ಧರ್ಮ ಹೊಸ ಚಿತ್ರ ವಿವಿಕ್ತ

Team Udayavani, Nov 29, 2017, 11:00 PM IST

Vivikta-1.jpg

ಇತ್ತೀಚೆಗಷ್ಟೇ “ಚಾಣಾಕ್ಯ’ ಎಂಬ ಚಿತ್ರ ಮಾಡಿದ್ದ ಧರ್ಮ, ಇದೀಗ ಸದ್ದಿಲ್ಲದೆ ಇನ್ನೊಂದು ಹೊಸ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ಚಿತ್ರದ ಮುಹೂರ್ತವು ಸದ್ದಿಲ್ಲದೆ ನಡೆದಿದ್ದು, ಚಿತ್ರೀಕರಣ ಸಹ ಶುರುವಾಗಿದೆ. ಅಂದಹಾಗೆ, ಈ ಚಿತ್ರದ ಹೆಸರು “ವಿವಿಕ್ತ’. “ವಿವಿಕ್ತ’ ಚಿತ್ರವನ್ನು ನಿರ್ದೇಶಕ ಗಡ್ಡ ವಿಜಿ ಅವರ ಕ್ಯಾಂಪ್‌ನ ರಘು ಅಪ್ಪು ಎನ್ನುವವರು ನಿರ್ದೇಶಿಸುತ್ತಿದ್ದಾರೆ.

ಇದು ಅವರ ನಿರ್ದೇಶನದ ಮೊದಲ ಚಿತ್ರ. ಎರಡು ವರ್ಷಗಳ ಹಿಂದೆ ನಡೆದ ಒಂದು ನೈಜ ಘಟನೆಯನ್ನಾಧರಿಸಿ ಈ ಕಥೆ ಮಾಡಿದ್ದಾರೆ. ಇಲ್ಲಿ ನಾಯಕಿಯ ಹೆಸರು ಯುಕ್ತ. ಯುಕ್ತ ಆಗಿದ್ದವಳು ಕ್ಲೈಮ್ಯಾಕ್ಸ್‌ ಹೊತ್ತಿಗೆ “ವಿವಿಕ್ತ’ ಆಗುವುದು ಹೇಗೆ ಮತ್ತು ಏಕೆ ಎನ್ನುವುದು ಚಿತ್ರದ ಕಥೆಯಂತೆ. ಆ ಕಥೆಯನ್ನು ಇವತ್ತಿನ ಪ್ರೇಕ್ಷಕರ ಮನಮುಟ್ಟುವಂತೆ ಚಿತ್ರಿಸುವ ಐಡಿಯಾ ಹಾಕಿಕೊಂಡಿದ್ದಾರೆ.

ಈ ಚಿತ್ರವನ್ನು ರಾಕೇಶ್‌ ಮತ್ತು ಭಾಸ್ಕರ್‌ ಎನ್ನುವವರು ನಿರ್ಮಿಸುತ್ತಿದ್ದು, ಅವರಿಗೆ ಚಿತ್ರದ ಕ್ಲೈಮ್ಯಾಕ್ಸ್‌ ಬಹಳ ಇಷ್ಟವಾಯಿತಂತೆ. ಅದೇ ಕಾರಣಕ್ಕೆ ಅವರು ಚಿತ್ರಕ್ಕೆ ಹಣ ಹಾಕುವುದಕ್ಕೆ ಮುಂದೆ ಬಂದಿದ್ದಾರೆ. ಇಲ್ಲಿ ಧರ್ಮ ಕೀರ್ತಿರಾಜ್‌ ಜೊತೆಗೆ ಪ್ರತಾಪ್‌ ನಾರಾಯಣ್‌ ಸಹ ಇದ್ದಾರೆ. “ಬೆಂಕಿಪೊಟ್ಣ’, “ಐ ಆ್ಯಮ್‌ ಪ್ರಗ್ನಂಟ್‌’ ಮುಂತಾದ ಚಿತ್ರಗಳಲ್ಲಿ ನಟಿಸಿರುವ ಪ್ರತಾಪ್‌ಗೆ ಇಲ್ಲಿ ಎರಡನೆಯ ಹೀರೋ ಪಾತ್ರ.

ಇನ್ನು ಇವರಿಬ್ಬರಿಗೆ ನಾಯಕಿಯಾಗಿ “ಪೈಪೋಟಿ’ ಚಿತ್ರದ ಪೂಜಾ ಇದ್ದಾರೆ. ಈ ಚಿತ್ರದಲ್ಲಿ ಅವರು ತಮ್ಮ ಹೆಸರನ್ನು ಬದಲಿಸಿಕೊಂಡಿದ್ದು, ಅನಾಥ ಹುಡುಗಿಯೊಬ್ಬಳ ಪಾತ್ರವನ್ನು ನಿರ್ವಹಿಸುತ್ತಿದ್ದಾರಂತೆ. ಇದೊಂದು ಸಸ್ಪೆನ್ಸ್‌ ಥ್ರಿಲ್ಲರ್‌ ಚಿತ್ರವಾಗಿದ್ದು, ಚಿತ್ರೀಕರಣ ಬೆಂಗಳೂರು, ಮಡಿಕೇರಿ, ಸಾಗರ ಮುಂತಾದ ಕಡೆ ನಡೆಯಲಿದೆ.

“ವಿವಿಕ್ತ’ಗೆ ಭಾಸ್ಕರ್‌ ರೆಡ್ಡಿ ಅವರು ಛಾಯಾಗ್ರಹಣ ಮಾಡಿದರೆ, ಗಣೇಶ್‌ ನಾರಾಯಣ್‌ ಸಂಗೀತ ಸಂಯೋಜಿಸುತ್ತಿದ್ದಾರೆ. ಚಿತ್ರದಲ್ಲಿ ಮೂರು ದುಃಖದ ಹಾಡುಗಳು ಮತ್ತು ಒಂದು ಡ್ಯುಯೆಟ್‌ ಇದೆಯಂತೆ. ಗಣೇಶ್‌ ಸಂಗೀತ ಸಂಯೋಜಿಸಿದರೆ, ಅಭಿ ಎನ್ನುವವರು ಸಾಹಿತ್ಯ ರಚಿಸಿದ್ದಾರೆ.

ಟಾಪ್ ನ್ಯೂಸ್

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ

Adhipatra Movie: ರೂಪೇಶ್‌ ಅಧಿಪತ್ರ ಫೆ.7ಕ್ಕೆ ಬಿಡುಗಡೆ

Adhipatra Movie: ರೂಪೇಶ್‌ ಅಧಿಪತ್ರ ಫೆ.7ಕ್ಕೆ ಬಿಡುಗಡೆ

ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ

ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.