ನಿಖಿಲ್‌ ಹೊಸ ಚಿತ್ರ ಸೀತಾರಾಮ ಕಲ್ಯಾಣ

Team Udayavani, Nov 28, 2017, 11:07 AM IST

nikil.jpg

“ಕುರುಕ್ಷೇತ್ರ’ದ ನಂತರ ನಿಖಿಲ್‌, ಡ್ಯಾನ್ಸ್‌ ಮಾಸ್ಟರ್‌ ಹರ್ಷ ನಿರ್ದೇಶನದ ಚಿತ್ರವೊಂದರಲ್ಲಿ ನಟಿಸಲಿದ್ದಾರೆ ಎಂಬ ಸುದ್ದಿ ಹಲವು ದಿನಗಳಿಂದ ಕೇಳಿ ಬರುತ್ತಲೇ ಇತ್ತು. ಚಿತ್ರ ಯಾವಾಗ ಶುರುವಾಗುತ್ತದೆ, ಚಿತ್ರದ ಹೆಸರೇನು, ಯಾರೆಲ್ಲಾ ಇರುತ್ತಾರೆ ಎಂಬ ಪ್ರಶ್ನೆಗಳು ಇದ್ದೇ ಇದ್ದವು. ಈಗ ಈ ಎಲ್ಲಾ ಪ್ರಶ್ನೆಗಳಿಗೂ ಉತ್ತರ ಸಿಕ್ಕಿದೆ. ನಿಖಿಲ್‌ ಅಭಿನಯದ ಹೊಸ ಚಿತ್ರಕ್ಕೆ “ಸೀತಾರಾಮ ಕಲ್ಯಾಣ’ ಎಂಬ ಹೆಸರಿಡಲಾಗಿದ್ದು, ಚಿತ್ರದ ಮುಹೂರ್ತ ನಾಳೆ (ನವೆಂಬರ್‌ 29ಕ್ಕೆ) ಬಸವನಗುಡಿಯಲ್ಲಿರುವ ಕಾರಂಜಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ನಡೆಯಲಿದೆ.

ಆ ನಂತರ ಡಿಸೆಂಬರ್‌ 10ರಿಂದ ಚಿತ್ರೀಕರಣ ಪ್ರಾರಂಭವಾಗಲಿದೆ. ಹೌದು, ನಿಖಿಲ್‌ ಅಭಿನಯದ “ಸೀತಾರಾಮ ಕಲ್ಯಾಣ’ ಚಿತ್ರಕ್ಕೆ ಚಾಲನೆ ಸಿಕ್ಕಿದ್ದು, ನಾಳೆ ಚಿತ್ರದ ಮುಹೂರ್ತ ನಡೆಯಲಿದೆ. ಈ ಚಿತ್ರವನ್ನು ಚೆನ್ನಾಂಬಿಕಾ ಫಿಲಂಸ್‌ನಡಿ ಅನಿತಾ ಕುಮಾರಸ್ವಾಮಿ ನಿರ್ಮಿಸಿದರೆ, ಹರ್ಷ ನಿರ್ದೇಶಿಸಲಿದ್ದಾರೆ. ಇನ್ನು ಹರ್ಷ ಅವರ “ಅಂಜನೀಪುತ್ರ’ದಲ್ಲಿ ಜೊತೆಯಾಗಿದ್ದ ಛಾಯಾಗ್ರಾಹಕ ಸ್ವಾಮಿ ಮತ್ತು ಸಂಗೀತ ನಿರ್ದೇಶಕ ರವಿ ಬಸ್ರೂರು, ಈ ಚಿತ್ರದಲ್ಲೂ ಜೊತೆಯಾಗುತ್ತಿದ್ದಾರೆ.

ರಾಮ್‌-ಲಕ್ಷ್ಮಣ್‌ ಸಾಹಸ ಸಂಯೋಜನೆ ಮಾಡಿದರೆ, ಸುನೀಲ್‌ ಗೌಡ ಕಾರ್ಯಕಾರಿ ನಿರ್ಮಾಪಕರಾಗಿ ಕೆಲಸ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಹರ್ಷ ಜೊತೆಗೆ ಹರೀಶ್‌ ಎನ್ನುವವರು ಕಥೆ ಮತ್ತು ಚಿತ್ರಕಥೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಹಿಂದೆ ಚೆನ್ನಾಂಬಿಕಾ ಫಿಲಮ್ಸ್‌ನಡಿ “ಸೂರ್ಯವಂಶ’ ಮತ್ತು “ಚಂದ್ರ ಚಕೋರಿ’ ತರಹದ ಕೌಟುಂಬಿಕ ಮತ್ತು ಗ್ರಾಮೀಣ ಸೊಗಡಿನ ಚಿತ್ರಗಳು ಬಿಡುಗಡೆಯಾಗಿದ್ದವು. “ಸೀತಾರಾಮ ಕಲ್ಯಾಣ’ ಸಹ ಅದೇ ಮಾದರಿಯ ಚಿತ್ರವಂತೆ.

ಇಲ್ಲಿ ಸೆಂಟಿಮೆಂಟ್‌ ಜೊತೆಗೆ ಆ್ಯಕ್ಷನ್‌ ಸಹ ಜೋರಾಗಿರಲಿದೆಯಂತೆ. ಬೆಂಗಳೂರು, ಮೈಸೂರು, ಮಂಡ್ಯ ಮುಂತಾದ ಕಡೆಗಳಲ್ಲಿ ಚಿತ್ರೀಕರಣ ನಡೆಯಲಿದೆಯಂತೆ. ಇನ್ನು ಚಿತ್ರದಲ್ಲಿ ಏಳೆಂಟು ವಿಶೇಷ ಸೆಟ್‌ಗಳನ್ನು ಹಾಕಿ, ಅಲ್ಲೇ ಚಿತ್ರೀಕರಣ ಮಾಡಲಾಗುತ್ತದಂತೆ. “ಸೀತಾರಾಮ ಕಲ್ಯಾಣ’ ಚಿತ್ರಕ್ಕೆ ಸದ್ಯಕ್ಕೆ ಆಯ್ಕೆಯಾಗಿರುವುದು ಇಬ್ಬರೇ ಕಲಾವಿದರು. ಒಬ್ಬರು ನಿಖಿಲ್‌ ಆದರೆ, ಇನ್ನೊಬ್ಬರು ಅವರ ತಂದೆ ಪಾತ್ರ ಮಾಡುತ್ತಿರುವ ಶರತ್‌ ಕುಮಾರ್‌. ಮಿಕ್ಕಂತೆ ಕಲಾವಿದರ ಆಯ್ಕೆ ನಡೆಯುತ್ತಿದ್ದು, ಕೆಲವೇ ದಿನಗಳಲ್ಲಿ ಚಿತ್ರದ ನಾಯಕಿ ಹಾಗೂ ಇತರೆ ಕಲಾವಿದರ ಆಯ್ಕೆ ಪೂರ್ತಿಯಾಗಲಿದೆ. 

ಡಿ 16ಕ್ಕೆ ಅಭಿಮನ್ಯು ಟೀಸರ್‌: ಮುನಿರತ್ನ ನಿರ್ಮಾಣದ “ಕುರುಕ್ಷೇತ್ರ’ ಚಿತ್ರದಲ್ಲಿ ನಿಖಿಲ್‌ ಕುಮಾರ್‌, ಅಭಿಮನ್ಯು ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಇದುವರೆಗೂ ಸುಮಾರು 70 ದಿನಗಳ ಕಾಲ ಚಿತ್ರೀಕರಣದಲ್ಲಿ  ಭಾಗವಹಿಸಿದ್ದಾಗಿದೆ. ಅಭಿಮನ್ಯುವಿನ ಟೀಸರ್‌ ಕಟ್‌ ಮಾಡಲಾಗುತ್ತಿದ್ದು, ಡಿಸೆಂಬರ್‌ 16ರಂದು (ಅಂದು ನಿಖಿಲ್‌ ತಂದೆ ಎಚ್‌.ಡಿ. ಕುಮಾರಸ್ವಾಮಿ ಅವರ ಹುಟ್ಟುಹಬ್ಬ) ಬಿಡುಗಡೆಯಾಗುತ್ತಿದೆ. ಈ ಟೀಸರ್‌ ಮೂಲಕ ತಮ್ಮ ತಂದೆಯ ಹುಟ್ಟುಹಬ್ಬಕ್ಕೆ ಗಿಫ್ಟ್ ಕೊಡಲು ಹೊರಟಿದ್ದಾರೆ ನಿಖಿಲ್‌.

ಟಾಪ್ ನ್ಯೂಸ್

Chalavadi

Ambedkar Row: ಕಾಂಗ್ರೆಸ್‌ ತಿಪ್ಪೆ ಇದ್ದಂತೆ, ಕೆದಕಿದಷ್ಟೂ ದುರ್ವಾಸನೆ ಬರುತ್ತೆ: ಛಲವಾದಿ

Congress: ಚುನಾವಣಾ ನಿಯಮ ತಿದ್ದುಪಡಿ ಪ್ರಶ್ನಿಸಿ ಕಾಂಗ್ರೆಸ್‌ ಸುಪ್ರೀಂ ಕೋರ್ಟ್‌ ಗೆ

Congress: ಚುನಾವಣಾ ನಿಯಮ ತಿದ್ದುಪಡಿ ಪ್ರಶ್ನಿಸಿ ಕಾಂಗ್ರೆಸ್‌ ಸುಪ್ರೀಂ ಕೋರ್ಟ್‌ ಗೆ

Jasprit Bumrah ಬೌಲಿಂಗ್‌ ಶೈಲಿಯನ್ನೇ ಶಂಕಿಸಿದ ಆಸೀಸ್‌ ಮಾಧ್ಯಮಗಳು!

Jasprit Bumrah ಬೌಲಿಂಗ್‌ ಶೈಲಿಯನ್ನೇ ಶಂಕಿಸಿದ ಆಸೀಸ್‌ ಮಾಧ್ಯಮಗಳು!

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

High-Court

High Court: ಕಬ್ಬಿಣದ ಅದಿರಿಗೆ ದರ ನಿಗದಿ: ಕೇಂದ್ರ, ರಾಜ್ಯಕ್ಕೆ ನೋಟಿಸ್‌

Nagendra-ED

Valmiki Nigama Scam: ಪ್ರಕರಣ ರದ್ದು ಕೋರಿ ಮಾಜಿ ಸಚಿವ ನಾಗೇಂದ್ರ ಹೈಕೋರ್ಟ್‌ಗೆ

CS-Shadakshari

Govt. Employees Association: ನನ್ನ ಸೋಲಿಸಲು ರಾಜಕೀಯ ಷಡ್ಯಂತ್ರ: ಸಿ.ಎಸ್‌.ಷಡಾಕ್ಷರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

OTT Release Date: ಸೂಪರ್‌ ಹಿಟ್‌ ʼಭೈರತಿ ರಣಗಲ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

OTT Release Date: ಸೂಪರ್‌ ಹಿಟ್‌ ʼಭೈರತಿ ರಣಗಲ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Lacchi Kannada Movie: ಲಚ್ಚಿ ಚಿತ್ರಕ್ಕೆ ಪ್ರಶಸ್ತಿ ಗರಿ

Lacchi Kannada Movie: ಲಚ್ಚಿ ಚಿತ್ರಕ್ಕೆ ಪ್ರಶಸ್ತಿ ಗರಿ

14

Chowkidar Movie: ಶೂಟಿಂಗ್‌ ಮುಗಿಸಿದ ಚೌಕಿದಾರ್‌

KD Movie: ಪ್ರೇಮ್‌ ಕೆಡಿಗೆ ಅಜಯ್‌ ದೇವಗನ್‌ ಸಾಥ್‌; ಶಿವನ ಹಾಡಿಗೆ ಧ್ರುವ ಭರ್ಜರಿ ಸ್ಟೆಪ್ಸ್

KD Movie: ಪ್ರೇಮ್‌ ಕೆಡಿಗೆ ಅಜಯ್‌ ದೇವಗನ್‌ ಸಾಥ್‌; ಶಿವನ ಹಾಡಿಗೆ ಧ್ರುವ ಭರ್ಜರಿ ಸ್ಟೆಪ್ಸ್

Rajendra Babu: ನಟರಿಗೆ ಪ್ಯಾನ್‌ ಇಂಡಿಯಾ ಭೂತ ಹಿಡಿದಿದೆ: ಬಾಬು

Rajendra Babu: ನಟರಿಗೆ ಪ್ಯಾನ್‌ ಇಂಡಿಯಾ ಭೂತ ಹಿಡಿದಿದೆ: ಬಾಬು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Chalavadi

Ambedkar Row: ಕಾಂಗ್ರೆಸ್‌ ತಿಪ್ಪೆ ಇದ್ದಂತೆ, ಕೆದಕಿದಷ್ಟೂ ದುರ್ವಾಸನೆ ಬರುತ್ತೆ: ಛಲವಾದಿ

Congress: ಚುನಾವಣಾ ನಿಯಮ ತಿದ್ದುಪಡಿ ಪ್ರಶ್ನಿಸಿ ಕಾಂಗ್ರೆಸ್‌ ಸುಪ್ರೀಂ ಕೋರ್ಟ್‌ ಗೆ

Congress: ಚುನಾವಣಾ ನಿಯಮ ತಿದ್ದುಪಡಿ ಪ್ರಶ್ನಿಸಿ ಕಾಂಗ್ರೆಸ್‌ ಸುಪ್ರೀಂ ಕೋರ್ಟ್‌ ಗೆ

Jasprit Bumrah ಬೌಲಿಂಗ್‌ ಶೈಲಿಯನ್ನೇ ಶಂಕಿಸಿದ ಆಸೀಸ್‌ ಮಾಧ್ಯಮಗಳು!

Jasprit Bumrah ಬೌಲಿಂಗ್‌ ಶೈಲಿಯನ್ನೇ ಶಂಕಿಸಿದ ಆಸೀಸ್‌ ಮಾಧ್ಯಮಗಳು!

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

High-Court

High Court: ಕಬ್ಬಿಣದ ಅದಿರಿಗೆ ದರ ನಿಗದಿ: ಕೇಂದ್ರ, ರಾಜ್ಯಕ್ಕೆ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.