ವಸತಿ ಯೋಜನೆ ಶೌಚಾಲಯಕ್ಕೆ ಇನ್ನು ಖಾತ್ರಿ ಅನುದಾನ
Team Udayavani, Nov 30, 2017, 4:24 PM IST
ಬೆಳ್ತಂಗಡಿ: ವಸತಿ ಯೋಜನೆಯಡಿಯಲ್ಲಿ ನಿರ್ಮಿಸಿಕೊಂಡಿರುವ ಮನೆಗಳ ಶೌಚಾಲಯದ ಅನುದಾನ ಇನ್ನು ಮುಂದೆ ಗ್ರಾಮ ಪಂಚಾಯತ್ ಮೂಲಕ ಉದ್ಯೋಗ ಖಾತ್ರಿಯಿಂದ ಬಿಡುಗಡೆ ಮಾಡಲಾಗುತ್ತದೆ. ಈ ಹಿಂದೆ ನಿಗಮದಿಂದ ಅನುದಾನ ಬಿಡುಗಡೆ ಮಾಡಲಾಗುತ್ತಿತ್ತು.
ಶೌಚಾಲಯ ನಿರ್ಮಿಸಿಕೊಂಡ ಫಲಾನುಭವಿಗಳಿಗೆ ಗ್ರಾ.ಪಂ. ಹಾಗೂ ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮದಿಂದಲೂ ಅನುದಾನ ಬಿಡುಗಡೆ ಮಾಡುತ್ತಿರುವುದರಿಂದ ಒಂದು ಶೌಚಾಲಯಕ್ಕೆ ಎರಡು ಬಾರಿ ಅನುದಾನ ಬಿಡುಗಡೆಯಾಗುವ ಸಾಧ್ಯತೆ ಇರುವುದರಿಂದ ಇನ್ನು ಮುಂದೆ ಶೌಚಾಲಯಕ್ಕೆ
ಸಂಬಂ ಧಿಸಿದಂತೆ ಗ್ರಾ.ಪಂ.ನಿಂದ ಮಾತ್ರ ಅನುದಾನ ಬಿಡುಗಡೆ ಮಾಡಲು ತೀರ್ಮಾನಿಸಲಾಗಿದೆ.
ಯಾವ ಅನುದಾನ
ಫಲಾನುಭವಿಗಳಿಗೆ ಗ್ರಾಮ ಪಂಚಾಯತ್‌ನ ಎನ್‌ಆರ್‌ಇಜಿ ಅನುದಾನದಿಂದ ಶೌಚಾಲಯಕ್ಕೆ ಅನುದಾನವನ್ನು ಒದಗಿಸಲಾಗುತ್ತದೆ. ಈ ಮೊದಲು ನಿಗಮದಿಂದಲೇ ಕೊನೆಯ ಕಂತಿನಲ್ಲಿ ಹಣ ಪಾವತಿಸಲಾಗುತ್ತಿತ್ತು.
ಪ್ರತ್ಯೇಕ ಆದೇಶ
ವಸತಿ ಯೋಜನೆಯಡಿಯಲ್ಲಿ ನಿರ್ಮಿಸುವ ಮನೆಗಳ ಜತೆಗೆ ಶೌಚಾಲಯ ನಿರ್ಮಾಣ ಕಡ್ಡಾಯ ಮಾಡಲಾಗಿದ್ದು, ವಸತಿ ಯೋಜನೆಯಡಿಯಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ ವಸತಿ ಯೋಜನೆಯಡಿಯಲ್ಲಿ ನೀಡಲಾಗುವ ಕಾಮಗಾರಿ ಆದೇಶದೊಂದಿಗೆ ಶೌಚಾಲಯ ನಿರ್ಮಿಸಿಕೊಳ್ಳಲು ಪ್ರತ್ಯೇಕ ಕಾಮಗಾರಿ ಆದೇಶವನ್ನು ಪಿಡಿಒಗಳು ಫಲಾನುಭವಿಗಳಿಗೆ ನೀಡಿ ಶೌಚಾಲಯ ನಿರ್ಮಾಣ ಮಾಡಲು ಅವಕಾಶವಿತ್ತು.
ಕೊನೆಯ ಕಂತಿನಲ್ಲಿ ಪಾವತಿ
ಫಲಾನುಭವಿಗಳ ಮನೆ ಪೂರ್ಣಗೊಂಡ ಅನಂತರ ಕೊನೆಯ ಕಂತಿನಲ್ಲಿ ಜಿಪಿಎಸ್ ಛಾಯಾಚಿತ್ರದ ಆಧಾರದ ಮೇಲೆ ಪ್ರತ್ಯೇಕವಾಗಿ ನಿಗಮದಿಂದ ಶೌಚಾಲಯದ ಅನುದಾನ ಬಿಡುಗಡೆ ಮಾಡಲಾಗುತ್ತಿತ್ತು. ಆದರೆ ಇನ್ನು ಈ ಅನುದಾನವನ್ನು ಗ್ರಾಮ ಪಂಚಾಯತ್ ನೀಡಲಿದೆ.
ಜನರಿಗೆ ಉದ್ಯೋಗ ಖಾತ್ರಿ ಮೂಲಕ ಕೂಲಿ ದೊರೆಯಬೇಕು ಎನ್ನುವ ಕಾರಣದಿಂದ ವಸತಿ ನಿಗಮದವರು ಉದ್ಯೋಗ ಖಾತ್ರಿ ಖಾತೆಗೆ ಹಣ ಜಮೆ ಮಾಡಿ ಅದೇ ಹಣ ಫಲಾನುಭವಿಗೆ ದೊರೆಯುವಂತೆ ಮಾಡಲಾಗುತ್ತದೆ.
– ಶ್ರೀಧರ್, ತಾ.ಪಂ. ವಸತಿ
ವಿಭಾಗದ ಅಧಿಕಾರಿ
ಗುರು ಮುಂಡಾಜೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Protest: ಬಾಂಗ್ಲಾದಲ್ಲಿ ಚಿನ್ಮಯ ಕೃಷ್ಣದಾಸ ಪ್ರಭು ಬಂಧನ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ
Train: ಮುರುಡೇಶ್ವರ ಎಕ್ಸ್‌ಪ್ರೆಸ್ ಸಮಯ ಬದಲಾವಣೆ ಬೇಡ
Mangaluru: ಮದ್ಯ ಅಕ್ರಮ ಸಾಗಾಟ, ದಾಸ್ತಾನು; ಆರೋಪಿ ಖುಲಾಸೆ
National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ
Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Udupi: ಸ್ಥಾಪಕರು ಜೀವನ ಪಾಠ ಮಾಡಿದ್ದ ಎಂಜಿಎಂ ಕಾಲೇಜಿಗೆ ಅಮೃತೋತ್ಸವ
Kollur: ದ್ವಿಪಥ ರಸ್ತೆ ನಿರ್ಮಾಣಕ್ಕೆ ಅಂಗಡಿ ಮುಂಗಟ್ಟು ತೆರವು ಆರಂಭ
Kundapura: ವಿಶ್ವ ವಿಖ್ಯಾತ ಮರವಂತೆಯಲ್ಲಿ ಬಸ್ ನಿಲ್ದಾಣವೇ ಇಲ್ಲ !
”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್
Puttur: ಗ್ರಾಮ ಚಾವಡಿಗೆ 150 ವರ್ಷ ಹಳೆಯ ಕಟ್ಟಡವೇ ಗತಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.