ಶ್ರೀನಾಥ್‌ ಮುಂದಾಳತ್ವದಲ್ಲಿ ಸ್ವಚ್ಛತಾ ಅಭಿಯಾನ


Team Udayavani, Nov 29, 2017, 12:37 PM IST

m5-javagal.jpg

ಮೈಸೂರು: ದೇಶದ ಸ್ವಚ್ಛನಗರಗಳ ಪಟ್ಟಿಯಲ್ಲಿ ಮತ್ತೂಮ್ಮೆ ನಂಬರ್‌ ಒನ್‌ ಸ್ಥಾನಕ್ಕೆ ಬರುವ ನಿರೀಕ್ಷೆಯೊಂದಿಗೆ ನಗರಪಾಲಿಕೆವತಿಯಿಂದ ಮಂಗಳವಾರ ನಗರದಲ್ಲಿ ಸ್ವಚ್ಛತಾ ಅಭಿಯಾನ ನಡೆಸಲಾಯಿತು.

ಮೈಸೂರು ಮಹಾ ನಗರಪಾಲಿಕೆ ವತಿಯಿಂದ ನಗರದ ಹೆಬ್ಟಾಳದ ಬಸವನಗುಡಿ ಉದ್ಯಾನದಲ್ಲಿ ಆಯೋಜಿಸಿದ್ದ ಕ್ಲೀನ್‌ ಮೈಸೂರು ಸ್ವಚ್ಛತಾ ಅಭಿಯಾನದ 2ನೇ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಮೈಸೂರಿನ ಸ್ವಚ್ಛತಾ ರಾಯಭಾರಿ, ಮಾಜಿ ಕ್ರಿಕೆಟಿಗ ಜಾವಗಲ್‌ ಶ್ರೀನಾಥ್‌ ಮುಂದಾಳತ್ವದಲ್ಲಿ ಸಾರ್ವಜನಿಕರಿಗೆ ಸ್ವಚ್ಛತೆಯ ಬಗ್ಗೆ ತಿಳುವಳಿಕೆ ಮೂಡಿಸಲಾಯಿತು.

ಸ್ವಚ್ಛ, ಸುಂದರವಾಗಿಡಿ: ಈ ಸಂದರ್ಭದಲ್ಲಿ ಮಾತನಾಡಿದ ಶ್ರೀನಾಥ್‌, ಸ್ವಚ್ಛತೆ ಕಾಪಾಡುವಲ್ಲಿ ವಿದ್ಯಾರ್ಥಿಗಳ ಪಾತ್ರ ಪ್ರಮುಖವಾಗಿದೆ. ಹೀಗಾಗಿ ವಿದ್ಯಾರ್ಥಿಗಳು ಈ ಕ್ಷೇತ್ರಕ್ಕೆ ತಮ್ಮ ಕೊಡುಗೆ ಅನಿವಾರ್ಯತೆ ಅರಿತು ಕೆಲಸ ಮಾಡಬೇಕಿದೆ. ಇದನ್ನು ಮಾಡುವುದರಿಂದ ಕೆಲಸಕ್ಕೆ ಸಲ್ಲಬೇಕಾದ ಗೌರವ ಮತ್ತು ಹೆಮ್ಮೆ ತಂದುಕೊಡಲಿದೆ. ಆದ್ದರಿಂದ ಪ್ರತಿಯೊಬ್ಬ ವಿದ್ಯಾರ್ಥಿಯೂ ತಮ್ಮ ಪೋಷಕರಿಗೆ ಮನೆಗೆ ಎರಡು ಬಕೆಟ್‌ ಕೊಂಡುಕೊಂಡು ಬರುವಂತೆ ಒತ್ತಡ ಹಾಕಬೇಕು.

ನಂತರ ಆ ಎರಡು ಬಕೆಟ್‌ಗಳನ್ನು ಹಸಿ ಕಸ ಮತ್ತು ಒಣ ಕಸವೆಂದು ವಿಂಗಡಿಸಬೇಕು. ಬಳಿಕ ಮನೆಯಲ್ಲಿ ಉತ್ಪತ್ತಿಯಾಗುವ ಕಸವನ್ನು ಮೂಲದಲ್ಲಿಯೆ ವಿಂಗಡಣೆ ಮಾಡಬೇಕು. ಮಾತ್ರವಲ್ಲದೆ ನಿಮ್ಮ ಸುತ್ತಲ ವಾತಾವರಣದಲ್ಲಿ ಯಾರಾದರೂ ಕಸ ಬಿಸಾಡಿದರೆ ಅವರಿಗೆ ಸ್ವಚ್ಛತೆ ಬಗ್ಗೆ ಜಾಗೃತಿ ಮೂಡಿಸಬೇಕೆಂದು ಸಲಹೆ ನೀಡಿದರು.

ವಿದ್ಯಾರ್ಥಿಗಳೇ ಕೈಜೋಡಿಸಿ: ಯೋಗಪಟು ಖುಷಿ ಮಾತನಾಡಿ, ಗಾಂಧೀಜಿ ಅವರ ಕನಸನ್ನು ನನಸಾಗಿಸುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಅವರು ಸ್ವಚ್ಛತಾ ಅಭಿಯಾನ ಆರಂಭಿಸಿದ್ದಾರೆ. ಇದನ್ನು ಪಾಲನೆ ಮಾಡುವಲ್ಲಿ ಮೈಸೂರು ಜಿಲ್ಲೆ ಅಗ್ರಸ್ಥಾನದಲ್ಲಿದೆ. ಎರಡು ಬಾರಿ ಸ್ವಚ್ಛ ನಗರಿ ಪಟ್ಟ ಪಡೆದಿರುವ ಮೈಸೂರು ನಗರಕ್ಕೆ ಮೂರನೇ ಬಾರಿಯೂ ಅಗ್ರಸ್ಥಾನ ಪಡೆಯುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಕೈ ಜೋಡಿಸಬೇಕೆಂದು ಹೇಳಿದರು.

ಸ್ವಚ್ಛತಾ ಸಂಕಲ್ಪ ಮಾಡಿ: ರಾಮಕೃಷ್ಣ ಆಶ್ರಮದ ಮೋಕ್ಷ ಆತ್ಮಾನಂದ ಸ್ವಾಮೀಜಿ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಯೂ ಹೊರಗೆ ಕಸ ಬಿಸಾಡುವುದಿಲ್ಲ ಎಂದು ಸಂಕಲ್ಪ ಮಾಡಬೇಕು. ಹೀಗೆ ಸಂಕಲ್ಪ ಮಾಡುವುದರಿಂದ ಮಾತ್ರ ಸಿದ್ಧಿ ದೊರೆಯಲು ಸಾಧ್ಯವಾಗುತ್ತದೆ. ಅಲ್ಲದೆ ಪ್ರತಿಯೊಬ್ಬರಿಗೂ ಸ್ವಚ್ಛತೆ ಅರಿವು ಮುಖ್ಯವಾಗಿದ್ದು, ಆಗ ಮಾತ್ರ ಮೈಸೂರು ಸ್ವಚ್ಛ ಮೈಸೂರಾಗಿ ರೂಪುಗೊಳ್ಳಲಿದೆ ಎಂದರು.

ಜನರಲ್ಲಿ ಸ್ವಚ್ಛತೆ ಅರಿವು: ಹೆಬ್ಟಾಳಿನಲ್ಲಿ ನಡೆದ ಸ್ವಚ್ಛತಾ ಅಭಿಯಾನದ ಅಂಗವಾಗಿ ಜನರಿಗೆ ಸ್ವಚ್ಛತೆ ಬಗ್ಗೆ ಜಾಗೃತಿ ಮೂಡಿಸಲಾಯಿತು. ಅಭಿಯಾನದ ಸಂದರ್ಭ ಮನೆ ಮನೆಗೆ ತೆರಳಿದ ಸ್ವಚ್ಛತಾ ರಾಯಭಾರಿಗಳು ಹಾಗೂ ಇನ್ನಿತರ ಗಣ್ಯರು ಸ್ವಚ್ಛತೆಗೆ ಸಂಬಂಧಿಸಿದ ಭಿತ್ತಿಪತ್ರಗಳನ್ನು ಹಂಚಿದರು. ಇದೇ ವೇಳೆ ವಿದ್ಯಾರ್ಥಿಗಳು ಸ್ವಚ್ಛತೆಗೆ ಸಂಬಂಧಿಸಿದಂತೆ ಪ್ರತಿಜಾnವಿಧಿ ಸ್ವೀಕರಿಸಿದರು.

ಬಳಿಕ ನಡೆದ ಸಹಿ ಸಂಗ್ರಹ ಕಾರ್ಯಕ್ರಮದಲ್ಲಿ ಹಾಜರಿದ್ದ ಸಾರ್ವಜನಿಕರು ಸ್ವಚ್ಛತೆಗೆ ಕೈ ಜೋಡಿಸುವುದಾಗಿ ಸಹಿ ಹಾಕಿದರು. ಈ ಸಂದರ್ಭದಲ್ಲಿ ಮೇಯರ್‌ ಎಂ.ಜೆ.ರವಿಕುಮಾರ್‌, ವಿಧಾನ ಪರಿಷತ್‌ ಸದಸ್ಯ ಡಿ.ಮಾದೇಗೌಡ, ಮಾಜಿ ಉಪ ಮೇಯರ್‌ ಮಹದೇವಪ್ಪ ಹಾಗೂ ಇನ್ನಿತರರು ಭಾಗವಹಿಸಿದ್ದರು.

ಮಕ್ಕಳು ಬದಲಾದರೆ ಕುಟುಂಬವೇ ಬದಲಾಗಲಿದೆ. ಹೀಗಾಗಿ ಇಂದಿನ ಸಮಾಜದಲ್ಲಿ ಮಕ್ಕಳಿಂದಲೇ ಬದಲಾವಣೆ ಆಗಬೇಕಿದೆ. ಸ್ವಚ್ಛತೆ ಬಗ್ಗೆ ಮೈಸೂರಿನ ಜನರಲ್ಲಿ ಜಾಗೃತಿ ಇದ್ದು, ಪೂರ್ಣ ಪ್ರಮಾಣದಲ್ಲಿ ಇದು ಸಾಕಾರಗೊಳಿಸುವ ಪ್ರಯತ್ನ ಮಾಡಬೇಕಿದೆ. ಈ ಪ್ರಯತ್ನ ಸಫ‌ಲವಾದಲ್ಲಿ ನಾವು ಮತ್ತೂಮ್ಮೆ ಸ್ವಚ್ಛ ನಗರಿ ಪಟ್ಟ ಪಡೆಯಲಿದ್ದೇವೆ.
-ಜಿ.ಜಗದೀಶ್‌, ಪಾಲಿಕೆ ಆಯುಕ್ತ

ಟಾಪ್ ನ್ಯೂಸ್

Bangla–Pak

Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!

Basavaraj-horatti

Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ

Kannada-Replica

Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

Rajbhavana

Derogatory Term: ರಾಜಭವನ ಅಂಗಳಕ್ಕೆ ತಲುಪಿದ ಲಕ್ಷ್ಮೀ ಹೆಬ್ಬಾಳ್ಕರ್‌- ಸಿ.ಟಿ.ರವಿ ವಾಗ್ವಾದ

Horoscope:‌ ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ

Horoscope:‌ ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bangla–Pak

Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!

Basavaraj-horatti

Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ

Kannada-Replica

Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.