ರಾಜ್ಯ ಹಾಕಿ ಸಂಸ್ಥೆಯಿಂದಲೇ ಕಿರಿಯರಿಗೆ ಕತ್ತರಿ?

Team Udayavani, Dec 3, 2017, 6:15 AM IST

Karnataka-State-Hockey.jpg

ಬೆಂಗಳೂರು: ಕರ್ನಾಟಕದಲ್ಲಿ ಹಾಕಿ ಕುಸಿತಕ್ಕೆ ಕಾರಣಗಳೇನು? ಉತ್ತರ ಹುಡುಕುತ್ತಾ ಹೋದರೆ ಹಲವಾರು ಕಾರಣ ತೆರೆದುಕೊಳ್ಳುತ್ತದೆ. ತುಸು ಆತಂಕಕ್ಕೂ ಎಡೆಮಾಡಿಕೊಡುತ್ತದೆ.

ಸ್ವತಃ ರಾಜ್ಯ ಹಾಕಿ ಸಂಸ್ಥೆ ಬೇಜವಾಬ್ದಾರಿ ತನ, ಕೋಚ್‌ಗಳ ನಿರ್ಲಕ್ಷ್ಯದಿಂದ ರಾಜ್ಯ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕುಗ್ಗಿದೆ. ಹೀಗೊಂದು ಸ್ಫೋಟಕ ಸುದ್ದಿಯನ್ನು ಹಾಕಿ  ಕರ್ನಾಟಕದ ಹೆಸರು ಹೇಳಲಿಚ್ಛಿಸದ ವ್ಯಕ್ತಿಯೊಬ್ಬರು ಉದಯವಾಣಿಗೆ ತಿಳಿಸಿದ್ದಾರೆ. ಆದರೆ ಹಾಕಿ ಕರ್ನಾಟಕ ಪ್ರಧಾನ ಕಾರ್ಯದರ್ಶಿ ಎಬಿ.ಸುಬ್ಬಯ್ಯ ಈ ಆರೋಪವನ್ನು ತಳ್ಳಿ ಹಾಕಿದ್ದಾರೆ.

ಹಾಕಿ ಕರ್ನಾಟಕ ನಿರ್ಲಕ್ಷ್ಯವೇ?: ಕಳೆದ 5-6 ವರ್ಷದಲ್ಲಿ ಹಾಕಿ ಕರ್ನಾಟಕ ಕಿರಿಯರಿಗಾಗಿ ಕೂಟವನ್ನು ಸರಿಯಾಗಿ ಆಯೋಜಿಸುತ್ತಿಲ್ಲ. ಇದರಿಂದ ಹಾಕಿ ಕರ್ನಾಟಕದ ಹುಡುಗರು ದೊಡ್ಡ ಮಟ್ಟದಲ್ಲಿ ಅವಕಾಶ ಕಳೆದುಕೊಳ್ಳುತ್ತಿದ್ದಾರೆ. ಸದ್ಯ ರಾಜ್ಯದಲ್ಲಿ ವರ್ಷಕ್ಕೆ 2 ಪ್ರಮುಖ ಕೂಟ ಆಯೋಜಿಸಿದರೆ ಅದುವೇ ದೊಡ್ಡದು. ಹೆಚ್ಚು ಕೂಟವನ್ನು ಆಡಿ, ಸಾಮರ್ಥ್ಯ, ಕೌಶಲ್ಯ ಹೆಚ್ಚಿಸಿಕೊಳ್ಳಬೇಕಾಗಿದ್ದು ಅಗತ್ಯ. ಆದರೆ ಕಿರಿಯ ಆಟಗಾರರನ್ನು ಸಂಪೂರ್ಣ ನಿರ್ಲಕ್ಷಿéಸಲಾಗಿದೆ. ಇದರಿಂದ ರಾಷ್ಟ್ರೀಯ ಕಿರಿಯರ ತಂಡದಲ್ಲಿ ರಾಜ್ಯ ಆಟಗಾರರಿಗೆ ಸ್ಥಾನ ಪಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಹಾಕಿ ಕರ್ನಾಟಕದ ಆಡಳಿತಾಧಿಕಾರಿಯೊಬ್ಬರ ಬೇಸರ ವ್ಯಕ್ತಪಡಿಸಿದ್ದಾರೆ.

ಸತ್ಯಕ್ಕೆ ದೂರವಾದ ಆರೋಪ: ರಾಜ್ಯ ಆಟಗಾರರಿಗೆ ಭಾರತ ತಂಡದಲ್ಲಿ ಸ್ಥಾನ ಸಿಗದಿರಲು ಹಾಕಿ ಕರ್ನಾಟಕವೇ ಕಾರಣ ಅನ್ನುವ ಆರೋಪವನ್ನು ಹಾಕಿ ಕರ್ನಾಟಕ ಪ್ರಧಾನ ಕಾರ್ಯದರ್ಶಿ ಎಬಿ.ಸುಬ್ಬಯ್ಯ ತಳ್ಳಿ ಹಾಕಿದ್ದಾರೆ. ಕಿರಿಯರ ಹಾಗೂ ಹಿರಿಯರ ಕೂಟ ಹೆಚ್ಚು ಆಯೋಜಿಸಲು ಆಗುವುದಿಲ್ಲ. ಹಾಗಂತ ಆಯೋಜಿಸಿಯೇ ಇಲ್ಲ ಎಂದು ಆರೋಪಿಸುತ್ತಿರುವುದು ಸತ್ಯಕ್ಕೆ ದೂರವಾದ ಮಾತು. ಅಖೀಲ ಭಾರತ ಮಟ್ಟದ ಒಂದು ಕೂಟವನ್ನು ಆಯೋಜಿಸಲು 60 ಲಕ್ಷ ರೂ. ಬೇಕು. 

ಅಷ್ಟೊಂದು ಹಣವನ್ನು ಖರ್ಚು ಮಾಡುವುದು ಸದ್ಯದ ಪರಿಸ್ಥಿತಿಯಲ್ಲಿ ಭಾರೀ ಕಷ್ಟದ ವಿಚಾರ. ನಮ್ಮಲ್ಲೂ ಕೆಲವೊಂದು ಸಮಸ್ಯೆಗಳಿವೆ ಅನ್ನುವುದನ್ನು ಯಾರೂ ಮರೆಯಬಾರದು ಎಂದು ತಿಳಿಸಿದರು.

ತರಬೇತುದಾರರ ಬೇಜವಾಬ್ದಾರಿ?: ಭಾರತೀಯ ಕ್ರೀಡಾ ಪ್ರಾಧಿಕಾರ (ಸಾಯ್‌)ದಲ್ಲಿ ರಾಜ್ಯದ 70ಕ್ಕೂ ಹೆಚ್ಚು ಹಾಕಿಪಟುಗಳು ತರಬೇತಿ ಪಡೆಯುತ್ತಿದ್ದಾರೆ. ಇವರೆಲ್ಲರೂ ಹಾಕಿ ಕರ್ನಾಟಕದಿಂದ ಮಾನ್ಯತೆ ಹೊಂದಿದವರು. ಆದರೆ ಅವರಿಗೆ ಕೋಚ್‌ಗಳಿಂದ ಪರಿಣಾಮಕಾರಿಯಾಗಿ ತರಬೇತಿ ಸಿಗುತ್ತಿಲ್ಲ ಎಂದು ಹಾಕಿ ಕೂರ್ಗ್‌ ಅಧ್ಯಕ್ಷ ಪಿ.ಇ.ಕಾಳಯ್ಯ ತಿಳಿಸಿದ್ದಾರೆ. 4 ವರ್ಷದ ಹಿಂದೆ ಬೆಂಗಳೂರಿನ ಸಾಯ್‌ನಿಂದ ನಿಕಿನ್‌ ತಿಮ್ಮಯ್ಯ ಮಾತ್ರ ಭಾರತೀಯ ತಂಡಕ್ಕೆ ಆಯ್ಕೆಯಾಗಿದ್ದರು. ಅವರ ಬಳಿಕ ಸಾಯ್‌ನಿಂದ ಒಬ್ಬ ಆಟಗಾರನೂ ಭಾರತ ತಂಡಕ್ಕೆ ಆಯ್ಕೆಯಾಗಿಲ್ಲ. ಇದು ತೀವ್ರ ಬೇಸರದ ಸಂಗತಿ ಎಂದು ಕಾಳಯ್ಯ ವಿವರಿಸಿದರು.

ಉತ್ತರ ಭಾರತ ಲಾಭಿ
ಕಿರಿಯರ ರಾಷ್ಟ್ರೀಯ ಕೂಟಕ್ಕೆ ರಾಜ್ಯದ ಆಟಗಾರರು ಏಕೆ ಆಯ್ಕೆಯಾಗುತ್ತಿಲ್ಲ. ಇದಕ್ಕೆ ಉತ್ತರ ಭಾರತದಲ್ಲಿ ನಡೆಯುವ ಲಾಭಿ ಕೂಡ ಒಂದು ಕಾರಣವಂತೆ. ಹೌದು. ಸ್ವತಃ ಸಾಯ್‌ ಕೋಚ್‌ವೊಬ್ಬರು ಇದನ್ನು ಉದಯವಾಣಿಗೆ ಖಚಿತಪಡಿಸಿದ್ದಾರೆ.

ಹೇಗೆ ನಡೆಯುತ್ತೆ ಲಾಭಿ?: ಉತ್ತರ ಭಾರತದಲ್ಲಿ ಮೊದಲು ಕ್ರೀಡೆ ಬಳಿಕ ಶಿಕ್ಷಣ. ಆದರೆ ದಕ್ಷಿಣ ಭಾರತದಲ್ಲಿ ಶಿಕ್ಷಣಕ್ಕೇ ಮೊದಲ ಆಧ್ಯತೆ. ಉದಾಹರಣೆಗೆ ಹಾಕಿ ಹುಡುಗನೊಬ್ಬ ಹಂತಹಂತವಾಗಿ ಬಂದು 10ನೇ ತರಗತಿಗೆ ತಲುಪುತ್ತಾನೆ. ಆಗ ಅವನಿಗೆ  16 ವರ್ಷ ಆಗಿರುತ್ತದೆ ಎಂದಿಟ್ಟುಕೊಳ್ಳೋಣ. ಆದರೆ ಉತ್ತರ ಭಾರತದಲ್ಲಿ ಹಾಕಿ ಪಟುಗಳು ಶಾಲೆಗೆ ಹೋಗುವುದಿಲ್ಲ. 20 ವರ್ಷದವನು ಕೂಡ ನಕಲಿ ಪ್ರಮಾಣ ಪತ್ರದೊಂದಿಗೆ ನೇರವಾಗಿ 10ನೇ ತರಗತಿ ಪರೀಕ್ಷೆ ಬರೆಯುತ್ತಾನೆ. ನಮ್ಮ ಹುಡುಗನಿಗಿಂತ 4 ವರ್ಷ ದೊಡ್ಡವನು ಮುಂದೆ ಜೂನಿಯರ್‌ ಹಾಕಿ ಆಯ್ಕೆಗೆ ಬರುತ್ತಾನೆ. ಅವನಿಗೆ ಅವಕಾಶ ಸಿಗುತ್ತದೆ. ನಮ್ಮವನಿಗೆ ನಿರಾಶೆಯಾಗುತ್ತದೆ. ಇದು ದೊಡ್ಡ ಮಟ್ಟದಲ್ಲಿ ನಡೆಯುವ ಲಾಭಿ. ಕಳೆದ ವಿಶ್ವಕಪ್‌ ವಿಜೇತ ಕಿರಿಯರ ತಂಡದಲ್ಲೂ ಅನೇಕ ಆಟಗಾರರಿಗೆ ಈ ರೀತಿಯಲ್ಲಿ ನಿರಾಶೆಯಾಗಿದೆ ಎಂದು ಕೋಚ್‌ ಅಸಮಾಧಾನ ವ್ಯಕ್ತಪಡಿಸಿದರು.

– ಹೇಮಂತ್‌ ಸಂಪಾಜೆ

ಟಾಪ್ ನ್ಯೂಸ್

Delhi: ಪ್ರಿಯಕರನ ಜೊತೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪತ್ನಿ… ಮುಂದೆ ಆಗಿದ್ದೇ ಬೇರೆ

Delhi: ಪ್ರಿಯಕರನ ಜೊತೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪತ್ನಿ… ಬಳಿಕ ನಡೆದದ್ದು ಘೋರ

ಭಾರತದಲ್ಲಿ ಶ್ರೀರಾಮನ ಸಂಪ್ರದಾಯ ಮುಂದುವರಿಯಲಿದೆ ವಿನಃ ಬಾಬರನದ್ದಲ್ಲ: ಸಿಎಂ ಯೋಗಿ

ಭಾರತದಲ್ಲಿ ಶ್ರೀರಾಮನ ಸಂಪ್ರದಾಯ ಮುಂದುವರಿಯಲಿದೆ ವಿನಃ ಬಾಬರನದ್ದಲ್ಲ: ಸಿಎಂ ಯೋಗಿ

Charmady: ನದಿಯಲ್ಲಿ ಗೋವುಗಳ ತಲೆ ಸೇರಿದಂತೆ ಅವಶೇಷ ಪತ್ತೆ

Charmady: ನದಿಯಲ್ಲಿ ಗೋವುಗಳ ತಲೆ ಸೇರಿದಂತೆ ಅವಶೇಷ ಪತ್ತೆ

Chhattisgarh: ಜೀವಂತ ಕೋಳಿ ಮರಿ ನುಂಗಿ ವ್ಯಕ್ತಿ ಸಾ*ವು…ಆದರೆ ಕೋಳಿ ಮರಿ ಬಚಾವ್!

Chhattisgarh: ಜೀವಂತ ಕೋಳಿ ಮರಿ ನುಂಗಿ ವ್ಯಕ್ತಿ ಸಾ*ವು…ಆದರೆ ಕೋಳಿ ಮರಿ ಬಚಾವ್!

ಗರ್ಭಿಣಿ ಪತ್ನಿ ಜತೆ ಇರಲು ರಜೆ ಕೊಡದ ಅಧಿಕಾರಿಗಳು: ಆತ್ಮ*ಹತ್ಯೆ ಮಾಡಿಕೊಂಡ ಪೊಲೀಸ್ ಕಮಾಂಡೋ

ಗರ್ಭಿಣಿ ಪತ್ನಿ ಜತೆ ಇರಲು ರಜೆ ಕೊಡದ ಅಧಿಕಾರಿಗಳು: ಆತ್ಮ*ಹತ್ಯೆ ಮಾಡಿಕೊಂಡ ಪೊಲೀಸ್ ಕಮಾಂಡೋ

ಕಲ್ಮಕಾರು: ಅಯ್ಯಪ್ಪ ವೃತಧಾರಿ ಮೇಲೆ ಕಾಡಾನೆ ದಾಳಿ… ಆಸ್ಪತ್ರೆಗೆ ದಾಖಲು

ಕಲ್ಮಕಾರು: ಅಯ್ಯಪ್ಪ ವೃತಧಾರಿ ಮೇಲೆ ಕಾಡಾನೆ ದಾಳಿ… ಆಸ್ಪತ್ರೆಗೆ ದಾಖಲು

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqewq

T20; ವೆಸ್ಟ್‌ ಇಂಡೀಸ್‌ ಎದುರು ಬಾಂಗ್ಲಾದೇಶ ಗೆಲುವಿನ ಆರಂಭ

1-arg

T20I;ಡಬಲ್‌ ಹ್ಯಾಟ್ರಿಕ್‌ ಸಾಧನೆ ಮೆರೆದ ಆರ್ಜೆಂಟೀನಾದ ಫೆನೆಲ್‌

1-gukesh

Gukesh Dommaraju; ಚದುರಂಗ ಚಾಂಪಿಯನ್‌ ಗೆ ತವರೂರು ಚೆನ್ನೈಯಲ್ಲಿ ಭವ್ಯ ಸ್ವಾಗತ

1-mahe

MAHE;ಅ.ಭಾ.ಅಂತರ್‌ ವಿ.ವಿ. ವನಿತಾ ಟೆನಿಸ್‌: ಒಸ್ಮಾನಿಯಾ ವಿ.ವಿ. ಚಾಂಪಿಯನ್‌

1-alavas

Ball Badminton: ಆಳ್ವಾಸ್‌ಗೆ ಅವಳಿ ಪ್ರಶಸ್ತಿ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

Delhi: ಪ್ರಿಯಕರನ ಜೊತೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪತ್ನಿ… ಮುಂದೆ ಆಗಿದ್ದೇ ಬೇರೆ

Delhi: ಪ್ರಿಯಕರನ ಜೊತೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪತ್ನಿ… ಬಳಿಕ ನಡೆದದ್ದು ಘೋರ

ಭಾರತದಲ್ಲಿ ಶ್ರೀರಾಮನ ಸಂಪ್ರದಾಯ ಮುಂದುವರಿಯಲಿದೆ ವಿನಃ ಬಾಬರನದ್ದಲ್ಲ: ಸಿಎಂ ಯೋಗಿ

ಭಾರತದಲ್ಲಿ ಶ್ರೀರಾಮನ ಸಂಪ್ರದಾಯ ಮುಂದುವರಿಯಲಿದೆ ವಿನಃ ಬಾಬರನದ್ದಲ್ಲ: ಸಿಎಂ ಯೋಗಿ

Charmady: ನದಿಯಲ್ಲಿ ಗೋವುಗಳ ತಲೆ ಸೇರಿದಂತೆ ಅವಶೇಷ ಪತ್ತೆ

Charmady: ನದಿಯಲ್ಲಿ ಗೋವುಗಳ ತಲೆ ಸೇರಿದಂತೆ ಅವಶೇಷ ಪತ್ತೆ

Chhattisgarh: ಜೀವಂತ ಕೋಳಿ ಮರಿ ನುಂಗಿ ವ್ಯಕ್ತಿ ಸಾ*ವು…ಆದರೆ ಕೋಳಿ ಮರಿ ಬಚಾವ್!

Chhattisgarh: ಜೀವಂತ ಕೋಳಿ ಮರಿ ನುಂಗಿ ವ್ಯಕ್ತಿ ಸಾ*ವು…ಆದರೆ ಕೋಳಿ ಮರಿ ಬಚಾವ್!

ಗರ್ಭಿಣಿ ಪತ್ನಿ ಜತೆ ಇರಲು ರಜೆ ಕೊಡದ ಅಧಿಕಾರಿಗಳು: ಆತ್ಮ*ಹತ್ಯೆ ಮಾಡಿಕೊಂಡ ಪೊಲೀಸ್ ಕಮಾಂಡೋ

ಗರ್ಭಿಣಿ ಪತ್ನಿ ಜತೆ ಇರಲು ರಜೆ ಕೊಡದ ಅಧಿಕಾರಿಗಳು: ಆತ್ಮ*ಹತ್ಯೆ ಮಾಡಿಕೊಂಡ ಪೊಲೀಸ್ ಕಮಾಂಡೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.