ಶಾರದಾ ಆರ್ಟ್ಸ್ ಐಸಿರಿ: ಮುಂಬಯಿ ಪ್ರವಾಸದ ಸಮಾರೋಪ
Team Udayavani, Dec 5, 2017, 4:25 PM IST
ಮುಂಬಯಿ: ಊರಿನ ರಂಗ ತಂಡಗಳನ್ನು ಮುಂಬಯಿಗೆ ಆಹ್ವಾನಿಸಿ ಪ್ರದರ್ಶನ ನೀಡಲು ಅವಕಾಶ ಕಲ್ಪಿಸಿಕೊಡುವ ದೊಡ್ಡ ಕೆಲಸವನ್ನು ಕಲಾ ಸಂಘಟಕರು, ಕಲಾಭಿಮಾನಿಗಳು ಮಾಡುತ್ತಿದ್ದಾರೆ. ಕಲಾವಿದರು ನಮ್ಮನ್ನು ನಕ್ಕು ನಲಿಸುತ್ತಾರೆ. ಆದರೆ ಈ ಕಲಾವಿದರ ಬಣ್ಣದ ಬದುಕು ತುಂಬಾ ಕಷ್ಟಕರವಾಗಿದೆ. ನಮ್ಮನ್ನು ಸಂತೋಷಪಡಿಸುವ ಕಲಾವಿದರನ್ನು ಪ್ರೋತ್ಸಾಹಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಭಂಡಾರಿ ಸೇವಾ ಸಂಘ ಮುಂಬಯಿ ಅಧ್ಯಕ್ಷ ನ್ಯಾಯವಾದಿ ಶೇಖರ್ ಭಂಡಾರಿ ಅವರು ನುಡಿದರು.
ಭಂಡಾರಿ ಸೇವಾ ಸಂಘ ಮುಂಬಯಿ ವತಿ ಯಿಂದ ಕಲಾ ಸಂಘಟಕ ಪ್ರಕಾಶ್ ಎಂ. ಶೆಟ್ಟಿ ಅವರ ಸಂಚಾಲಕತ್ವದಲ್ಲಿ ಶಾರದಾ ಆರ್ಟ್ಸ್ ಐಸಿರಿ ಕಲಾವಿದೆರ್ ಮಂಜೇಶ್ವರ ಇವರ ಮುಂಬಯಿ ಪ್ರವಾಸದಲ್ಲಿ ಪ್ರದರ್ಶನಗೊಂಡ ಅಂಚಗೆ-ಇಂಚಗೆ ನಾಟಕದ ಸಮಾರೋಪದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮುಂಬಯಿ ಕಲಾಭಿಮಾನಿಗಳು ಹೃದಯ ವಂತರಾಗಿದ್ದು, ಊರಿನಿಂದ ಬರುವ ಎಲ್ಲಾ ಕಲಾ ತಂಡಗಳನ್ನು, ಕಲಾವಿದರನ್ನು ಗೌರವಿಸುವ ಕಾರ್ಯದಲ್ಲಿ ತೊಡಗುತ್ತಿರುವುದು ಅಭಿನಂದನೀಯವಾಗಿದೆ ಎಂದು ನುಡಿದು ಕಲಾವಿದರಿಗೆ ಶುಭಹಾರೈಸಿದರು.
ಸಮಾರಂಭದಲ್ಲಿ ಐಸಿರಿ ತಂಡದ ಕಲಾವಿದರನ್ನು ಗೌರವಿಸಲಾಯಿತು. ಅಲ್ಲದೆ ಚಲನಚಿತ್ರ ನಟ, ಹಾಸ್ಯ ಕಲಾವಿದ ಸುಂದರ್ ರೈ ಮಂದಾರ ಅವರನ್ನು ಗಣ್ಯರ ಸಮ್ಮುಖದಲ್ಲಿ ಸಮ್ಮಾನಿಸಲಾಯಿತು. ಐಸಿರಿ ತಂಡದ ಪರವಾಗಿ ಪ್ರಕಾಶ್ ಎಂ. ಶೆಟ್ಟಿ ಸುರತ್ಕಲ್ ಅವರನ್ನು ಅಭಿನಂದಿಸಲಾಯಿತು.
ಅತಿಥಿಯಾಗಿ ಪಾಲ್ಗೊಂಡ ಜಿ. ಎಸ್. ಟಿ. ಇಂಟರ್‌ನ್ಯಾಷನಲ್ ಸ್ಕೂಲ್ ಭಾಂಡೂಪ್ ಇದರ ಸಂಚಾಲಕ ಶಂಕರ್ ಶೆಟ್ಟಿ ಅವರು ಮಾತನಾಡಿ, ಯಕ್ಷಗಾನ, ನಾಟಕದ ಮೇಲೆ ನನಗೆ ಆಸಕ್ತಿ, ಅಭಿಮಾನವಿದೆ. ನಾಟಕ, ಯಕ್ಷಗಾನವು ನಮ್ಮ ಮನಸ್ಸನ್ನು ಉಲ್ಲಸಿತಗೊಳಿಸುತ್ತದೆ. ಅಂತಹ ಕಲೆಗಳು ಮುಂಬಯಿಯಲ್ಲಿ ನಿರಂತರವಾಗಿ ಪ್ರದರ್ಶನಗೊಳ್ಳುತ್ತಿರಲಿ. ಕಲಾವಿದರ ಮೇಲೆ ಕಲಾಭಿಮಾನಿಗಳ ಆಶೀರ್ವಾದ ಇರಲಿ ಎಂದರು.
ಯಕ್ಷಗಾನ ಕಲಾವಿದ ವಾಸುದೇವ ಮಾರ್ನಾಡ್ ಅವರು ಮಾತನಾಡಿ, ಮನುಷ್ಯನಾದವನು ಯಾವ ವಿಧಾನದಲ್ಲಾದರೂ ಇತರರಿಗೆ ಸಂತೋಷವನ್ನು ಕೊಡುವುದು ದೇವರ ಪೂಜೆಗೆ ಸಮಾನ. ಜನರನ್ನು ಸಂತೋಷಪಡಿಸುವ ಕೆಲಸವನ್ನು ಐಸಿರಿ ತಂಡದಂತಹ ರಂಗಕಲಾವಿದರು ಮಾಡುತ್ತಿದ್ದಾರೆ. ಈ ಕಲಾವಿದರಿಗೆಲ್ಲಾ ದೇವರ ಅನುಗ್ರಹ, ಶ್ರೀರಕ್ಷೆ ಸದಾಯಿರಲಿ ಎಂದು ಶುಭಹಾರೈಸಿದರು.
ವೇದಿಕೆಯಲ್ಲಿ ಕನ್ನಡ ಸೇವಾ ಸಂಘ ಪೊವಾಯಿ ಅಧ್ಯಕ್ಷ ಕರುಣಾಕರ ವಿ. ಶೆಟ್ಟಿ, ಲಲಿತ್ ಟ್ರೇಡರ್ ನ ಮಾಧವ ಶೆಟ್ಟಿ, ಶ್ರೀ ಗೀತಾಂಬಿಕಾ ದೇವಸ್ಥಾನದ ಉಪಾಧ್ಯಕ್ಷ ಸತೀಶ್ ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಧರ್ಮಪಾಲ ಕೋಟ್ಯಾನ್, ಘಾಟ್‌ಕೋಪರ್ ಕನ್ನಡ ವೆಲ್ಫೆàರ್ ಅಸೋಸಿಯೇಶನ್ ಅಧ್ಯಕ್ಷ ನವೀನ್ ಶೆಟ್ಟಿ ಇನ್ನಬಾಳಿಕೆ, ಕಲಾ ಪೋಷಕ ಶೈಲೇಶ್ ಶೆಟ್ಟಿ ಕೋಡಿಬೈಲ್, ಲೋಕನಾಥ ಶೆಟ್ಟಿ ವಿಟ್ಲ. ಐಸಿರಿ ತಂಡದ ಕೃಷ್ಣ ಜಿ. ಮಂಜೇಶ್ವರ ಮೊದಲಾದವರು ಉಪಸ್ಥಿತರಿದ್ದರು. ಆದ್ಯಪಾಡಿ ಬಾಲಕೃಷ್ಣ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು. ಸುನೀಲ್ ಅಮೀನ್ ವಂದಿಸಿದರು. ಕಲಾಭಿಮಾನಿಗಳು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
ಇಂಗ್ಲೆಂಡ್‌ನ ರಾದರಮ್ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’
Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು
ICC ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ
Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ
ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ
Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್ ಅಮಾನತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.