ಅಯೋಧ್ಯೆ ವಿವಾದ: ಫೆ.8ಕ್ಕೆ ವಿಚಾರಣೆ ಮುಂದೂಡಿಕೆ
Team Udayavani, Dec 6, 2017, 8:30 AM IST
ನವದೆಹಲಿ: ಅಯೋಧ್ಯೆಯ ರಾಮಜನ್ಮ ಭೂಮಿ-ಬಾಬರಿ ಮಸೀದಿ ವಿವಾದ ಕುರಿತು ಅಲಹಾಬಾದ್ ಹೈಕೋರ್ಟ್ ನೀಡಿರುವ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾ ರಣೆಯನ್ನು ಸುಪ್ರೀಂಕೋರ್ಟ್ ಮಂಗಳವಾರ ಮುಂದಿನ ವರ್ಷದ ಫೆ.8ಕ್ಕೆ ಮುಂದೂಡಿದೆ.
ವಕೀಲರೆಲ್ಲರೂ ಒಂದೆಡೆ ಕುಳಿತು, ವಿವಾದಕ್ಕೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ಭಾಷಾಂತರ ಮಾಡುವ, ಫೈಲ್ ಮಾಡುವ ಕೆಲಸಗಳನ್ನು ಪೂರ್ಣಗೊಳಿಸಿ, ಅವುಗಳನ್ನು ನ್ಯಾಯಾಲಯದ ರಿಜಿಸ್ಟ್ರಿಗೆ ಸಲ್ಲಿಸುವಂತೆ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ನ್ಯಾಯಪೀಠ ಆದೇಶಿಸಿದೆ.
2019ರ ನಂತರ ನಡೆಯಲಿ: ಮಂಗಳವಾರದ ವಿಚಾರಣೆ ವೇಳೆ ಸುನ್ನಿ ವಕ್ಫ್ ಬೋರ್ಡ್ ಪರವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್, “ವಿಚಾರಣೆಗೆ ಈಗಿನ ಪರಿಸ್ಥಿತಿ ಪೂರಕವಾಗಿಲ್ಲ. ಹಾಗಾಗಿ, ವಿಚಾರಣೆಯನ್ನು 2019ರ ಜುಲೈ 15ರ ನಂತರ ಅಂದರೆ ಮುಂದಿನ ಲೋಕಸಭೆ ಚುನಾವಣೆ ಮುಗಿದ ಬಳಿಕವೇ ಕೈಗೆತ್ತಿಕೊಳ್ಳಬೇಕು,’ ಎಂದು ಮನವಿ ಮಾಡಿದರು. ಅಲ್ಲದೆ, 19 ಸಾವಿರ ಪುಟಗಳುಳ್ಳ ಕಡತಗಳನ್ನು ಕಡಿಮೆ ಸಮಯದಲ್ಲಿ ಭಾಷಾಂತರ ಮಾಡುವುದಾದರೂ ಹೇಗೆ ಎಂದು ಪ್ರಶ್ನಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಜೆಐ ಮಿಶ್ರಾ, “ಆಗಸ್ಟ್‌ನಲ್ಲಿ ನಮ್ಮ ಮುಂದೆ ಬಂದಾಗ ಜನವರಿಯಿಂದ ವಿಚಾರಣೆ ಆರಂಭಿಸಿ ಎಂದಿದ್ದ ನೀವು, ಈಗ 2019ರ ನಂತರ ಆರಂಭಿಸಿ ಎಂದು ಹೇಳುತ್ತಿರುವುದೇಕೆ’ ಎಂದು ಪ್ರಶ್ನಿಸಿದರು.
ಇದೇ ವೇಳೆ, ಉತ್ತರಪ್ರದೇಶ ಸರ್ಕಾರದ ಪರ ಹಾಜರಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ಸಿಬಲ್ ವಾದವನ್ನು ಸಂಪೂರ್ಣವಾಗಿ ವಿರೋಧಿಸಿದ್ದು, “ಎಲ್ಲ ಪ್ರಕ್ರಿಯೆಗಳೂ ಮುಗಿದಿರುವ ಕಾರಣ, ವಿಚಾರಣೆಗೆ ಇದು ಸುಸಮಯ’ ಎಂದರು.
ರಾಮಮಂದಿರಕ್ಕೆ ಶಿಯಾ ಒಲವು: ಈ ನಡುವೆ, ಅಯೋಧ್ಯೆಯ ವಿವಾದಿತ ಸ್ಥಳದಲ್ಲಿ ರಾಮಮಂದಿರ ನಿರ್ಮಾಣಕ್ಕೆ ನಮ್ಮದೇನೂ ಆಕ್ಷೇಪವಿಲ್ಲ ಎಂದು ಸುಪ್ರೀಂ ಕೋರ್ಟ್‌ಗೆ ಶಿಯಾ ವಕ್ಫ್ ಮಂಡಳಿ ತಿಳಿಸಿದೆ. ಜತೆಗೆ, ಪ್ರಕರಣವನ್ನು ಶಾಂತಿಯುತವಾಗಿ ಬಗೆಹರಿಸುವ ಕುರಿತು ಒಲವು ವ್ಯಕ್ತಪಡಿಸಿದೆ. ಅಲ್ಲದೆ, ಲಕ್ನೋದಲ್ಲಿ ಮಸೀದಿ ನಿರ್ಮಿಸುವಂತೆಯೂ ಕೇಳಿಕೊಂಡಿದೆ. ತದನಂತರ ಮಾತನಾಡಿದ ಶಿಯಾ ಮಂಡಳಿಯ ಅಧ್ಯಕ್ಷ ಸಯ್ಯದ್ ವಾಸಿಂ ರಿಜ್ವಿ, “ನಾವು ಪ್ರಸ್ತಾಪಿಸಿದ ಸಂಧಾನಸೂತ್ರವನ್ನು ಸುಪ್ರೀಂ ಕೋರ್ಟ್ ಸ್ವೀಕರಿಸಿರುವುದು ಸಂತೋಷದ ವಿಚಾರ’ ಎಂದಿದ್ದಾರೆ.
ಶಾಂತಿ ಕಾಪಾಡುವಂತೆ ರಾಜ್ಯಗಳಿಗೆ ಸೂಚನೆ
ಬಾಬರಿ ಮಸೀದಿ ಧ್ವಂಸ ವರ್ಷಾಚರಣೆ ಹಿನ್ನೆಲೆಯಲ್ಲಿ ಬುಧವಾರ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಿ ಎಂದು ಎಲ್ಲ ರಾಜ್ಯ ಸರ್ಕಾರಗಳಿಗೆ ಕೇಂದ್ರ ಸರ್ಕಾರ ಸಲಹೆ ನೀಡಿದೆ. ದೇಶದ ಯಾವ ಮೂಲೆ ಯಿಂದಲೂ ಕೋಮುಗಲಭೆ, ಹಿಂಸಾ ಚಾರದಂಥ ಘಟನೆಗಳು ನಡೆಯದಂತೆ ನೋಡಿಕೊಳ್ಳಿ ಎಂದು ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಏಕ್‌ನಾಥ್ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ
Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ
Maharaja: ಬಾಂಧವ್ಯವೃದ್ಧಿ ಬಳಿಕ 29ಕ್ಕೆ ಚೀನಾದಲ್ಲಿ ಮೊದಲ ಬಾರಿಗೆ ತಮಿಳು ಸಿನಿಮಾ ರಿಲೀಸ್!
Actress: ಫ್ರೆಂಚ್ ಗೆಳೆಯನೊಂದಿಗೆ ಬ್ರೇಕ್‌ಅಪ್ ಆಗಿದೆ: ಮಲ್ಲಿಕಾ ಶೆರಾವತ್
Chhattisgarh: ಹಳಿ ತಪ್ಪಿದ ಗೂಡ್ಸ್ ರೈಲಿನ 20 ಬೋಗಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.