ಅರ್ಹರಿಗೆ ಸೌಲಭ್ಯ ಒದಗಿಸಲು ಬಯೋ ಮೆಟ್ರಿಕ್
Team Udayavani, Nov 28, 2017, 12:17 PM IST
ಬೆಂಗಳೂರು: ನಿಜವಾದ ಪೌರಕಾರ್ಮಿಕರಿಗೆ ಅಗತ್ಯ ಸೌಲಭ್ಯ ಒದಗಿಸುವ ಉದ್ದೇಶದಿಂದ ಬಯೋ ಮೆಟ್ರಿಕ್ ಹಾಜರಾತಿ ವ್ಯವಸ್ಥೆ ಜಾರಿಗೊಳಿಸಲಾಗಿದೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು.
ಬಿಬಿಎಂಪಿ ಕೇಂದ್ರ ಕಚೇರಿಯ ಡಾ.ರಾಜ್‌ಕುಮಾರ್ ಗಾಜಿನ ಮನೆ ಸಭಾಂಗಣದಲ್ಲಿ ಸೋಮವಾರ ಕರ್ನಾಟಕ ರಾಜ್ಯ ನಗರ ಪಾಲಿಕೆ, ನಗರಸಭೆ, ಪುರಸಭೆಗಳ ಪೌರಕಾರ್ಮಿಕರ ಮಹಾಸಂಘ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.
ಗುತ್ತಿಗೆ ಪೌರಕಾರ್ಮಿಕರನ್ನು ಕಾಯಂಗೊಳಿಸಿ ಕನಿಷ್ಠ ವೇತನ ನೀಡುವ ಸರ್ಕಾರದ ಕ್ರಮಕ್ಕೆ ಕೆಲ ಪಟ್ಟಭದ್ರ ಹಿತಾಸಕ್ತಿಗಳು ವಿರೋಧಿಸಿದ್ದವು. ಆದರೆ, ಸರ್ಕಾರ ಯಾವುದೇಕ್ಕೂ ಬೆದರದೆ ಅವರಿಗಾಗಿ ಹಲವಾರು ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ.
ಗುತ್ತಿಗೆ ಪೌರಕಾರ್ಮಿಕರ ಮಾದರಿಯಲ್ಲಿ ತ್ಯಾಜ್ಯ ವಿಲೇವಾರಿಯಲ್ಲಿ ತೊಡಗಿರುವ ನಿರ್ವಹಣಾ ಸಿಬ್ಬಂದಿಗೂ (ಮೇಸಿŒ) ಕನಿಷ್ಠ ವೇತನ ಮತ್ತು ಕಾಯಂ ನೌಕರನ್ನಾಗಿಸಿ, ಪೌರಕಾರ್ಮಿಕರಿಗೆ ಲಭ್ಯವಿರುವ ಅನುಕೂಲಗಳು ಅವರಿಗೂ ದೊರೆಯುವಂತೆ ಮಾಡಲಾಗುವುದು ಎಂದು ಭರವಸೆ ನೀಡಿದರು.
ಗೃಹ ಸಚಿವ ರಾಮಲಿಂಗಾರೆಡ್ಡಿ ಮಾತನಾಡಿ, ಪಾಲಿಕೆಯಲ್ಲಿ ಈ ಹಿಂದೆ ಆಡಳಿತ ನಡೆಸಿದ ಬಿಜೆಪಿ ಹಲವಾರು ಪಾರಂಪರಿಕ ಕಟ್ಟಡಗಳನ್ನು ಅಡವಿಟ್ಟು, ಸಾವಿರಾರು ಕೋಟಿ ರೂ. ಸಾಲ ಮಾಡಿ ಹೋಗಿದ್ದಾರೆ. ಆದರೆ, ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರದಲ್ಲಿ ಪಾಲಿಕೆಯಲ್ಲಿ ಉತ್ತಮ ಆಡಳಿತ ನೀಡಲಾಗುತ್ತಿದ್ದು, ಅಡಮಾನವಿರಿಸಿದ ಕಟ್ಟಡಗಳನ್ನು ಬಿಡಿಸಿಕೊಳ್ಳಲಾಗುತ್ತಿದೆ.
ಜತೆಗೆ ಸರ್ಕಾರದಿಂದ ನೀಡಲಾದ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು. ನಂತರ ಮಾತನಾಡಿದ ಮೇಯರ್ ಆರ್.ಸಂಪತ್‌ರಾಜ್, ಪೌರಕಾರ್ಮಿಕರಿಗೆ ಮನೆ ನೀಡುವ ಉದ್ದೇಶದಿಂದ ಒಂಟಿಮನೆ ಯೋಜನೆ ಜಾರಿಗೊಳಿಸಲಾಗಿದೆ. ಅದರಂತೆ ಪ್ರತಿ ವಾರ್ಡ್‌ನಲ್ಲಿ 10ರಿಂದ 15 ಮನೆಗಳನ್ನು ನೀಡಲಾಗುತ್ತದೆ.
ಆದರೆ, ಈವರೆಗೂ ಪೌರಕಾರ್ಮಿಕರು ಮನೆಗಾಗಿ ಅರ್ಜಿ ಸಲ್ಲಿಸಿಲ್ಲ. ಹೀಗಾಗಿ ಮನೆಗಳನ್ನು ನೀಡಲಾಗುತ್ತಿಲ್ಲ. ಹೀಗಾಗಿ ಕೂಡಲೆ ಪೌರಕಾರ್ಮಿಕರು ಅರ್ಜಿ ಸಲ್ಲಿಸಿದರೆ ಮನೆ ನೀಡುವ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ ಪ್ರಸಾದ್, ಉಪಮೇಯರ್ ಪದ್ಮಾವತಿ ನರಸಿಂಹಮೂರ್ತಿ ಸೇರಿದಂತೆ ಪ್ರಮುಖರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್ ವಿಚಾರವಾಗಿ ವಾಗ್ವಾದ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್ಗೆ ಬೆಂಕಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.