ಸಚಿವರ ರಾಜೀನಾಮೆ ಆಗ್ರಹಿಸಿ ಪ್ರತಿಭಟನೆ
Team Udayavani, Nov 30, 2017, 6:40 AM IST
ಬೆಂಗಳೂರು: ಸಚಿವರಾದ ಕೆ.ಜೆ.ಜಾರ್ಜ್ ಮತ್ತು ವಿನಯ ಕುಲಕರ್ಣಿ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಬುಧವಾರ ಬೃಹತ್ ಪ್ರತಿಭಟನೆ ನಡೆಸಿದರು.
ನಗರದ ಆನಂದರಾವ್ ವೃತ್ತದ ಬಳಿಯ ಗಾಂಧಿ ಪ್ರತಿಮೆ ಮುಂದೆ ಭಿತ್ತಿಪತ್ರಗಳನ್ನು ಹಿಡಿದು ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು, ಡಿವೈಎಸ್ಪಿ ಗಣಪತಿ ಆತ್ಮಹತ್ಯೆಗೆ ಸಂಬಂಧಿಸಿದಂತೆ ಸಿಬಿಐ ಎಫ್ಐಆರ್ ದಾಖಲಿಸಿರುವ ಹಿನ್ನೆಲೆಯಲ್ಲಿ ಸಚಿವ ಜಾರ್ಜ್ ಮತ್ತು ಧಾರವಾಡ ಜಿಪಂ ಸದಸ್ಯರಾಗಿದ್ದ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಶಾಮೀಲಾಗಿರುವ ವಿನಯ ಕುಲಕರ್ಣಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಇಲ್ಲವೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಬ್ಬರನ್ನೂ ಸಂಪುಟದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದರು.
ಎರಡೂ ಪ್ರಕರಣಗಳಲ್ಲಿ ಸಾಕ್ಷಿಗಳನ್ನು ಮುಚ್ಚಿಹಾಕುವಲ್ಲಿ ಸಚಿವರ ಕೈವಾಡವಿರುವುದು ಸಾಬೀತಾಗಿದೆ. ಹೀಗಾಗಿ ಸಚಿವರಿಬ್ಬರೂ ರಾಜೀನಾಮೆ ನೀಡಬೇಕೆಂದು ಬಿಜೆಪಿ ಒತ್ತಾಯಿಸುತ್ತಿದ್ದರೂ ಸರ್ಕಾರ ಅವರನ್ನು ರಕ್ಷಿಸುತ್ತಿದೆ ಎಂದು ಆರೋಪಿಸಿ ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿ ವಿರುದಟಛಿ ಘೋಷಣೆ ಕೂಗಿದರು.
ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ವಿಧಾನಸಭೆ ಪ್ರತಿಪಕ್ಷ ನಾಯಕ ಜಗದೀಶ ಶೆಟ್ಟರ್, ಸಚಿವರಾದ ಜಾರ್ಜ್ ಮತ್ತು ವಿನಯ ಕುಲಕರ್ಣಿ ರಾಜೀನಾಮೆ ನೀಡುವವರೆಗೂ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಹೇಳಿದರು.
ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ಮಾತನಾಡಿ, ಎಲ್ಲಾ ಪ್ರಕರಣಗಳಲ್ಲೂ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕೊಲೆ ಗಡುಕರಿಗೆ ಬೆಂಬಲ ನೀಡುತ್ತಿದೆ. ಈ ಮೂಲಕ ಇದು ಕೇವಲ ಭ್ರಷ್ಟ ಸರ್ಕಾರ ಮಾತ್ರವಲ್ಲ, ಕೊಲೆಗಡುಕ ಸರ್ಕಾರವೂ ಹೌದು ಎಂಬುದನ್ನು ಸಾಬೀತುಪಡಿಸುತ್ತಿದೆ ಎಂದು ಆರೋಪಿಸಿದರು.
ಸಂಸದ ಪಿ.ಸಿ.ಮೋಹನ್, ಶಾಸಕರಾದ ಎಸ್. ಸುರೇಶ್‌ಕುಮಾರ್, ಮುನಿರಾಜು, ವಿಧಾನ ಪರಿಷತ್ ಸದಸ್ಯ ರಾಮಚಂದ್ರಗೌಡ, ಬಿಬಿಎಂಪಿ ಪ್ರತಿಪಕ್ಷ ನಾಯಕ ಪದ್ಮನಾಭರೆಡ್ಡಿ, ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ರಾಜ್ಯಾಧ್ಯಕ್ಷ ಅಬ್ದುಲ್ ಅಜೀಂ, ಬಿಜೆಪಿ ನಗರ ಅಧ್ಯಕ್ಷ ನಗರ ಅಧ್ಯಕ್ಷಪಿ.ಎನ್.ಸದಾಶಿವ ಮತ್ತಿತರರು ಇದ್ದರು.
ರಾಜ್ಯ ಬಿಜೆಪಿ ಹಮ್ಮಿಕೊಂಡಿರುವ ನವ ಕರ್ನಾಟಕ ನಿರ್ಮಾಣದ ಪರಿವರ್ತನಾ ಯಾತ್ರೆಗೆ ಸಿಗುತ್ತಿರುವ ಜನಬೆಂಬಲ ನೋಡಿ ಸಿಎಂ ಸಿದ್ದರಾಮಯ್ಯ ಅವರಿಗೆ ನಡುಕ ಆರಂಭವಾಗಿದ್ದು, ಈ ಕಾರಣದಿಂದ ಯಾತ್ರೆ ಬಗ್ಗೆ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ.
– ಜಗದೀಶ ಶೆಟ್ಟರ್
ವಿಧಾನಸಭೆ ಪ್ರತಿಪಕ್ಷ ನಾಯಕ
ಕೇಂದ್ರ ಸರ್ಕಾರದ ಹಣದಲ್ಲಿ ಕೈಗೊಳ್ಳುತ್ತಿರುವ ಎಲ್‌ಇಡಿ ಬಲ್ಬ್ ವಿತರಿಸುವ ಯೋಜನೆ, ಅನ್ನಭಾಗ್ಯ ಯೋಜನೆಗಳನ್ನು ತಮ್ಮದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಊರೆಲ್ಲಾ ಬುರುಡೆ ಬಿಡುತ್ತಾ ತಿರುಗಾಡುತ್ತಿದ್ದಾರೆ. ದೇಶದಲ್ಲೇ ಭ್ರಷ್ಟ ಮುಖ್ಯಮಂತ್ರಿಯಾಗಿರುವ ಸಿದ್ದರಾಮಯ್ಯ ಅವರ ವಿರುದ್ದ ಎಸಿಬಿಯಲ್ಲಿ 48 ದೂರುಗಳು ದಾಖಲಾಗಿದ್ದರೂ ನಾನೊಬ್ಬನೇ ಸಾಚಾ ಎನ್ನುವಂತೆ ವರ್ತಿಸುತ್ತಿದ್ದಾರೆ.
– ಆರ್.ಅಶೋಕ್
ಮಾಜಿ ಉಪಮುಖ್ಯಮಂತ್ರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Former Supreme Court Judge ವಿ.ಸುಬ್ರಹ್ಮಣಿಯನ್ ಎನ್‌ಎಚ್‌ಆರ್‌ಸಿ ಮುಖ್ಯಸ್ಥ
Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್ ವಿವಾದಾಸ್ಪದ ಹೇಳಿಕೆ
Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್ ರೈಲು!
Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?
PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.