ಅನ್ಯ ಕೆಲಸಗಳಿಂದ ಶಿಕ್ಷಕರಿಗೆ ಮುಕ್ತಿ ನೀಡಿ
Team Udayavani, Dec 2, 2017, 3:01 PM IST
ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುವಂತೆ ಎಲ್ಲ ರೀತಿಯ ಮೂಲ ಸೌಲಭ್ಯ ಒದಗಿಸುವ ಅವಶ್ಯಕತೆ ಇದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷೆ ಡಾ.ವಸುಂಧರಾ ಭೂಪತಿ ಹೇಳಿದ್ದಾರೆ.
ಕರ್ನಾಟಕ ಲೇಖಕಿಯರ ಸಂಘದಿಂದ ಶೇಷಾದ್ರಿಪುರಂ ಪದವಿಪೂರ್ವ ಕಾಲೇಜಿನಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ವವ ಹಾಗೂ ಇಂದಿರಾ ದತ್ತಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶಾಲೆಗಳ ಸಬಲೀಕರಣವಾಗದ ಹೊರತು ಸಮಾನ ಶಿಕ್ಷಣ ಸಿಗಲು ಸಾಧ್ಯವಿಲ್ಲ.
ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರನ್ನು ಬೇರೆ ಬೇರೆ ಕೆಲಸಗಳಿಗೆ ಬಳಕೆ ಮಾಡಿಕೊಳ್ಳುತ್ತಿರುವುದರಿಂದ ನಿಗದಿತ ಸಮಯಕ್ಕೆ ಪಠ್ಯಕ್ರಮ ಪೂರ್ಣಗೊಳಿಸಲು ಸಾಧ್ಯವಾಗುತ್ತಿಲ್ಲ. ಇದರಿಂದ ವಿದ್ಯಾರ್ಥಿಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಬೋಧನೆಗೆ ಶಿಕ್ಷಕರನ್ನು ಬಳಸಿಕೊಂಡು, ಇತರ ಕೆಲಸಗಳಿಂದ ವಿನಾಯ್ತಿ ನೀಡುಬೇಕೆಂದು ಒತ್ತಾಯಿಸಿದರು.
ಸರ್ಕಾರ ಸರೋಜಿನಿ ಮಹಿಷಿ ಪರಿಷ್ಕೃತ ವರದಿ ಜಾರಿಗೆ ಮುಂದಾಗಬೇಕು. ಈ ಮೂಲಕ ಕನ್ನಡಿಗರಿಗೆ ಈ ನಾಡಿನಲ್ಲಿ ಕೆಲಸ ಸಿಗುವಂತೆ ಮಾಡಿದಾಗ ಮಾತ್ರ ಕನ್ನಡ ಶಾಲೆಗಳು, ಕನ್ನಡ ಭಾಷೆ ಉಳಿಯಲು ಸಾಧ್ಯವಿದೆ. ಮುಖ್ಯವಾಗಿ ಖಾಸಗಿ ಶಾಲೆಗಳಿಗೆ ಆರ್‌ಟಿಇ ಯೋಜನೆಯಡಿ ನೀಡುವ ಹಣವನ್ನು ಸರ್ಕಾರಿ ಶಾಲೆಗಳಿಗೆ ನೀಡಬೇಕು.
ಇದರಿಂದ ಅಲ್ಲಿ ಮೂಲಭೂತಸೌಕರ್ಯ ಸಿಗುವಂತೆ ಮಾಡುವ ಜತೆಗೆ ಶಿಕ್ಷಕರು ಇಂದಿನ ಕಾಲಮಾನಕ್ಕೆ ತಕ್ಕಂತೆ ಅಪ್‌ಡೇಟ್ ಆಗುವಂತೆ ಪ್ರೇರೇಪಿಸಿ, ಅಗತ್ಯ ತರಬೇತಿ ನೀಡುವ ಅವಶ್ಯಕತೆ ಇದೆ. ಇದು ಸರ್ಕಾರಿ ಶಾಲೆಗಳ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದರು.
ಇಂದಿರಾ ದತ್ತಿ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ತಮಿಳ್‌ಸೆಲ್ವಿ ಅವರು, ಗಣರಾಜ್ಯದ ಸಂದರ್ಭದಲ್ಲಿ ಅನೇಕ ರಾಜ್ಯಗಳು ಭಾಷೆ ಆಧಾರದ ಮೇಲೆ ರಚನೆಯಾಗಿವೆ. ಎಲ್ಲೂ ಕೂಡ ರಾಜ್ಯೋತ್ಸವ ಆಚರಿಸುವುದಿಲ್ಲ. ಆದರೆ, ಕರ್ನಾಟಕದಲ್ಲಿ ಮಾತ್ರ ವಿಜೃಂಭಣೆಯಿಂದ ಕನ್ನಡ ರಾಜ್ಯೋತ್ಸವ ಆಚರಿಸಲಾಗುತ್ತಿದೆ.
ಇದು ಕನ್ನಡ ಭಾಷೆ, ಇಲ್ಲಿನ ಮಣ್ಣಿಗೆ ನೀಡುವ ಗೌರವ ಎಂದು ಶ್ಲಾ ಸಿದರು. ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿ ಬಿ.ಆರ್. ಲಕ್ಷ್ಮಣರಾವ್, ಪ್ರೊ.ಸುಕನ್ಯ ಮಾರುತಿ, ಶೇಪಾದ್ರಿಪುರಂ ಕಾಲೇಜು ಪ್ರಾಚಾರ್ಯ ಪ್ರೊ.ಟಿ.ನಾರಾಯಣಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.