ಸಂವಿಧಾನ ಬದಲಾವಣೆ ಕುರಿತ ಅಭಿಪ್ರಾಯ ಖಂಡನೀಯ
Team Udayavani, Nov 29, 2017, 11:00 AM IST
ಬೆಂಗಳೂರು: “ಧರ್ಮ ಸಂಸದ್‌ನಲ್ಲಿ ಸಂವಿಧಾನ ಬದಲಾವಣೆ ಕುರಿತು ಸ್ವತಃ ಧರ್ಮಗುರುಗಳಿಂದ ಅಭಿಪ್ರಾಯ ವ್ಯಕ್ತವಾಗಿರುವುದು ಖಂಡನೀಯ’ ಎಂದು ಸಾರಿಗೆ ಸಚಿವ ಎಚ್.ಎಂ. ರೇವಣ್ಣ ಆಕ್ರೋಶ ವ್ಯಕ್ತಪಡಿಸಿದರು.
ನಗರದ ಬಿಎಂಟಿಸಿ ಕೇಂದ್ರ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಭಾರತದ ಸಂವಿಧಾನವನ್ನು
ವಿಶ್ವವೇ ಒಪ್ಪಿಕೊಂಡಿದೆ. ಆದರೆ, ಧರ್ಮ ಸಂಸದ್‌ನಲ್ಲಿ ಧರ್ಮಪೀಠದವರಿಂದ ಸಂವಿ ಧಾನ ಬದಲಾವಣೆ ಕೂಗು ಕೇಳಿಬಂದಿರುವುದು
ದುರಂತ. ಅದರಲೂ ಸಂವಿಧಾನ ಸಮರ್ಪಣಾ ದಿನವೇ ಇಂತಹ ಅಭಿಪ್ರಾಯಗಳು ವ್ಯಕ್ತವಾಗಿರುವುದು ಖಂಡನೀಯ’ ಎಂದರು. ಯಾವುದೇ ಧರ್ಮದ ಸಭೆಗಳನ್ನ ನಡೆಸಲು ನಮ್ಮ ತಕರಾರು ಇಲ್ಲ. ಆದರೆ, ಆ ಧರ್ಮ ಸಂಸತ್‌ಲ್ಲಿ ಸಂವಿಧಾನ ಬದಲಾವಣೆ ಮಾತುಗಳು ಕೇಳಿಬಂದಿದ್ದು ಸರಿ ಅಲ್ಲ. ಇನ್ನೂ ದುರಂತವೆಂದರೆ ಧರ್ಮ ಪ್ರಚಾರಕರು ಕತ್ತಿ ಹಿಡಿದು ಯುದ್ಧ ಮಾಡಿ ಎಂದು ಕರೆ ನೀಡುತ್ತಿರುವುದು. ಇದೇ ರೀತಿ ಮುಂದುವರಿದರೆ, ರಾಜ್ಯ ಮತ್ತು ರಾಷ್ಟ್ರದಲ್ಲಿ ಸೌಹಾರ್ದತೆ ಉಳಿಯಲು ಸಾಧ್ಯವೇ ಎಂದು
ಪ್ರಶ್ನಿಸಿದರು.
“ನಾಲಿಗೆ ಮೇಲೆ ಹಿಡಿತವಿರಲಿ’: ಸಾಹಿತ್ಯ ಸಮ್ಮೇಳನದಲ್ಲಿ ಪ್ರೊ. ಚಂದ್ರಶೇಖರ ಪಾಟೀಲ (ಚಂಪಾ) ಭಾಷಣಕ್ಕೆ ಕೇಳಿಬರುತ್ತಿರುವ ಪ್ರತಿರೋಧಗಳಿಗೆ ಪ್ರತಿಕ್ರಿಯಿಸಿದ ಸಚಿವ ರೇವಣ್ಣ, “ಸಾರ್ವಜನಿಕ ಜೀವನದಲ್ಲಿರುವ ಒಬ್ಬ ಕೇಂದ್ರ ಸಚಿವರು ಮಾತನಾಡುವಾಗ ನಾಲಿಗೆ ಮೇಲೆ ಹಿಡಿತವಿರಬೇಕು’ ಎಂದು ಹರಿಹಾಯ್ದರು. ಹೀಗೆ ಬೇಕಾಬಿಟ್ಟಿ ಮಾತನಾಡುವುದರಲ್ಲಿ ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ಕೂಡ ಹಿಂದೆ ಬಿದ್ದಿಲ್ಲ. ಇದಕ್ಕೆ ಈ ಹಿಂದಿನ ಹಲವಾರು ಉದಾಹರಣೆಗಳನ್ನು ಕೊಡಬಹುದು. ಜೆ.ಎಚ್. ಪಟೇಲ್ ಸೇರಿ ಅನೇಕ ರಾಜಕಾರಣಿಗಳೂ ವ್ಯಂಗ್ಯ, ಮೊನಚಾದ ಮಾತುಗಳಿಗೆ ಹೆಸರಾದವರು ನಮ್ಮ ಮುಂದೆ ಇದ್ದಾರೆ .ಅವರನ್ನು
ನೋಡಿ ನಾವು ಕಲಿಯಬೇಕು ಎಂದು ಸೂಚ್ಯವಾಗಿ ಹೇಳಿದರು. ಅಷ್ಟಕ್ಕೂ ಈ ಹಿಂದಿನ ಸಾಹಿತ್ಯ ಸಮ್ಮೇಳನಗಳಲ್ಲಿ ದಲಿತ ಸಂಘಟನೆ ಸೇರಿ ಹಲವು ವಿಚಾರಗಳ ಬಗ್ಗೆ ಚರ್ಚೆಗಳು ನಡೆದಿವೆ. ಈ ರೀತಿಯ ಚರ್ಚೆ ಇದೇ ಮೊದಲಲ್ಲ ಎಂದು ಪ್ರೊ.ಚಂದ್ರಶೇಖರ ಪಾಟೀಲ ಅವರ ಭಾಷಣವನ್ನು ಪರೋಕ್ಷವಾಗಿ ಸಮರ್ಥಿಸಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Food Department Operation: ಬಿಪಿಎಲ್ ಚೀಟಿದಾರರಿಗೆ ಎಪಿಎಲ್ ಕಾವು!
Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ
MUST WATCH
ಹೊಸ ಸೇರ್ಪಡೆ
Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.