ರಾಜ್ಯಕ್ಕೆ ಮಲೇಷಿಯಾ ಮರಳು: ಟಿಬಿಜೆ
Team Udayavani, Dec 1, 2017, 7:25 AM IST
ಬೆಂಗಳೂರು: ರಾಜ್ಯದ ಮರಳಿನ ಸಮಸ್ಯೆ ನೀಗಿಸಲು ಮಲೇಷಿಯಾದಿಂದ ಮರಳು ಆಮದು ಮಾಡಿಕೊಳ್ಳಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಕಾನೂನು ಸಚಿವ ಟಿ.ಬಿ. ಜಯಚಂದ್ರ ಹೇಳಿದರು.
ಎಂಎಸ್‌ಐಎಲ್ ಮೂಲಕ ಮಲೇಷಿಯಾದಿಂದ ಮರಳು ಆಮದು ಮಾಡಿಕೊಳ್ಳಲು ನಿರ್ಧರಿಸಲಾಗಿದೆ. ಅಲ್ಲಿನ ಸರ್ಕಾರದೊಂದಿಗೆ ಮಾತುಕತೆ ನಡೆದಿದೆ. ಹೊಸ ವರ್ಷದ ಆರಂಭಕ್ಕೆ ಮರಳು ಆಮದು ಮಾಡಿಕೊಳ್ಳಲಾಗುವುದು ಎಂದು ಹೇಳಿದರು.
ಡೀಲರ್ ನೇಮಕ: ಮರಳನ್ನು 50 ಕೆಜಿಯ ಸಿಮೆಂಟ್ ಚೀಲಗಳಲ್ಲಿ ತುಂಬಿಸಿ ಆಮದು ಮಾಡಿಕೊಳ್ಳಲಾಗುತ್ತಿದೆ.
ಪ್ರತಿ ಟನ್‌ಗೆ 3,500ರಿಂದ 3,800ರೂ. ವರೆಗೆ ಬೆಲೆ ನೀಡಲಾಗುತ್ತಿದೆ. ರಾಜ್ಯಕ್ಕೆ ಆಮದು ಮಾಡಿಕೊಂಡ ನಂತರ
ಎಂಎಸ್‌ಐಎಲ್ ಅಧಿಕೃತವಾಗಿ ಡೀಲರ್‌ಗಳನ್ನು ನೇಮಕ ಮಾಡಿಕೊಂಡು ಹಂಚಿಕೆ ಮಾಡಲಿದೆ ಎಂದು ಹೇಳಿದರು.
ಮರಳಿನ ಸಮಸ್ಯೆ ಪರಿಹಾರ ಹಾಗೂ ಮರಳುಗಾರಿಕೆಗೆ ಪರವಾನಗಿ ನೀಡಲು ಜಿಲ್ಲಾಧಿಕಾರಿ ನೇತೃತ್ವದ ಸಮಿತಿಯನ್ನು
ಬದಲಾಯಿಸಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನಿರ್ದೇಶಕರಿಗೆ ಅಧಿಕಾರ ನೀಡಲಾಗಿದೆ. ಅಕ್ರಮ ಮರಳು
ಸಾಗಣೆ ಮಾಡುವವರ ವಾಹನವನ್ನೂ ವಶಪಡಿಸಿಕೊಳ್ಳಲು ಸೂಚಿಸ ಲಾಗಿದೆ ಎಂದು ಹೇಳಿದರು.
ಸಾಂಪ್ರದಾಯಿಕ ಮರಳುಗಾರಿಕೆ: ಮಂಗಳೂರಿನಲ್ಲಿ ನಾನ್ ಸಿಆರ್‌ಝಡ್ ಮತ್ತು ಸಿಆರ್‌ಝಡ್ ಪ್ರದೇಶಗಳ ಗೊಂದಲ ನಿವಾರಿಸಲಾಗಿದೆ. ಸಾಂಪ್ರದಾಯಿಕ ಮರಳುಗಾರಿಕೆ ಮಾಡುವವರಿಗೆ ಅವಕಾಶ ನೀಡಲು ತೀರ್ಮಾನಿಸಲಾಗಿದೆ
ಎಂದು ಜಯಚಂದ್ರ ಹೇಳಿದರು.
ಮಹದಾಯಿ ಹೋರಾಟಗಾರರಿಗೆ ಕೋರ್ಟ್ ನೋಟಿಸ್ ನೀಡಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಮಹದಾಯಿ ಹೋರಾಟಗಾರರ ಪ್ರಕರಣಗಳನ್ನು ವಾಪಸ್ ಪಡೆಯಲು ಸಂಪುಟ ತೀರ್ಮಾನಿಸಿದೆ. ಈ ಬಗ್ಗೆ ಕೋರ್ಟ್‌ಗೂ ಮಾಹಿತಿ ನೀಡಲಾಗಿದೆ. ಅಂತಿಮವಾಗಿ ಪ್ರಕರಣ ಕೈ ಬಿಡುವ ಕುರಿತು ಕೋರ್ಟ್ ತೀರ್ಮಾನಿಸಲಿದೆ ಎಂದರು. ಇದೇ ವೇಳೆ, ಇಂಧನ ಖರೀದಿ ಹಗರಣ ಕುರಿತು ಸದನ ಸಮಿತಿ ಸದನದಲ್ಲಿ ವರದಿ ಮಂಡನೆ ಮಾಡಿದೆ. ಸದನದ ಸಲಹೆ ಮೇರೆಗೆ ಸರ್ಕಾರ ಮುಂದಿನ ತೀರ್ಮಾನ ಕೈಗೊಳ್ಳಲಿದೆ. ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದ ತನಿಖೆಯನ್ನು ಎಸ್‌ಐಟಿಗೆ ವಹಿಸುವ ಕುರಿತಂತೆಯೂ ಮುಂದಿನ ಸಂಪುಟದಲ್ಲಿ ತೀರ್ಮಾನ ಕೈಗೊಳ್ಳಲಾಗುವುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
MUST WATCH
ಹೊಸ ಸೇರ್ಪಡೆ
Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್ ಡಿಕ್ಕಿ: ಮೊಪೆಡ್ ಸವಾರ ಸಾವು
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು
IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್ ಹೂಡಾ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.