ಹಿಂದುತ್ವದ ಹೆಸರಲ್ಲಿ ಕಾನೂನು ಕೈಗೆತ್ತಿಕೊಂಡರೆ ಹುಷಾರ್‌


Team Udayavani, Dec 1, 2017, 2:34 PM IST

m2-ingration.jpg

ಮೈಸೂರು: ಹಿಂದುತ್ವದ ಹೆಸರಲ್ಲಿ ಕಾನೂನು ಕೈಗೆತ್ತಿಕೊಂಡು ರಾಜ್ಯದಲ್ಲಿ ಅಲ್ಪಸಂಖ್ಯಾತರು ಆತಂಕದಿಂದ ಬದುಕುವ ಪರಿಸ್ಥಿತಿ ನಿರ್ಮಾಣ ಮಾಡಲು ಬಿಡಲ್ಲ. ಕೋಮುವಾದಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದರು.

ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದಿಂದ ಗುರುವಾರ ಮೈಸೂರಿನಲ್ಲಿ ಆಯೋಜಿಸಿದ್ದ ಅಲ್ಪಸಂಖ್ಯಾತರ ಐಕ್ಯತಾ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.

ಬಿಜೆಪಿಯವರು ಎಷ್ಟೇ ವಿರೋಧಿಸಿದರು, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಏಕಕಾಲಕ್ಕೆ ಟಿಪ್ಪು ಜಯಂತಿ ಆಚರಿಸುವ ಮೂಲಕ ಕೋಮುವಾದಿಗಳಿಗೆ ನಿಮ್ಮ ಆಟ ನಡೆಯಲ್ಲ ಎಂಬ ಎಚ್ಚರಿಕೆಯನ್ನು ಈಗಾಗಲೇ ಕೊಟ್ಟಿದ್ದೇವೆ ಎಂದರು.

ಉತ್ತರ ಪ್ರದೇಶದ ಸನ್ನಿವೇಶ ಕರ್ನಾಟಕದಲ್ಲಿ ಬರಬಾರದು. ಕೋಮು ಶಕ್ತಿಗಳು ಅಧಿಕಾರಕ್ಕೆ ಬರದಂತೆ ತಡೆಯಬೇಕಿದ್ದರೆ ಮನೆ ಮನೆಗೆ ಹೋಗಿ ಈ ಅಂಶಗಳನ್ನು ಹೇಳಿ ಎಂದ ಅವರು, ನಂಜನಗೂಡು-ಗುಂಡ್ಲುಪೇಟೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಸೋತಿದ್ದರೆ ಬಿಜೆಪಿಯವರ ಅಟ್ಟಹಾಸ ತಡೆಯಲಾಗುತ್ತಿರಲಿಲ್ಲ ಎಂದರು.

ಸಂಸ್ಕಾರ ಇಲ್ಲ: ಯಡಿಯೂರಪ್ಪಅವರ ಮಿಷನ್‌ 150 ಠುಸ್‌ ಆಗಿ, ಮಿಷನ್‌ 50ಗೆ ಬಂದಿದೆ ಇದರಿಂದ ಹತಾಶರಾಗಿ ಅಮಿತ್‌ ಶಾ, ಯಡಿಯೂರಪ್ಪ, ಶೋಭಾ ಕರಂದ್ಲಾಜೆ, ಅನಂತಕುಮಾರ್‌ ಹೆಗಡೆ ಅವರೆಲ್ಲರೂ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ.

ಮಾತೆತ್ತಿದರೆ ಸಂಸ್ಕಾರ, ಸಂಸ್ಕೃತಿ ಇರುವವರ ಪಕ್ಷ ನಮ್ಮದು ಎನ್ನುವ ಅವರಲ್ಲಿ ಮನುಷ್ಯತ್ವವೇ ಇಲ್ಲ. ಮನುಷ್ಯತ್ವವೇ ಇಲ್ಲದವರಲ್ಲಿ ಸಂಸ್ಕಾರ, ಸಂಸ್ಕೃತಿ ಎಲ್ಲಿರುತ್ತದೆ, ಸಾಂವಿಧಾನಿಕ ಪದಗಳೇ ಗೊತ್ತಿಲ್ಲದವರು ಶಾಸಕ, ಸಂಸದ, ಮಂತ್ರಿಗಳಾಗಲು ನಾಲಾಯಕ್‌ ಎಂದು ಟೀಕಿಸಿದರು.

ಬಿಜೆಪಿಯವರು ಪರಿವರ್ತನೆಯಾಗಲಿ: ಯಡಿಯೂರಪ್ಪನೇತೃತ್ವದಲ್ಲಿ ಬಿಜೆಪಿಯವರು ಪರಿವರ್ತನಾ ಯಾತ್ರೆ ಹೊರಟಿದ್ದಾರೆ. ಜಾತೀವಾದಿಗಳಾಗಿರುವ ಬಿಜೆಪಿಯವರು ಮೊದಲು ಪರಿವರ್ತನೆಯಾಗಬೇಕು, ನಾಡಿನ ಜನರಲ್ಲ ಪರಿವರ್ತನೆಯಾಗಬೇಕಿರುವುದು ಎಂದರು.

ಯಾತ್ರೆಯುದ್ದಕ್ಕೂ ಯಡಿಯೂರಪ್ಪ, ಸಿದ್ದರಾಮಯ್ಯ ಸರ್ಕಾರದ ಹಗರಣವನ್ನು ಬಿಚ್ಚುತ್ತೀನಿ ಎಂದು ಖಾಲಿ ಬುಟ್ಟಿ ತೋರಿಸುತ್ತಿದ್ದಾರೆ. ಕಳೆದ ನಾಲ್ಕೂವರೆ ವರ್ಷಗಳಲ್ಲಿ ನಾವು ಭ್ರಷ್ಟಾಚಾರ ರಹಿತ, ಹಗರಣ ರಹಿತ ಆಡಳಿತ ನೀಡಿದ್ದೇವೆ ಎಂದರು. ಕರ್ನಾಟಕದಲ್ಲಿ ಮೋದಿ, ಅಮಿತ್‌ ಶಾ ತಂತ್ರಗಾರಿಕೆ  ನಡೆಯಲ್ಲ.

ಇಲ್ಲಿ ಜಾತ್ಯತೀತ ತತ್ವ, ಸಾಮಾಜಿಕ ನ್ಯಾಯದ ಬೀಜಾಂಕುರವಾಗಿದೆ. ಜಗದೀಶ್‌ ಶೆಟ್ಟರ್‌ ಮುಖ್ಯಮಂತ್ರಿಯಾಗಿ ಯಡಿಯೂರಪ್ಪಕೆಜೆಪಿಯಲ್ಲಿದ್ದಾಗ ಟಿಪ್ಪುವನ್ನು ಸ್ವಾತಂತ್ರ ಹೋರಾಟಗಾರ ಎಂದು ಹೇಳಿದ್ದವರು. ಆದರೆ, ಇಂದು ಟಿಪ್ಪು ಮತಾಂಧ ಎಂದು ಯಾವ ನಾಲಗೆಯಿಂದ ಹೇಳುತ್ತೀರಿ ಎಂದು ಪ್ರಶ್ನಿಸಿದರು.

ಬಿಜೆಪಿಯವರಿಗೆ ಸಂವಿಧಾನದ ಬಗ್ಗೆ ಗೌರವವಿಲ್ಲ. ವಾಜಪೇಯಿ ಪ್ರಧಾನಮಂತ್ರಿಯಾಗಿದ್ದ ಅವಧಿಯಲ್ಲಿ ಸಂವಿಧಾನ ಪರಾಮರ್ಶೆಗೆ ಮುಂದಾಗಿದ್ದ ಬಿಜೆಪಿಯವರು ಈಗ ಮತ್ತೆ ಆ ಕೆಲಸಕ್ಕೆ ಕೈಹಾಕಿದ್ದಾರೆ. ಇವರ ಕೈಗೆ ದೇಶ ಸಿಕ್ಕಿದರೆ ಇನ್ನೇನು ಮಾಡುತ್ತಾರೋ ಗೊತ್ತಿಲ್ಲ ಎಂದು ಹರಿಹಾಯ್ದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್‌, ಸಚಿವರಾದ ತನ್ವೀರ್‌, ರೋಷನ್‌ ಬೇಗ್‌, ಯು.ಟಿ.ಖಾದರ್‌, ಡಾ.ಎಚ್‌.ಸಿ.ಮಹದೇವಪ್ಪ, ಎ.ಮಂಜು, ಸಂಸದ ಆರ್‌.ಧ್ರುವನಾರಾಯಣ್‌, ಶಾಸಕರಾದ ಎಂ.ಕೆ.ಸೋಮಶೇಖರ್‌, ವಾಸು, ಕೆ.ವೆಂಕಟೇಶ್‌, ಕಳಲೆ ಕೇಶವಮೂರ್ತಿ,

ವಿಧಾನ ಪರಿಷತ್‌ ಸದಸ್ಯರಾದ ರಿಜನ್‌ ಅರ್ಷದ್‌, ಜಬ್ಟಾರ್‌ ಖಾನ್‌, ಎಐಸಿಸಿ ಕಾರ್ಯದರ್ಶಿಗಳಾದ ಸೂರಜ್‌ ಹೆಗಡೆ, ಸತೀಶ್‌ ಜಾರಕಿಹೊಳಿ, ಮಧು ಯಾಕ್ಷಿಗೌಡ, ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಸಯೀದ್‌ ಅಹ್ಮದ್‌ ಮೊದಲಾದವರು ಸಮಾವೇಶದಲ್ಲಿ ಹಾಜರಿದ್ದರು.

ಟಾಪ್ ನ್ಯೂಸ್

Karkala: ತಿಂಗಳ ಹಿಂದೆ ಮೃತಪಟ್ಟಿದ್ದ ಪತಿ, ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ

Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ

Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿಯೂ ವಿದ್ಯುತ್ ಆಘಾತದಿಂದ ಮೃ*ತ್ಯು

Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

1-amudaa

MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ‌ 9 ಗಂಟೆ ವಿಚಾರಣೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರMUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

FIR: ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರಿನಲ್ಲಿ ಎಫ್ಐಆರ್‌

FIR: ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರಿನಲ್ಲಿ ಎಫ್ಐಆರ್‌

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

7

Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು

Karkala: ತಿಂಗಳ ಹಿಂದೆ ಮೃತಪಟ್ಟಿದ್ದ ಪತಿ, ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ

Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ

6

Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ

5

Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ

Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿಯೂ ವಿದ್ಯುತ್ ಆಘಾತದಿಂದ ಮೃ*ತ್ಯು

Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.