ಶಿವಸೇನೆಗೆ ಕನ್ನಡ ನೆಲದಲ್ಲಿ ಸ್ಥಳವಿಲ್ಲ


Team Udayavani, Dec 2, 2017, 3:01 PM IST

shivasene.jpg

ಬೆಂಗಳೂರು: ಬೆಳಗಾವಿ ವಿಚಾರದಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿಗೆ ನಿರಂತರವಾಗಿ ಬೆಂಬಲಿಸುತ್ತಾ ಕನ್ನಡಿಗರ ಸ್ವಾಭಿಮಾನಕ್ಕೆ ಸವಾಲು ಹಾಕಿದ ನಾಡ ವಿರೋಧಿ ಶಿವಸೇನೆ ಪಕ್ಷವನ್ನು ರಾಜ್ಯದಲ್ಲಿ ಸ್ಥಾಪಿಸಲು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಕರ್ನಾಟಕ ನವನಿರ್ಮಾಣ ಸೇನೆ ಎಚ್ಚರಿಸಿದೆ.

ನಗರದ ಆನಂದರಾವ್‌ ವೃತ್ತದ ಗಾಂಧಿ ಪ್ರತಿಮೆ ಸಮೀಪ ಶ್ರೀರಾಮಸೇನೆ ರಾಷ್ಟ್ರಾಧ್ಯಕ್ಷ ಪ್ರಮೋದ್‌ ಮುತಾಲಿಕ್‌ ಅವರ ಪ್ರತಿಕೃತಿ ದಹಿಸಿದ ಸೇನೆ ಕಾರ್ಯಕರ್ತರು, ಶಿವಸೇನೆಯನ್ನು ಕರ್ನಾಟಕದಲ್ಲಿ ಸ್ಥಾಪಿಸಲು ಹೊರಟಿರುವ ಶ್ರೀರಾಮ ಸೇನೆ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. 

ಕನ್ನಡ, ಕನ್ನಡಿಗ, ಕರ್ನಾಟಕವನ್ನು ನಿರಂತರವಾಗಿ ವಿರೋಧಿಸುತ್ತಾ ಬಂದ ಶಿವಸೇನೆಗೆ ಕನ್ನಡದ ನೆಲದಲ್ಲಿ ರಾಜಕಾರಣಮಾಡಲು ಯಾವುದೇ ನೈತಿಕ ಹಕ್ಕಿಲ್ಲ. ಕೊಲ್ಲಾಪುರ ಜಿಲ್ಲೆಯ ಗಡಿ ಗ್ರಾಮ ಮಹಾಜನ ವರದಿ ಅನ್ವಯ ಕರ್ನಾಟಕಕ್ಕೆ ಸೇರಿರುವ ಶಿನ್ನೋಳ್ಳಿಯಲ್ಲಿ ಶಿವಸೇನೆ ವರಿಷ್ಠ ಉದ್ದವ್‌ ಠಾಕ್ರೆ ಬೆಳಗಾವಿ ಮಹಾರಾಷ್ಟ್ರದ್ದು ಎಂದು ಉದ್ಧಟತನದ ಹೇಳಿಕೆ ನೀಡಿ ಹೋಗಿದ್ದಾರೆ.

ಇಂತಹ ನಾಡ ದ್ರೋಹಿಗಳಿಗೆ ಕರ್ನಾಟಕದಲ್ಲಿ ಅಸ್ತಿತ್ವ ಸ್ಥಾಪಿಸಲು ಕರ್ನಾಟಕ ನವನಿರ್ಮಾಣ ಸೇನೆ ಯಾವ ಕಾರಣಕ್ಕೂ ಬಿಡುವುದಿಲ್ಲ ಎಂದು ಸೇನೆ ರಾಜ್ಯಾಧ್ಯಕ್ಷ ಭೀಮಾಶಂಕರ ಪಾಟೀಲ ಸವಾಲು ಹಾಕಿದರು. ಶಿವಸೇನೆಯನ್ನು ಕರ್ನಾಟಕಕ್ಕೆ ತರಬೇಕು ಎಂದು ಶ್ರೀರಾಮಸೇನೆ ಮುಖಂಡ ಪ್ರಮೋದ್‌ ಮುತಾಲಿಕ್‌ ಹಾಗೂ ಕೆಲ ರಾಜಕಾರಣಿಗಳು ಪ್ರಯತ್ನಿಸುತ್ತಿದ್ದಾರೆ.

ಅವರು ನಿಜವಾದ ಕನ್ನಡಿಗರೇ ಆಗಿದ್ದರೆ, ಅವರ ಮೈಯಲ್ಲಿ ಕನ್ನಡದ ರಕ್ತವೇ ಹರಿಯುತ್ತಿದ್ದರೆ ಈ ಕೂಡಲೇ ತಮ್ಮ ಪ್ರಯತ್ನ ಕೈಬಿಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಗಡಿನಾಡು ಬೆಳಗಾವಿ ಜಿಲ್ಲೆಯ ವಿಚಾರದಲ್ಲಿ ಕನ್ನಡ ಮತ್ತು ಮರಾಠಿಗರ ಮಧ್ಯೆ ಭಾಷಾ ದ್ವೇಷದ ಕಿಡಿ ಹಚ್ಚಿ ಬೆಳಗಾವಿ ಸೇರಿದಂತೆ ಕಾರವಾರ, ಬೀದರ್‌,

ನಿಪ್ಪಾಣಿ, ಬಾಲ್ಕಿ ಪ್ರದೇಶಗಳು ಮಹಾರಾಷ್ಟ್ರ ಪ್ರದೇಶಗಳು ಎಂದು ರಾಜ್ಯದ ಭೂ ಭಾಗಗಳ ಮೇಲಿಂದಲೇ ತಮ್ಮ ಅಸ್ತಿತ್ವ ಕಟ್ಟಿಕೊಂಡಿರುವ ಪಕ್ಷ ಶಿವಸೇನೆ. ಧರ್ಮದ ಹೆಸರಿನಲ್ಲಿ ಮಾಡಬಾರದ ಅನಾಚಾರಗಳನ್ನು ಶಿವಸೇನೆ ಮಹಾರಾಷ್ಟ್ರದಲ್ಲಿ ಮಾಡಿದೆ. ಮಹಾದಾಯಿ ನೀರು ಹಂಚಿಕೆ ವಿಚಾರದಲ್ಲಿ ಬಹಿರಂಗವಾಗಿಯೇ ಕರ್ನಾಟಕವನ್ನು ವಿರೋಧಿಸಿದೆ.

ಬೆಳಗಾವಿಯಲ್ಲಿ ಹಲವಾರು ಗಡಿ ಸಂಘರ್ಷಗಳಿಗೆ ಪೀಠಿಕೆ ಹಾಕಿರುವ ಶಿವಸೇನೆಗೆ ಕನ್ನಡಿಗರು ಬೆಂಬಲಿಸಬಾರದು. ಶ್ರೀರಾಮಸೇನೆ ಕೂಡಲೇ ತನ್ನ ನಿರ್ಧಾರದಿಂದ ಹಿಂದಕ್ಕೆ ಸರಿಯಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಕರ್ನಾಟಕ ನವನಿರ್ಮಾಣ ಸೇನೆ ಕಾರ್ಯಕರ್ತರು ಎಚ್ಚರಿಕೆ ನೀಡಿದರು.

ಟಾಪ್ ನ್ಯೂಸ್

arrest-lady

PM Modi ಹ*ತ್ಯೆಗೆ ಯೋಜನೆ ಸಿದ್ಧ: ಕರೆ ಮಾಡಿದ್ದ ಮಹಿಳೆ ಬಂಧನ

Missing Case: ಇನ್ನಾ ಗ್ರಾಮದ ವ್ಯಕ್ತಿ ನಾಪತ್ತೆ

Missing Case: ಇನ್ನಾ ಗ್ರಾಮದ ವ್ಯಕ್ತಿ ನಾಪತ್ತೆ

Missing Case: ಪಡುಬಿದ್ರಿ: ಗೃಹಿಣಿ ನಾಪತ್ತೆ; ದೂರು ದಾಖಲು

Missing Case: ಪಡುಬಿದ್ರಿ: ಗೃಹಿಣಿ ನಾಪತ್ತೆ; ದೂರು ದಾಖಲು

Padubidri; ಖಾಸಗಿ ಬಸ್‌ ಢಿಕ್ಕಿ: ವಿದ್ಯಾರ್ಥಿಗೆ ಗಂಭೀರ ಗಾಯ

Padubidri; ಖಾಸಗಿ ಬಸ್‌ ಢಿಕ್ಕಿ: ವಿದ್ಯಾರ್ಥಿಗೆ ಗಂಭೀರ ಗಾಯ

rain

Tamil Nadu;ಸೈಕ್ಲೋನ್‌ ದುರ್ಬಲವಾದ್ರೂ ಭಾರೀ ಮಳೆ?

Belthangady: ಗೋ ಅಕ್ರಮ ಸಾಗಾಟ ತಡೆದ ಬಜರಂಗ ದಳ ಕಾರ್ಯಕರ್ತರು

Belthangady: ಗೋ ಅಕ್ರಮ ಸಾಗಾಟ ತಡೆದ ಬಜರಂಗ ದಳ ಕಾರ್ಯಕರ್ತರು

Sullia: ಬೈಕ್‌ ಮೇಲೆ ಜಿಗಿದ ಕಡವೆ; ಸವಾರರಿಗೆ ಗಾಯ

Sullia: ಬೈಕ್‌ ಮೇಲೆ ಜಿಗಿದ ಕಡವೆ; ಸವಾರರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

arrest-lady

PM Modi ಹ*ತ್ಯೆಗೆ ಯೋಜನೆ ಸಿದ್ಧ: ಕರೆ ಮಾಡಿದ್ದ ಮಹಿಳೆ ಬಂಧನ

Missing Case: ಇನ್ನಾ ಗ್ರಾಮದ ವ್ಯಕ್ತಿ ನಾಪತ್ತೆ

Missing Case: ಇನ್ನಾ ಗ್ರಾಮದ ವ್ಯಕ್ತಿ ನಾಪತ್ತೆ

Mangaluru: ಹಂಪನಕಟ್ಟೆ; ಬೇಕರಿ ಕೆಲಸಗಾರ ನಾಪತ್ತೆ

Mangaluru: ಹಂಪನಕಟ್ಟೆ; ಬೇಕರಿ ಕೆಲಸಗಾರ ನಾಪತ್ತೆ

Missing Case: ಪಡುಬಿದ್ರಿ: ಗೃಹಿಣಿ ನಾಪತ್ತೆ; ದೂರು ದಾಖಲು

Missing Case: ಪಡುಬಿದ್ರಿ: ಗೃಹಿಣಿ ನಾಪತ್ತೆ; ದೂರು ದಾಖಲು

Kumbla: ಬುರ್ಖಾಧಾರಿ ಯುವಕ ಪೊಲೀಸ್‌ ವಶಕ್ಕೆ

Kumbla: ಬುರ್ಖಾಧಾರಿ ಯುವಕ ಪೊಲೀಸ್‌ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.