ಸ್ಪಿಂಕ್ಲರ್‌ ಮೊರೆ ಹೋದ ರೈತರು


Team Udayavani, Nov 28, 2017, 11:57 AM IST

Sprinkler-Irrigation.jpg

ಅಫಜಲಪುರ: ಈ ವರ್ಷದ ಮುಂಗಾರು ಮಳೆ ಆರಂಭದಲ್ಲಿ ಅಬ್ಬರಿಸಲಿಲ್ಲ. ಮಧ್ಯದಲ್ಲಿ ಅಬ್ಬರಿಸಿದರೂ ಸಮರ್ಪಕವಾಗಿ ಮಳೆಯಾಗಲಿಲ್ಲ. ಹಿಂಗಾರು ಮಳೆಯೂ ಕೈಕೊಟ್ಟಿದ್ದು, ರೈತರು ಆತಂಕದಲ್ಲಿರುವಂತಾಗಿದೆ. ಹೀಗಾಗಿ ನೀರಾವರಿ
ಇರುವ ರೈತರು ಸ್ಪಿಂಕ್ಲರ್‌ಗಳ ಮೋರೆ ಹೋಗಿದ್ದಾರೆ.

ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ಹಿಂಗಾರು ಮಳೆ ಸರಿಯಾಗಿ ಬಂದಿಲ್ಲ. ಆದರೂ ಮುಂಗಾರು ಮಧ್ಯದಲ್ಲಿ ಬಂದಿದ್ದರಿಂದ ಬೇಸಾಯ ಭೂಮಿ ಹದಗೊಂಡಿತ್ತು. ಅಲ್ಲದೆ ಕೆರೆ ಕುಂಟೆಗಳು, ಬಾವಿ, ಕೊಳವೆ ಬಾವಿಗಳಿಗೆ ನೀರಾಗಿತ್ತು. ಹೀಗಾಗಿ ರೈತರು ಹಿಂಗಾರು ಬಿತ್ತನೆ ಮಾಡಿದ್ದಾರೆ. ಆದರೆ ಮಳೆ ಕೊರತೆಯಿಂದ ಬೆಳೆಗಳಿಗೆ ತೇವಾಂಶದ ಕೊರತೆ ಕಾಡುತ್ತಿದೆ. ಹೀಗಾಗಿ ಒಣ ಬೇಸಾಯಲ್ಲಿ ಬಿತ್ತನೆ ಮಾಡಿದ ರೈತರು ಮುಗಿಲ ಕಡೆ ಮುಖ ಮಾಡಿ ನೋಡುವಂತಾಗಿದೆ. ಇನ್ನೂ ನೀರಾವರಿ ಮತ್ತು ನದಿ ದಡದಲ್ಲಿರುವ ರೈತರು ಸ್ಪಿಂಕ್ಲರ್‌ಗಳನ್ನು ಬಳಸಿಕೊಂಡು ತುಂತುರು ನೀರಾವರಿ ಪದ್ಧತಿ ಅಳವಡಿಸಿಕೊಂಡು ಬೆಳೆಗಳನ್ನು ಉಳಿಸಿಕೊಳ್ಳಲು ಸಾಹಸ ಮಾಡುತ್ತಿದ್ದಾರೆ. 

ತಾಲೂಕಿನ ಮಣೂರು, ಹೊಸೂರ ಸೇರಿದಂತೆ ಕೆಲವೊಂದು ಗ್ರಾಮಗಳಲ್ಲಿ ಹಿಂಗಾರು ಬೆಳೆಗಳು ಒಣಗಿವೆ. ಕೆಲವೊಂದು ಗ್ರಾಮಗಳಲ್ಲಿ ರೈತರು ಹಿಂಗಾರು ಬೆಳೆ ಒಣಗಿದ್ದರಿಂದ ರೈತರು ಬಿತ್ತಿದ ಬೆಳೆಯನ್ನು ಹರಗುತ್ತಿದ್ದಾರೆ. ಒಟ್ಟಿನಲ್ಲಿ ತಾಲೂಕಿನಾದ್ಯಂತ ಹಿಂಗಾರು ಮಳೆ ಕೊರತೆ ಇದ್ದು, ಹಿಂಗಾರು ಬೆಳೆಗಳು ರೈತರ ಕೈ ಹಿಡಿಯುತ್ತಿಲ್ಲ. ಕೃಷಿ ಇಲಾಖೆ ಮಾಹಿತಿ ಪ್ರಕಾರ ತಾಲೂಕಿನಾದ್ಯಂತ ಹಿಂಗಾರು ಬೆಳೆ ಕ್ಷೇತ್ರ 66960 ಹೆಕ್ಟೇರ್‌ ಬಿತ್ತನೆ ಗುರಿ ಇದೆ. ಈ ಪೈಕಿ 63320 ಹೆಕ್ಟೇರ್‌ ಬಿತ್ತನೆಯಾಗಿದೆ.

ಇದರಲ್ಲಿ ಏಕದಳ ಧಾನ್ಯಗಳು 32735 ಹೆಕ್ಟೇರ್‌ ಬಿತ್ತನೆ ಗುರಿ ಇದ್ದು, ಇದರಲ್ಲಿ 31660 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆಯಾಗಿದೆ. ಬೆಳೆಕಾಳುಗಳಲ್ಲಿ 32710 ಹೆಕ್ಟೇರ್‌ ಬಿತ್ತನೆ ಪ್ರದೇಶವಿದ್ದು, ಇದರಲ್ಲಿ 31011 ಹೆಕ್ಟೇರ್‌ ಪ್ರದೇಶ ಬಿತ್ತನೆಯಾಗಿದೆ. ಎಣ್ಣೆ ಕಾಳುಗಳಲ್ಲಿ 1515 ಹೆಕ್ಟೇರ್‌ ಪ್ರದೇಶ ಬಿತ್ತನೆ ಕ್ಷೇತ್ರವಿದ್ದು, ಈ ಪೈಕಿ 649 ಹೆಕ್ಟೇರ್‌ನಲ್ಲಿ ಬಿತ್ತನೆಯಾಗಿದೆ. ಇದರಲ್ಲಿ ಮುಖ್ಯವಾಗಿ ಬಹುತೇಕ ರೈತರು ಜೋಳ ಬಿತ್ತನೆ ಮಾಡಿದ್ದಾರೆ. ಉಳಿದಂತೆ ಕಡಲೆ, ಶೇಂಗಾ ಕುಸುಬಿ, ಗೋಧಿ ಬಿತ್ತನೆ ಮಾಡಿದ್ದಾರೆ. ಬಿತ್ತಿದ ಬೆಳೆಗಳಿಗೆ ತೆಂವಾಂಶದ ಕೊರತೆ ಬಹುವಾಗಿ ಕಾಡುತ್ತಿದೆ.

ತಾಲೂಕಿನಲ್ಲಿ ಹಿಂಗಾರು ಬಿತ್ತನೆ ಉತ್ತಮ ರೀತಿಯಲ್ಲೇ ಆಗಿದೆ. ಎಲ್ಲಿಯೂ ಬೆಳೆಗಳಿಗೆ ಹಾನಿಯಾಗಿಲ್ಲ. ಜೋಳ,
ಕಡಲೆ ಬೆಳವಣಿಗೆ ಹಂತದಲ್ಲಿವೆ. ಯಾವುದೇ ಕೀಟ ಬಾಧೆ, ರೋಗ ಬಾಧೆ ಬೆಳೆಗಳಿಗೆ ಇಲ್ಲ. ತಾಲೂಕಿನಲ್ಲಿ ತೇವಾಂಶದ ಕೊರತೆಯಿಂದ ಬೆಳೆ ಹಾನಿಯಾಗಿಲ್ಲ ಎಂದು ಸಹಾಯಕ ಕೃಷಿ ನಿರ್ದೇಶಕ ಶರಣಗೌಡ ಪಾಟೀಲ ತಿಳಿಸಿದ್ದಾರೆ.

ಮಲ್ಲಿಕಾರ್ಜುನ ಹಿರೇಮಠ 

ಟಾಪ್ ನ್ಯೂಸ್

Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ನಿಧನ

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ

SMAT: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

SMAT 2024: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

2-news

ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ

IPL Auction: Mallika Sagar will conduct the entire IPL auction

IPL Auction: ಸಂಪೂರ್ಣ ಐಪಿಎಲ್‌ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

bhairathi ranagal review

Bhairathi Ranagal Review: ರೋಣಾಪುರದ ರಣಬೇಟೆಗಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maharashtra Election; BJP has nothing but 370: Mallikarjuna Kharge

Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ

Kalaburagi: Govt order to investigate KKRDB grant illegality: Complaint to election commission

Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

Kalaburagi: ರೌಡಿ ಶೀಟರ್ ಬರ್ಬರ ಹತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು

Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು

4

Hunasagi: ನಕಲಿ ಕ್ಲಿನಿಕ್ ಮೇಲೆ ತಾಲೂಕು ವೈದ್ಯಾಧಿಕಾರಿಗಳಿಂದ ದಾಳಿ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ನಿಧನ

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ

SMAT: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

SMAT 2024: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

2-news

ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ

IPL Auction: Mallika Sagar will conduct the entire IPL auction

IPL Auction: ಸಂಪೂರ್ಣ ಐಪಿಎಲ್‌ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.