ಇಸ್ಲಾಮಾಬಾದ್ ರಕ್ತಪಾತ:ಪೊಲೀಸರ ಧಾರ್ಮಿಕ ಭಾವನೆಗಾದ ಘಾಸಿ ಕಾರಣ?
Team Udayavani, Nov 30, 2017, 3:57 PM IST
ಇಸ್ಲಾಮಾಬಾದ್ : ರಾಷ್ಟ್ರ ರಾಜಧಾನಿಯ ಹೊರ ವಲಯದಲ್ಲಿ ಕಳೆದ ವಾರ ಪ್ರತಿಭಟನಕಾರರೊಂದಿಗೆ ಭಾರೀ ಹಿಂಸಾತ್ಮಕ ಕಾದಾಟ ಉಂಟಾಗಲು ಪ್ರತಿಭಟನಕಾರರು ಅತ್ಯಂತ ಪ್ರಚೋದನಾತ್ಮಕವಾಗಿ ಬೆಂಕಿ ಉಗುಳುವ ರೀತಿಯಲ್ಲಿ ಭಾಷಣ ಮಾಡಿ ಭದ್ರತಾ ಸಿಬಂದಿಗಳ ಧಾರ್ಮಿಕ ಭಾವನೆಯನ್ನು ನೋಯಿಸಿದ್ದೇ ಕಾರಣ ಎಂದು ಇಸ್ಲಾಮಾಬಾದ್ ಪೊಲೀಸರು ಪಾಕ್ ಸುಪ್ರೀಂ ಕೋರ್ಟಿಗೆ ಹೇಳಿದ್ದಾರೆ.
ಕಳೆದ ವಾರ ರಾಜಧಾನಿ ಇಸ್ಲಾಮಾಬಾದ್ ತಲುಪುವ ಮುಖ್ಯ ಹೆದ್ದಾರಿಯನ್ನು ನೂರಾರು ಸಂಖ್ಯೆಯಲ್ಲಿದ್ದ ಪ್ರತಿಭಟನಕಾರರು ತಡೆದಿದ್ದರು. ಅವರನ್ನು ತೆರವು ಗೊಳಿಸುವ ಕಾರ್ಯಾಚರಣೆಯಲ್ಲಿ ಒಬ್ಬ ಭದ್ರತಾ ಸಿಬಂದಿ ಮಡಿದು ಇತರ ಸುಮಾರು 250 ಮಂದಿ ಗಾಯಗೊಂಡಿದ್ದರು.
ಪ್ರತಿಭಟನಕಾರರು ಪಾಕ್ ಕಾನೂನು ಸಚಿವ ಝಾಹಿದ್ ಹಮೀದ್ ಅವರ ರಾಜೀನಾಮೆಯನ್ನು ಆಗ್ರಹಿಸುತ್ತಿದ್ದರು. ಕಳೆದ ಸೆಪ್ಟಂಬರ್ನಲ್ಲಿ ಪಾಸಾಗಿದ್ದ 2017 ಚುನಾವಣಾ ಕಾಯಿದೆಯಲ್ಲಿ ಪ್ರವಾದಿತ್ವದ ಅಂತಿಮ ಪ್ರಮಾಣ ವಚನವಾದ ಖತ್ಮ್-ಇ-ನಬುವತ್ ಬಗ್ಗೆ ಬದಲಾವಣೆ ತಂದುದಕ್ಕಾಗಿ ಕಾನೂನು ಸಚಿವರ ರಾಜೀನಾಮೆಯನ್ನು ಪ್ರತಿಭಟನಕಾರರು ಆಗ್ರಹಿಸುತ್ತಿದ್ದರು.
ಪ್ರತಿಭಟನಕಾರರ ಉಗ್ರ ವಿರೋಧಕ್ಕೆ ಮಣಿದು ಪಾಕ್ ಸರಕಾರ ಕೊನೆಗೂ ಕಾನೂನು ಸಚಿವರ ರಾಜೀನಾಮೆಯನ್ನು ಪಡೆದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
America; ಭಾರತಕ್ಕೆ 84.40 ಕೋ.ರೂ. ಮೌಲ್ಯದ 1,400 ಕಲಾಕೃತಿ ವಾಪಸ್
Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್ ಪರೀಕ್ಷೆ
Iran: ಹಿಜಾಬ್ ನಿರಾಕರಿಸಿದರೆ ವಿಶೇಷ ಕ್ಲಿನಿಕ್: ಇರಾನ್ ತೀರ್ಮಾನಕ್ಕೆ ಆಕ್ರೋಶ
Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್ಗೆ ಕ್ಲೀನ್ಚಿಟ್
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
MUST WATCH
ಹೊಸ ಸೇರ್ಪಡೆ
Lupus Nephritis: ಲೂಪಸ್ ನೆಫ್ರೈಟಿಸ್ ರೋಗಿಗಳಿಗೆ ಒಂದು ಮಾರ್ಗದರ್ಶಿ
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…
Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.