್ನು ಮಾರಾಟ ಮಾಡುವುದಾದರೆ ಕೃಷಿಕರಿಗೆ ಮಾರಾಟ ಮಾಡಿ, ಕಸಾಯಿ ಖಾನೆಗೆ ಕೊಡಬೇಡಿ ಎನ್ನುತ್ತಿದ್ದೇವೆ. ನಿಷೇಧಕ್ಕೆ ಸಂಬಂಧಿಸಿದಂತೆ ಸರಕಾರ ಕಾನೂನು ಪಾಲನೆ ಮಾಡುವಲ್ಲಿ ವಿಫಲವಾಗಿದೆ. ಇದರಿಂದಾಗಿ ಗೋಹತ್ಯೆ, ದಾಳಿ ನಡೆಯುತ್ತಿದೆ. ಸರಕಾರವೇ ಕಟ್ಟುನಿಟ್ಟಿನ ಕಾನೂನು ರೂಪಿಸಿದರೆ ಸಮಸ್ಯೆಯಿಲ್ಲ ಎಂದರು.
ಜಾತೀಯತೆ, ಅಸ್ಪೃಶ್ಯತೆಗೆ ಸಂಬಂಧಿಸಿದ ಬದಲಾವಣೆ ಆಗುತ್ತಿದೆ. ಏಕಾಏಕಿ ಬದಲಾವಣೆ ಸಾಧ್ಯವಿಲ್ಲ. ದೇವಸ್ಥಾನಗಳಿಗೆ ಎಲ್ಲರಿಗೂ ಮುಕ್ತ ಅವಕಾಶ ನೀಡುವಂತೆ ಎಲ್ಲರಿಗೂ ತಿಳಿಸಿದ್ದೇವೆ. ಬದಲಾವಣೆ ಖಂಡಿತ ಆಗುತ್ತದೆ. ಜನಸಂಖ್ಯೆ ಶಾಪವಲ್ಲ, ಶಕ್ತಿ. ಯುವಸಮು
ದಾಯ ಹೆಚ್ಚಾದಂತೆ ದೇಶ ಬಲಿಷ್ಠವಾಗುತ್ತದೆ. ಹಿಂದೆ ಜನಸಂಖ್ಯೆ ಜಾಸ್ತಿಯಾಗುವುದು ಶಾಪವಾಗಿತ್ತು. ಈಗ ಶಕ್ತಿಯಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಗೀತಾರ್ಥ ಚಿಂತನೆ-130: “ನಂದಲ್ಲ, ನಂದಲ್ಲ’ ಎಂಬ ನಿರಂತರ ಅನುಸಂಧಾನ ಮುಖ್ಯ
Buntakal Technical College: ಅಂತಾರಾಷ್ಟ್ರೀಯ ಸಮ್ಮೇಳನ ;ವಿದ್ಯಾರ್ಥಿ ವಿಚಾರ ಸಂಕಿರಣ
CT Ravi ಬಂಧನ ಪ್ರಕರಣ; ಗೃಹ ಸಚಿವರು ಸ್ಪಷ್ಟನೆ ನೀಡಲಿ: ಕೋಟ
Kaup town: ಟ್ರಾಫಿಕ್ ಒತ್ತಡ, ಪಾರ್ಕಿಂಗ್ ಕಿರಿಕಿರಿ
Udupi: ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ ಸಾಬೀತು; ಆರೋಪಿಗೆ 20 ವರ್ಷ ಜೈಲು ಶಿಕ್ಷೆ ಪ್ರಕಟ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ
TuluMovie; ತೆರೆಗೆ ಬರಲು ಸಿದ್ದವಾಯ್ತು ಮಿಡಲ್ ಕ್ಲಾಸ್ ಫ್ಯಾಮಿಲಿ: ರಿಲೀಸ್ ದಿನಾಂಕ ಬಂತು
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.