ಶಶಿಕಲಾಗೆ ಟೋಪಿ ಕೊಡಲು ಕೋರ್ಟ್‌ ನಕಾರ!


Team Udayavani, Dec 5, 2017, 7:26 AM IST

05-1.jpg

ನವದೆಹಲಿ: ಇದೇ ತಿಂಗಳ 21ರಂದು ಚೆನ್ನೈನ ರಾಧಾಕೃಷ್ಣ ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ತಮ್ಮ ಪಾಳಯಕ್ಕೆ “ಟೋಪಿ’ ಚಿಹ್ನೆಯನ್ನು ನೀಡಲೇಬೇಕೆಂದು ಪಟ್ಟು ಹಿಡಿದಿದ್ದ ಎಐಎಡಿಎಂಕೆಯ ಶಶಿಕಲಾ – ಟಿಟಿವಿ ದಿನಕರನ್‌ ಬಣದ ಮನವಿಯನ್ನು ದೆಹಲಿ ಹೈಕೋರ್ಟ್‌ ತಳ್ಳಿಹಾಕಿದೆ.

ಮನವಿಯ ವಿಚಾರಣೆ ನಡೆಸಿದ ನ್ಯಾಯ ಮೂರ್ತಿ ಇಂದರ್‌ಮೀತ್‌ ಕೌರ್‌, ಮನ ವಿಯ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳುವಂತೆ ರಾಧಾಕೃಷ್ಣ ನಗರ ಉಪಚುನಾವಣೆಯ ಚುನಾವಣಾಧಿಕಾರಿಗೆ ಸೂಚನೆ ನೀಡಿದರು. ಮನವಿಯನ್ನು ತಿರಸ್ಕರಿಸಿದ್ದರೂ, ವಿಚಾರಣೆ ಮುಂದುವರಿಸಿರುವ ನ್ಯಾಯಾಲಯ, ಶಶಿಕಲಾ ಬಣ ಸಲ್ಲಿಸಿರುವ ಮನವಿಗೆ ಸಂಬಂಧಿಸಿ ದಂತೆ ತಮ್ಮ ವಾದವನ್ನು ಮಂಡಿಸುವಂತೆ ಚುನಾವಣಾ ಆಯೋಗ ಹಾಗೂ ಎಐಎಡಿಎಂಕೆಯ ಪನ್ನಿರ್‌ ಸೆಲ್ವಂ- ಪಳನಿಸ್ವಾಮಿ ಬಣಕ್ಕೆ ತಮ್ಮ ಕಡೆಯ ವಾದವನ್ನು ಮಂಡಿಸಲೂ ಅವಕಾಶ ನೀಡಿದೆ. ಇದೇ ವೇಳೆ, ಶಶಿಕಲಾ ಬಣಕ್ಕೆ ಚುನಾವಣಾ ಚಿಹ್ನೆ ನೀಡಲೇಬೇಕು. ಚಿಹ್ನೆಯಿಲ್ಲದೆ ಈ ಬಣ ಚುನಾವಣೆಗೆ ಇಳಿಯಲು ಸಾಧ್ಯವಿಲ್ಲ. ಈ ಬಣ ಚುನಾವಣೆಗೆ ಇಳಿಯದಿದ್ದರೆ, ಪಳನಿಸ್ವಾಮಿ -ಪನ್ನಿರ್‌ ಸೆಲ್ವಂ ಬಣಕ್ಕೆ ಅನಾಯಾಸವಾಗಿ ಜಯ ಸಿಕ್ಕಂತಾಗುತ್ತದೆ. ಇಂಥ ಅನಾಯಾಸ ಜಯಗಳಿಗೆ ಪ್ರಜಾಪ್ರಭುತ್ವದಲ್ಲಿ ಅವಕಾಶ ನೀಡಬಾರದು ಎಂದು ನ್ಯಾಯಾಲಯ ಹೇಳಿದೆ. ಈ ಕಾರಣದಿಂದಾಗಿ ತಾನು ಮುಂದಿನ ವರ್ಷ ಫೆಬ್ರವರಿಯಲ್ಲಿ ಪ್ರಕರಣದ ಅಂತಿಮ ತೀರ್ಪು ನೀಡುವುದಾಗಿ ನ್ಯಾಯಾಲಯ ತಿಳಿಸಿದೆ.

ಪ್ರಕರಣದ ಹಿನ್ನೆಲೆ
ಇದೇ ವರ್ಷ ಏಪ್ರಿಲ್‌ನಲ್ಲಿ ಎಐಎಡಿಎಂಕೆಯ ಅಧಿಕೃತ ಚುನಾವಣಾ ಚಿಹ್ನೆ “ಎರಡೆಲೆ’ ತಮಗೇ ಬೇಕೆಂದು ಶಶಿಕಲಾ ಬಣ ಹಾಗೂ ಪನ್ನೀರ್‌ ಸೆಲ್ವಂ ಹಾಗೂ ಪಳನಿಸ್ವಾಮಿ ಬಣ ಗಳು ಪಟ್ಟು ಹಿಡಿದು ಚುನಾವಣಾ ಆಯೋ ಗದ ಮೊರೆ ಹೋಗಿದ್ದವು. ಆಗ, ಎರಡೆಲೆ ಚಿಹ್ನೆಯನ್ನು ತಾತ್ಕಾಲಿಕವಾಗಿ ನೇಪಥ್ಯಕ್ಕೆ ಸರಿಸಿದ್ದ ಆಯೋಗ, ಶಶಿಕಲಾ ಬಣಕ್ಕೆ ಟೋಪಿಯನ್ನು, ಪನ್ನೀರ್‌-ಪಳನಿ ಬಣಕ್ಕೆ ವಿದ್ಯುತ್‌ ಕಂಬದ ಚಿಹ್ನೆಗಳನ್ನು ತಾತ್ಕಾಲಿಕವಾಗಿ ನೀಡಿತ್ತು.  ಕಳೆದ ತಿಂಗಳ 23ರಂದು ಪ್ರಕರಣದ ಅಂತಿಮ ತೀರ್ಪಿನಲ್ಲಿ ಆಯೋಗವು, ಎರಡೆಲೆ ಚಿಹ್ನೆಯನ್ನು ಪಳನಿ-ಪನ್ನೀರ್‌ ಬಣಕ್ಕೇ ನೀಡಿತಲ್ಲದೆ, ಶಶಿಕಲಾ ಬಣಕ್ಕೆ ತಾನು ನೀಡಿದ್ದ ಟೋಪಿ ಚಿಹ್ನೆಯ ಆದೇಶವನ್ನೂ ಹಿಂಪಡೆದಿತ್ತು. ಈ ಹಿನ್ನೆಲೆಯಲ್ಲಿ, ಶಶಿಕಲಾ ಬಣ ದೆಹಲಿ ಹೈಕೋರ್ಟ್‌ ಮೆಟ್ಟಿಲೇರಿತ್ತು.

ಟಾಪ್ ನ್ಯೂಸ್

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arrest-lady

PM Modi ಹ*ತ್ಯೆಗೆ ಯೋಜನೆ ಸಿದ್ಧ: ಕರೆ ಮಾಡಿದ್ದ ಮಹಿಳೆ ಬಂಧನ

rain

Tamil Nadu;ಸೈಕ್ಲೋನ್‌ ದುರ್ಬಲವಾದ್ರೂ ಭಾರೀ ಮಳೆ?

NItin Gadkari

2000 ಇಸವಿಯಿಂದ 1.44 ಲಕ್ಷ ಕೋಟಿ ರೂ. ಟೋಲ್‌ ಸಂಗ್ರಹ: ಗಡ್ಕರಿ

Jagan Mohan Reddy

Adani ವಿದ್ಯುತ್‌ ಖರೀದಿ ಅಕ್ರಮ: ಆರೋಪ ತಳ್ಳಿ ಹಾಕಿದ ಜಗನ್‌ ರೆಡ್ಡಿ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.