7ನೇ ವೇತನ ಆಯೋಗ, ಅನುಷ್ಠಾನ: ಮೋದಿಗೆ ರಾಹುಲ್ 6ನೇ ಪ್ರಶ್ನೆ
Team Udayavani, Dec 4, 2017, 11:12 AM IST
ಹೊಸದಿಲ್ಲಿ : ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಇಂದು ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ “ಏಳನೇ ವೇತನ ಆಯೋಗ ಮತ್ತು ಅದರ ಅನುಷ್ಠಾನ’ ಕುರಿತಾಗಿ ತನ್ನ ಆರನೇ ಪ್ರಶ್ನೆಯನ್ನು ಕೇಳಿದ್ದಾರೆ.
7ನೇ ವೇತನ ಆಯೋಗದ ಶಿಪಾರಸಿನಲ್ಲಿ ತಿಂಗಳ ಕನಿಷ್ಠ ವೇತನವನ್ನು 18,000 ರೂ.ಗೆ ನಿಗದಿಸಲಾಗಿದೆ. ಹಾಗಿದ್ದರೂ ನಿಯಮತಿ ಮತ್ತು ಗುತ್ತಿಗೆ ಕೆಲಸಗಾರರಿಗೆ ಅನುಕ್ರಮವಾಗಿ 5,500 ರೂ. ಮತ್ತು 10,000 ರೂ. ವೇತನ ಮಾತ್ರವೇ ಏಕೆ ಸಿಗುತ್ತಿದೆ ? ಎಂದು ರಾಹುಲ್ ಟ್ವಿಟರ್‌ನಲ್ಲಿ ಬರೆದಿದ್ದಾರೆ.
ಕಾಂಗ್ರೆಸ್ ನಾಯಕ ತನ್ನ ಟ್ವೀಟ್ ಜತೆಗೆ ಹಿರಿಯ ಮಹಿಳೆಯೊಬ್ಬರ ವಿಡಿಯೋ ಹಾಕಿದ್ದು ಅದರಲ್ಲಾಕೆ ಶಿಕ್ಷಕರಿಗೆ ಕಡಿಮೆ ಸಂಬಳ ಇರುವ ಬಗ್ಗೆ ಮಾತನಾಡಿದ್ದಾರೆ.
ಗುಜರಾತ್ ವಿಧಾನಸಭಾ ಚುನಾವಣೆಗೆ ಪೂರ್ವಭಾವಿಯಾಗಿ ರಾಹುಲ್ ಗಾಂಧಿ ಅವರು ಪ್ರಧಾನಿ ಮೋದಿ ಅವರಿಗೆ ಸಾಮಾಜಿಕ ಜಾಲ ತಾಣದಲ್ಲಿ ದಿನ ನಿತ್ಯ ಸರಣಿ ಪ್ರಶ್ನೆಯನ್ನು ಕೇಳುತ್ತಿದ್ದಾರೆ.
ಅಂತೆಯೇ ನಿನ್ನೆ ಭಾನುವಾರ ರಾಹುಲ್ “ಗುಜರಾತ್‌ನಲ್ಲಿ ಮಹಿಳೆಯರ ಸುರಕ್ಷೆ, ಶಿಕ್ಷಣ ಮತ್ತು ಆರೋಗ್ಯ’ ಕುರಿತಾಗಿ ಪ್ರಶ್ನಿಸಿದ್ದರು.
ಪ್ರಕೃತ ಎರಡು ದಿನಗಳ ಗುಜರಾತ್ ಭೇಟಿಯಲ್ಲಿರುವ ಪಿಎಂ ಮೋದಿ ಅವರು ಕಾಂಗ್ರೆಸ್ ಮತ್ತು ಅದರ ಎರಡನೇ ಮಟ್ಟದ ಹೈಕಮಾಂಡ್ ವಿರುದ್ಧ “ಸಾಂಸ್ಥಿಕ ಚುನಾವಣೆಯಲ್ಲಿ ವಿಭಜನ ರಾಜಕಾರಣ ಮತ್ತು ಅಕ್ರಮದ ತಂತ್ರಗಾರಿಕೆಯನ್ನು ಅನುಸರಿಸುತ್ತಿದೆ’ ಎಂದು ದೂರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು
Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ
Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.