ಮಂಗಳೂರು ಡಿ. 3: ರಾಮ-ಲಕ್ಷ್ಮಣ  ಜೋಡುಕರೆ ಕಂಬಳ

Team Udayavani, Nov 30, 2017, 9:15 AM IST

30-7.jpg

ಮಂಗಳೂರು: ಮಂಗಳೂರು ಕಂಬಳ ಸಮಿತಿ ವತಿಯಿಂದ ಮೊದಲ ವರ್ಷದ ರಾಮ-ಲಕ್ಷ್ಮಣ ಜೋಡುಕರೆ ಕಂಬಳ ಡಿ. 3ರಂದು ನಗರದ ಬಂಗ್ರಕೂಳೂರು ಗೋಲ್ಡ್‌ಫಿಂಚ್‌ ಸಿಟಿಯಲ್ಲಿ ಜರಗಲಿದೆ ಎಂದು ಸಮಿತಿ ಅಧ್ಯಕ್ಷ ಕ್ಯಾ| ಬೃಜೇಶ್‌ ಚೌಟ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಮಂಗಳೂರು ನಗರದ ಕದ್ರಿಯ ಕಂಬಳ ನಿಂತ ಬಳಿಕ ನಗರದಲ್ಲಿ ಇದೇ ಮೊದಲ ಬಾರಿಗೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಇದನ್ನು ಮಂಗಳೂರು ಕಂಬಳ್ಳೋತ್ಸವವಾಗಿ ಆಚರಿಸಲಾಗುತ್ತದೆ. ಸುಮಾರು 10 ಲಕ್ಷ ರೂ. ವೆಚ್ಚದಲ್ಲಿ ಸುಸಜ್ಜಿತ ಕರೆ ನಿರ್ಮಿಸಲಾಗಿದೆ ಎಂದರು. ಕಂಬಳವನ್ನು ಡಿ. 3ರಂದು ಬೆಳಗ್ಗೆ 9.30ಕ್ಕೆ ನಿಟ್ಟೆ ವಿಶ್ವವಿದ್ಯಾನಿಲಯದ ಕುಲಾಧಿಪತಿ ಎನ್‌. ವಿನಯ ಹೆಗ್ಡೆ ಉದ್ಘಾಟಿಸುವರುಎಂದರು.

ಸಂಜೆ ಸಭೆ, ಸಮ್ಮಾನ: ಸಂಜೆ 6.30ಕ್ಕೆ ಸಂಸದ ನಳಿನ್‌ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ಅತಿಥಿಗಳಾಗಿ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ, ರಾಜ್ಯದ ಸಚಿವರಾದ ಬಿ. ರಮಾನಾಥ ರೈ, ಪ್ರಮೋದ್‌ ಮಧ್ವರಾಜ್‌, ಸಂಸದೆ ಶೋಭಾ ಕರಂದ್ಲಾಜೆ, ಶಾಸಕರಾದ ವಿ. ಸುನಿಲ್‌ ಕುಮಾರ್‌, ಅಭಯಚಂದ್ರ ಜೈನ್‌ ಮೊದಲಾದ ಗಣ್ಯರು ಭಾಗವಹಿಸಲಿದ್ದಾರೆ.

ವಿಧೇಯಕ ಮರುಮಂಡನೆ: ಕಂಬಳದ ವಿಧೇಯಕವು ವಿಧಾನಸಭೆ ಹಾಗೂ ವಿಧಾನ ಪರಿಷತ್‌ನಲ್ಲಿ ಮರುಮಂಡನೆಯಾಗಿ ರಾಜ್ಯಪಾಲರ ಕಚೇರಿಗೆ ತಲುಪಿದೆ. ರಾಜ್ಯಪಾಲರ ಸಹಿಯ ಬಳಿಕ ಕೇಂದ್ರ ಕಾನೂನು ಹಾಗೂ ಪರಿಸರ ಸಚಿವಾಲಯದ ಮೂಲಕ ರಾಷ್ಟ್ರಪತಿಯವರ ಅಂಕಿತಕ್ಕೆ ಕಳುಹಿಸಲಾಗುತ್ತದೆ. ಪ್ರಸ್ತುತ ಎಲ್ಲ ಷರತ್ತುಗಳ ಪ್ರಕಾರವೇ ಕಂಬಳವನ್ನು ನಡೆಸಲಾಗುತ್ತದೆ ಎಂದು ಜಿಲ್ಲಾ ಕಂಬಳ ಸಮಿತಿಯ ಪ್ರಧಾನ ಕಾರ್ಯದರ್ಶಿ ವಿಜಯಕುಮಾರ್‌ ಕಂಗಿನಮನೆ ವಿವರಿಸಿದರು.

ಕಂಬಳ ಸಮಿತಿ ಪ್ರಮುಖರಾದ ನಿತಿನ್‌ ಶೆಟ್ಟಿ, ಸಾಂತ್ಯಗುತ್ತು ಸಚಿನ್‌ ಶೆಟ್ಟಿ, ತಲಪಾಡಿ ದೊಡ್ಡಮನೆ ಪ್ರೀತಮ್‌ ರೈ, ಪ್ರಸಾದ್‌ ಕುಮಾರ್‌ ಶೆಟ್ಟಿ ಶೆಡ್ಡೆ, ಕಿಶೋರ್‌ ಕುಮಾರ್‌ ಪುತ್ತೂರು, ಉಳ್ಳಾಲ ನಂದನ್‌ ಮಲ್ಯ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-virat-Kohli

Australia; ಮಂಗಳೂರಿಗನ ಸಲೂನ್‌ನಲ್ಲಿ ಕೊಹ್ಲಿ ರಿಲ್ಯಾಕ್ಸ್‌: ವಿರಾಟ್‌ ನಡೆಗೆ ಕಿರಣ್‌ ಫಿದಾ

mob

OTP ನಿಯಮದಿಂದ ಅಗತ್ಯ ಸೇವೆಗೆ ತೊಂದರೆ ಆಗದು: ಟ್ರಾಯ್‌

Surathkal: ರ‍್ಯಾಗಿಂಗ್; 9 ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲು

Surathkal: ರ‍್ಯಾಗಿಂಗ್; 9 ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲು

Manipal: ಹುಲ್ಲು ತರಲು ತೆರಳಿದ್ದ ಮಹಿಳೆಯ ಮೃತದೇಹ ಪತ್ತೆ

Manipal: ಹುಲ್ಲು ತರಲು ತೆರಳಿದ್ದ ಮಹಿಳೆಯ ಮೃತದೇಹ ಪತ್ತೆ

Bantwal: ಯಜಮಾನರು-ಓಟಗಾರರಿಂದಲೇ ಹುಟ್ಟಿದ ಕಂಬಳ

Bantwal: ಯಜಮಾನರು-ಓಟಗಾರರಿಂದಲೇ ಹುಟ್ಟಿದ ಕಂಬಳ

rahul-gandhi

Election;ವಿಶ್ವಾಸಾರ್ಹತೆಗೆ ಧಕ್ಕೆ: ಕಾಂಗ್ರೆಸ್‌ ಆಂದೋಲನ

1-eqwewqe

Adelaide Test: ಭಾರತಕ್ಕೆ ಹಗಲು-ರಾತ್ರಿ ಅಭ್ಯಾಸ ಪಂದ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Surathkal: ರ‍್ಯಾಗಿಂಗ್; 9 ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲು

Surathkal: ರ‍್ಯಾಗಿಂಗ್; 9 ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲು

Mangaluru: ಕ್ಯಾನ್ಸರ್‌ ಚಿಕಿತ್ಸೆಯಲ್ಲಿ ಸುರಕ್ಷೆ ಆದ್ಯತೆಯಾಗಿರಲಿ: ಶುಕ್ಲಾ

Mangaluru: ಕ್ಯಾನ್ಸರ್‌ ಚಿಕಿತ್ಸೆಯಲ್ಲಿ ಸುರಕ್ಷೆ ಆದ್ಯತೆಯಾಗಿರಲಿ: ಶುಕ್ಲಾ

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Moodbidri: ಆಳ್ವಾಸ್‌ ವಿರಾಸತ್‌ ಶಾಸ್ತ್ರೀಯ ಯುವಸಂಪದ

Moodbidri: ಆಳ್ವಾಸ್‌ ವಿರಾಸತ್‌ ಶಾಸ್ತ್ರೀಯ ಯುವಸಂಪದ

5

Mangaluru: ಎಎಸ್‌ಐಗೆ ಗಾಯ; ಡಿವೈಎಫ್ಐ ವಿರುದ್ಧ ಪ್ರಕರಣ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-virat-Kohli

Australia; ಮಂಗಳೂರಿಗನ ಸಲೂನ್‌ನಲ್ಲಿ ಕೊಹ್ಲಿ ರಿಲ್ಯಾಕ್ಸ್‌: ವಿರಾಟ್‌ ನಡೆಗೆ ಕಿರಣ್‌ ಫಿದಾ

mob

OTP ನಿಯಮದಿಂದ ಅಗತ್ಯ ಸೇವೆಗೆ ತೊಂದರೆ ಆಗದು: ಟ್ರಾಯ್‌

Surathkal: ರ‍್ಯಾಗಿಂಗ್; 9 ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲು

Surathkal: ರ‍್ಯಾಗಿಂಗ್; 9 ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲು

Manipal: ಹುಲ್ಲು ತರಲು ತೆರಳಿದ್ದ ಮಹಿಳೆಯ ಮೃತದೇಹ ಪತ್ತೆ

Manipal: ಹುಲ್ಲು ತರಲು ತೆರಳಿದ್ದ ಮಹಿಳೆಯ ಮೃತದೇಹ ಪತ್ತೆ

Bantwal: ಯಜಮಾನರು-ಓಟಗಾರರಿಂದಲೇ ಹುಟ್ಟಿದ ಕಂಬಳ

Bantwal: ಯಜಮಾನರು-ಓಟಗಾರರಿಂದಲೇ ಹುಟ್ಟಿದ ಕಂಬಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.