ಹನುಮಂತೋತ್ಸವ : ಹುಣಸೂರು ಉದ್ವಿಗ್ನ, ಹಿಂಸಾಚಾರ
Team Udayavani, Dec 3, 2017, 10:49 AM IST
ಮೈಸೂರು: ಹನುಮಂತೋತ್ಸವ ಸಮಿತಿ ವತಿಯಿಂದ ಭಾನುವಾರ ಹುಣಸೂರು ನಗರದಲ್ಲಿ ಬೃಹತ್ ಆಂಜನೇಯ ಮೂರ್ತಿಯ 25ನೇ ವರ್ಷದ ಭವ್ಯ ಮೆರವಣಿಗೆ ಅವಕಾಶ ನೀಡದ ಕಾರಣ ಹುಣಸೂರಿನಲ್ಲಿ ಪ್ರತಿಭಟನೆಗಳು ನಡೆದು ಹಿಂಸಾಚಾರ ಸಂಭವಿಸಿದ್ದು, ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ.
ಹುಣಸೂರು ಪ್ರವೇಶಿಸುವ ಮುನ್ನವೇ ಮಾಲಾಧಾರಿ ಪ್ರತಾಪ್ ಸಿಂಹ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪೊಲೀಸ್ ಕ್ರಮದ ಕುರಿತು ಪೊಲೀಸ್ ವರಿಷ್ಠಾಧಿಕಾರಿ ರವಿ.ಡಿ.ಚೆನ್ನಣ್ಣನವರ್ ವಿರುದ್ಧ ಪ್ರತಾಪ್ ಸಿಂಹ ಕಿಡಿ ಕಾರಿದರು.
ಹಿಂಸಾಚಾರ,ಸಿಂಹ ವಿರುದ್ಧ ಕ್ರಿಮಿನಲ್ ಕೇಸ್
ಮೆರವಣಿಗೆಗೆ ಅವಕಾಶ ನೀಡದೆ ಇದ್ದಾಗ ಉದ್ರಿಕ್ತರು ಪೊಲೀಸ್ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ನಡೆದಿದೆ.150 ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದಿರುವ ಬಗ್ಗೆ ವರದಿಯಾಗಿದೆ.
ಬಿಳಿಕೆರೆ ಬಳಿ ಬ್ಯಾರಿಕೇಡ್ ಹಾಕಿದಾಗ ಸಂಸದ ಪ್ರತಾಪ್ ಸಿಂಹ ಅವರು ತೀವ್ರವಾಗಿ ಕಿಡಿ ಕಾರಿ ತಾವೇ ಕಾರು ಚಲಾಯಿಸಿ ಬ್ಯಾರಿಕೇಡ್ ತಳ್ಳಿಕೊಂಡು ಮುಂದಕ್ಕೆ ಸಾಗಿದ್ದಾರೆ. ಈ ಸಂಬಂಧ ಅವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದ್ದು ಇದುವರೆಗೆ ಎಲ್ಲಿಡಲಾಗಿದೆ ಎಂದು ತಿಳಿದು ಬಂದಿಲ್ಲ.
ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಕಿಡಿ ಕಾರಿದ್ದು ಸಿದ್ದರಾಮಯ್ಯ ಅವರು ಸೇಡಿನ ರಾಜಕೀಯ ಮಾಡುತ್ತಿದ್ದು, ಪ್ರತಾಪ್ ಸಿಂಹ ಮತ್ತು ಕಾರ್ಯಕರ್ತರನ್ನು ಸಂಜೆಯ ಒಳಗೆ ಬಿಡುಗಡೆ ಮಾಡದಿದ್ದರೆ ನಾಳೆ ಹುಣಸೂರು ಬಂದ್ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಹನುಮ ಜಯಂತಿ ಹಿನ್ನೆಲೆಯಲ್ಲಿ ಭಾನುವಾರ ಬೆಳಗ್ಗೆ 10 ರಿಂದ ಸಂಜೆ 6ಗಂಟೆವರೆಗೆ ಹುಣಸೂರು ನಗರಕ್ಕೆ ವಾಹನ ಪ್ರವೇಶ ನಿರ್ಬಂಧಿಸಲಾಗಿದೆ.
ಘಟನೆ ಖಂಡಿಸಿ ನಾಳೆ ಹುಣಸೂರು ಬಂದ್‌ಗೆ ಕರೆ ನೀಡಲಾಗಿದೆ.
ಸಂಸದ ಪ್ರತಾಪ್ ಸಿಂಹ 2 ದಿನಗಳ ಹಿಂದೆ 200ಕ್ಕೂ ಹೆಚ್ಚು ಯುವಕರ ಜೊತೆ ಹನುಮ ಮಾಲೆ
ಧರಿಸಿದ್ದರು.
ನಿರ್ಬಂಧ: 2015ರ ಡಿಸೆಂಬರ್‌ನಲ್ಲಿ ಹನುಮ ಜಯಂತಿ, ಈದ್ ಮಿಲಾದ್ ಆಚರಣೆ ವೇಳೆ ಕ್ಷುಲ್ಲಕ ಕಾರಣಗಳಿಗಾಗಿ ಕೋಮು ಗಲಭೆ ಸಂಭವಿಸಿದ್ದರಿಂದ ಜಿಲ್ಲಾಡಳಿತ, ಪೊಲೀಸ್ ಇಲಾಖೆಹುಣಸೂರನ್ನು ಸೂಕ್ಷ್ಮ ಪ್ರದೇಶವೆಂದು ಪರಿಗಣಿಸಿ ಎರಡೂ ಕೋಮುಗಳ ಮೆರವಣಿಗೆಗೆ ಹಲವು ನಿರ್ಬಂಧ ಹೇರಿದೆ. ಯಾವುದೇ ಅಹಿತಕರ ಘಟನೆ ಸಂಭವಿಸದಂತೆ 2500 ಪೊಲೀಸ್ ಮತ್ತು ಸಿಬ್ಬಂದಿ, 250 ಗೃಹ ರಕ್ಷಕ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಜತೆಗೆ ಡಿ.4ರವರೆಗೆ ನಗರದಲ್ಲಿ ನಿಷೇಧಾಜ್ಞೆ ಜಾರಿ ಮಾಡಿದ್ದು, ನಗರ 5 ಕಿ.ಮೀ ವ್ಯಾಪ್ತಿಯಲ್ಲಿ ಮದ್ಯಮಾರಾಟ ನಿಷೇಧಿಸಲಾಗಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್
Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ
Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನಪ್ಪನವರ ವಿರುದ್ದ ಬೆಲ್ಲದ್ ಟೀಕೆ
Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು
BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್ ನಿಧನ
Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ
Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
Kannada Cinema: ಕ್ಲೈಮ್ಯಾಕ್ಸ್ ನತ್ತ ʼಕುಲದಲ್ಲಿ ಕೀಳ್ಯಾವುದೋʼ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.