ರತ್ನಪ್ರಭಾಗೆ ಒಲಿದ ಸಿಎಸ್ ಹುದ್ದೆ
Team Udayavani, Nov 29, 2017, 6:40 AM IST
ಬೆಂಗಳೂರು: ನಿರೀಕ್ಷೆಯಂತೆ ರಾಜ್ಯದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಕೆ. ರತ್ನಪ್ರಭಾ ಅವರನ್ನು ನೇಮಿಸಿ ಸರಕಾರ ಆದೇಶ ಹೊರಡಿಸಿದೆ. ಈ ಮೂಲಕ ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಒಮ್ಮೆಗೇ ಇಬ್ಬರು ಮಹಿಳೆಯರು ಅತ್ಯಂತ ಪ್ರಮುಖ ಹುದ್ದೆ ಗಳಲ್ಲಿ ಆಸೀನರಾದಂತಾಗಿದೆ. ಇತ್ತೀಚೆಗಷ್ಟೇ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾಗಿ ನೀಲಮಣಿರಾಜು ನೇಮಕವಾಗಿದ್ದರು.
ಮುಖ್ಯ ಕಾರ್ಯದರ್ಶಿ ಸುಭಾಶ್ಚಂದ್ರ ಕುಂಟಿಯಾ ನ. 30ರಂದು ನಿವೃತ್ತ ರಾಗಲಿದ್ದು ಅವರ ಸ್ಥಾನಕ್ಕೆ ಪ್ರಸ್ತುತ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿರುವ ರತ್ನಪ್ರಭಾ ಅವರನ್ನು ನೇಮಿಸಲಾಗಿದೆ. ಜತೆಗೆ ಟಿ.ಎಂ. ವಿಜಯ ಭಾಸ್ಕರ್ ಅವರಿಗೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹೊಣೆ ನೀಡಲಾಗಿದೆ.
ಆಂಧ್ರ ಮೂಲದ 1981ರ ಬ್ಯಾಚ್ನ ಅಧಿಕಾರಿ ಯಾಗಿರುವ ಕೆ.ರತ್ನಪ್ರಭಾ ಹಲವಾರು ಪ್ರಮುಖ ಹುದ್ದೆಗಳನ್ನು ನಿಭಾಯಿಸಿದ್ದಾರೆ. ಗುಲ್ಬರ್ಗ ಪ್ರಾದೇಶಿಕ ಆಯುಕ್ತರಾಗಿದ್ದ ರತ್ನಪ್ರಭಾ ಅವರು ಅನಂತರ ಬೀದರ್, ರಾಯಚೂರು ಜಿಲ್ಲಾಧಿಕಾರಿಯಾಗಿ ಸಾಕ್ಷರತೆಗೆ ಹೆಚ್ಚು ಒತ್ತು ನೀಡಿದ್ದರು. ಗ್ರಾಮೀಣ ಭಾಗದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಯೋಜನಾ ನಿರ್ದೇಶಕಿಯಾಗಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಉತ್ತಮ ಕಾರ್ಯ ಮಾಡಿದ್ದರು.
1995ರ ವರೆಗೂ ಕರ್ನಾಟಕದಲ್ಲಿ ಸೇವೆ ಸಲ್ಲಿಸಿದ್ದ ರತ್ನಪ್ರಭಾ ಅವರು 1995ರಲ್ಲಿ ವಿಶಾಖಪಟ್ಟಣಂ ಎಕ್ಸ್ಪೋರ್ಟ್ ಪ್ರೊಸೆಸಿಂಗ್ ಝೋನ್ನ ಅಭಿವೃದ್ಧಿ ಆಯುಕ್ತರಾಗಿ ನಿಯೋಜನೆಗೊಂಡು 2004ರ ವರೆಗೂ ಕಾರ್ಯನಿರ್ವಹಿಸಿದರು. ಅಂತಾರಾಜ್ಯ ನಿಯೋಜನೆ ಮೇರೆಗೆ 2007-09ರಲ್ಲಿ ಆಂಧ್ರಪ್ರದೇಶದಲ್ಲಿ ವಾರ್ತಾ ತಂತ್ರಜ್ಞಾನ ಮತ್ತು ಸಂವಹನ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದರು.ಹೈದರಾಬಾದ್ ಕೇಂದ್ರ ಸೆನ್ಸಾರ್ ಬೋರ್ಡ್ನ ಪ್ರಾದೇಶಿಕ ಆಯುಕ್ತರೂ ಆಗಿದ್ದರು.
ಕೇಂದ್ರ ಸೇವೆಗೆ ನಿಯೋಜನೆಗೊಂಡು ಮಹಿಳಾ, ಮಕ್ಕಳ ಕಲ್ಯಾಣ ಇಲಾಖೆಯ ರಾಷ್ಟ್ರೀಯ ಮಹಿಳಾ ಸಬಲೀಕರಣ ಮಿಷನ್ನ ನಿರ್ದೇಶಕರಾಗಿಯೂ ಕಾರ್ಯ ನಿರ್ವಹಿಸಿದ್ದರು. ರಾಜ್ಯ ಸೇವೆಗೆ ಮರಳಿದ ನಂತರ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ
KFD Vaccine: ಮುಂಬರುವ ನವೆಂಬರ್ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್
Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
NH Highway Works: ಬಿ.ಸಿ.ರೋಡು: ಟ್ರಾಫಿಕ್ ಜಾಮ್
Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ
ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ
Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ಗೆ ಕ್ಯಾ| ಚೌಟ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.