ಬಾಲಿವುಡ್ ಖ್ಯಾತ ನಟ ಶಶಿಕಪೂರ್ ವಿಧಿವಶ
Team Udayavani, Dec 4, 2017, 6:07 PM IST
ಮುಂಬೈ: ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಬಾಲಿವುಡ್ ಖ್ಯಾತ ನಟ ಶಶಿಕಪೂರ್(79ವರ್ಷ) ಸೋಮವಾರ ವಿಧಿವಶರಾಗಿದ್ದಾರೆ. ಹಿರಿಯ ನಟ ಶಶಿ ಕಪೂರ್ ನಿಧನಕ್ಕೆ ಬಾಲಿವುಡ್ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.
ಮುಂಬೈನ ಕೋಕಿಲಾ ಬೆನ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿರುವುದಾಗಿ ಕುಟುಂಬದ ಮೂಲಗಳು ತಿಳಿಸಿವೆ. 1970ರಲ್ಲಿ ಚಿತ್ರರಸಿಕರ ಮನಗೆದ್ದಿದ್ದ ಶಶಿ ಕಪೂರ್ ಅವರು, 2011ರಲ್ಲಿ ಪದ್ಮಭೂಷಣ ಪ್ರಶಸ್ತಿ ಪಡೆದಿದ್ದರು. 2015ರಲ್ಲಿ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪಡೆದಿದ್ದರು.
1938 ಮಾರ್ಚ್ 18ರಂದು ಶಶಿ ಕಪೂರ್ ಜನಿಸಿದ್ದರು. ಸುಮಾರು 175 ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದರು.ಶಶಿಕಪೂರ್ ಅವರು ಸುಹಾಗ್, ಜೂನೂನ್, ವಿಜೇತ, ಉತ್ಸವ್ ಸೇರಿದಂತೆ ಹಲವು ಸಿನಿಮಾ ಹೆಸರು ತಂದುಕೊಟ್ಟಿತ್ತು. 1991ರಲ್ಲಿ ಅಮಿತಾಬ್ ಬಚ್ಚನ್ ನಟನೆಯ ಅಜೂಬಾ ಸಿನಿಮಾವನ್ನು ಶಶಿಕಪೂರ್ ಅವರು ಮೊಟ್ಟ ಮೊದಲ ಬಾರಿಗೆ ನಿರ್ದೇಶಿಸಿದ್ದರು. ಅಲ್ಲದೇ ಶಶಿಕಪೂರ್ ಅವರು ದ ರಿಟರ್ನ್ ಆಫ್ ದ ಥೀಫ್ ಆಫ್ ಬಗ್ದಾದ್ ಎಂಬ ಸಿನಿಮಾವನ್ನು ರಷ್ಯನ್ ಭಾಷೆಯಲ್ಲಿ 1988ರಲ್ಲಿ ನಿರ್ದೇಶಿಸಿದ್ದರು.
ಬಾಲನಟನಾಗಿ ಸಿನಿಮಾ ರಂಗಕ್ಕೆ ಪ್ರವೇಶಿಸಿದ್ದ ಶಶಿ ಕಪೂರ್ ಅವರು ತನ್ನ ಸಹೋದರ ರಾಜ್ ಕಪೂರ್ ಜತೆಯಲ್ಲಿ 1948ರಲ್ಲಿ ಆಗ್ ಸಿನಿಮಾದಲ್ಲಿ ಕಾರ್ಯನಿರ್ವಹಿಸಿದ್ದರು. 1951ರಲ್ಲಿ ಸೂಪರ್ ಹಿಟ್ ಆದ ಆವಾರ್ ದಲ್ಲಿಯೂ ಇಬ್ಬರೂ ಜತೆಯಾಗಿಯೇ ಚಿತ್ರಕ್ಕಾಗಿ ದುಡಿದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್ & ಕ್ಲಬ್ ಹೊರಗೆ ಬಾಂ*ಬ್ ಸ್ಪೋ*ಟ
Mohini Dey: ಎಆರ್ ರೆಹಮಾನ್ ಜತೆ ಸಂಬಂಧ.. ಅವರು ನನಗೆ ತಂದೆ ಸಮಾನ ಎಂದ ಮೋಹಿನಿ
Mohammed Siraj: ಬಿಟೌನ್‌ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್
Kochi: ಲೈಂಗಿಕ ಕಿರುಕುಳ ಕೇಸು ವಾಪಸ್ ಪಡೆಯಲ್ಲ ಎಂದ ಮಲಯಾಳಿ ನಟಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Grandfather: ಬಡ ತಾತನ ಹೃದಯ ಶ್ರೀಮಂತಿಕೆ
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ಜೈಲು ಶಿಕ್ಷೆ
ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್ ಯಡಿಯೂರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.