ಸ್ವತ್ಛ ಪರಿಸರ ನಿರ್ಮಾಣಕ್ಕೆ ಶೌಚಾಲಯ ಬಳಕೆ ಅಗತ್ಯ


Team Udayavani, Dec 1, 2017, 2:19 PM IST

bid-3.jpg

ಬಸವಕಲ್ಯಾಣ: ಸ್ವತ್ಛ ಪರಿಸರ ನಿರ್ಮಾಣದಲ್ಲಿ ಶೌಚಾಲಯದ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಪ್ರತಿ ಮನೆ, ಮನೆಯಲ್ಲೂ ಶೌಚಾಲಯ ನಿರ್ಮಿಸಿಕೊಳ್ಳುವ ಜತೆಗೆ ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ| ಮಹಾದೇವ ಸಲಹೆ ನೀಡಿದರು.

ಕಿಟ್ಟಾ ಗ್ರಾಮದಲ್ಲಿ ಗ್ರಾಮ ವಿಕಾಸ ಸಮಿತಿಯಿಂದ ಆಯೋಜಿಸಲಾಗಿದ್ದ ಮನೆಗೊಂದು ಶೌಚಾಲಯ ಹಾಗೂ ಶಾಂತಿ ಮತ್ತು ಸುವ್ಯವಸ್ಥೆ ಮೂಡಿಸಲು ಜನ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಉತ್ತಮ ಆರೋಗ್ಯಕ್ಕೆ ಸ್ವತ್ಛತೆ ಅವಶ್ಯವಾಗಿದೆ ಎಂದರು.

ಅಸ್ವತ್ಛ ಪರಿಸರದಿಂದ ಹರಡುವ ಸಾಂಕ್ರಾಮಿಕ ರೋಗಗಳ ತಡೆಗೆ ಎಲ್ಲೆಡೆ ಸcತ್ಛತೆ ಅಗತ್ಯವಾಗಿದೆ. ಗ್ರಾಮದಲ್ಲಿ ಶೌಚಾಲಯ ಇಲ್ಲದ ಪ್ರತಿಯೊಬ್ಬರು ಶೌಚಾಲಯ ನಿರ್ಮಿಸಿಕೊಂಡು ಸ್ವತ್ಛ-ಸುಂದರ ಗ್ರಾಮವನ್ನಾಗಿಸಲು ಕೈ ಜೋಡಿಸಬೇಕು ಎಂದು ಹೇಳಿದರು. ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ| ಸೆಲ್ವಮಣಿ ಆರ್‌. ಮಾತನಾಡಿ, ಸ್ವತ್ಛ ಭಾರತ ಮಿಷನ್‌ ಯೋಜನೆಯಡಿ ಶೌಚಾಲಯ ನಿರ್ಮಿಸಿಕೊಳ್ಳಲು ಸರ್ಕಾರದಿಂದ ಅಗತ್ಯ ಅನುದಾನ ಕಲ್ಪಿಸಲಾಗುತ್ತಿದ್ದು.

ಹಣಕಾಸಿನ ಕೊರತೆ ಇದ್ದರೆ ತಮ್ಮ ಗಮನಕ್ಕೆ ತರಬೇಕು. ಯಾವುದೇ ಸಮಸ್ಯೆ ಮತ್ತು ದೂರುಗಳು ಇದ್ದರೆ ತಮ್ಮ ಗಮನಕ್ಕೆ ತಂದರೆ ಕ್ರಮ ಕೈಗೊಂಡು ಸಮಸ್ಯೆ ಬಗೆಹರಿಸುವುದಾಗಿ ಹೇಳಿದರು. ಡಿಸೆಂಬರ್‌ ಅಂತ್ಯದ ವರೆಗೆ ಕಿಟ್ಟಾ ಗ್ರಾಪಂ ಬಯಲು ಬಹಿರ್ದೆಸೆ ಮುಕ್ತ ಗ್ರಾಪಂ ಎಂದು ಘೋಷಿಸಬೇಕು ಎಂದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಿ.ದೇವರಾಜ ಮಾತನಾಡಿ, ಗ್ರಾಮದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಗ್ರಾಮಸ್ಥರ ಸಹಕಾರ ಮಹತ್ವದ್ದು. ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟದ ಬಗ್ಗೆ ಈ ಹಿಂದೆ ದೂರು ಬಂದಿದ್ದು, ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಅನಧಿಕೃತ ಮದ್ಯ ಮಾರಾಟ ತಡೆಗೆ ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದರು.

ಯೋಜನೆಯ ಜಿಲ್ಲಾ ನೋಡಲ್‌ ಅಧಿಕಾರಿ  ಡಾ| ಗೌತಮ ಅರಳಿ ಮಾತನಾಡಿದರು. ವಿಕಾಸ ಸಮಿತಿ ಗೌರವಾಧ್ಯಕ್ಷ ಸೂರ್ಯಕಾಂತರೆಡ್ಡಿ ಅಧ್ಯಕ್ಷತೆ ವಹಿಸಿದ್ದರು. ತಹಶೀಲ್ದಾರ ಜಗನ್ನಾಥ ರೆಡ್ಡಿ, ತಾಪಂ ಇಒ ವಿಜಯಕುಮಾರ ಮಡ್ಡೆ
ಉಪಸ್ಥಿತರಿದ್ದರು. 

ಪಿಎಸ್‌ಐ ಹುದ್ದೆಗೆ ನೇಮಕವಾಗಿರುವ ರೋಹಿಣಿ ನಸಕಂಠೆ ಅವರನ್ನು ಇದೇ ವೇಳೆ ಸನ್ಮಾನಿಸಲಾಯಿತು. ವಿಕಾಸ ಸಮಿತಿ ಅಧ್ಯಕ್ಷ ಸಂಜೀವರೆಡ್ಡಿ ಕುದಗೆ ಸ್ವಾಗತಿಸಿದರು. ಗ್ರಾಪಂ ಸದಸ್ಯ ಮಲ್ಲರೆಡ್ಡಿ ಪಾಟೀಲ ಪ್ರಾಸ್ತಾವಿಕ ಮಾತನಾಡಿದರು. ಡಾ| ಅನುಷಾ ಗೋವಿಂದರೆಡ್ಡಿ ಪಾಟೀಲ ನಿರೂಪಿಸಿದರು. ಜಗಮೋಹನ ಮೇತ್ರೆ, ಗುರುನಾಥರೆಡ್ಡಿ ಕುದಗೆ, ಶೇಖ ಫತ್ರುಸಾಬ, ವಿರಶೇಟ್ಟಿ ಪಾಟೀಲ್‌, ಬಸರೆಡ್ಡಿ ಪಾಟೀಲ ವಿಕಾಸ ಸಮಿತಿ ಸದಸ್ಯರು, ಗ್ರಾಮದ ಗಣ್ಯರು ಹಾಜರಿದ್ದರು.

ಟಾಪ್ ನ್ಯೂಸ್

1-aaccc

PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Bidar; ಕಲಾ ಬಿದರಿ ಸಂಗಮ-2024ಕ್ಕೆ ಚಾಲನೆ

Bidar; ಕಲಾ ಬಿದರಿ ಸಂಗಮ-2024ಕ್ಕೆ ಚಾಲನೆ

Bidar-Solha-kamb

Waqf Property: ಬೀದರ್‌ನ ಬಹುಮನಿ ಕೋಟೆಗೂ ವಕ್ಫ್ ಮೊಹರು!

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

5

Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು

1-aaccc

PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.