ಹೆದರಿಸಲು ಹೋಗಿ ಪ್ರಾಣ ತೆತ್ತ ಪಾಟ್ನಾ ಟೆಕ್ಕಿ


Team Udayavani, Dec 6, 2017, 12:37 PM IST

Election-Survey-Modi-Rahul.jpg

ಬೆಂಗಳೂರು: ಮುಂಗಡ ಹಣ ಹಿಂದಿರುಗಿಸದ ಟ್ಯುಟೋರಿಯಲ್‌ ಮಾಲೀಕನನ್ನು ಸೀಮೆಎಣ್ಣೆ  ಸುರಿದುಕೊಂಡು ಹೆದರಿಸಲು ಮುಂದಾದ ಟೆಕ್ಕಿಯೊಬ್ಬರಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಮೃತಪಟ್ಟಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಎಚ್‌ಎಎಲ್‌ ನಿವಾಸಿ ರಿತೇಶ್‌ ಕುಮಾರ್‌ (36) ಮೃತಪಟ್ಟ ಟೆಕ್ಕಿ. ಇದೇ ವೇಳೆ ಟ್ಯುಟೋರಿಯಲ್‌ ಮಾಲೀಕ ಆದಿತ್ಯ ಬಜಾಜ್‌ ಅವರಿಗೂ ಬೆಂಕಿ ತಗುಲಿದ್ದು, ಸುಟ್ಟಗಾಯಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನ.29ರಂದು ಜೆ.ಪಿ.ನಗರದ 2ನೇ ಹಂತದಲ್ಲಿರುವ ಆದಿತ್ಯ ಟ್ಯುಟೋರಿಯಲ್ಸ್‌ ಬಳಿ ನ.29ರಂದು ಘಟನೆ ನಡೆದಿದೆ.

ಪಾಟ್ನಾ ಮೂಲದ ರಿತೇಶ್‌ ಎಲೆಕ್ಟ್ರಾನಿಕ್‌ ಸಿಟಿಯಲ್ಲಿರುವ ಸಾಫ್ಟ್ವೇರ್‌ ಕಂಪನಿಯಲ್ಲಿ ಉದ್ಯೋಗಿಯಾಗಿದ್ದಾರೆ. ಖಾಸಗಿ ಶಾಲೆಯಲ್ಲಿ 1ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ತಮ್ಮ ಪುತ್ರನನ್ನು ಜೆ.ಪಿ.ನಗರದಲ್ಲಿರುವ ಆದಿತ್ಯ ಟ್ಯುಟೋರಿಯಲ್‌ಗೆ ಸೇರಿಸಿದ್ದರು. ಪುತ್ರನ ಒಂದು ವರ್ಷದ ವ್ಯಾಸಂಗ ಶುಲ್ಕವನ್ನು ಮುಂಗಡವಾಗಿ 2.5 ಲಕ್ಷ ರೂ.ಗಳನ್ನು ಟ್ಯುಟೋರಿಯಲ್‌ ಮಾಲೀಕ ಆದಿತ್ಯಗೆ ನೀಡಿದ್ದರು.

ಆದರೆ, ಪುತ್ರ ಶಾಲೆಯಲ್ಲಿ ನಿರೀಕ್ಷೆಯಂತೆ ಅಂಕ ಗಳಿಸಲಿಲ್ಲ ಎಂಬ ಕಾರಣಕ್ಕೆ ಪುತ್ರನನ್ನು ಟ್ಯುಟೋರಿಯಲ್ಸ್‌ನಿಂದ ಬಿಡಿಸಿ ಬೇರೆಡೆ ಸೇರಿಸಿದ್ದರು. ಈ ಹಿನ್ನೆಲೆಯಲ್ಲಿ ಆದಿತ್ಯ 2.5 ಲಕ್ಷ ಪೈಕಿ 1.25 ಲಕ್ಷ ರೂ. ಅನ್ನು ನ.25ರಂದು ವಾಪಸ್‌ ನೀಡಿದ್ದರು. ಇನ್ನುಳಿದ 1.75 ಲಕ್ಷವನ್ನು ಹಿಂದಿರುಗಿಸಿರಲಿಲ್ಲ. ಇದೇ ವಿಚಾರವಾಗಿ ಆದಿತ್ಯ ಮತ್ತು ರಿತೇಶ್‌ ನಡುವೆ ಜಗಳವಾಗಿತ್ತು.

ಆಕಸ್ಮಿಕವಾಗಿ ತಗುಲಿದ ಬೆಂಕಿ: ಈ ಮಧ್ಯೆ ನ.29ರಂದು ಜೆ.ಪಿ.ನಗರದಲ್ಲಿರುವ ಟ್ಯುಟೋರಿಯಲ್‌ಗೆ ಸೀಮೆಎಣ್ಣೆ ಕ್ಯಾನ್‌ ಸಮೇತ ಬಂದ ಟೆಕ್ಕಿ ರಿತೀಶ್‌ ಆದಿತ್ಯಗೆ ಹಣ ಹಿಂದಿರುಗಿಸುವಂತೆ ಒತ್ತಾಯಿಸಿದ್ದು, ಇಬ್ಬರ ನಡುವೆ ಗಲಾಟೆಯಾಗಿದೆ. ಹಣ ನೀಡಲು ಆದಿತ್ಯ ಒಪ್ಪದಿದ್ದಾಗ ತಾವು ತಂದಿದ್ದ ಸೀಮೆಎಣ್ಣೆಯನ್ನು ಮೈ ಮೇಲೆ ಸುರಿದುಕೊಂಡು, ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾರೆ.  

ಈ ವೇಳೆ ಆಕಸ್ಮಿಕವಾಗಿ ಬೆಂಕಿಯ ಕಿಡಿ ರಿತೇಶ್‌ ಬಟ್ಟೆ ಮೇಲೆ ಬಿದ್ದು, ಇಡೀ ದೇಹಕ್ಕೆ ಬೆಂಕಿಯ ಆವರಿಸಿ ಶೇ.70ರಷ್ಟು ಸುಟ್ಟ ಗಾಯಗಳಾದವು. ರಕ್ಷಿಸಲು ಹೋದ ಆದಿತ್ಯಗೂ ಬೆಂಕಿ ತಗುಲಿದೆ. ಬಳಿಕ ಇಬ್ಬರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ಡಿ.1ರಂದು ಚಿಕಿತ್ಸೆ ಫ‌ಲಕಾರಿಯಾಗದೆ ರಿತೇಶ್‌ ಕುಮಾರ್‌ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

4

Punjalkatte: ರಾಯಿ; ಯುವಕ ನೇಣು ಬಿಗಿದು ಆತ್ಮಹತ್ಯೆ

Untitled-5

Puttur: ಮಾದಕ ಪದಾರ್ಥ ಸಹಿತ ಆರೋಪಿ ಸೆರೆ

1-reee

Udupi; ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಮೇಶ್‌ ಕಾಂಚನ್‌ ಆಯ್ಕೆ

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.