ನನ್ನ ಪ್ರೀತಿಯ BJP ಸ್ನೇಹಿತರೇ…ಟ್ವೀಟ್ ನಲ್ಲಿ ಮೋದಿ ಕಾಲೆಳೆದ ರಾಹುಲ್
Team Udayavani, Dec 6, 2017, 2:26 PM IST
ನವದೆಹಲಿ: ಸದಾ ಒಂದಿಲ್ಲ ಒಂದು ತಪ್ಪು ಹೇಳಿಕೆ ನೀಡಿ ಪೇಚಿಗೆ ಸಿಲುಕುವುದರಲ್ಲಿ ಹಾಸುಹೊಕ್ಕಾಗಿದ್ದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ಟ್ವೀಟ್ ನಲ್ಲಿರುವ ತಪ್ಪನ್ನು ಟ್ವೀಟಿಗರು ಟ್ರೋಲ್ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಟಾಂಗ್ ನೀಡಿ, ತನ್ನ ತಪ್ಪಾದ ಟ್ವೀಟ್ ಗೆ ಕ್ಷಮೆಯಾಚಿಸಿದ್ದಾರೆ.
ರಾಹುಲ್ ಟ್ವೀಟ್ ನಲ್ಲಿ ಏನಿದೆ?
“ಬಿಜೆಪಿಯ ನನ್ನ ಎಲ್ಲಾ ಗೆಳೆಯರೇ, ನಾನು ನರೇಂದ್ರಭಾಯ್ ಹಾಗೆ ಅಲ್ಲ, ನಾನೊಬ್ಬ ಮನುಷ್ಯ. ನಾವು ತಪ್ಪುಗಳನ್ನು ಮಾಡುತ್ತಲೇ ಇರುತ್ತೇವೆ,ಆ ತಪ್ಪುಗಳಿಂದಲೇ ಬದುಕು ಆಸಕ್ತಿದಾಯಕವಾಗಿರುತ್ತದೆ. ನನ್ನ ತಪ್ಪುಗಳನ್ನು ಎತ್ತಿ ತೋರಿಸಿದ್ದೀರಿ ಅದಕ್ಕೆ ಧನ್ಯವಾದಗಳು. ಇನ್ನು ಮುಂದೆಯೂ ನನ್ನ ತಪ್ಪುಗಳನ್ನು ಎತ್ತಿ ತೋರಿಸುವ ಕೆಲಸ ಮುಂದುವರಿಸಿ. ಇದು ನಿಜಕ್ಕೂ ನನಗೆ ತುಂಬಾ ಅನುಕೂಲವಾಗಲಿದೆ. ಲವ್ ಯೂ ಆಲ್”.
ರಾಹುಲ್ ಟ್ವೀಟ್ ನಲ್ಲಾಗಿದ್ದ ತಪ್ಪೇನು?
ಮಂಗಳವಾರ ಐಎಎಫ್ ಮಾರ್ಷಲ್ ಅರ್ಜನ್ ಸಿಂಗ್ ಅವರ ನಿಧನಕ್ಕೆ ಸಂತಾಪ ಸೂಚಿಸಿ ರಾಹುಲ್ ಟ್ವೀಟ್ ಮಾಡಿದ್ದು ಅದರಲ್ಲಿ ‘ಏರ್ ಮಾರ್ಷಲ್’ ಎಂದು ಬರೆದಿದ್ದರು. ಈ ಬಗ್ಗೆ ವ್ಯಾಪಕ ಟೀಕೆಗಳು ವ್ಯಕ್ತವಾಗಿತ್ತು. ಯಾರು ಏನೆಂದು ತಿಳಿದು ಟ್ವೀಟ್ ಮಾಡಿ ಎಂದು ಟ್ರೋಲ್ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Budgam; ಬಸ್ ಪ್ರಪಾತಕ್ಕೆ ಬಿದ್ದು 3 ಯೋಧರು ಮೃ*ತ್ಯು, 9 ಮಂದಿಗೆ ಗಂಭೀರ ಗಾಯ
AAP ಬೇಡಿಕೆ: ನಿರ್ಗಮಿತ ಸಿಎಂ ಕೇಜ್ರಿವಾಲ್ ಅವರಿಗೆ ಸರಕಾರಿ ವಸತಿ ಕಲ್ಪಿಸಿ
Congress ಪಕ್ಷವನ್ನು ತುಕ್ಡೆ ತುಕ್ಡೆ ಗ್ಯಾಂಗ್, ನಗರ ನಕ್ಸಲರು ನಡೆಸುತ್ತಿದ್ದಾರೆ:ಮೋದಿ
SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ
FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.