ಕುಕ್ಕೆ ಲಿಂಗ ಯಾತ್ರೆಗೆ ಇಂದು ನೂರಾರು ಭಕ್ತರ ಚಾರಣ


Team Udayavani, Dec 6, 2017, 11:46 AM IST

6-Dec-4.jpg

ಸುಬ್ರಹ್ಮಣ್ಯ: ವಾರ್ಷಿಕ ಜಾತ್ರೆಯ ಆಸುಪಾಸಿನ ಅವಧಿಯಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇಗುಲದ ವತಿಯಿಂದ ವರ್ಷಂಪ್ರತಿ ಕುಮಾರಪರ್ವತದಲ್ಲಿ ನಡೆಯುವ ಕುಕ್ಕೆ ಲಿಂಗ ಪೂಜೆಯನ್ನು ಈ ಬಾರಿ ಇನ್ನಷ್ಟು ವಿಜೃಂಭಣೆಯಿಂದ ನಡೆಸಲು ದೇಗುಲದ
ಆಡಳಿತ ಮಂಡಳಿ ನಿರ್ಧರಿಸಿದೆ.

ಪೂಜೆ ನೆರವೇರಿಸುವ ಅರ್ಚಕರ ಜತೆ ವ್ಯವಸ್ಥಾಪನ ಸಮಿತಿ ಸದಸ್ಯರು, ನೂರಾರು ಮಂದಿ ಭಕ್ತರು ಡಿ. 6ರಂದು ಕುಮಾರ ಪರ್ವತದ ಕಡೆಗೆ ತೆರಳಲಿದ್ದಾರೆ. ಮಧ್ಯಾಹ್ನ 1.15ಕ್ಕೆ ಸುಬ್ರಹ್ಮಣ್ಯ ದೇಗುಲದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಕೆಯಾದ ಬಳಿಕ ಅಪರಾಹ್ನ 2ಕ್ಕೆ ಯಾತ್ರೆ ಕ್ಷೇತ್ರದಿಂದ ಕುಮಾರ ಪರ್ವತದ ಕಡೆ ತೆರಳಲಿದೆ. ಕುಕ್ಕೆ ಸುಬ್ರಹ್ಮಣ್ಯ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಯಾತ್ರೆಗೆ ತೆರಳುವ ಭಕ್ತರಿಗೆ ಶಾಲು ನೀಡುವ ಮೂಲಕ ಯಾತ್ರೆಗೆ ಚಾಲನೆ ನೀಡಲಿದ್ದಾರೆ. ದೇಗುಲದ ಪೂವಾಭಿಮುಖವಾಗಿ ದೇವರ ಗದ್ದೆ ಮಾರ್ಗವಾಗಿ ತೆರಳುವ ಯಾತ್ರಾ ತಂಡ ಅಂದು ರಾತ್ರಿ ಗಿರಿಗದ್ದೆಯಲ್ಲಿ ತಂಗಲಿದೆ.

ಗಿರಿಗದ್ದೆಯಿಂದ ಡಿ. 7ರಂದು ಬೆಳಗ್ಗೆ 6.ಕ್ಕೆ ಯಾತ್ರೆ ಮುಂದುವರಿದು ಅಂದು ಬೆಳಗ್ಗೆ 11ಕ್ಕೆ ಯಾತ್ರೆ ಜತೆಗಿರುವ ದೇಗುಲದ ಅರ್ಚಕರಿಂದ ಕುಮಾರಪರ್ವತ ತಪ್ಪಲಿನಲ್ಲಿ ಪೂರ್ವ ಸಂಪ್ರದಾಯದಂತೆ ಕುಕ್ಕೆಲಿಂಗ ಪೂಜೆ ನಡೆಯಲಿದೆ. ಈ ಹಿಂದಿನ ವರ್ಷಗಳಲ್ಲಿ ಕುಕ್ಕೆ ಲಿಂಗ ಪೂಜೆ ನಡೆಯುತ್ತಿದ್ದರೂ ದೇಗುಲದ ಅರ್ಚಕರು ಹಾಗೂ ಇತರೆ ಕೆಲ ಮಂದಿ ಮಾತ್ರ ತೆರಳುತ್ತಿದ್ದರು. ಆದರೆ ಈ ಭಾರಿ ದೇಗುಲದ ವ್ಯವಸ್ಥಾಪನ ಸಮಿತಿ ಈ ಕುಕ್ಕೆಲಿಂಗ ಪೂಜೆ ಮತ್ತಷ್ಟು ವಿಜೃಂಭಣೆ ಮತ್ತು ಆಕರ್ಪಕವಾಗಿ ಜಾತ್ರೆ ರೂಪವಾಗಿ ಆಚರಿಸಲು ನಿರ್ಧರಿಸಿರುವುದು ಭಕ್ತರಲ್ಲಿ ಹರ್ಷ ತಂದಿದೆ.

ಸ್ಥಳೀಯ ಹಾಗೂ ಸುತ್ತಮುತ್ತಲಿನ ನೂರಕ್ಕು ಹೆಚ್ಚು ಭಕ್ತರು ಯಾತ್ರೆಯಲ್ಲಿ ತೆರಳುತಿದ್ದು, ಅವರೆಲ್ಲರಿಗೂ ಗಿರಿಗದ್ದೆಯಲ್ಲಿ ಊಟ ಹಾಗೂ ಉಪಾಹಾರ ವ್ಯವಸ್ಥೆ ಯನ್ನು ದೇಗುಲದ ವತಿಯಿಂದಲೇ ಮಾಡಲಾಗುತ್ತಿದೆ. ಕುಕ್ಕೆ ಲಿಂಗ ಪೂಜೆಯನ್ನು ಮುಂಬರುವ ವರ್ಷಗಳಲ್ಲಿ ಮತ್ತಷ್ಟೂ ವಿಜೃಂಭಣೆ ಯಿಂದ ನಡೆಸಲು ಚಿಂತಿಸಲಾಗಿದೆ ಎಂದು ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಅವರು ಪತ್ರಿಕೆಗೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

1-NASA

NASA ಹನುಮ ಸಾಹಸ: ಸೂರ್ಯನ ಬಳಿ ಸುಳಿದು ಸುಡದೆ ಪಾರು!

BUS driver

RTO; ಫಿಟ್‌ನೆಸ್‌ ಸರ್ಟಿಫಿಕೇಟ್‌ಗಿನ್ನು ಆರ್‌ಟಿಒ ಬೇಕಿಲ್ಲ!

Pro Kabaddi: ಹರಿಯಾಣ- ಪಾಟ್ನಾ ಫೈನಲ್‌ ಹಣಾಹಣಿ

Pro Kabaddi: ಹರಿಯಾಣ- ಪಾಟ್ನಾ ಫೈನಲ್‌ ಹಣಾಹಣಿ

1-kkk

ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಇನ್ನು ಕರಾವಳಿ ಪ್ರದೇಶಾಭಿವೃದ್ಧಿ ಮಂಡಳಿಯಾಗಿ ಕಾರ್ಯನಿರ್ವಹಣೆ

1-stamp

Stamp Paper; ನಕಲಿ ಹಾವಳಿಗೆ ತಡೆ: ಎ.1ರಿಂದ ಡಿಜಿಟಲ್‌ ಪಾವತಿ ಪದ್ಧತಿ ಜಾರಿ

1-manmohan

Belagavi; ಕಾಂಗ್ರೆಸ್‌ ಅಧಿವೇಶನ ಶತಮಾನೋತ್ಸವ: ಮಾಜಿ ಪ್ರಧಾನಿ ನಿಧನದಿಂದ ಆಘಾತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady: ಬೆಂಕಿಗೆ ಸುಟ್ಟುಹೋದ ಬೇಕರಿ ಅಂಗಡಿ

Uppinangady: ಬೆಂಕಿಗೆ ಸುಟ್ಟುಹೋದ ಬೇಕರಿ ಅಂಗಡಿ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

robbers

Subramanya: ನಾಪತ್ತೆಯಾದ ವ್ಯಕ್ತಿ ಹರಿಹರ ಪಳ್ಳತ್ತಡ್ಕದಲ್ಲಿ ಪತ್ತೆ

1(1

Puttur ನಗರಕ್ಕೂ ಬೇಕು ಟ್ರಾಫಿಕ್‌ ಸಿಗ್ನಲ್‌

3-ptr

Puttur: ಪೆನ್‌ ಪಾಯಿಂಟ್‌ ಕ್ರಿಕೆಟ್‌: ಸತತ 2ನೇ ಬಾರಿ ಬ್ಲೂ ಹಂಟರ್ಸ್‌ ಚಾಂಪಿಯನ್ಸ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Vijay Hazare Trophy: ಅರುಣಾಚಲ ಎದುರಾಳಿ; ರಾಜ್ಯಕ್ಕೆ 4ನೇ ಜಯದ ನಿರೀಕ್ಷೆ

Vijay Hazare Trophy: ಅರುಣಾಚಲ ಎದುರಾಳಿ; ರಾಜ್ಯಕ್ಕೆ 4ನೇ ಜಯದ ನಿರೀಕ್ಷೆ

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

Kasaragod: ಎಟಿಎಂಗೆ ತುಂಬಿಸಲು ತಂದ 50 ಲಕ್ಷ ರೂ. ಕಳವು ಮಾಡಿದ ಸೂತ್ರಧಾರನ ಬಂಧನ

Kasaragod: ಎಟಿಎಂಗೆ ತುಂಬಿಸಲು ತಂದ 50 ಲಕ್ಷ ರೂ. ಕಳವು ಮಾಡಿದ ಸೂತ್ರಧಾರನ ಬಂಧನ

Mangaluru: ವಿರೋಧ ಹಿನ್ನೆಲೆ: ಸಜಂಕಾ ಡಿಜೆ ಪಾರ್ಟಿ ರದ್ದು

Mangaluru: ವಿರೋಧ ಹಿನ್ನೆಲೆ: ಸಜಂಕಾ ಡಿಜೆ ಪಾರ್ಟಿ ರದ್ದು

6

Gurupura: 300 ಕೆ.ಜಿ. ಗೋಮಾಂಸ ಸಾಗಾಟ; ಇಬ್ಬರ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.