ಕುಮಾರ ಪತ್ರ-ಜನತೆಗೆ ಹತ್ರ: ಹೊಸ ಯೋಜನೆ
Team Udayavani, Dec 1, 2017, 7:05 AM IST
ಬೆಂಗಳೂರು:ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜನರ ಒಲವು ಗಳಿಸುವ ನಿಟ್ಟಿನಲ್ಲಿ ಕರ್ನಾಟಕ ವಿಕಾಸ ವಾಹಿನಿ ಯಾತ್ರೆ ಪ್ರಾರಂಭಿಸಿ ಗ್ರಾಮವಾಸ್ತವ್ಯ ನಡೆಸುತ್ತಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇದೀಗ “ಕುಮಾರಪತ್ರ- ಜನಸಾಮಾನ್ಯರಿಗೆ ಇನ್ನೂ ಹತ್ರ’ ಪತ್ರ ಸಂವಾದಕ್ಕೆ ಮುಂದಾಗಿದ್ದಾರೆ.
ರಾಜ್ಯದ ಜನತೆಯ ತಮ್ಮ ಸಮಸ್ಯೆ, ನೋವು-ನಲಿವು, ಸಸಲಹೆ-ಸೂಚನೆ ಪತ್ರದ ಮೂಲಕ ಪಡೆಯುವುದು ಹಾಗೂ ಸಮಸ್ಯೆಗಳಿಗೆ ಸ್ಪಂದಿಸುವುದು ಇದರ ಉದ್ದೇಶ.
ಪತ್ರ ಬರೆಯುವ ಸಂಬಂಧ ಬಹಿರಂಗ ಪ್ರಕಟಣೆ ನೀಡಿರುವ ಅವರು, ನಾನು ರಾಜ್ಯ ಪ್ರವಾಸ ಮಾಡುತ್ತಿರುವ ಸಂದರ್ಭದದಲ್ಲಿ ಹಲವಾರು ಬಾರಿ ಜನರು ತಮ್ಮ ಭಾವನೆಗಳನ್ನು ನನ್ನ ಬಳಿ ಹಂಚಿಕೊಳ್ಳಲು ಪ್ರಯತ್ನ ಪಟ್ಟಿದ್ದನ್ನು ನಾನು ಗಮನಿಸಿದ್ದೇನೆ. ಆದರೆ, ಅತಿಯಾದ ಜನಗಂಗುಳಿ ಹಾಗೂ ನೂಕು ನುಗ್ಗಲಿನಲ್ಲಿ ಸಾಕಷ್ಟು ಜನರಿಗೆ ತಮ್ಮ ನೋವು-ನಲಿವು ನನ್ನ ಬಳಿ ಹಂಚಿಕೊಳ್ಳಲು ಸಾಧ್ಯವಾಗದೆ ನಿರಾಶರಾಗಿ ತೆರಳಿರುವುದನ್ನು ಅಸಹಾಯಕತೆಯಿಂದ ಗಮನಿಸಿದ್ದೇನೆ. ಸಮಾಜದ ಕಟ್ಟ ಕಡೆಯ ವ್ಯಕ್ತಿಯ ಭಾವನೆಗಳಿಗೂ ಸ್ಪಂದಿಸಬೇಕು ಎಂಬ ಹಂಬಲ ನನ್ನಲಿದೆ. ಹಾಗೆಯೇ ರಾಜ್ಯದ ಅಭಿವೃದ್ಧಿಯ ವಿಚಾರವಾಗಿ ನಿಮ್ಮ ದೃಷ್ಟಿಕೋನ ಸಲಹೆ ಸೂಚನೆ ನಮಗೆ ತಿಳಿಯಬೇಕಿದೆ.
ಅದಕ್ಕೆ ನಿಮ್ಮ ಯಾವುದೇ ಸಲಹೆ-ಸೂಚನೆ, ಸಮಸ್ಯೆ ಇದ್ದರೆ ನಾನು ನಿಮ್ಮಲ್ಲಿ ಒಬ್ಬನು ಎಂದು ಭಾವಿಸಿ ಪತ್ರದ ಮುಖಾಂತರ ಹಂಚಿಕೊಳ್ಳಬೇಕು ಎಂದು ಕಳಕಳಿಯ ಮನವಿ ಮಾಡುತ್ತೇನೆ ಎಂದು ತಿಳಿಸಿದ್ದಾರೆ.
ಸಾರ್ವಜನಿಕರು ಈ ವಿಳಾಸಕ್ಕೆ ಪತ್ರ ಬರೆಯಬಹುದು. (ಎಚ್.ಡಿ.ಕುಮಾರಸ್ವಾಮಿ, ರಂಗ ಎನ್‌ಕ್ಲೇವ್ ಅಪಾರ್ಟ್‌ಮೆಂಟ್ ನಂ.217, ಸರ್.ಸಿ.ವಿ.ರಾಮನ್ ರಸ್ತೆ, ಬೆಂಗಳೂರು-560080) ಎಂದು ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Renukaswamy Case: ದರ್ಶನ್ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Mangaluru: ಕಾಂಡ್ಲಾವನ ಮರೆತ ಸರಕಾರ!; ಅನುದಾನ ಬಾರದೆ ಯೋಜನೆ ಬಾಕಿ
Vitla-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ಅವ್ಯವಸ್ಥೆ: ರಸ್ತೆ ತಡೆದು ಪ್ರತಿಭಟನೆ
Renukaswamy Case: ದರ್ಶನ್ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ
Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.