ಅಕ್ರಮ ವಾಸ: ಬಾಂಗ್ಲಾ ಯುವತಿಗೆ ಜಾಮೀನು ಇಲ್ಲ


Team Udayavani, Dec 6, 2017, 12:37 PM IST

highcourt3.jpg

ಬೆಂಗಳೂರು: ಆಧಾರ್‌ ನಂಬರ್‌ ದೇಶದ ನಾಗರೀಕತ್ವದ ಅಧಿಕೃತ ದಾಖಲೆಯಾಗುವುದಿಲ್ಲ ಎಂಬ ಅಂಶವನ್ನು ಪುರಸ್ಕರಿಸಿರುವ ಹೈಕೋರ್ಟ್‌, ಬಾಂಗ್ಲಾದೇಶ ಮೂಲದ ಯುವತಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.

ಅಕ್ರಮವಾಗಿ ದೇಶದ ಗಡಿ ಪ್ರವೇಶಿಸಿ ಜೈಲು ಸೇರಿರುವ ಬಾಂಗ್ಲಾದೇಶದ ಯುವತಿ,ಆಧಾರ್‌ ಕಾರ್ಡ್‌ ಹೊಂದಿದ್ದ ಹಿನ್ನೆಲೆಯಲ್ಲಿ ಭಾರತೀಯ ಪೌರತ್ವವಿದೆ ಎಂದು ಪ್ರತಿಪಾದಿಸಿ ಕೋರಿದ್ದ ಜಾಮೀನು ಅರ್ಜಿಯನ್ನು ಮಂಗಳವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್‌.ಬಿ ಬೂದಿಹಾಳ್‌ ಅವರಿದ್ದ ಏಕಸದಸ್ಯ ಪೀಠ, ಆಧಾರ್‌ ಕಾಯಿದೆಯ ಸೆಕ್ಷನ್‌ 9ರ ಉಲ್ಲೇಖದಂತೆ “ಆಧಾರ್‌ ನಂಬರ್‌ ದೇಶದ ನಾಗರೀಕತ್ವದ ದಾಖಲೆಯಲ್ಲ’ ಎಂಬ ಅಂಶ ಪರಿಗಣಿಸಿ ಜಾಮೀನು ನೀಡಲು ನಿರಾಕರಿಸಿದೆ.

ವಿಚಾರಣೆ ವೇಳೆ, ಆರೋಪಿತ ಅರ್ಜಿದಾರಳು ಜಾಮೀನು ಅರ್ಜಿಯಲ್ಲಿ ಸ್ವತ: ಮೂಲ ವಿಳಾಸ ಬಾಂಗ್ಲಾದೇಶ ಎಂದು ತಿಳಿಸಿದ್ದಾಳೆ. ಜೊತೆಗೆ ಎಲೆಕ್ಷನ್‌ ಐಡಿಯನ್ನು ಚುನಾವಣಾ ಆಯೋಗ ಮುಟ್ಟುಗೋಲು ಹಾಕಿಕೊಂಡಿದೆ. ಪಾನ್‌ ಕಾರ್ಡ್‌ನಲ್ಲಿ ತಪ್ಪುಗಳಿವೆ. ಹುಬ್ಬಳ್ಳಿ  ವಾಸಿ ಎನ್ನುವ ಆಕೆಗೆ ಬೆಂಗಾಳಿ ಭಾಷೆ ಹೊರತುಪಡಿಸಿ ಕನ್ನಡ ಮಾತನಾಡುವುದಿಲ್ಲ. ಆಕೆ ಅಕ್ರಮವಾಗಿ ದೇಶದೊಳಕ್ಕೆ ಪ್ರವೇಶಿಸಿ ನೆಲೆಸಿರುವ ಬಗ್ಗೆ ಪ್ರಬಲ ಸಾಕ್ಷ್ಯಾಧಾರಗಳಿವೆ. ಹೀಗಾಗಿ ಜಾಮೀನು ನೀಡಬಾರದು ಎಂಬ ಪ್ರಾಸಿಕ್ಯೂಶನ್‌ ವಾದವನ್ನು ನ್ಯಾಯಪೀಠ ಪುರಸ್ಕರಿಸಿತು.

ರೇಷನ್‌ ಕಾರ್ಡ್‌ ಓದಗಿಸುವಲ್ಲಿ ವಿಫ‌ಲವಾದ ಯುವತಿ!: ಅರ್ಜಿಯನ್ನು ಈ ಹಿಂದೆ ವಿಚಾರಣೆ ನಡೆಸಿದ್ದಾಗ ಹುಬ್ಬಳ್ಳಿಯೇ ಸ್ವಂತ ವಿಳಾಸ ಎಂದು ಪ್ರತಿಪಾದಿಸಿದ್ದರು. ಹಾಗಾದರೆ, ಕುಟುಂಬಸ್ಥರ ಜೊತೆಗಿನ ರೇಷನ್‌ ಕಾರ್ಡ್‌ ಪ್ರತಿ ಸಲ್ಲಿಸುವಂತೆ ನಿರ್ದೇಶಿಸಿತ್ತು. ಆದರೆ, ವಿಚಾರಣೆ ವೇಳೆ ಯುವತಿ ಪರ ವಕೀಲರು ರೇಷನ್‌ ಕಾರ್ಡ್‌ ದಾಖಲೆ ಸಲ್ಲಿಸಲಿಲ್ಲ. ಈ ಅಂಶವನ್ನೂ ನ್ಯಾಯಾಲಯ ಗಂಭೀರವಾಗಿ ಪರಿಗಣಿಸಿತು. 

ಪ್ರಕರಣ ಏನು?: ಬಾಂಗ್ಲಾದೇಶ ಮೂಲದ ಖಾದಿಜಾ ಅಲಿಯಾಸ್‌ ಸ್ವಪ್ನ ಸೇರಿದಂತೆ ಹಲವು ಹೆಸರುಗಳನ್ನಿಟ್ಟುಕೊಂಡಿದ್ದ ಯುವತಿ ಅಕ್ರಮವಾಗಿ ದೇಶದ ಗಡಿ ಪ್ರವೇಶಿಸಿ ಕಾನೂನು ಬಾಹಿರವಾಗಿ ಬೆಂಗಳೂರಿನ ವಿಜಯನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನೆಲೆಸಿದ್ದರು.

ವೇಶ್ಯಾವಾಟಿಕೆ ದಂಧೆ ಸೇರಿದಂತೆ ಹಲವು ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಯುವತಿ ಭಾಗಿಯಾಗಿದ್ದಾರೆ ಎಂಬ ಆರೋಪ ಹಿನ್ನೆಲೆಯಲ್ಲಿ ವಿಜಯನಗರ ಠಾಣೆ ಪೊಲೀಸರು ಆ. 2, 2016ರಂದು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದಾಗ, ಖಾದಿಜಾ ಪಾಸ್‌ ಪೋರ್ಟ್‌ ಹಾಗೂ ವೀಸಾವಿಲ್ಲದೆ ದೇಶದೊಳಗೆ ಬಂದಿದ್ದು ಅಕ್ರಮವಾಗಿ ನೆಲೆಸಿರುವುದು ಕಂಡು ಬಂದಿತ್ತು. ಹೀಗಾಗಿ ಪ್ರಕರಣ ದಾಖಲಾಗಿತ್ತು.

ಆದರೆ, ಆರೋಪಿತ ಯುವತಿ ತಾನು ಮೂಲತ: ಹುಬ್ಬಳ್ಳಿ ಸುಭಾಷ್‌ನಗರದ ನಿವಾಸಿಯಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಆಧಾರ್‌ ಕಾರ್ಡ್‌, ಚುನವಣಾ ಗುರುತಿನ ಚೀಟಿ ಹೊಂದಿದ್ದೇನೆ ಎಂದು ಜಾಮೀನಿಗೆ ಹೈಕೋರ್ಟ್‌ ಮೊರೆ ಹೋಗಿದ್ದರು.

ಟಾಪ್ ನ್ಯೂಸ್

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

1-JMM

Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

Renukaswamy Case: ಬೆನ್ನುನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Karkala: ದುರ್ಗಾಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

13

Mandya: ಬಹುಮಾನ ಗೆದ್ದ ಹಳ್ಳಿಕಾರ್‌ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ

1-qeqwewq

Udupi; ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಡಿ.1 ರಂದು ದೀಪೋತ್ಸವ

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.